Breaking News
Home / ಜಿಲ್ಲೆ / ಹಾವೇರಿ (page 11)

ಹಾವೇರಿ

ಹಾವೇರಿ:ನಮ್ಮನ್ನ ನಮ್ಮ ನಮ್ಮ ಊರಿಗೆ ತಲುಪಿಸಿ……

ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ದುಡಿಯಲು ಹೋಗಿದ್ದ 40ಕ್ಕೂ ಅಧಿಕ ಕಾರ್ಮಿಕರು ಊರಿಗೆ ಬರಲಾಗದೆ ಪರದಾಡ್ತಿದ್ದಾರೆ. ಕಣ್ಣೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಾಸವಾಗಿರೋ ಕಾರ್ಮಿಕರು ಲಾಕ್ ಡೌನ್ ನಂತರ ರಾಜ್ಯಗಳ ಗಡಿ ಬಂದ್ ಆಗಿದ್ದರಿಂದ ಊರಿಗೆ ಬರಲು ಪರದಾಡ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಂತರ ಕೆಲಸವೂ ಇಲ್ಲದೆ ಇದ್ದ ಹಣವೂ ಖರ್ಚಾಗಿದೆ. ಊಟಕ್ಕೆ ಬೇಕಾದ ಪದಾರ್ಥಗಳು ಖಾಲಿ ಆಗಿವೆ. ಹೀಗಾಗಿ ನಮ್ಮನ್ನ ನಮ್ಮ ನಮ್ಮ …

Read More »

ಹೊರ ಜಿಲ್ಲೆಯ ಉದ್ಯೋಗದಿಂದ ಹಿಂತಿರುಗಿದವರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಸೂಚನೆ

ಹಾವೇರಿ: ಎ.25 (ಕರ್ನಾಟಕ ವಾರ್ತೆ): ಉದ್ಯೋಗ ನಿಮಿತ್ಯ ಹೊರ ಜಿಲ್ಲೆಗಳಲ್ಲಿ ಉಳಿದುಕೊಂಡವರು ಇದೀಗ ಮರಳಿ ತಮ್ಮ ಸ್ವಂತ ಗ್ರಾಮಕ್ಕೆ ಆಗಮಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಜಿಲ್ಲೆಗೆ ಬರುವ ಜನರನ್ನು ಕಡ್ಡಾಯವಾಗಿ ಸ್ವ್ಯಾಬ್ ಪರೀಕ್ಷೆಗೆ ಒಳಪಡಿಸಿ ಪ್ರಯೋಗಾಲಯದ ಮಾದರಿ ಬರುವತನಕ ಸರ್ಕಾರಿ ಕ್ವಾರಂಟೈನ್‍ನಲ್ಲಿ ಇರಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಎಲ್ಲ ತಹಶೀಲ್ದಾರಗಳಿಗೆ ಸೂಚನೆ ನೀಡಿದರು. ಶನಿವಾರ ಜಿಲ್ಲೆಯ ತಹಶೀಲ್ದಾರಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಸರ್ಕಾರದ ಸೂಚನೆಯಂತೆ ರಾಜ್ಯದ ವಲಸೆ ಕಾರ್ಮಿಕರನ್ನು …

Read More »

ಯಮ, ಕಿಂಕರರು ಹಾಗೂ ಕೊರೊನಾ ವೈರಸ್ ವೇಷ ಹಾಕಿಕೊಂಡು ಸ್ಥಳೀಯರು ಕೊರೊನಾ ವೈರಸ್ ಕುರಿತು ಜಾಗೃತಿ

ಹಾವೇರಿ: ಯಮ, ಕಿಂಕರರು ಹಾಗೂ ಕೊರೊನಾ ವೈರಸ್ ವೇಷ ಹಾಕಿಕೊಂಡು ಸ್ಥಳೀಯರು ಕೊರೊನಾ ವೈರಸ್ ಕುರಿತು ಜನರಿಗೆ ಜಾಗೃತಿ ಮೂಡಿಸುತ್ತಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊಸಪೇಟೆ ಓಣಿಯ ನಾಲ್ವರಲ್ಲಿ ಓರ್ವ ಯಮನ ವೇಷ, ಇಬ್ಬರು ಕಿಂಕರರ ವೇಷ ಹಾಗೂ ಮತ್ತೊಬ್ಬ ಕೊರೊನಾ ವೈರಸ್ ನ ವೇಷ ಹಾಕಿಕೊಂಡು ಪಟ್ಟಣದಲ್ಲಿ ಜನರಿಗೆ ಕೊರೊನಾ ವೈರಸ್ ಮತ್ತು ಲಾಕ್‍ಡೌನ್ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಯಮ …

Read More »

ಹಾವೇರಿ, :ಅಧಿನಿಯಮ ಉಲ್ಲಂಘಿಸಿ ಬೀಜ ಮಾರಾಟ ಮಾಡುತ್ತಿದ್ದ ಕಂಪೆನಿಯ ಪರವಾನಿಗೆ ರದ್ದು

ಹಾವೇರಿ, ಏ.21:ಬೀಜ‌ ಅಧಿನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕಾಗಿ ಬೀಜ ಮಾರಾಟ ಮಾಡುತ್ತಿದ್ದ ಖಾಸಗಿ ಕಂಪೆನಿಯ ಪರವಾನಿಗೆಯನ್ನು ಅಮಾನತು ಮಾಡಿ‌ ಆದೇಶಿಸಲಾಗಿದೆ.ರಾಣೆಬೆನ್ನೂರಿನ‌ “ವೆಂಕಟೇಶ್ವರ ಆಗ್ರೋ ಟ್ರೇಡರ್ಸ್” ಖಾಸಗಿ ಕಂಪೆನಿಯಾಗಿದ್ದು ಈ ಖಾಸಗಿ ಟ್ರೇಡರ್ಸ್ ಸುಮಾರು 12 ವರ್ಷ‌ಗಳಿಂದ ರೈತರ ಬೀಜ ಮಾರಾಟ ಮಾಡಿಕೊಂಡು ಬಂದಿರುತ್ತದೆ. ಇತ್ತೀಚೆಗೆ ರಾಣೆಬೆನ್ನೂರಿನಲ್ಲಿ ಕಳಪೆ‌ ಬೀಜ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಏಪ್ರಿಲ್ 20 ರಂದು ಈ ಟ್ರೆಡರ್ಸ್ ಮಳಿಗೆಗೆ ವಿಚಕ್ಷಣಾ ತಂಡ ಭೇಟಿ …

Read More »

ಯಾದಗಿರಿ/ಹಾವೇರಿ:ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ.

ಯಾದಗಿರಿ/ಹಾವೇರಿ: ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಯಾದಗಿರಿ ಹಾಗೂ ಹಾವೇರಿ ಜಿಲ್ಲೆಯ ರೈತರು ಅಕ್ಷರಶಃ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಯಾದಗಿರಿಯಲ್ಲಿ ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಮಣ್ಣುಪಾಲಾಗಿದೆ. ಜಿಲ್ಲೆಯ ಅಬ್ಬೆತುಮಕೂರ, ಹೆಡಗಿಮುದ್ರಾ, ಠಾಣಾಗುಂದಿ, ನಾಯ್ಕಲ್, ಮನಗನಾಳ, ಅನಕಸೂಗುರ, ಐಕೂರ ಮೊದಲಾದ ಕಡೆ ಭತ್ತದ ಬೆಳೆ ಹಾಗೂ ಸಜ್ಜೆ ಬೆಳೆ ನೆಲ ಕಚ್ಚಿದೆ. ಏಪ್ರಿಲ್ 7ರಂದು ಸುರಿದ ಬಿರುಗಾಳಿ ಸಹಿತ ಮಳೆಗೆ ಕೂಡ ಬೆಳೆ ಹಾನಿಯಾಗಿತ್ತು. ಈಗ ಮತ್ತೆ …

Read More »

ಕರೋನಾ ಜಾಗೃತಿಗೆ ಜಿಲ್ಲೆಯಾದ್ಯಂತ ಪೊಲೀಸ್ ರೂಟ್ ಮಾರ್ಚ್- ಬೈಕ್ ರ್ಯಾಲಿ

ಕರೋನಾ ಜಾಗೃತಿಗೆ ಜಿಲ್ಲೆಯಾದ್ಯಂತ ಪೊಲೀಸ್ ರೂಟ್ ಮಾರ್ಚ್- ಬೈಕ್ ರ್ಯಾಲಿ ಸಾರ್ವಜನಿಕರಿಗೆ ಆತ್ಮವಿಶ್ವಾಸದ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾಗೃತಿ -ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್ ಹಾವೇರಿ: ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಲಾಕ್‍ಡೌನ್ ಪಾಲನೆ, ಕರೋನಾ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಅಗತ್ಯ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸ ತುಂಬುವ ಸಂದೇಶವನ್ನು ಸಾರ್ವಜನಿಕರಿಗೆ ಸಾರಲು ಪೊಲೀಸ್ ಇಲಾಖೆ ಇಂದು ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ಹಾಗೂ …

Read More »

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಣೇಬೆನ್ನೂರು ಶಾಸಕ ಅರುಣ್‍ಕುಮಾರ ಪೂಜಾರ್ ಅವರು 16 ಲಕ್ಷ ರೂ. ದೇಣಿಗೆ

ಹಾವೇರಿ: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಣೇಬೆನ್ನೂರು ಶಾಸಕ ಅರುಣ್‍ಕುಮಾರ ಪೂಜಾರ್ ಅವರು 16 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಶಾಸಕ ಅರುಣ್‍ಕುಮಾರ್ ಅವರು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 16.47 ಲಕ್ಷ ರೂ. ಚೆಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪರಿಹಾರ ನಿಧಿಗೆ ಚೆಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ …

Read More »

ಸಾಮೂಹಿಕ ಪ್ರಾರ್ಥನೆಗಾಗಿ ಮಸೀದಿಗೆ ತೆರಳಿದ್ದವರಿಗೆ ಬಿತ್ತು ಲಾಠಿ ಏಟು

ಹಾವೇರಿ: ಲಾಕ್‍ಡೌನ್ ನಿಯಮವನ್ನ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರಿಗೆ ಪೊಲೀಸರು ಹಾಗೂ ಅಧಿಕಾರಿಗಳು ಲಾಠಿ ರುಚಿ ತೋರಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಎರಡು ಮಸೀದಿಗಳಲ್ಲಿ 30ಕ್ಕೂ ಅಧಿಕ ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಹೊರಗಡೆಯಿಂದ ಮಸೀದಿಯ ಗೇಟ್ ಹಾಕಿಕೊಂಡು ಒಳಗಡೆ ಪ್ರಾರ್ಥನೆ ಮಾಡಲು ಸಜ್ಜಾಗಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸವಣೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗಣ್ಣವರ ಹಾಗೂ ಸಿಪಿಐ ಶಶಿಧರ್ …

Read More »

ಶಾಸಕರ ಹೆಸರಲ್ಲಿ ನಕಲಿ ಪಾಸ್ ಸೃಷ್ಟಿಸಿ ಕಾರು ಚಾಲನೆ ವೇಳೆ ಎಡಿಸಿಗೆ ಸಿಕ್ಕಿಬಿದ್ದ

ಶಾಸಕರ ಹೆಸರಲ್ಲಿ ನಕಲಿ ಪಾಸ್ ಸೃಷ್ಟಿಸಿ ಕಾರು ಚಾಲನೆ ವೇಳೆ ಎಡಿಸಿಗೆ ಸಿಕ್ಕಿಬಿದ್ದ ಹಾವೇರಿ:ಎ. 16 (ಕರ್ನಾಟಕ ವಾರ್ತೆ): ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರ ಹೆಸರಿನಲ್ಲಿ ನಕಲಿ ಪಾಸ್ ಸೃಷ್ಟಿಸಿ ಗದಗ ಜಿಲ್ಲೆಯಿಂದ ಹಾವೇರಿಗೆ ಪ್ರವೇಶಮಾಡುತ್ತಿದ್ದ ಕಾರು ಚಾಲಕನೋರ್ವ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಕಲಿ ಪಾಸ್ ಸೃಷ್ಟಿಕರ್ತನ ಮೇಲೆ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣ ಹೊರತುಪಡಿಸಿ ಇತರ ಪ್ರಯಾಣಿಕರ ವಾಹನ …

Read More »

ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರ ಸಾಗಾಣಿಕೆ ಮೇಲೆ ತೀವ್ರ ನಿಗಾಕ್ಕೆ ಸೂಚನೆ

ಹಾವೇರಿ:. : ಗೂಡ್ಸ್ ವಾಹನ ಪ್ರಯಾಣಿಕರ ತಡೆಗೆ ಕಠಿಣ ಕ್ರಮಕೈಗೊಳ್ಳಬೇಕು. ವಾಹನ ಚಾಲಕ ಹಾಗೂ ಕ್ಲೀನರ್ ಸೇರಿದಂತೆ ಎರಡು ಜನರಿಗಿಂತ ಹೆಚ್ಚು ಪ್ರಯಾಣಿಸದಂತೆ ಚೆಕ್‍ಪೋಸ್ಟ್‍ಗಳಲ್ಲಿ ತಡೆಯಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೋನಾ ತಡೆಗಾಗಿ ರಚಿಸಲಾದ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಹೊರ ಜಿಲ್ಲೆಗಳಿಂದ ಜಿಲ್ಲಾ ಗಡಿ ಪ್ರವೇಶಮಾಡುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು. ಅವರ …

Read More »