Breaking News

ಹಾವೇರಿ

ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ.

ಹಾವೇರಿ: ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಮಾದೇವಪ್ಪ ಒಡೇನಪುರ ಅವರು ಒಂದು ಎಕರೆ ಇಪ್ಪತ್ತು ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದ್ದಾರೆ. ಮೆಕ್ಕೆಜೋಳದ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದ್ದರಿಂದ ರೈತ ಈ ರೀತಿ ಮಾಡಿದ್ದಾರೆ. ಒಂದು ಕ್ವಿಂಟಾಲ್ ಮೆಕ್ಕೆಜೋಳದ ಬೆಲೆ ಕೇವಲ ಒಂದು ಸಾವಿರ …

Read More »

– ಸಾವಿನಲ್ಲೂ ಒಂದಾದ ತಾಯಿ,ಮಗ

ಹಾವೇರಿ: ಅನಾರೋಗ್ಯದಿಂದ ಮೃತಪಟ್ಟ ಮಗನ ನೆನಪಲ್ಲಿ ಕಣ್ಣೀರು ಹಾಕಿ ತಾಯಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ. ಮೈನಾವತಿ ತೆಪ್ಪದ (52) ಮತ್ತು ಬಸವರಾಜ್ ತೆಪ್ಪದ (31) ಮೃತ ತಾಯಿ-ಮಗ. ಗುರುವಾರ ರಾತ್ರಿ ಬಸವರಾಜ್ ಅನಾರೋಗ್ಯದಿಂದ ಮೃತಪಟ್ಟಿದ್ದನು. ಮಗನ ಸಾವಿನ ದುಃಖದಲ್ಲಿ ತಾಯಿ ಮೈನಾವತಿ ರಾತ್ರಿಯಿಡೀ ಕಣ್ಣೀರು ಹಾಕಿದ್ದಾರೆ. ಪರಿಣಾಮ ಇಂದು ಬೆಳಿಗ್ಗೆ ಹೃದಯಾಘಾತವಾಗಿ ತಾಯಿಯೂ ಮೃತಪಟ್ಟಿದ್ದಾರೆ. ಮೃತ ಮೈನಾವತಿಗೆ ನಾಲ್ವರು ಮಕ್ಕಳಿದ್ದು, ಮೂವರು ಹೆಣ್ಣು …

Read More »

ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಶಶಿಕಲಾ ಜೊಲ್ಲೆ ಜಿ ಯವರು ಭೇಟಿ

ಹರಿಹರ ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, …

Read More »

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿ: ಜ.04 (ಕರ್ನಾಟಕ ವಾರ್ತೆ): ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಣೆಯಲ್ಲಿ ಗಂಭೀರವಾದ ಲೋಪವಾಗಿದೆ. ಸಮರ್ಪಕವಾಗಿ ರೈತರಿಗೆ ಪರಿಹಾರ ದೊರಕಿಲ್ಲ. ಬೆಳೆ ಪರಿಹಾರದಲ್ಲಿ ಆಗಿರುವ ಲೋಪ ಕುರಿತಂತೆ ಉನ್ನತ ಮಟ್ಟದ ತನಿಖೆ ಅಗತ್ಯವಾಗಿರುವುದರಿಂದ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳಿಂದ ಸಮಗ್ರ ತನಿಖೆಗೆ ಒಳಪಡಿಸಲು ಆದೇಶಿಸಲಾಗುವುದು ಎಂದು ಗೃಹ, ಸಹಕಾರ …

Read More »