Breaking News

ಜಿಲ್ಲೆ

ಕೊರೋನಾ ವಾರಿಯರ್ ಸ್ಟಾಫ್ ನರ್ಸ್ ಕೊರೋನಾ ವೈರಸ್​​ಗೆ ಬಲಿಯಾಗಿದ್ದಾರೆ.

ಯಾದಗಿರಿ: ಜೀವದ ಹಂಗು ತೊರೆದು ಕೋವಿಡ್ 19 ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ ಸ್ಟಾಫ್ ನರ್ಸ್ ಕೊರೋನಾ ವೈರಸ್​​ಗೆ ಬಲಿಯಾಗಿದ್ದಾರೆ. ಯಾದಗಿರಿ ತಾಲೂಕಿನ ಕೌಳುರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 12 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೀತಾ ಎಂಬುವವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್ 19 ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ತಿಂಗಳ 19 ರಂದು ಕೋವಿಡ್ ಟೆಸ್ಟ್ ಮಾಡಿಸಿದಾಗ ಕೊರೋನಾ ದೃಢವಾಗಿತ್ತು. ನಂತರ ಕೋವಿಡ್ …

Read More »

ಬಾಲಕಿ ಕುಟುಂಬಕ್ಕೆ ₹1.5 ಲಕ್ಷ ಪರಿಹಾರ

ಹುಬ್ಬಳ್ಳಿ:ನಗರದ ಇಂದಿರಾ ಗಾಜಿನಮನೆ ಉದ್ಯಾನದಲ್ಲಿರುವ ಮಳೆ ನೀರು ಇಂಗು ಗುಂಡಿಗೆ ಇತ್ತೀಚೆಗೆ ಬಿದ್ದು ಮೃತಪಟ್ಟ ಬಾಲಕಿ ಕುಟುಂಬಕ್ಕೆ, ಸ್ಮಾರ್ಟ್ ಸಿಟಿ ವತಿಯಿಂದ ಗುರುವಾರ ₹1.5 ಲಕ್ಷ ಪರಿಹಾರ ನೀಡಲಾಗಿದೆ. ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ನಗರದ ಐ.ಟಿ ಪಾರ್ಕ್ ಸಂಕೀರ್ಣದಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿ ಎದುರು ಸಮತಾ ಸೇನಾ ಸೇರಿದೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಾಲಕಿ ಕುಟುಂಬದವರೊಂದಿಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸ್ಮಾರ್ಟ್ …

Read More »

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »

ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ಗಿಫ್ಟ್

ಮೈಸೂರು: ಖಡಕ್ ಆಧಿಕಾರಿ ಎಂದೇ ಖ್ಯಾತಿ ಗಳಿಸಿರುವ ರೋಹಿಣಿ ಸಿಂಧೂರಿ ದಾಸರಿ ಅವರ ವಿರುದ್ಧ ಭಾರೀ ಗೋಲ್​ಮಾಲ್ ಆರೋಪ ಕೇಳಿಬಂದಿದೆ. ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ನೀಡಿದ್ದಾರೆ. ನಮ್ಮ ರಾಜ್ಯದವರನ್ನು ಬಿಟ್ಟು ಬೇರೆ ರಾಜ್ಯದವರಿಗೆ ಟೆಂಡರ್ ನೀಡಿದ್ದೇಕೆ ಎಂದು ಸುದ್ದಿಗೋಷ್ಠಿ ನಡೆಸಿದ JDS ಶಾಸಕ ಸಾ.ರಾ. ಮಹೇಶ್ ಪ್ರಶ್ನೆಮಾಡಿದ್ದಾರೆ. ಆ ಸಮಯದಲ್ಲಿ ಆಂಧ್ರದ ತಿರುಮಲದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ ಮತ್ತು ಮೂಲಸೌಕರ್ಯ ಕಲ್ಪಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಯಂತೆ …

Read More »

ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ. ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ.ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »

ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್‌ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …

Read More »

ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು,- ಸಾಮೂಹಿಕ ಅತ್ಯಚಾರಕ್ಕೆ ಒಳಗಾಗಿ ಮಾರಣಾಂತಿಕ ಗಾಯಗಳಿಂದ ನರಳಿ ಜೀವ ಬಿಟ್ಟ ದಲಿತ ಯುವತಿಯ ಅಂತ್ಯಕ್ರಿಯೆಯನ್ನುಪೋಷಕರನ್ನು ಹೊರಗಿಟ್ಟು ನೆರವೇರಿಸಿದ ಪೊಲೀಸರ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಮ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಡಾ.ಯತೀಂದ್ರ ಅವರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಅವರು, ಟ್ವಿಟ್ ಮಾಡಿ, ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಂಭೀರವಾದದ್ದು. ದುರ್ಮರಣಕ್ಕೀಡಾದ ಯುವತಿಗೆ …

Read More »

ಸೋಂಕಿತರ ಜೊತೆ ವಾರಿಯರ್ಸ್ ಸಖತ್ ಸ್ಟೆಪ್ – ವಿಡಿಯೋ ವೈರಲ್

ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …

Read More »