Breaking News

ಜಿಲ್ಲೆ

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ರೈತ ವಿರೋಧಿ ಮಸೂದೆ ವಿರುದ್ಧ ಜೆಡಿಎಸ್ ಶಾಸಕ ಏಕಾಂಗಿ ಪ್ರತಿಭಟನೆ

ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ ಶಾಸಕರು ತಮ್ಮದೇ ಆದ ರೀತಿಯಲ್ಲಿ ಬಂದ್‍ಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಹೆಸರನ್ನು ಹೊಂದಿರುವ ರಾಮಸ್ವಾಮಿಯವರು ಜೆಡಿಎಸ್ ಪಕ್ಷದ ನಿಷ್ಠಾವಂತ ರಾಜಕೀಯ ಮುಖಂಡರಲ್ಲಿ ಒಬ್ಬರು. ನೇರ ಮಾತುಗಾರಿಕೆಯಿಂದ …

Read More »

ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‍ನ ಹಿರಿಯ ಮುಖಂಡ ಹೆಚ್‍ಕೆ ಪಾಟೀಲ್‍ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್‍ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಚಿವರ …

Read More »

10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ. ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ …

Read More »

ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ

ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ. ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ …

Read More »

ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯ

ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್‌ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …

Read More »

ಆರು ವರ್ಷಗಳಿಂದ ರೈತರ ಮೇಲೆ ಮೋದಿಯವ್ರ ವಕ್ರದೃಷ್ಟಿ ಬಿದ್ದಿರ್ಲಿಲ್ಲ: ಕೃಷ್ಣಭೈರೇಗೌಡ

ಬೆಂಗಳೂರು: ಕಳೆದ ಆರು ವರ್ಷಗಳಿಂದ ರೈತರ ಮೇಲೆ ಪ್ರಧಾನಿ ಮೋದಿಯವರ ವಕ್ರದೃಷ್ಟಿ ಬಿದ್ದಿರಲಿಲ್ಲ. ಹೀಗಾಗಿ ರೈತರ ಆದಾಯ ಕಡಿಮೆ ಆಗಿರಲಿಲ್ಲ ಎಂದು ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ನಗರದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈಗ ಅಂಬಾನಿ ಮತ್ತು ಅದಾನಿ ಮಾತ್ರ ಶ್ರೀಮಂತರಾದ್ರು. ದೇಶ ಹಿಂದೆ ಬಿದ್ರೆ ಅಂಬಾನಿ ಮಾತ್ರ ಪ್ರಪಂಚದಲ್ಲಿಯೇ ಐದನೇ ಶ್ರೀಮಂತರಾದ್ರು. ಬಿಜೆಪಿ ಇದೇ ರೀತಿ ಮುಂದುವರಿಯಲು ಬಿಟ್ರೆ ದೇಶ ಅಧೋಗತಿಗೆ ಹೋಗುತ್ತೆ. ಕೇಂದ್ರ ಮತ್ತು …

Read More »

ಹೆಣ್ಮಕ್ಕಳು ನಮಗೆ ಉತ್ತಮ ಸ್ನೇಹಿತರು – ಐರಾಗೆ ರಾಧಿಕಾ ವಿಶ್

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ತಮ್ಮ ಮಗಳೊಂದಿಗಿನ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಐರಾ ಮತ್ತು ತಮ್ಮ ಸಹೋದರನ ಮಗಳಿಗೆ ಶುಭಾಶಯ ಕೋರಿದ್ದಾರೆ. ಭಾನುವಾರ ಮಗಳ ದಿನಾಚರಣೆ ಇತ್ತು. ಹೀಗಾಗಿ ಅನೇಕ ನಟ-ನಟಿಯರು ತಮ್ಮ ಮಗಳಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಅದೇ ರೀತಿ ನಟಿ ರಾಧಿಕಾ ಪಂಡಿತ್ ಕೂಡ ತಮ್ಮ …

Read More »

ಅಧಿವೇಶನಕ್ಕೆ ಬಂದ ಶಾಸಕರಿಗೆ ಕೊರೋನಾ ಭಯ, ಈಗಾಗಲೇ ಹಲವರಿಗೆ ಪಾಸಿಟಿವ್..!

ಬೆಂಗಳೂರು, ಸೆ.28- ವಿಧಾನಸಭೆ ಅವೇಶನ ಮುಗಿದ ಬಳಿಕ ಹಲವಾರು ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಸೋಂಕಿನ ಭೀತಿ ಎದುರಿಸುತ್ತಿದ್ದಾರೆ. ಈವರೆಗೆ ಶಾಸಕರಾದ ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಸೇರಿದಂತೆ ಹಲವಾರು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಪರೀಕ್ಷೆಗೆ ಒಳಗಾದ ಬಹಳಷ್ಟು ಮಂದಿ ತಮಗೆ ಸೋಂಕಿರುವ ಬಗ್ಗ ಹೇಳಿಕೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ಮಧ್ಯ ರಾತ್ರಿ 11 ಗಂಟೆವೆರೆಗೂ ವಿಧಾನಮಂಡಲ ಮತ್ತು ವಿಧಾನಸಭೆ ಅವೇಶನ ನಡೆದಿತ್ತು. ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಭಾಗವಹಿಸಿದ್ದರು, …

Read More »

ಅಧಿವೇಶನ ಯಶಸ್ವಿ ಹಾಗೂ ಅತ್ಯುತ್ತಮವಾಗಿ ನಡೆದಿದೆ : ವಿಧಾನಸಭಾಧ್ಯಕ್ಷ ಕಾಗೇರಿ

ಬೆಂಗಳೂರು,ಸೆ.28- 17ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳು ಆರು ದಿನ, 40 ಗಂಟೆಗಳ ಕಾಲ ಅತ್ಯಂತ ಯಶಸ್ವಿಯಾಗಿ ಹಾಗೂ ಅತ್ಯುತ್ತಮವಾಗಿ ನಡೆದಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.21ರಿಂದ 26ರ ರಾತ್ರಿ 11 ಗಂಟೆವರೆಗೂ ಅವೇಶನ ನಡೆಸಿದ್ದು ಶೇ.90ಕ್ಕಿಂತ ಹೆಚ್ಚಿನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಲಾಗಿದೆ. ಕೊರೊನಾ ಆತಂಕದ ನಡುವೆ ಕೈಗೊಂಡಿದ್ದ ಅಗತ್ಯ ಮುನ್ನೆಚ್ಚರಿಕೆ ಕ್ರಮವು ಯಶಸ್ವಿಯಾಗಿ ಅವೇಶನ ನಡೆಸಲಾಗಿದೆ ಎಂದರು. ವಿವಿಧ ಸ್ಥಾಯಿಸಮಿತಿಗಳಿಗೆ ಸದಸ್ಯರನ್ನು …

Read More »