ಬೆಳಗಾವಿ: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ಕೃಷಿಗೆ ಸಂಬಂಧಿಸಿದ ನೀತಿಗಳು ಕೃಷಿಕರ ಪರವಾಗಿವೆ. ಆದರೆ, ವಿರೋಧ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರನ್ನು ಎತ್ತಿ ಕಟ್ಟುತ್ತಿವೆ’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿನ ಪಕ್ಷದ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ವಿರೋಧ ಪಕ್ಷಗಳ ಕುತಂತ್ರಕ್ಕೆ ಬಲಿಯಾಗಬಾರದು. ರೈತ ಪರ …
Read More »ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ
ಬೆಳಗಾವಿ: ರೈತಪರ ಸಂಘಟನೆಗಳಿಂದ ಇಂದು ಕರ್ನಾಟಕ ಬಂದ್ಗೆ ಕರೆ ನೀಡಿರೋ ಹಿನ್ನೆಲೆಯಲ್ಲಿ ಕೆಲವೆಡೆ ಬಸ್, ಆಟೋ ಸಂಚಾರವಿಲ್ಲದೇ ಜನರು ಪರದಾಡುತ್ತಿದ್ದಾರೆ. ಅದರಂತೆ ಮಹಿಳೆಯೊಬ್ಬರು ತನ್ನ ಪುಟ್ಟ ಕಂದಮ್ಮನೊಂದಿಗೆ ಮನೆಗೆ ತಲುಪಲಾಗದೇ ನಿನ್ನೆ ರಾತ್ರಿಯಿಂದ ಪರದಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಗೊಂಡವಾಡ ಗ್ರಾಮದ ಶೋಭಾ(37) ಸಾರಿಗೆ ವ್ಯವಸ್ಥೆ ಇಲ್ಲದೇ ಪೇಚಿಗೆ ಸಿಲುಕಿದ್ದರು.
Read More »ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ
ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು. ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು. ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು. ‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. …
Read More »ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್ :ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಕಾಯ್ದೆಗಳ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ರಾಜ್ಯ ರೈತ ಸಂಘದ ವಿವಿಧ ಬಣಗಳು, ಕೇಂದ್ರಿಯ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ( ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್), ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯ ವೇದಿಕೆ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿ …
Read More »ಬಾಗಿಲು ತೆರೆದು ಅಂಗಡಿ ಮುಂದೆ ಸಾಷ್ಟಾಂಗ ನಮಸ್ಕಾರ
ಚಾಮರಾಜನಗರ: ಬಂದ್ ಗೆ ಕರೆ ನೀಡಿದ್ದರೂ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಅಂಗಡಿ ಮುಂದೆ ಕನ್ನಡ ಪರ ಹೋರಾಟಗಾರ ನಿಜಧ್ವನಿ ಗೋವಿಂದ ರಾಜು ಸಾಷ್ಟಾಂಗ ನಮಸ್ಕಾರ ಹಾಕಿ ಬಾಗಿಲು ಮುಚ್ಚಲು ಮನವಿ ಮಾಡಿದರು. ಪ್ರತಿಭಟನಾಕಾರರ ಕೋರಿಕೆ ಮೇರೆಗೆ ಅಂಗಡಿ ಬಾಗಿಲು ಹಾಕಲಾಯಿತು. ನಗರದಲ್ಲಿ ಬೈಕ್ ರ್ಯಾಲಿ ನಡೆಸುತ್ತಿರುವ ರೈತರು ತೆರೆದಿದ್ದ ಅಂಗಡಿಗಳ ಮುಚ್ಚಿಸುತ್ತಿದ್ದಾರೆ. ನಗರದ ಸಂತೇಮರಳ್ಳಿ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಅನ್ನು ಮುಚ್ಚಲು ಕೈ ಮುಗಿದು …
Read More »ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್
ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …
Read More »ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್ – ಕಮಲ್ ಪಂಥ್ ಎಚ್ಚರಿಕೆ
ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಕೆ ನೀಡಿದ್ದಾರೆ. ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು. ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ …
Read More »ಕರ್ನಾಟಕ ಬಂದ್ : ನಾಳೆ ರಾಜ್ಯದ್ಯಂತ ಸಾರಿಗೆ ಸಂಚಾರ ಆರಂಭ
ಬೆಂಗಳೂರು: ಕೆಲವು ಸಂಘಟನೆಗಳು ನಾಳೆ ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ …
Read More »ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5,75,566ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,582ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,217 ಹೊಸ ಪ್ರಕರಣಗಳು ವರದಿಯಾಗಿದ್ದು, …
Read More »ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ, ಯಾವುದೇ ರ್ಯಾಲಿ ನಡೆಸಲೂ ಅವಕಾಶವಿಲ್ಲ
ಬೆಂಗಳೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ ನೀಡಿಲ್ಲ, ಯಾವುದೇ ರ್ಯಾಲಿ ನಡೆಸಲೂ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಕೊವಿಡ್ ನಿಯಮಗಳು ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಪ್ರತಿಭಟನೆ, ರ್ಯಾಲಿ ಮಾಡುವಂತಿಲ್ಲ. ಮಾಡಿದರೆ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಎನ್ ಡಿಎಂಎ ಆಕ್ಟ್ ನಡಿ ಕ್ರಮ …
Read More »
Laxmi News 24×7