ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್‍ವುಡ್‍ನ ಹಿರಿಯ ನಟ ರಾಕ್‍ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ ಇತ್ತೀಚೆಗಷ್ಟೆ ನಟ ರಾಕ್‍ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ …
Read More »ಆರೋಗ್ಯ ಕಾಪಾಡಿಕೊಳ್ಳಿ ಅಂದ್ರೆ ನಾನು ಜನ ಸೇವಕ ಅಂತಿದ್ರು- ಗೆಳೆಯನ ನೆನೆದು ಪ್ರಭಾಕರ್ ಕೋರೆ ಕಂಬನಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಾನು ಉತ್ತಮ ಸ್ನೇಹಿತರಾಗಿದ್ದೆವು, ಕೊರೊನಾ ಬಳಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಮಾಸ್ಕ್ ಹಾಕಿಕೊಳ್ಳಿ ಎಂದು ಹೇಳುತ್ತಿದ್ದೆ. ಆದರೆ ಅವರು ನಾನು ಜನರ ಸೇವೆ ಮಾಡಲು ಬಂದವನು ಎನ್ನುತ್ತಿದ್ದರು ಎಂದು ಸುರೇಶ್ ಅಂಗಡಿ ಅಗಲಿಕೆ ಕುರಿತು ರಾಜ್ಯಸಭಾ ಸದಸ್ಯ, ಅವರ ಆಪ್ತ ಸ್ನೇಹಿತ ಪ್ರಭಾಕರ್ ಕೋರೆ ಕಂಬನಿ ಮಿಡಿದಿದ್ದಾರೆ. ಸುರೇಶ್ ಅಂಗಡಿಯವರ ಬೆಳಗಾವಿ ನಿವಾಸಕ್ಕೆ ದಂಪತಿ ಸಮೇತ ಭೇಟಿ ನೀಡಿ ಅವರ ತಾಯಿ …
Read More »ಅಥಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಬಸ್ ನಿಲ್ದಾಣದ ಪರಸ್ಥಿತಿ
ಅಥಣಿ : ಪಟ್ಟಣದಲ್ಲಿ ಇತ್ತಿಚೆಗೆ ಕಟ್ಟಿದ ಬಸ ನಿಲ್ದಾಣದ ಕಾಮಗಾರಿಯು ಅವೈಜ್ಞಾನಿಕವಾಗಿದೆ . ಏಕೆಂದರೆ ಸತತ ಮೂರು ದಿನದಿಂದ ಪ್ರತಿನಿತ್ಯ ಸುರಿಯುತ್ತಿರುವ ಮಳೆಗೆ ಶೌಚಾಲಯದಲ್ಲಿ ಮೋಳಕಾಲಿನ ವರೆಗೂ ನೀರು ನಿಂತು ಯಾರು ಹೋಗದಂತಾಗಿದೆ . ಅದಕ್ಕೆ ನೀರು ಹೋರ ಹೋಗಲು ಯಾವುದೆ ದಾರಿ ಇಲ್ಲದೆ ಬಂದ ನೀರೆಲ್ಲಾ ಶೌಚಾಲದಯ ಮೂಲಕವೆ ಹೋಗಬೇಕಾ ಅನಿವಾರ್ಯತೆ ಎದುರಾಗಿದೆ . ಇದರಿಂದಾಗಿ ಹಲವಾರು ಗಂಟೆಗಳವರೆಗೂ ಯಾರು ಶೌಚಾಲದ ಒಳಗೆ ಹೋಗದಂತಾಗಿತ್ತು ಮತ್ತು ಹೋಗಬೇಕಾದರು …
Read More »ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ 18 ಕೆಜಿ ಗಾಂಜಾ ವಶ ಆರೋಪಿ ಬಂಧನ.
ಅಥಣಿ : ಪರ್ಮಿಷನ್ ಇಲ್ಲದೇ ಅಕ್ರಮವಾಗಿ ಗಾಂಜಾ ಮಾದಕ ಪದಾರ್ಥವನ್ನು ತನ್ನ ಜಮೀನದಲ್ಲಿ ಬೆಳೆಸಿ ಅವುಗಳನ್ನು ಕಿತ್ತು ಮಾರಾಟ ಮಾಡುವ ಸಲುವಾಗಿ ತನ್ನ ಮನೆಯ ಮುಂದೆ ಇಟ್ಟು ಕೊಂಡಾಗ ದಾಳಿ ಮಾಡಿ ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ 18 ಕೆಜಿ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ಧಾರೆ. ಅಥಣಿ ತಾಲ್ಲೂಕಿನ ಆರೋಪಿ ಕರೆಪ್ಪ ಶ್ರೀಪಣ್ಣ ಐನಾಪೂರೆ @ ದೇವಕತೆ ಸಾ || ಹಣಮಾಪೂರ ಹಾಲಿ ಮದಬಾವಿ ಕುಂಬಾರ ಗುತ್ತಿ ಸದರಿ ಆರೋಪಿತನು ತನ್ನ ಸ್ವಂತ ಪಾಯ್ದೆಗೊಸ್ಕರ ಯಾವುದೇ …
Read More »ಇಂದು ಸಂಜೆ 4 ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ
ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಸಂಜೆ 4ಕ್ಕೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ. ‘ಅವರ ಬೀಗರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಬುಧವಾರ ತಡರಾತ್ರಿ ನವದೆಹಲಿ ತಲುಪಿದ ನಂತರ ಗುರುವಾರ ನಸುಕಿನ 3ರವರೆಗೂ ಚರ್ಚೆಯಾಯಿತು. ಅಂತಿಮವಾಗಿ ದೆಹಲಿಯಲ್ಲೇ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಪ್ರಕ್ರಿಯೆ ನೆರವೇರಲಿದೆ. ಮರಣೋತ್ತರ ಪರೀಕ್ಷೆಯ ನಂತರವೂ ಕೋವಿಡ್ ಪಾಸಿಟಿವ್ ಬಂದಿದೆ. …
Read More »ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿoದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭçಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ …
Read More »ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಇಂದು ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದು ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಆವರಣದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು, ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವಿಚಾರಣೆ ವೇಳೆ ರಾಗಿಣಿ ಅರ್ಜಿಗೆ ರಾಗಿಣಿ ಪರ ವಕೀಲರು ವಾದ ಮಂಡಿಸಿದ್ದರು. ಸಿಸಿಬಿ ಕೂಡ …
Read More »ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸುರೇಶ ಅಂಗಡಿ ಕೊಡುಗೆ
ಬೆಳಗಾವಿ: ಬೆಳಗಾವಿ- ಕಿತ್ತೂರು-ಧಾರವಾಡ ನಡುವೆ ರೈಲು ಮಾರ್ಗ ನಿರ್ಮಿಸಲು ₹927.40 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈಚೆಗೆ ತಿಳಿಸಿ, ಈ ಭಾಗಕ್ಕೆ ದೊಡ್ಡ ಕೊಡುಗೆ ತಂದಿರುವುದಾಗಿ ಹರ್ಷ ವ್ಯಕ್ತಪಪಡಿಸಿದ್ದರು. ’73 ಕಿ.ಮೀ. ಉದ್ದದ ಈ ಯೋಜನೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಬೆಳಗಾವಿ, ದೇಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟಿ, …
Read More »ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು. ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು …
Read More »ಅಸಂಸದೀಯ ಪದ ಬಳಕೆ: ರಮೇಶ್ ಕುಮಾರ್- ಸುಧಾಕರ್ ಜಟಾಪಟಿ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್ ಕುಮಾರ್, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ …
Read More »
Laxmi News 24×7