ಬೆಂಗಳೂರು : ರಾಜ್ಯದಲ್ಲಿ ಸೋಮವಾರ 7,339 ಮಂದಿಗೆ ಸೋಂಕು ದೃಢಪಟ್ಟಿದ್ದು 122 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5.26 ಲಕ್ಷಕ್ಕೆ ಹಾಗೂ ಕೊರೋನಾ ಸಾವಿನ ಸಂಖ್ಯೆ 8,145ಕ್ಕೆ ಏರಿಕೆಯಾಗಿದೆ. ಆದರೆ ಸಕ್ರಿಯ ಸೋಂಕಿತರ ಸಂಖ್ಯೆ 98 ಸಾವಿರದಿಂದ 95,335ಕ್ಕೆ ಇಳಿದಿದೆ. ಇದೇ ವೇಳೆ 9,925 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4.23 ಲಕ್ಷಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 42,691 ಪರೀಕ್ಷೆ ನಡೆಸಿದ್ದು, …
Read More »ಗುತ್ತಿಗೆ ಆಧಾರದ NHM ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿಶೇಷ ಹೆಚ್ಚುವರಿ ಭತ್ಯೆ
ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ …
Read More »ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ
ಬೆಂಗಳೂರು: ಸೆಪ್ಟೆಂಬರ್ 25ರಂದು ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಆಚರಿಸುವ ನಿರೀಕ್ಷೆ ಇದೆ. ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಅಧಿಕೃತ ಘೋಷಣೆ ಆಗಲಿದೆ. ಬಂದ್‍ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ …
Read More »ಲೂಸ್ ಮಾದ, ಕ್ರಿಕೆಟಿಗ ಅಯ್ಯಪ್ಪ, ಸೇರಿದಂತೆ ಕೆಲ ಗಣ್ಯರ ಮಕ್ಕಳಿಗೆ ಡ್ರಗ್ಸ್ ಸಪ್ಲೈ ಇಬ್ಬರಿಗೆ ನೋಟಿಸ್
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್‍ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಲೂಸ್ ಮಾದ ಖ್ಯಾತಿಯ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ಮಾಡಿದ್ದೇವೆ. ಯೋಗಿ, ಅಯ್ಯಪ್ಪ ಅಲ್ಲದೇ ಸೀರಿಯಲ್ …
Read More »ಹಲವು ಭಾಗಗಳಲ್ಲಿ ಮುಂದುವರಿಯಲಿದೆ ಮಳೆಯಬ್ಬರ,ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಬಹುತೇಕ ಬೆಳೆಗಳು ನಾಶ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆ ಆರೆಂಜ್ ಮತ್ತು ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕಲಬುರಗಿಯ ಮಂದಿ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, …
Read More »ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ.
ಉಡುಪಿ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ. ಕಮರ್ಷಿಯಲ್ ಕಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ ಜೊತೆ ವಸತಿ ಸಮುಚ್ಛಯ ಸಹ ಇರುವುದರಿಂದ ಅಲ್ಲಿನ ಎಲ್ಲ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಾಸವಿದ್ದು, ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ. …
Read More »ಡ್ರಗ್ಸ್ ಕೇಸ್- ಐಎಸ್‌ಡಿಯಿಂದ ಲೂಸ್ ಮಾದ ಯೋಗಿ, ಅಯ್ಯಪ್ಪ ವಿಚಾರಣೆ
ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧ ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ) ಖ್ಯಾತ ನಟ ಲೂಸ್ ಮಾದ ಯೋಗಿ ಮತ್ತು ಕ್ರಿಕೆಟರ್ ಅಯ್ಯಪ್ಪ ಅವರನ್ನು ವಿಚಾರಣೆಗ ಒಳಪಡಿಸಿದೆ. ಎರಡು ದಿನಗಳ ಹಿಂದೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಕಚೇರಿಯಲ್ಲಿ ಐಎಸ್‌ಡಿ ಎಡಿಜಿಪಿ ಭಾಸ್ಕರ್ ರಾವ್ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಗಿಣಿ ಮತ್ತು ಲೂಸ್ …
Read More »ಸೋದರಿಯ ಶವಸಂಸ್ಕಾರಕ್ಕೆ ಬಂದು ಬಾವನನ್ನು ಹತೈಗೈದ ಅಣ್ಣ
ಬೆಂಗಳೂರು: ಭಾನುವಾರ ಕಾಡುಗೋಡಿಯಲ್ಲಿ ನಡೆದ ಹೆಚ್.ಎ.ಎಲ್ ಉದ್ಯೋಗಿ ರಾಜೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆ ನಡೆದ ಆರು ಗಂಟೆಗಳಲ್ಲಿ ಬಂಧಿಸುವಲ್ಲಿ ಕಾಡುಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಾನ್‍ಪಾಲ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಆರೋಪಿ ಜಾನ್‍ಪಾಲ್ ತಂಗಿ ಜಾಸ್ಮಿನ್‍ಗೆ ಏಳು ವರ್ಷಗಳ ಹಿಂದೆ ರಾಜೇಶ್ ಜೊತೆ ವಿವಾಹ ಮಾಡಲಾಗಿತ್ತು. ಇವರಿಗೆ ಐದು ವರ್ಷದ ಗಂಡು ಹಾಗೂ ಮೂರು ತಿಂಗಳ ಹೆಣ್ಣು ಮಗು ಇದ್ದು, ಕಾಡುಗೋಡಿಯ ವೀರಸ್ವಾಮಿರೆಡ್ಡಿ ಬಡಾವಣೆಯಲ್ಲಿ ವಾಸವಾಗಿದ್ದರು. …
Read More »ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು.
ಬೆಂಗಳೂರು, ಸೆ.21- ಕೋವಿಡ್ -19 ಆತಂಕದ ನಡುವೆಯೇ ಇಂದಿನಿಂದ ಆರಂಭವಾದ ಮಳೆಗಾಲದ ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು. ಭಾರೀ ನಿರೀಕ್ಷೆ ಹಾಗೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ಮಹಾಮಾರಿಯ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು. ಹೀಗಾಗಿ ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಕೇವಲ ಕೆಲವೇ ಕೆಲವು ಮಂದಿ ಸಚಿವರು ಹಾಗೂ ಶಾಸಕರು ಮಾತ್ರ ಭಾಗವಹಿಸಿದ್ದರು. 225 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಮುಖ ಮೂರು …
Read More »ಏರುತ್ತಿರುವ ಐಪಿಎಲ್ ಕಾವು : ಇಂದು RCBಗೆ SRH ಸವಾಲು
ದುಬೈ,ಸೆ.21- ಐಪಿಎಲ್ ಕಾವು ರಂಗೇರಿದ್ದು ಡೆಲ್ಲಿ ಹಾಗೂ ಪಂಜಾಬ್ ವಿರುದ್ಧ ನಡೆದ ಪಂದ್ಯ ಸೂಪರ್ ಓವರ್‍ನಲ್ಲಿ ಮುಗಿದ ನಂತರ ಹೊಡಿ ಬಡಿ ಆಟಕ್ಕೆ ಮತ್ತಷ್ಟು ರಂಗು ಬಂದಿದೆ ಇಂದು 2016ರ ಚಾಂಪಿಯನ್ ಸನ್‍ರೈಸರ್ಸ್ ಹೈದ್ರಾಬಾದ್ ಹಾಗೂ ರನ್ನರ್‍ಅಪ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ಧ ಹಣಾಹಣಿ ನಡೆಯುತ್ತಿದ್ದು ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸಿದೆ. 2019ರಲ್ಲಿ ಆರ್‍ಸಿಬಿ ಪ್ಲೇಆಫ್‍ಗೇರಲು ಪ್ರಮುಖ ಪಂದ್ಯದಲ್ಲೇ ಕೇನ್‍ವಿಲಿಯಮ್ಸ್ ನಾಯಕತ್ವದ ಎಸ್‍ಆರ್‍ಎಚ್ ವಿರುದ್ಧ ಹೀನಾಯವಾಗಿ ಸೋತು …
Read More »
Laxmi News 24×7