Breaking News

ಜಿಲ್ಲೆ

ದುರ್ಗಂಧದ ಗೂಡಾದ ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ಶಚಾಲಯ

ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ( CBT ) ಉದ್ಘಾಟನೆಯಾಗಿ ಇನ್ನೂ ಎರಡು ತಿಂಗಳು ಕೂಡ ಆಗಿಲ್ಲಾ, ಅಲ್ಲಿಯ ಶೌಚಾಲಯಗಳ ಪರಿಸ್ಥಿತಿ ನೋಡ್ರಿ. ಇಲ್ಲಿ ಎಲ್ಲೆಂದರಲ್ಲಿ ಕಸ, ನೀರು ಕೂಡ ಸರಿಯಾಗಿ ಇಲ್ಲಾ. ಈ ಶೌಚಾಲಯಗಳ ದುಸ್ಥಿತಿ ಕಂಡು ನಿಜಕ್ಕೂ ಬೇಸರವಾಯ್ತು. ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಈ ಶೌಚಾಲಯಗಳ ಶುಚಿತ್ವಕ್ಕೆ ಆಧ್ಯತೆ ನೀಡಿ.

Read More »

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ  ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ 9.7 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಫೆ.7 ರಂದು ಸಹ ಕಸ್ಟಮ್ಸ್ …

Read More »

ಬಜೆಟ್ ಸಭೆ ಬಿಟ್ಟು ನಾಳೆ ಡಿಸಿಎಂ ಡಿಕೆಶಿ ದೆಹಲಿ ಪಯಾಣ!

ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆ ಸಂಭವಿಸಿದೆ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದರೆ, ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಮುಖ ಪೂರ್ವಭಾವಿ ಸಭೆ ಕೈಬಿಟ್ಟು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ನಡೆಯಲಿರುವ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಮಹತ್ವದ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಗೈರಾಗಲಿದ್ದಾರೆ. ಬೆಳಗ್ಗೆ 9.50ಕ್ಕೆ ಅವರು ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾಳೆ ರಾತ್ರಿ ದೆಹಲಿಯಲ್ಲೇ …

Read More »

ಶಿವರಾತ್ರಿ ಹಬ್ಬದ ಬಳಿಕ ಬಜೆಟ್ ದಿನಾಂಕದ ಕುರಿತು ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಬಳಿಕ ರಾಜ್ಯ ಬಜೆಟ್ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಬೆಳಗ್ಗೆ ನಗರದ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳೊಂದಿಗೆ ಅವರು ಸಭೆ ನಡೆಸಿದರು. ಇದಕ್ಕೂ ಮುನ್ನ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಬ್ಬದ ಬಳಿಕ ಬಜೆಟ್ ದಿನಾಂಕ ತಿಳಿಸಲಾಗುವುದು ಎಂದರು. ಕೆಲ ಶಾಸಕರು ವಿದೇಶ ಪ್ರವಾಸ ಕೈಗೊಂಡಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಂತ ಖರ್ಚಿನಲ್ಲಿ ಶಾಸಕರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು …

Read More »

ಬೆಳಗಾವಿಯಲ್ಲಿ ಗಗನ ಮುಟ್ಟಿದ ಒಣ ಮೆನಸಿನಕಾಯಿ ಬೆಲೆ

ಬೆಳಗಾವಿ:  ಗ್ರಾಹಕರಿಗೆ ಘಾಟು ತಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ‌ ಇಳುವರಿ‌ ಬಾರದ ಹಿನ್ನೆಲೆಯಲ್ಲಿ ಮೆಣಸಿನಕಾಯಿ‌ ದರ ಮಾರುಕಟ್ಟೆಯಲ್ಲಿ  ದರ 500 ರೂ.‌ ಗಡಿ ದಾಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ದುಪ್ಪಟ್ಟಾಗಿದೆ ಅಂತಾ ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಬೇಸಿಗೆ ಶುರುವಾದರೆ ಸಾಕು ಉತ್ತರ ಕರ್ನಾಟಕ ಜನರು ವರ್ಷಪೂರ್ತಿ ಆಗುವಷ್ಟು ಖಾರವನ್ನು ಸಿದ್ಧಪಡಿಸಿಕೊಳ್ಳುತ್ತಾರೆ. ಈಗ ಬೇಸಿಗೆ ಶುರುವಾಗಿದ್ದು, ಮೆಣಸಿನಕಾಯಿ ತರಲು ಮಾರುಕಟ್ಟೆಗೆ ಬರುವ ಕುಂದಾನಗರಿ ಗ್ರಾಹಕರಿಗೆ ದರ ಕೇಳಿ ತಲೆ ತಿರುಗುತ್ತಿದೆ. ಕಳೆದ ವರ್ಷ ಕೆಜಿಗೆ …

Read More »

ಮೈಸೂರು ಸ್ಯಾಂಡಲ್ ಸೋಪ್ ಜತೆ ಹಲವು ಉತ್ಪನ್ನಗಳಿಗೆ ಸ್ಪರ್ಶ ನೀಡಿದ ನಟಿ ತವನ್ನಾ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿ., (ಕೆಎಸ್‌ಡಿಎಲ್) ಹೊಸದಾಗಿ ಹೊರತಂದಿರುವ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಸಂಸ್ಥೆಯ 57 ಉತ್ಪನ್ನಗಳನ್ನು ಬಹು ಭಾಷ ನಟಿ ತಮನ್ನಾ ಭಾಟಿಯಾ ಬಿಡುಗಡೆ ಮಾಡಿದರು. ಈ ಹಿಂದೆ ಇದ್ದ 36 ಹಳೆ ಉತ್ಪನ್ನಗಳು ಸೇರಿದರೆ ಕೆಎಸ್‌ಡಿಎಲ್ ಉತ್ಪನ್ನಗಳ ಸಂಖ್ಯೆ ಈಗ 93ಕ್ಕೆ ಏರಿದಂತಾಗಿದೆ. ತಾಜ್ ವೆಸ್ಟ್ ಎಂಡ್ ಹೋಟೆಲಿನ ಝಗಮಗಿಸುವ ಸಭಾಂಗಣದಲ್ಲಿ ಅದ್ದೂರಿಯಾಗಿ ಜಗಮಗಿಸುವ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಿಳಿಗೆಂಪು ಬಣ್ಣದ ಮೈಸೂರು …

Read More »

ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ಸ್ ಕಮಿಟಿ ರಚನೆಗೆ ಆದೇಶ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮಾದಕ ವ್ಯಸನ ನಿರ್ಮೂಲನೆಗೆ ಸರ್ಕಾರ ಬದ್ದವಾಗಿದೆ. ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ಸ್ ಕಮಿಟಿ ರಚಿಸಬೇಕು ಎಂದು ಆದೇಶಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ. ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ದಿಶಾಭೋದ್ ಫೌಂಡೇಶನ್, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ನಶಾಮುಕ್ತ ಭಾರತ, ನಶಾಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಡ್ರಗ್ಸ್ ವಿರುದ್ಧ ಯಾವ ಕಾಲೇಜು ಕ್ರಮ …

Read More »

ಬಾಗಲಕೋಟೆ ಮೋಟಗಿಯಲ್ಲಿ ಶುರುವಾಗಿದೆ ಜಾನುವಾರು ಜಾತ್ರೆ

ಬಾಗಲಕೋಟೆ: ಸಾಲು ಸಾಲಾಗಿ ಮಾರಾಟಕ್ಕೆ ಸಿದ್ದವಾಗಿ ನಿಂತಿರುವ ಎತ್ತು, ಹೋರಿಗಳು. ತಮ್ಮ ತಮ್ಮ ಎತ್ತುಗಳನ್ನು ಹಿಡಿದು ನಿಂತಿರುವ ರೈತರು. ಮಾರಾಟವಾದ ಎತ್ತುಗಳ ಮೈಮೇಲೆ ಬಣ್ಣದೋಕುಳಿ. ಇನ್ನೊಂದೆಡೆ ಕಿಲಾರಿ ಹೋರಿ, ಎತ್ತುಗಳ ಪ್ರದರ್ಶನ ಸ್ಪರ್ಧೆ. ಪಶು ಇಲಾಖೆ ಹಾಗೂ ಎಪಿಎಂಸಿ ಅಧಿಕಾರಿಗಳಿಂದ ಜಾನುವಾರುಗಳ ಆಯ್ಕೆ. ಬಾಗಲಕೋಟೆ  ಮೋಟಗಿ ಬಸವೇಶ್ವರ ಜಾತ್ರೆ ಪ್ರಯುಕ್ತ ಜಾನುವಾರು ಜಾತ್ರೆ ನಡೆಯುತ್ತಿದೆ. ಕೇಸನೂರು ಗ್ರಾಮದ ವ್ಯಾಪ್ತಿಯಲ್ಲಿ ಜಾನುವಾರು ಜಾತ್ರೆ  ಆಯೋಜಿಸಿದ್ದು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ರಾಯಚೂರು, ಕೊಪ್ಪಳ, …

Read More »

BELAGAVI: ಜಮೀನುಗಳಿಗೆ ನೀರು ಹರಿಸಿ

ರಾಮದುರ್ಗ: ತಾಲೂಕಿನ ರೈತರ ಹಿತದೃಷ್ಟಿಯಿಂದ ವೀರಭದ್ರೇಶ್ವರ ಹಾಗೂ ಸಾಲಾಪುರ ಬಸವೇಶ್ವರ ಏತ ನೀರಾವರಿ ಯೋಜನೆಗಳಿಂದ ಶ್ರೀವೇ ರೈತರ ಜಮೀನಿಗೆ ನೀರು ಹರಿಸಬೇಕು ಎಂದು ರಾಜ್ಯ ರೈತ ಸಂದ ಅಧ್ಯಕ್ಷ ಚೂನಪ್ಪ ಪೂಜಾರಿ ಒತ್ತಾಯಿಸಿದರು. ನಗರದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೀರಭದ್ರೇಶ್ವರ, ಬಸವೇಶ್ವರ ಏತ ನೀರಾವರಿ ಯೋಜನೆಗಳ ಕಾಮಗಾರಿ ನಡೆದು 10 ವರ್ಷ ಕಳೆದಿವೆ. ಈವರೆಗೆ ರೈತರ ಜಮೀನುಗಳಿಗೆ ನೀರು ಹರಿಯದಿರುವುದು ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಪ್ರದರ್ಶಿಸುತ್ತದೆ ಎಂದು ದೂರಿದರು. ಬಾಕಿ ಕಾಮಗಾರಿ ಪೂರ್ಣಗೊಳಿಸಿ, …

Read More »

belagavi: ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ

ಸತ್ತಿಗೇರಿ:  ಸವದತ್ತಿ ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಗುಡುಮಕೇರಿ ಗ್ರಾಮದಲ್ಲಿ 70 ಲ ರೂ.ವೆಚ್ಚದಲ್ಲಿ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗುಡಮಕೇರಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ರೈತರಿಗೆ ಅನುಕೂಲವಾಗಲಿದೆ. ಸಮರ್ಪಕ ರಸ್ತೆ ನಿರ್ಮಾಣದ ಮೂಲಕ ಪ್ರತಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು …

Read More »