Home / ಜಿಲ್ಲೆ (page 1044)

ಜಿಲ್ಲೆ

ಸಂಚಾರಕ್ಕೆ ಸಜ್ಜಾಗಿವೆ ಬಸ್ಸುಗಳು; ಶೇ. 30ರಷ್ಟು ಪ್ರಯಾಣ ದರ ಏರಿಕೆಗೆ ಸರ್ಕಾರ ಚಿಂತನೆ

ಬೆಂಗಳೂರು(ಮೇ 18): ಲಾಕ್ ಡೌನ್ ಘೋಷಣೆಯಾದಾಗಿನಿಂದಲೂ ಸಾರ್ವಜನಿಕ ಬಸ್ ಸೇವೆ ಸ್ಥಗಿತಗೊಂಡಿದೆ. ಸರ್ಕಾರ ಯಾವಾಗ ಬೇಕಾದರೂ ಬಸ್ ಸೇವೆ ಪುನಾರಂಭಿಸುವ ಸಾಧ್ಯತೆ ಇದೆ. ರಾಜ್ಯದ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಸೇವೆಗೆ ಸಜ್ಜಾಗಿವೆ. ಸಂಚಾರ ವೇಳೆ, ಕೊರೋನಾ ವೈರಸ್ ಸೋಂಕು ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಕೈಗೊಂಡಿವೆ. ರಾಜ್ಯದ ಅನುಮತಿಗಷ್ಟೇ ಸಾರಿಗೆ ಸಂಸ್ಥೆಗಳು ಕಾಯುತ್ತಿವೆ. ಇದೇ ವೇಳೆ, ವಿವಿಧ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು …

Read More »

ಟೆಸ್ಟ್ ಮಾಡಿಸದೇ ಮನೆಗೆ ಬರ್ಬೇಡ’- ಮಗನನ್ನೇ ಹೊರಗಿಟ್ಟ ಪೋಷಕರು

ಮಂಗಳೂರು: ಹೊಸದಾಗಿ ಮಂಗಳೂರಿನಲ್ಲಿ ದೃಢಪಟ್ಟಿರುವ ರೋಗಿ-1094ನ ಕೊರೊನಾ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ ಹಾಗೂ ಈತನ ಟ್ರಾವಲ್ ಹಿಸ್ಟರಿ ಭಯಾನಕವಾಗಿದೆ. ಮಂಗಳೂರಿನ ಹೊರವಲಯದ ಜೆಪ್ಪುಪಟ್ನದ 31 ವರ್ಷದ ಸೋಂಕಿತ ಕಳೆದು 10 ದಿನಗಳ ಹಿಂದೆ ದೆಹಲಿಯಿಂದ ಮಂಗಳೂರಿಗೆ ಬಂದಿದ್ದಾನೆ. ಲಾಕ್‍ಡೌನ್ ಇದ್ದರೂ ಕಾಲ್ನಡಿಗೆಯಲ್ಲಿ ದೆಹಲಿಯಿಂದ ಹೊರಟು, ಅಲ್ಲಲ್ಲಿ ಸಿಕ್ಕ-ಸಿಕ್ಕ ವಾಹನಗಳಿಂದ ಡ್ರಾಪ್ ಪಡೆದು, ಚೆಕ್‍ಪೋಸ್ಟ್ ಗಳಲ್ಲಿ ವಂಚಿಸಿ ಮನೆ ತಲುಪಿದ್ದಾನೆ. ದೆಹಲಿಯಿಂದ ಮನೆಗೆ ಬಂದ ಮಗನನ್ನು ತಂದೆ-ತಾಯಿ ಮನೆಗೆ ಸೇರಿಸಿಲ್ಲ. ಮೊದಲು ಹೋಗಿ …

Read More »

ಹಿರಿಯ ರಾಜಕೀಯ ಮುತ್ಸದ್ಧಿ ದೇವೇಗೌಡರ ಹುಟ್ಟುಹಬ್ಬಕ್ಕೆ ಗಣ್ಯರಿಂದ ಶುಭಾಶಯ

ಬೆಂಗಳೂರು: ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು “ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯಸ್ಸು ಮತ್ತು ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ …

Read More »

ಹೆರಿಗೆಗೆ 3 ದಿನ ಟೈಮ್ ಕೊಟ್ಟಿದ್ದಾರೆ ಸರ್, ನಾನು ಊರಿಗೆ ಹೋಗ್ಲೇಬೇಕು- ಮೆಜೆಸ್ಟಿಕ್‍ನಲ್ಲಿ ಪ್ರಯಾಣಿಕರ ದಂಡು

ಬೆಂಗಳೂರು: ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಎರಡು ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ಸೇವೆ ಪುನಾರಂಭ ಮುಂದೂಡಿಕೆಯಾಗಿದೆ. ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಸರ್.. ನಮ್ಮೂರಿಗೆ ಬಸ್ ಎಲ್ಲಿ ಬರುತ್ತೆ, ನಮ್ ಏರಿಯಾಗೆ ಯಾವ ಫ್ಲಾಟ್ ಫಾರಂಗೆ ಬಸ್ ಬರುತ್ತೆ …

Read More »

ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ತಡರಾತ್ರಿ ದಿಢೀರ್ ಪ್ರತಿಭಟನೆ………..

ಯಾದಗಿರಿ: ವಲಸೆ ಕಾರ್ಮಿಕರನ್ನು ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ವಿರೋಧಿಸಿ ದಿಢೀರ್ ಪ್ರತಿಭಟನೆ ನಡೆಸಿದ ಸ್ಥಳೀಯರನ್ನು ಪೊಲೀಸರು ಬಲವಂತವಾಗಿ ಚದುರಿಸಿದ ಘಟನೆ ತಡರಾತ್ರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ತಡರಾತ್ರಿ ಮಹಿಳೆಯರು ಮತ್ತು ಸ್ಥಳೀಯರಿಂದ ಈ ಪ್ರತಿಭಟನೆ ನಡೆದಿದೆ. ಪಟ್ಟಣದ ಪೋಸ್ಟ್ ಆಫೀಸ್ ಪಕ್ಕ ಸ.ಹಿ.ಪ್ರಾ ಶಾಲೆಯಲ್ಲಿ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧಾರಿಸಿದೆ. ಆದರೆ ಶಾಲೆಯ ಅಕ್ಕಪಕ್ಕದಲ್ಲಿ ಹೆಚ್ಚು ಜನವಸತಿ ಇರುವ ಹಿನ್ನೆಲೆ ಮತ್ತು ಕೆಲವೊಂದು ಮನೆಗಳು ಶಾಲೆಯ …

Read More »

ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ

ರಾಯಚೂರು: ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31ರವರೆಗೆ ನಿಷೇಧಾಜ್ಞೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಜನರು ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಂಮಹಾರಾಷ್ಟ್ರದ ಮುಂಬೈ ನಂಟಿನಿಂದ ರಾಯಚೂರಿನಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಬೈನಿಂದ ಬಂದ 6 ಮಂದಿಯಲ್ಲಿ ಕೊರೊನಾ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಧ್ಯಾಹ್ನ …

Read More »

ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರಭಾರತ ಯೋಜನೆಯಡಿಯಲ್ಲಿ ಘೋಷಿಸಿರುವ ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು ಆಗಿದ್ದು, ಹಳೆ ಸರಕಿಗೆ ಹೊಸ ಹೊದಿಕೆ ಹೊದಿಸಿದಂತಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದು ಕಂತುಗಳಾಗಿ ಹಂಚಿದರು. ಈ ಕುರಿತು ಸಹ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ತಮ್ಮದೇ ಲೆಕ್ಕಾಚಾರವನ್ನು ಜನರ ಮುಂದಿಟ್ಟಿದ್ದಾರೆ. 20 …

Read More »

ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ಯುವಕ ಸಾವು……….

ಉಡುಪಿ: ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.   ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಕಟಪಾಡಿ ಏಣಗುಡ್ಡೆ ನಿವಾಸಿ ಭರತ್ (22) ಮೃತ ಯುವಕ. ಮೃತ ಭರತ್ ಸಿಡಿಲು ಸಹಿತ ಮಳೆ ಬರುವಾಗ ಮನೆಯಲ್ಲಿ ಕುಳಿತಿದ್ದನು. ಆದರೂ ಸಿಡಿಲು ಬಡಿದು ಯುವಕ …

Read More »

6609 ಜನರ ವರದಿ ಕೊರೊನಾ ನೆಗೆಟಿವ್ ನಾಳೆ146 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ

ಬೆಳಗಾವಿ- ನಾಳೆ‌ 146 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ 50 ಆಕ್ಟಿವ್ ಕೊರೊನಾ ಪಾಸಿಟಿವ್ ಕೇಸ್ ಗಳಿವೆ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 8281 ಜನರ ಮೇಲೆ‌ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಒಟ್ಟು 78 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 50 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. …

Read More »

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್‍ಡೌನ್ 3.0 ಮುಂದುವರಿಕೆ

ಬೆಂಗಳೂರು : ಸೋಮವಾರದಿಂದ ಜನಜೀವನ ಸಹಜ ಸ್ಥಿತಿಗೆ ಬರಬಹುದೆಂಬ ನಿರೀಕ್ಷೆ ಮತ್ತೆ ಹುಸಿಯಾಗಿದ್ದು, ರಾಜ್ಯದಲ್ಲಿ ಎರಡು ದಿನ ಲಾಕ್​ಡೌನ್​ ಮುಂದುವರಿಸಿ ಸರ್ಕಾರ ಆದೇಶ ನೀಡಿದೆ. ಈ ಹಿಂದಿನ ಮಾರ್ಗಸೂಚಿಗಳಂತೆ ಮೇ 19ರವರೆಗೆ ಬಸ್, ಆಟೋ, ಟ್ಯಾಕ್ಸಿ ಸಂಚಾರವಿರಲ್ಲ ಮತ್ತು ಮಾಲ್, ಥಿಯೇಟರ್, ಶಾಲಾ, ಕಾಲೇಜ್, ದೇವಸ್ಥಾನ, ಮಸೀದಿ, ಚರ್ಚ್ ಈ ಹಿಂದಿನಂತೆ ಬಂದ್ ಆಗಲಿವೆ. ಮುಂದಿನ ಆದೇಶ ಬರುವ ತನಕ ಅಥವಾ ಮೇ 19ರ ರಾತ್ರಿ 12 ಗಂಟೆಯ ತನಕ …

Read More »