Breaking News
Home / ಜಿಲ್ಲೆ (page 1045)

ಜಿಲ್ಲೆ

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್‍ಡೌನ್ 3.0 ಮುಂದುವರಿಕೆ

ಬೆಂಗಳೂರು : ಸೋಮವಾರದಿಂದ ಜನಜೀವನ ಸಹಜ ಸ್ಥಿತಿಗೆ ಬರಬಹುದೆಂಬ ನಿರೀಕ್ಷೆ ಮತ್ತೆ ಹುಸಿಯಾಗಿದ್ದು, ರಾಜ್ಯದಲ್ಲಿ ಎರಡು ದಿನ ಲಾಕ್​ಡೌನ್​ ಮುಂದುವರಿಸಿ ಸರ್ಕಾರ ಆದೇಶ ನೀಡಿದೆ. ಈ ಹಿಂದಿನ ಮಾರ್ಗಸೂಚಿಗಳಂತೆ ಮೇ 19ರವರೆಗೆ ಬಸ್, ಆಟೋ, ಟ್ಯಾಕ್ಸಿ ಸಂಚಾರವಿರಲ್ಲ ಮತ್ತು ಮಾಲ್, ಥಿಯೇಟರ್, ಶಾಲಾ, ಕಾಲೇಜ್, ದೇವಸ್ಥಾನ, ಮಸೀದಿ, ಚರ್ಚ್ ಈ ಹಿಂದಿನಂತೆ ಬಂದ್ ಆಗಲಿವೆ. ಮುಂದಿನ ಆದೇಶ ಬರುವ ತನಕ ಅಥವಾ ಮೇ 19ರ ರಾತ್ರಿ 12 ಗಂಟೆಯ ತನಕ …

Read More »

ಎಪಿಎಂಸಿ ಕಾಯ್ದೆ ವಿರೋಧಿಸುವವರು ಚರ್ಚೆಗೆ ಬರಲಿ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ …

Read More »

ಒಂದೇ ವಿಡಿಯೋ – 20 ಕ್ಯಾಮೆರಾಮ್ಯಾನ್‍ಗಳಿಗೆ ಕೆಲಸ ಕೊಟ್ಟ ಸೃಜನ್….

ಬೆಂಗಳೂರು: ಲಾಕ್‍ಡೌನ್‍ನಿಂದ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿವೆ. ಇದರಿಂದ ಕಲಾವಿದರು, ಕ್ಯಾಮೆರಾಮ್ಯಾನ್‍ಗಳು ಸೇರಿದಂತೆ ಅನೇಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಆತ್ಮನಿರ್ಭರ್ ಭಾರತಕ್ಕೆ ಕೈ ಜೋಡಿಸುವ ಮೂಲಕ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ನಟ ಸೃಜನ್ ಲೋಕೇಶ್ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ರಿಯೇಟಿವ್ ವಿಡಿಯೋ ತಯಾರಿಸಿದ್ದಾರೆ. 20 ಕ್ಯಾಮೆರಾಮ್ಯಾನ್‍ಗಳನ್ನು ಬಳಸಿ ಈ ವಿಡಿಯೋ ತಯಾರಿಸಿದ್ದು, ಕ್ಯಾಮೆರಾ ವಿಭಾಗದವರಿಗೆ ಕೆಲಸ ಸೃಷ್ಟಿಸಬೇಕೆಂಬ ಉದ್ದೇಶದಿಂದ ಈ ರೀತಿ …

Read More »

ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ

ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ …

Read More »

ದಲಿತ ಯುವಕನ ಕೊಲೆ ಖಂಡಿಸಿ ಸಚಿವ ರಮೇಶ ಜಾರಕಿಹೊಳಿಯವರಿಗೆ ಮನವಿ

ಗೋಕಾಕ : ಗೋಕಾಕ ನಗರದಲ್ಲಿ 06/05/2020 ರಂದು ದಲಿತ ಯುವಕ ಸಿದ್ದು ಕನಮಡ್ಡಿ ಯವರನ್ನು ಮಾರಕಾಸ್ತ್ರ ದಿಂದ ಕೊಲೆ ಮಾಡಿ ಕೊಲೆಗಾರರು ಪರಾರಿಯಾಗಿದ್ದರು. ಕೊಲೆಯಾದ ವ್ಯಕ್ತಿಯು ಸಾಯುವಾಗ ಅವನಿಗೆ ಜೀವ ಬೆದರಿಕೆ ಹಾಕಿರೋ ವ್ಯಕ್ತಿಗಳ ಹೆಸರು ಹೇಳಿ ಸಾವನ್ನಪಿದನ್ನು ಅದರಿಂದ ಕೊಲೆಗಾರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು ಮತ್ತು ಹಲವು ಬೇಡಿಕೆಗಳನ್ನು ರಾಜ್ಯ …

Read More »

ಮಂಡ್ಯ, ಕಲಬುರಗಿಯಲ್ಲಿ ಕೊರೊನಾ ಆರ್ಭಟ-

ಬೆಂಗಳೂರು: ಮಂಡ್ಯದ ಜೊತೆ ಜೊತೆಗೆ ಹಾಸನಕ್ಕೂ ಮುಂಬೈ ಕಂಟಕ ಹೆಚ್ಚಾಗುತ್ತಲೇ ಇದೆ. ಪರಿಣಾಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಒಂದೇ ದಿನ 54 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,146ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಮಂಡ್ಯ 22, ಕಲಬುರಗಿ 10, ಹಾಸನ 6, ಧಾರವಾಡ 4, ಕೋಲಾರ, ಯಾದಗಿರಿದಲ್ಲಿ ತಲಾ …

Read More »

ನಾಳೆಯಿಂದ ಬಸ್ ಸಂಚಾರ ಸಾಧ್ಯತೆ – ಏನು ಸೇವೆ ಇರಬಹುದು?

ಬೆಂಗಳೂರು: ಇವತ್ತಿಗೆ ಲಾಕ್‍ಡೌನ್ 3.0 ಅಂತ್ಯಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ, ಹೊಸ ಆಯಾಮದಲ್ಲಿ ಲಾಕ್‍ಡೌನ್ ಜಾರಿಯಾಗಲಿದೆ. ಈಗಾಗಲೇ ಲಾಕ್‍ಡೌನ್ 4.0 ಹೇಗಿರುತ್ತೆ ಅನ್ನೋ ಕುತೂಹಲ ದೇಶದೆಲ್ಲೆಡೆ ಮನೆಮಾಡಿದೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಬಿಗ್ ರಿಲೀಫ್ ಸಿಗುತ್ತಾ ಅಂತ ಜನ ಕಾಯುತ್ತಿದ್ದಾರೆ. ಲಾಕ್‍ಡೌನ್ ಟಫ್ ಇದ್ದಷ್ಟು ದಿನ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ ಲಾಕ್‍ಡೌನ್ ಸಡಿಲಿಕೆಯಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರೋವಾಗ 3ನೇ ಲಾಕ್‍ಡೌನ್ ಮುಗೀತಾ ಬಂದಿದೆ. ಇದರ ನಡುವೆ …

Read More »

ಜಿಲ್ಲಾಡಳಿತಗಳ ಎಡವಟ್ಟಿಗೆ ಬೀದಿಗೆ ಬಿದ್ದ ವೃದ್ಧ……….

ಚಿತ್ರದುರ್ಗ: ಕೊರೊನಾ ನಡುವೆಯೂ ಎರಡು ಜಿಲ್ಲಾಡಳಿತಗಳ ಎಡವಟ್ಟಿನಿಂದ ವಯೋವೃದ್ಧ ಬೀದಿಪಾಲಾಗಿರುವ ಮನಕಲಕುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಮಾರ್ಚ್ ತಿಂಗಳಲ್ಲಿ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಶಿವಮೂರ್ತಿ ಅವರನ್ನು ತಡೆದ ಮಂಡ್ಯ ಜಿಲ್ಲಾಡಳಿತ 30 ದಿನಗಳ ಕಾಲ ಕ್ವಾರಂಟೈನ್ ಮಾಡಿತ್ತು. ಬಳಿಕ ಅವರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸ್ವ-ಗ್ರಾಮಕ್ಕೆ ಶಿವಮೂರ್ತಿಯವರನ್ನು ಕಳುಹಿಸುವ ಬದಲಾಗಿ ಸರ್ಕಾರಿ ವಾಹನದಲ್ಲಿ ಚಿತ್ರದುರ್ಗಕ್ಕೆ ಕಳುಹಿಸಿದೆ. ಅಲ್ಲದೇ ಅಧಿಕಾರಿಗಳ ಎಡವಟ್ಟಿನಿಂದಾಗಿ ಚಿತ್ರದುರ್ಗಕ್ಕೆ ಬಂದ ಶಿವಮೂರ್ತಿ ಅವರನ್ನು ಅಲ್ಲೂ …

Read More »

ತಬ್ಲಿಘಿಗಳ ನಂತರ ಮಲೆನಾಡಿಗೆ ಮುಂಬೈ ನಂಟಿನ ಕಂಟಕ……….

ಶಿವಮೊಗ್ಗ: ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದ ದಿನದಿಂದಲೂ ಮಲೆನಾಡಿನ ಶಿವಮೊಗ್ಗ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಒಂದೂ ಪಾಸಿಟಿವ್ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಒಂದೆಡೆ ಅಹಮದಾಬಾದ್‍ನ ತಬ್ಲಿಘಿಗಳು, ಮತ್ತೊಂದೆಡೆ ಮುಂಬೈನಿಂದ ಬಂದ ವಲಸೆ ಕಾರ್ಮಿಕರು ಮಲೆನಾಡಿನ ಮಂದಿಗೆ ಕಂಟಕವಾಗಿ ಕಾಡುತ್ತಿದ್ದಾರೆ. ಹೀಗಾಗಿ ಇಂದು ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೇರಿದೆ. ಕೊರೊನಾ ಕಾಣಿಸಿಕೊಂಡ ಆರಂಭದಿಂದಲೂ ಜಿಲ್ಲೆ ಹಸಿರು ವಲಯದಲ್ಲಿತ್ತು. ಸರ್ಕಾರ ಲಾಕ್‍ಡೌನ್ ಸಡಿಲಗೊಳಿಸಿದ …

Read More »

ಮುಂಬೈನಿಂದ ಬಂದವರ ಕ್ವಾರಂಟೈನ್- ಅಂಬುಲೆನ್ಸ್‌ಗೆ ಕಲ್ಲು ತೂರಾಟ…………

ಹಾಸನ: ಮುಂಬೈನಿಂದ ಬಂದವರನ್ನು ಜಿಲ್ಲೆಯ ಹೊಳೆನರಸೀಪುರದಲ್ಲಿ ಕ್ವಾರಂಟೈನ್ ಮಾಡುತ್ತಿರುವುದಕ್ಕೆ ವಿರೋಧಿಸಿ ಅಂಬ್ಯುಲೆನ್ಸ್ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೇವರ ಮುದ್ದನಹಳ್ಳಿ ಬಳಿ ಘಟನೆ ನಡೆದಿದ್ದು, ಮುಂಬೈನಿಂದ ಬಂದವರನ್ನು ಇಲ್ಲಿ ಕ್ವಾರಂಟೈನ್ ಮಾಡಿದರೆ ಹಳ್ಳಿಯ ಜನರಿಗೂ ಕೊರೊನಾ ಬರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ವಾರಂಟೈನ್ ಮಾಡಲು ಕರೆದೊಯ್ದಿದ್ದ ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೇ.15ರಂದು ಮುಂಬೈನಿಂದ ಬಂದಿದ್ದ ಒಂದೇ ಕುಟುಂಬದ ನಾಲ್ವರನ್ನು …

Read More »