Breaking News
Home / ಜಿಲ್ಲೆ (page 1052)

ಜಿಲ್ಲೆ

ಬೆಳಗಾವಿ: ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು

ಬೆಳಗಾವಿ: ಕಳೆದ ಎರಡು ತಿಂಗಳಿಂದ ಮನೆ ಮಠ ಬಿಟ್ಟು ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸ್ತಾ ಇದ್ದಾರೆ. ಆದರೆ ಇಲ್ಲೊಂದು ಆಸ್ಪತ್ರೆಯಲ್ಲಿ ಕೊರೊನಾ ಡ್ಯೂಟಿ ಬೇಡ ಅಂದ್ರೆ ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು ಹಾಕಿದ್ದಾರೆ. ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ಸೋಂಕಿತರನ್ನು ಮಹಾಮಾರಿ ವೈರಸ್‍ನಿಂದ ಕಾಪಾಡಲು ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸ್ತಿದ್ದಾರೆ. ಆದರೆ ರಕ್ಷಕರಿಗೆ ರಕ್ಷಣೆ ಇಲ್ಲ …

Read More »

ಕೊರೊನಾ ಮುಕ್ತ ಹೊಸಪೇಟೆ- ಜಿಲ್ಲೆಯಲ್ಲಿ 4 ಪ್ರಕರಣಗಳು ಮಾತ್ರ ಬಾಕಿ……..

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 11 ಕೊರೊನಾ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿತ್ತು. ಇದೀಗ ಹೊಸಪೇಟೆಯಲ್ಲಿ ಮತ್ತೋರ್ವ ವ್ಯಕ್ತಿ ಡಿಸ್‍ಚಾರ್ಜ್ ಆಗಿದ್ದು, ಈ ಮೂಲಕ ಹೊಸಪೇಟೆ ನಗರ ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 17 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 11 ಹೊಸಪೇಟೆಯಲ್ಲೇ ಇದ್ದವು. ಆದರೆ ಇದೀಗ ಹೊಸಪೇಟೆಯ 11 ಜನ ಸಹ ಡಿಸ್‍ಚಾರ್ಜ್ ಆಗಿದ್ದು, ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 13ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು …

Read More »

ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …

Read More »

BIG-BREAKINGಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶ

ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2.10ಕ್ಕೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬಿಡದಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಜನವರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದರು. ನನ್ನ ಆರೋಗ್ಯದ ಕುರಿತು ಹರಿದಾಡುತ್ತಿರುವ …

Read More »

ಪಾಕ್-ಬಾಂಗ್ಲಾ ವಿರುದ್ಧ ಯುದ್ಧ ಮಾಡಿದ್ದ ಯೋಧನಿಗೆ ಅನ್ನ, ನೀರು, ಸೂರಿಲ್ಲ

ಚಿಕ್ಕಮಗಳೂರು: ಆಸ್ತಿಗಾಗಿ ಮಗನೇ ಹೆತ್ತ ಅಪ್ಪನನ್ನು ಮನೆಯಿಂದ ಹೊರ ಹಾಕಿರುವಂತಹ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಬೊಮ್ಮಲಪುರದಲ್ಲಿ ನಡೆದಿದೆ. ಭಾರತೀಯ ಸೇನೆಯಲ್ಲಿ 22 ವರ್ಷ ದೇಶಕ್ಕಾಗಿ ಹೋರಾಡಿದ ಮಾಜಿ ಯೋಧನಿಂದು ತಿನ್ನೋಕೆ ಅನ್ನವಿಲ್ಲದೆ, ಮಲಗಲು ಜಾಗವಿಲ್ಲದೆ ಪಾಳುಬಿದ್ದ ಬಸ್ ನಿಲ್ದಾಣದಲ್ಲಿ ಬದುಕುವಂತಾಗಿದೆ. 77 ವರ್ಷದ ಮಾಜಿ ಸೈನಿಕ ರಾಮಪ್ಪ ಇಂದು ಕೊಪ್ಪದ ಬಸ್ ನಿಲ್ದಾಣದಲ್ಲಿ ನಿರ್ಗತಿಕನಂತೆ ಬದುಕುತ್ತಿದ್ದಾರೆ. ತಾವೇ ಕಟ್ಟಿದ ಮನೆಯಲ್ಲಿ ತನಗೇ ಆಶ್ರಯ ಸಿಗದೇ ಕೊಪ್ಪದ ಮಾಜಿ ಸೈನಿಕರ …

Read More »

ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ

  ಅಥಣಿ :ತನ್ನ ಜಮೀನ ಪಕ್ಕ ಇರುವ ರಸ್ತೆಯನ್ನ ರಾತೋರಾತ್ರಿ ಜೆಸಿಬಿ ಮೂಲಕ ತಗೆದು ಬಂದ್ ಮಾಡಿದ ವ್ಯಕ್ತಿ ಬಂದ್ ಮಾಡಿದ ರಸ್ತೆಯನ್ನು ಸರಿ ಪಡಿಸುವಂತೆ ಆಗ್ರಹಿಸಿ ಚಿಕ್ಕೂಡ, ಸಿದ್ದಾಪೂರ ಗ್ರಾಮಸ್ಥರಿಂದ ಪ್ರತಿಭಟನೆ ಚಿಕ್ಕೂಡ ಗ್ರಾಮದ ಗೌಡಪ್ಪಾ ರಾಮತೀರ್ಥ ಎಂಬಾತ ರಸ್ತೆ ಬಂದ ಮಾಡಿ ಉದ್ದತನ ಮೆರೆದ ವ್ಯಕ್ತಿ ಎರಡು ತಾಲೂಕಿನ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಾಶ ಪಡಿಸಿ‌ ಬಂದ್ ಮಾಡಿದ ಗೌಡಪ್ಪಾ ಅಥಣಿ ತಾಲೂಕಿನ ಚಿಕ್ಕೋಡಿ ಹಾಗೂ …

Read More »

ಸದ್ಯದಲ್ಲೇ ಸಿಗಲಿದೆ ದೇವರ ದರ್ಶನ, ದೇವಸ್ಥಾನಗಳನ್ನು ತೆರೆಯಲು ಮುಂದಾದ ಸರ್ಕಾರ..!

ಬೆಂಗಳೂರು, ಮೇ 14- ಜಿಮ್, ಫಿಟ್‍ನೆಸ್ ಕೇಂದ್ರಗಳನ್ನು ಮುಂದಿನ ವಾರದಿಂದ ತೆರೆಯಲು ರಾಜ್ಯ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ , ಮುಚ್ಚಿದ್ದ ದೇವಾಲಯಗಳು ಕೂಡಾ ಆರಂಭವಾಗುವ ಲಕ್ಷಣಗಳು ಗೋಚರಿಸಿವೆ. ಒಂದು ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ದೇವಾಸ್ಥನಗಳು ತೆರೆದರೆ, ಅಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಭಕ್ತರು ಪಾಲಿಸಬೇಕಾಗುತ್ತದೆ. ಅದೆನೆಂದರೆ ಯಾವುದೇ ದೇವಾಲಯಗಳು ಭಕ್ತರಿಗೆ ಪ್ರಸಾದ, ತೀರ್ಥ ಕೊಡುವುದು ನಿಷಿದ್ಧ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸರತಿ ಸಾಲಿನಲ್ಲಿ ಬರುವವರಿಗೆ ಕಟಕಟೆಗಳನ್ನು …

Read More »

ಕೊರೊನಾದಿಂದ ಕಲ್ಯಾಣ ಮಂಟಪ ಮಾಲೀಕರಿಗೆ 50 ಕೋಟಿ ನಷ್ಟ

ಹಾಸನ: ಕೊರೊನಾ ವೈರಸ್ ಜಿಲ್ಲೆಯ ಕಲ್ಯಾಣ ಮಂಟಪದ ಮಾಲೀಕರನ್ನು ಅತಂತ್ರ ಸ್ಥಿತಿಗೆ ದೂಡಿದೆ. ಹಾಸನ ನಗರದಲ್ಲೇ ಕಲ್ಯಾಣ ಮಂಟಪ ಮಾಲೀಕರಿಗೆ ಬರೋಬ್ಬರಿ 50 ರಿಂದ 60 ಕೋಟಿ ನಷ್ಟ ಆಗಿದೆ ಎಂದು ಹಾಸನ ಕಲ್ಯಾಣ ಮಂಟಪದ ಅಧ್ಯಕ್ಷ ದಿನೇಶ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಅವರು, ಕಲ್ಯಾಣ ಮಂಟಪ ಮಾಲೀಕರು ಈಗಾಗಲೇ ಮದುವೆಗೆ ಬುಕ್ ಮಾಡಿದವರ ಹಣ ವಾಪಸ್ ಕೊಡಲು ಅಸಾಹಯಕತೆ ತೋಡಿಕೊಂಡಿದ್ದಾರೆ. ಈ ಕುರಿತು ಹಾಸನ …

Read More »

ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಯತ್ನ- ಮೂವರ ಸಾವು, ಇಬ್ಬರು ಅರೆಸ್ಟ್………..

ಕೋಲಾರ: ಚಿನ್ನದ ಗಣಿಯಲ್ಲಿ ಚಿನ್ನ ಕಳ್ಳತನಕ್ಕೆಂದು ತೆರಳಿದ್ದ ಐವರಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರನ್ನ ಬಂಧಿಸಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮಾರಿಕುಪ್ಪಂನ ಮೈಸೂರು ಮೈನಿಂಗ್ ನಲ್ಲಿ ಈ ಘಟನೆ ಜರುಗಿದ್ದು, ಮೂವರು ಕಳ್ಳರು ಮೃತಪಟ್ಟಿದ್ದಾರೆ. ಕಳೆದ ರಾತ್ರಿ ಕೆಜಿಎಫ್ ನ ಐವರು ನಿವಾಸಿಗಳು ಚಿನ್ನದ ಗಣಿಯಲ್ಲಿ ಚಿನ್ನ ಕಳ್ಳತನಕ್ಕೆಂದು ತೆರಳಿದ್ದರು. ಚಿನ್ನದ ಗಣಿಯ ಗುಂಡಿಯಲ್ಲಿ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಕೆಜಿಎಫ್ ನಗರದ ಬಿ-ಶಾಪ್ ನ …

Read More »

ಜೀವನಕ್ಕೆ ಬೇಕಾದ ಸೌಲಭ್ಯ ಕೊಡಿ – ಕಪ್ಪುಪಟ್ಟಿ ಧರಿಸಿ ಬಂದ ಕೊರೊನಾ ವಾರಿಯರ್ಸ್

ಯಾದಗಿರಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 560 ನೌಕರರು ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ …

Read More »