Home / ಜಿಲ್ಲೆ (page 1062)

ಜಿಲ್ಲೆ

ಲಾಕ್‍ಡೌನ್ ಎಫೆಕ್ಟ್- ಶ್ರೀಮನ್ನಾರಾಯಣನ ಹೊಸ ಅವತಾರ

ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಿನಿಮಾ ರಂಗ ಸಂಪೂರ್ಣ ಸ್ತಬ್ಧವಾಗಿದ್ದು, ನಟ, ನಟಿಯರು ಸಹ ತಮ್ಮದೇ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಲವರು ಬೇಜಾರಲ್ಲಿ ಸಮಯ ಕಳೆದರೆ, ಇನ್ನೂ ಹಲವರು ತಮ್ಮ ಮುಂದಿನ ಪ್ರಾಜೆಕ್ಟ್‍ಗೆ ಸಿದ್ಧತೆ ನಡೆಸಿದ್ದಾರೆ, ಇನ್ನೂ ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಹೀಗೆ ಎಲ್ಲ ತಾರೆಯರು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ನಟ ರಕ್ಷಿತ್ ಶೆಟ್ಟಿ ಸಹ ತಮ್ಮದೇ ಕಾರ್ಯದಲ್ಲಿ ತೊಡಗಿದ್ದು, ತಮ್ಮ ಹೊಸ ಅವತಾರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ …

Read More »

ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ:ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಸೇರಿದಂತೆ ವಿವಿಧ ಕ್ರಮ, ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ರಧಾನಿ ಸಭೆಯಲ್ಲಿ ಚರ್ಚಿಸಲಿದ್ದಾರೆ. ಮೇ 17ರಂದು ಮೂರನೇ ಹಂತದ ಲಾಕ್‍ಡೌನ್ ಮುಕ್ತಾಯವಾಗಲಿದೆ. ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬ ವಿಚಾರವಾಗಿ ಸಲಹೆ …

Read More »

ರೈತರು ಹೇಳಿದ್ದೇ ದರ – ಈರುಳ್ಳಿ, ಟೊಮಾಟೊ, ಕಲ್ಲಂಗಡಿ ಖರೀದಿಸಿದ ವೈ.ಎಸ್.ವಿ.ದತ್ತ

ಚಿಕ್ಕಮಗಳೂರು: ಬದುಕಿಗಾಗಿ ಬೆಳೆ ಬೆಳೆದು ಲಾಕ್‍ಡೌನ್‍ನಿಂದ ಕೊಳ್ಳುವವರಿಲ್ಲದೆ ಕಂಗಾಲಾಗಿದ್ದ ರೈತರ ಹೊಲಗಳಿಗೆ ಹೋಗಿ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಸಾಂಕೇತಿಕವಾಗಿ ರೈತರು ಹೇಳಿದ ಬೆಲೆಗೆ ಈರುಳ್ಳಿ, ಟೊಮಾಟೊ ಹಾಗೂ ಕಲ್ಲಂಗಡಿ ಖರೀದಿಸಿದ್ದಾರೆ. ಒಂದೆರಡು ಎಕ್ರೆಯಲ್ಲಿ ರೈತರು ಬದುಕಿಗಾಗಿ ನಾನಾ ಬೆಳೆ ಬೆಳೆದಿರುತ್ತಾರೆ. ಬೆಲೆ ಇದ್ದಾಗ ಬೆಳೆ ಇರಲ್ಲ. ಬೆಳೆ ಇದ್ದಾಗ ಬೆಲೆ ಇರಲ್ಲ. ರಾಜ್ಯದ ರೈತರದ್ದು ಶೋಚನಿಯ ಪರಿಸ್ಥಿತಿ. ರೈತರ ಬಹುಪಾಲು ಜೀವನ ಮಧ್ಯವರ್ತಿಗಳ ಜೇಬು ಸೇರುತ್ತೆ. ಅದರಲ್ಲೂ …

Read More »

ನೆಲಮಂಗಲ ಬಳಿ ಟ್ರಾಫಿಕ್ ಜಾಮ್- ಬೆಂಗಳೂರಿನತ್ತ ಜನರು…………

ಬೆಂಗಳೂರು: ಲಾಕ್‍ಡೌನ್ ಆರಂಭವಾದ ದಿನಗಳಲ್ಲಿ ಬೆಂಗಳೂರು ತೊರೆದಿದ್ದ ಜನರು ನಗರಕ್ಕೆ ಆಗಮಿಸುತ್ತಿದ್ದು, ನೆಲಮಂಗಲ ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಖಾಸಗಿ ಸಂಸ್ಥೆ, ಕಂಪನಿಗಳು ಆರಂಭಗೊಂಡಿವೆ. ಹೀಗಾಗಿ ತಮ್ಮ ಉದ್ಯೋಗಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಕಂಪನಿಗಳು ನೋಟಿಸ್ ನೀಡಿದ್ದರಿಂದ ಜನರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ಬೆಂಗಳೂರು ನಗರವನ್ನು ಪ್ರವೇಶಿಸುತ್ತಿದ್ದಾರೆ. ಲಾಕ್‍ಡೌನ್ ಆದ ಬಳಿಕ ಇದೇ ಮೊದಲ ಬಾರಿಗೆ ನೆಲಮಂಗಲದ ನವಯುಗ …

Read More »

ಬೆಂಗ್ಳೂರಲ್ಲಿ ದಂಪತಿಯ ಬರ್ಬರ ಹತ್ಯೆ- ಮಗ ಟೆಕ್ಕಿಯಿಂದ್ಲೇ ಕೃತ್ಯ ಶಂಕೆ………….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಮಗ ಟೆಕ್ಕಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದಂಪತಿ. ಇವರನ್ನು ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ ಅವರು ಆರ್‍ಬಿಐ ನಿವೃತ್ತ ನೌಕರನಾಗಿದ್ದು, ಮಗ ನವೀನ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆ-ತಾಯಿಯನ್ನು ಕೊಲೆ …

Read More »

ಜಿಲ್ಲಾ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣ- ಸಿಬಿಐನಿಂದ ವಿನಯ್ ಕುಲಕರ್ಣಿ ಪಿಎ ತೀವ್ರ ವಿಚಾರಣೆ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯಲ್ಲಿ ಭಾರೀ ಮಹತ್ವದ ಬೆಳವಣಿಗೆಯಾಗಿದ್ದು, ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕನಿಗೆ ಡ್ರಿಲ್ ನಡೆಸಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆಯನ್ನು ಧಾರವಾಡ ಉಪನಗರ ಠಾಣೆಗೆ ಕರೆ ತಂದಿದ್ದ ಸಿಬಿಐ ಅಧಿಕಾರಿಗಳು, ಮಧ್ಯಾಹ್ನದವರೆಗೂ ಭಾರೀ ಡ್ರಿಲ್ ನಡೆಸಿದ ಬಳಿಕ ಆತನನ್ನು ಬಿಟ್ಟಿದ್ದಾರೆ. ಶನಿವಾರದಿಂದ ಸಿಬಿಐ ತನಿಖೆ …

Read More »

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವು…………..

ಚಿಕ್ಕೋಡಿ (ಬೆಳಗಾವಿ): ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ. ಜುಗುಳ ಗ್ರಾಮದ ಭರತ್ ಅಲಾಸೆ (46), ಮಗ ಪ್ರೇಮ್ ಅಲಾಸೆ (20) ಮೃತ ದುರ್ದೈವಿಗಳು. ಭರತ್ ಅವರು ತಮ್ಮ ಹೊಲದಿಂದ ಟ್ರ್ಯಾಕ್ಟರ್ ನಲ್ಲಿ ಮೇವು ತರುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿದಿದ್ದ ಭರತ್, ಪ್ರೇಮ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ …

Read More »

ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು………..

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 87 ವರ್ಷದ ಮನಮೋಹನ್ ಸಿಂಗ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಪಂಜಾಬ್ ವಿಶ್ವವಿದ್ಯಾಲಯ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಪ್ರಧಾನಿಯಾಗುವ ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಅವರು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದರು. ಬಳಿಕ ಅಂದ್ರೆ …

Read More »

ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟ ಸರ್ಕಾರ…….

ಬೆಂಗಳೂರು: ಇತ್ತೀಚೆಗಷ್ಟೆ ಧಾರಾವಾಹಿಗಳ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿದ್ದ ಸರ್ಕಾರ ಇದೀಗ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಮಾತ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಮಾತನಾಡಿದ ಸಚಿವ ಆರ್.ಅಶೋಕ್ ಅವರು, ಸರ್ಕಾರ ಸಿನಿಮಾಗಳ ಒಳಾಂಗಣ ಕೆಲಸಕ್ಕೆ ಅನುಮತಿ ಕೊಟ್ಟಿದೆ. ಶೂಟಿಂಗ್ ಬೇಡ ಬದಲಿಗೆ ಪೋಸ್ಟ್ ಪ್ರೊಡಕ್ಷನ್, ಪ್ರೀ ಪ್ರೊಡಕ್ಷನ್ ಕೆಲಸಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಎಡಿಟಿಂಗ್, ಮಿಕ್ಸಿಂಗ್, ಗ್ರಾಫಿಕ್ಸ್ ಈ ರೀತಿಯ ಕೆಲಸ ಮಾಡಿಕೊಳ್ಳಬಹುದು ಎಂದು …

Read More »

ಕಾಫಿ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ…………

ಹಾಸನ: ಕೊರೊನಾ ಮಹಾಮಾರಿ ಹೊಡೆತಕ್ಕೆ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಫಿಗೆ ಒಳ್ಳೆ ಬೆಲೆನೂ ಸಿಗುತ್ತಿಲ್ಲ. ಇತ್ತ ಕಾಫಿಯನ್ನು ಕೊಳ್ಳುವವರು ಇಲ್ಲದಂತಾಗಿದೆ. ಪ್ರತಿ ವರ್ಷ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದ್ದ ಕಾಫಿತೋಟದ ಮಾಲೀಕರು ಈ ಬಾರಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದರು. ಇದ್ದಕ್ಕಿದ್ದಂತೆ ವಕ್ಕರಿಸಿದ ಕೊರೊನಾ ಮಹಾಮಾರಿಯಿಂದಾಗಿ ಕಾಫಿ ಬೆಳೆಗೆ ಬೇಡಿಕೆ ಕುಸಿದಿದೆ. ಕಾಫಿ ಕೊಳ್ಳುವವರು ಕೂಡ ಮುಂದೆ ಬರುತ್ತಿಲ್ಲ. ಇದರಿಂದ ಸರಿಯಾದ ಬೆಲೆ ಕೂಡ ಸಿಗದಂತಾಗಿದೆ. ಇದೇ ರೀತಿ ಮುಂದುವರಿದರೆ …

Read More »