Home / ಜಿಲ್ಲೆ (page 1080)

ಜಿಲ್ಲೆ

ಕಾಂಪೌಂಡ್‍ಗೆ ಕಾರು ಡಿಕ್ಕಿಯಾಗಿ ಚಾಲಕ ಸಾವು – ನಜ್ಜುಗುಜ್ಜಾದ ಕಾರ್……..

ಚಿಕ್ಕಬಳ್ಳಾಪುರ: ಕಾಂಪೌಂಡ್‍ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ. ಸೋಮವಾರ ರಾತ್ರಿ ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ 32 ವರ್ಷದ ವಿನೋದ್ ಮೃತ ವ್ಯಕ್ತಿ. ಮೃತ ವಿನೋದ್ ಬೆಂಗಳೂರಿನಲ್ಲಿ ಪೈಂಟ್ಸ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಕೊರೊನಾ ಲಾಕ್‍ಡೌನ್‍ನಿಂದ ವಿನೋದ್ ಬೆಂಗಳೂರಿನಿಂದ ವಾಪಸ್ ಬಂದು ತನ್ನ ಸ್ವಗ್ರಾಮದಲ್ಲಿದ್ದನು. ಸೋಮವಾರ ರಾತ್ರಿ ಗ್ರಾಮದಲ್ಲೇ ಕಾಂಪೌಂಡ್‍ಗೆ …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕುರಿತಂತೆ ಇಲ್ಲಿದೆ ಹೊಸ ಅಪ್ಡೇಟ್ ………….

ಬೆಂಗಳೂರು : ಕೊರೊನಾ ಸೋಂಕು ಹೆಚ್ಚಾದ ಪರಿಣಾಮ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ದತೆಗಳನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ. ಸೋಮವಾರ ಎಲ್ಲ ಶಿಕ್ಷಣ ಉಪನಿರ್ದೇಶಕರ ಜತೆ ವಿಡಿಯೋ ಸಂವಾದ ನಡೆಸಿದ್ದು, ಈ ಸಂದರ್ಭ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ಮುಗಿದ ತಕ್ಷಣವೇ ಎಸ್ ಎಸ್ ಎಲ್ ಸಿ …

Read More »

ಮೇ 20ರಿಂದ ದೇಶವ್ಯಾಪಿ ಸಾರಿಗೆ, ಜೂ.1ರಿಂದ ಮಾಲ್‍ಗಳು, ಸಭೆ-ಸಮಾರಂಭಗಳಿಗೆ ಅವಕಾಶ..?

ನವದೆಹಲಿ, ಮೇ 5- ಲಾಕ್‍ಡೌನ್‍ನಲ್ಲಿ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಸಡಿಲಿಕೆ ಮಾಡಿರುವ ಕೇಂದ್ರ ಸರ್ಕಾರ ಮೇ 20ರಿಂದ ದೇಶವ್ಯಾಪಿ ಸಾರಿಗೆ ಸಂಚಾರ ಮತ್ತು ಜೂ.1ರಿಂದ ಮಾಲ್‍ಗಳು ಮತ್ತು ಸಭೆ, ಸಮಾರಂಭಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಉನ್ನತ ಮೂಲಗಳ ಪ್ರಕಾರ ಮೇ 20ರಿಂದ ದೇಶವ್ಯಾಪಿ ಬಸ್, ರೈಲು, ಟ್ಯಾಕ್ಸಿ, ಆಟೋ ಮತ್ತು ಇತರ ಖಾಸಗಿ ಬಾಡಿಗೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಿದೆ. ಜೂ.20ರಿಂದ ಮಾಲ್‍ಗಳು, ಬೃಹತ್ ವಾಣಿಜ್ಯ ಸಂಕೀರ್ಣಗಳು, ಸಿನಿಮಾ …

Read More »

ಲ್ಯಾಪ್‍ಟಾಪ್ ಬಿಟ್ಟು ನೇಗಿಲ ಹೊತ್ತ ಟೆಕ್ಕಿಗಳು..!

ಹುಬ್ಬಳ್ಳಿ, ಮೇ 5ಅವರು ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತುಕೊಂಡು ಲ್ಯಾಪ್ ಟ್ಯಾಪ್ ಮುಂದಿಸಿಕೊಂಡು ತಾಂತ್ರಿಕ ಲೋಕದಲ್ಲಿ ಸದಾ ಮಗ್ನರಾಗುತ್ತಿದ್ದ ಯುವಕರು ಈಗ ಬದಲಾದ ಸಂದರ್ಭದಲ್ಲಿ ಹೊಲಗಳತ್ತ ಬಂದಿದ್ದಾರೆ. ಅದು ನೇಗಿಲು ಹೊತ್ತುಕೊಂಡು. ತಮ್ಮ ತಂದೆ ,ತಾಯಿ, ಅಣ್ಣ ತಂಗಿ, ತಮ್ಮಂದಿರ, ಆಳು ಕಾಳು ಜೊತೆಗೆ. ಇನ್ನು ಕೇಲವರು ಬೀದಿ ಬದಿಯಲ್ಲಿ ತರಕಾರಿ ಮಾರಾಟದಲ್ಲಿ ತೊಡಗಿದ್ದಾರೆ. ಹೌದು ಇದು ಕರೋನಾ ವೈರಸ್ ತಂದಿಟ್ಟ ಪರಿಸ್ಥಿತಿ. ಲಂಡನ್, ಕಲ್ಕತ್ತಾ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ …

Read More »

ಕಾರ್ಯಕ್ರಮಕ್ಕೆ ತೆರಳಿ ಸನ್ಮಾನ ಸ್ವೀಕರಿಸಿ ಪಿಎಸ್‍ಐ ಎಡವಟ್ಟು……

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದರೆ ಇನ್ನೊಂದೆಡೆ ಜಿಲ್ಲೆಯ ಚಡಚಣ ಪಿಎಸ್‍ಐ ಮಹಾ ಯಡವಟ್ಟು ಮಾಡಿದ್ದಾರೆ. ಲಾಕ್‍ಡೌನ್ ನಡುವೆ ಚಡಚಣ ಪಿಎಸ್‍ಐ ಮಹಾದೇವ ಯಲಿಗಾರ್ ಭರ್ಜರಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಅಲ್ಲದೆ ಸನ್ಮಾನ ಸ್ವೀಕರಿಸಿದ್ದಾರೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಕೆಲ ಜನ ಕೊರೊನ ವಾರಿಯರ್ಸ್‍ಗೆಂದು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ತಡೆಯುವುದನ್ನು ಬಿಟ್ಟು ಖುದ್ದು ತಾವು ಹಾಗೂ ತಮ್ಮ ಸಿಬ್ಬಂದಿ ಸಮೇತ ಹೋಗಿ ಸನ್ಮಾನ ಸ್ವೀಕರಿಸಿದ್ದಾರೆ. …

Read More »

ಗ್ರೀನ್‍ಝೋನ್ ದಾವಣಗೆರೆ ನಗರದಲ್ಲಿ 14 ದಿನ ಮದ್ಯ ನಿಷೇಧ!………

ದಾವಣಗೆರೆ: ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ನಿನ್ನೆಯಿಂದ ಮದ್ಯದಂಗಡಿಗಳು ಓಪನ್ ಆಗಿವೆ. ಆದರೆ ಗ್ರೀನ್ ಝೋನ್ ದಾವಣಗೆರೆಯಲ್ಲಿ ಮಾತ್ರ ಇನ್ನೂ 14 ದಿನ ಎಣ್ಣೆಗೆ ನಿಷೇಧ ಹೇರಲಾಗಿದೆ. ಹೌದು. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ದಾವಣಗೆರೆ ಮುಕ್ಕಾಲು ಪ್ರಮಾಣದಷ್ಟು ಓಪನ್ ಆಗಬೇಕಿತ್ತು. ಮೊದಲು 2 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಅಷ್ಟೇ ಬೇಗ ಗುಣಮುಖರಾಗಿದ್ರು. ಅತ್ಯಂತ ಯಶಸ್ವಿಯಾಗಿ ಕೊರೊನಾ ನಿಭಾಯಿಸಿದ ಕೀರ್ತಿ ದಾವಣಗೆರೆ ಪಡೆದಿತ್ತು. ಆದರೆ ಆ ಎಲ್ಲಾ ಹೆಗ್ಗಳಿಕೆಯನ್ನು ಈಗಿನ …

Read More »

ಮದ್ಯದಂಗಡಿ ಕಳವು ಪ್ರಕರಣದಲ್ಲಿ ಮಾಲೀಕನೇ ಕಳ್ಳ!

ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರಿನಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 30ರ ರಾತ್ರಿ ನಗರ ಹೊರವಲಯದ ಗೋಲ್ಡನ್ ಬಾರಿನ ಸಿಸಿಟಿವಿ ಒಡೆದು ಹಾಕಿ, ಬಾರಿನ ಹಿಂಭಾಗದ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿತ್ತು. ಈ ಸಂಬಂಧ ಮೇ 1ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಬಾರ್ ಮಾಲೀಕ, ನಗರಸಭೆ ಸದಸ್ಯ ದೀಪಕ್ ಹಾಗೂ ಆತನ …

Read More »

ಕರ್ನಾಟಕದ ಮದ್ಯ ಪ್ರಿಯರಿಗೆ ಮತ್ತೊಂದು ಗುಡ್‍ನ್ಯೂಸ್…..

ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. 40 ದಿನಗಳ ಬಳಿಕ ಸೋಮವಾರ ಎಣ್ಣೆಯನ್ನ ಗಂಟಲಿಗೆ ಇಳಿಸಿಕೊಂಡು ನಿದ್ದೆಗೆ ಜಾರಿದ್ದ ಗುಂಡೈಕ್ಳ ಬೆಳಗ್ಗೆ ಏಳುವಷ್ಟರಲ್ಲಿ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ.ಕರ್ನಾಟಕದಲ್ಲಿ 900 ಹೊಸ ಎಂಎಸ್‍ಐಎಲ್ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. 2016ರ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಜಾರಿಗೆ ತರಲು ನಿರ್ಧರಿಸಿದ್ದು, ಶೀಘ್ರವೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 4 ಮಳಿಗೆ ಆರಂಭಿಸಲು ಚಿಂತನೆ ನಡೆಸಿದೆ. ಆದಾಯ ಹೆಚ್ಚಿಸಲು ಎಂಎಸ್‍ಐಎಲ್ ಮಳಿಗೆ (ಸಿಎಲ್ …

Read More »

ಸಕ್ಕರೆನಾಡಿಗೆ ಮುಳುವಾಗುತ್ತಿದೆ ಮಹಾರಾಷ್ಟ್ರ……..

ಮಂಡ್ಯ: ದಿನೇ ದಿನೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗ ಮಂಡ್ಯಕ್ಕೆ ಮುಂಬೈ ಲಿಂಕ್ ಹೆಚ್ಚಾಗಿದ್ದು, ಶವ ತಂದ ಬಳಿಕ ಇದೀಗ ಮುಂಬೈನಿಂದ ಗರ್ಭಿಣಿಯೊಬ್ಬರು ಬಂದಿದ್ದು, ಅವರಿಗೂ ಕೊರೊನಾ ದೃಢವಾಗಿದೆ. ಮಂಡ್ಯಕ್ಕೆ ಮುಂಬೈಯ ಕೊರೊನಾ ಚೈನ್ ಲಿಂಕ್ ಹೆಚ್ಚಾಗುತ್ತಿದೆ. ಮುಂಬೈನಿಂದ ಮಂಡ್ಯಕ್ಕೆ ಶವ ತಂದು ಅಂತ್ಯಕ್ರಿಯೆ ನಡೆಸಿದ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಂಬುಲೆನ್ಸ್‍ನಲ್ಲಿ ಶವ ತಂದ ದಿನವೇ ಗರ್ಭಿಣಿಯೊಬ್ಬರನ್ನ ಮುಂಬೈನಿಂದ ಮಂಡ್ಯದ ಕೆ.ಆರ್.ಪೇಟೆಗೆ ಕರೆತರಲಾಗಿತ್ತು. ಇದೀಗ ಆ …

Read More »

ಬಿರುಗಾಳಿ ಸಹಿತ ಮಳೆ,ಎಷ್ಟೇ ಮಳೆ ಸುರಿದರೂ ಕ್ಯೂನಿಂದ ಮಾತ್ರ ಕದಲಿಲ್ಲ. ಎಣ್ಣೆಯನ್ನು ಪಡೆಯುವ ವರೆಗೂ

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರ ಬಿದ್ದಿ ಪರಿಣಾಮ ಕಾರ್ ಜಖಂ ಆಗಿದೆ. ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ತರೀಕೆರೆಯಲ್ಲಿ ಕಾರಿನ ಮೇಲೆ ಬೃಹತ್ ಮರ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ನಿರಂತರ ಮಳೆಯಿಂದಾಗಿ ಹೆಚ್ಚಿದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಕೊರೊನಾ, ಲಾಕ್‍ಡೌನ್ ಮಧ್ಯೆ ಮಳೆಯೂ ಸುರಿಯುತ್ತಿದೆ ಎಂದು ಭಯಭೀತರಾಗಿದ್ದಾರೆ. ತರೀಕೆರೆ, ಮೂಡಿಗೆರೆ, ಕಡೂರು ತಾಲೂಕಿನ ಹಲವೆಡೆ …

Read More »