Breaking News

ಜಿಲ್ಲೆ

ಬೆಳಗಾವಿ: 789 ಮಂದಿ ಗುಣಮುಖ, ಬಿಡುಗಡೆ

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 290 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ಶುಕ್ರವಾರ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಮೂವರು ಹಾಗೂ ಖಾನಾಪುರ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು. 789 ಮಂದಿ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದೆ.

Read More »

ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ

ಗೋಕಾ: ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ. ‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ …

Read More »

ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು DC ಎತ್ತಂಗಡಿ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಇಂದು ಮೈಸೂರು ಡಿಸಿ ಅಭಿರಾಂ ಜಿ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ಅಭಿರಾಂ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ಕಲಬುರ್ಗಿ ಡಿಸಿ ಶರತ್ ಅವರನ್ನ ನೇಮಕ ಮಾಡಲಾಗಿದೆ. ಶರತ್ ಅವರು ಈ ಹಿಂದೆ ಮಂಡ್ಯ ಜಿಪಂ ಸಿಇಓ ಆಗಿದ್ದರು. ನಂಜನಗೂಡು ತಾಲೂಕಾಧಿಕಾರಿ ಡಾ.ನಾಗೇಂದ್ರ ಅವರ ಮೃತದೇಹ …

Read More »

₹ 5 ಕೋಟಿ ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಭೂಮಿಪೂಜೆ

ಹುಣಸಗಿ: ‘ಪ್ರಸಕ್ತ ಸಾಲಿನ ಕೋವಿಡ್ ಸಂದರ್ಭದಲ್ಲಿಯೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆದಿದ್ದು, ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ’ ಎಂದು ಶಾಸಕ ರಾಜುಗೌಡ ಹೇಳಿದರು. ಹುಣಸಗಿ ತಾಲ್ಲೂಕಿನ ಯರಿಕ್ಯಾಳ ಗ್ರಾಮದ ಬಳಿ ಹಳ್ಳಕ್ಕೆ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ‘ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಸುಮಾರು ₹ 200 ಕೋಟಿ ವೆಚ್ಚದಲ್ಲಿ ಈ ಬಾರಿ ಸಿ.ಸಿ ರಸ್ತೆ, ಕಾಲುವೆ …

Read More »

ಪೀರನವಾಡಿ ಪ್ರತಿಮಾ ವಿವಾದ: ಎಡಿಜಿಪಿ, ಡಿಸಿಯಿಂದ ಸಂಧಾನ ಸಭೆ ಯಶಸ್ವಿ

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆಯಿಂದಾಗಿ ಉಲ್ಬಣಗೊಂಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮರ್‌ಕುಮಾರ್‌ ಪಾಂಡೆ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ಶುಕ್ರವಾರ ರಾತ್ರಿವರೆಗೆ ನಡೆದ ಸಭೆ ಯಶಸ್ವಿಯಾಗಿದೆ. ‘ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಉಳಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು’ ಎನ್ನುವ ತೀರ್ಮಾನಕ್ಕೆ ಬರಲಾಯಿತು. ಇದಕ್ಕೆ ‍ಕನ್ನಡಪರ ಸಂಘಟನೆಯವರು, ಎಂಇಎಸ್ ಹಾಗೂ ಶಿವಸೇನೆಯವರು ಮತ್ತು ಸ್ಥಳೀಯ ಮುಖಂಡರು ಸಮ್ಮತಿ ಸೂಚಿಸಿದರು. …

Read More »

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್‍ಗೆ ಮತ್ತೆ ಸಂಕಷ್ಟ

ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿದೆ. ಆರೋಪಿಗಳಾದ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೋಹಂತಿ ಮತ್ತು ಎ.ಎಂ ಪ್ರಸಾದ್ ವಿಚಾರಣೆಗೆ ನೊಟೀಸ್ ನೀಡಿದೆ. ಪ್ರಕರಣದಲ್ಲಿ ಕೆ.ಜೆ.ಜಾರ್ಜ್, ಪ್ರಣಬ್ ಮೋಹಂತಿ, ಎ.ಎಂ.ಪ್ರಸಾದ್ ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ ಎಂದು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನ ಪ್ರಶ್ನಿಸಿ ಮೃತ ಗಣಪತಿ …

Read More »

A.D.G.P.ಅಮರಕುಮಾರ್ ಪಾಂಡೆ ಅವರ ಸಂಧಾನಸಭೆ ಸಕ್ಸಸ್

ಬೆಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ವಿವಾದ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಎಡಿಜಿಪಿ ಅಮರಕುಮಾರ್ ಪಾಂಡೆ ಅವರು ನಡೆಸಿದ, ಸಂಧಾನಸಭೆ ಸಕ್ಸಸ್ ಆಗಿದೆ ಎಡಿಜಿಪಿ ಅಮರಕುಮಾರ ಪಾಂಡೆ ಅವರು ನಡೆಸಿದ ಕನ್ನಡಿಗರ – ಮರಾಠಿಗ ಭಾಷಿಕ ಮುಖಂಡರ ಜೊತೆ ನಡೆದ ಸಭೆ ಸಫಲವಾಗಿದೆ.         ಪೀರನವಾಡಿಯ ಲಕ್ಷ್ಮೀ ಮಹಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ನಾಯಕರ ಸಭೆಯಲ್ಲಿ ಸೌಹಾರ್ದಯುತ ಸಲಹೆಗಳು …

Read More »

ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಸಂಘಟನೆಗಳ 20 ಮಂದಿ ಕಾರ್ಯಕರ್ತರ ಮೇಲೆ ಕ್ರಿಮಿನಲ್‌ ಕೇಸ್‌

.   ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಿದ ಕನ್ನಡ ಸಂಘಟನೆಗಳ 20 ಮಂದಿ ಕಾರ್ಯಕರ್ತರ ಮೇಲೆ ಕ್ರಿಮಿನಲ್‌ ಕೇಸ್‌ ಹಾಕಲಾಗಿದೆ. ದೊಂಬಿ, ಅತಿಕ್ರಮ ಪ್ರವೇಶ, ಮಾರಕಾಸ್ತ್ರಗಳೊಂದಿಗೆ ಗಲಭೆ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಅಡಿ ಆರೋಪ ಸಾಬೀತಾದರೆ ಕನಿಷ್ಠ 3 ತಿಂಗಳಿಂದ 3 ವರ್ಷದವರೆಗೆ ಜೈಲು ಶಿಕ್ಷೆ ಆಗುವ ಸಾಧ್ಯತೆಯಿದೆ. ಆದರೆ ಕನ್ನಡ ಕನ್ನಡ ಧ್ವಜಕ್ಕೆ ಚಪ್ಪಲಿ ಎಸೆದವರೊಂದಿಗೆ ಸಂಧಾನ ಮಾಡಲು ಸರ್ಕಾರ ಮುಂದಾಗಿದ್ದು ಟೀಕೆಗೆ …

Read More »

ಕಣ್ವ ಹಗರಣ: ನಂಜುಂಡಯ್ಯ 7 ದಿನ ಇ.ಡಿ ವಶಕ್ಕೆ

ಬೆಂಗಳೂರು: ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌.ನಂಜುಂಡಯ್ಯ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ) ವಶಕ್ಕೆ ಪಡೆದಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ತನಿಖೆ ಆರಂಭಿಸಿ ನಂಜುಂಡಯ್ಯ ಅವರನ್ನು ವಶಕ್ಕೆ ಪಡೆದಿತ್ತು. ‘₹180 ಕೋಟಿ ವಂಚಿಸಿರುವ ಪ್ರಕರಣದಲ್ಲಿ ನಂಜುಂಡಯ್ಯ ಅವರೇ ಪ್ರಮುಖ ಆರೋಪಿ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಇ.ಡಿ ಹೇಳಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …

Read More »

ರಾಯಣ್ಣ ಪ್ರತಿಮೆ‌ ಸ್ಥಾಪನೆಯ ಹೋರಾಟಗಾರರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ – ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ. ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಪೀರನವಾಡಿಯಲ್ಲಿನ ಘಟನೆ ಸಂಬಂಧ ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ,ಜಲ,ಭಾಷೆ …

Read More »