Home / ಜಿಲ್ಲೆ (page 1093)

ಜಿಲ್ಲೆ

ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವ ದೃಶ್ಯಗಳು

ಬೆಂಗಳೂರು: ಇಕ್ಕಟಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳನ್ನು ತವರು ಜಿಲ್ಲೆಗಳಿಗೆ ಕಳಿಸಲು ರಾಜ್ಯ ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಮಾಡಿದೆ. ಆದರೆ ಪ್ರಯಾಣಿಕರು ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವುದು, ನಿಂತುಕೊಂಡಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು. ಅನೇಕರು ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿ ಕುಳಿತಿದ್ದರು ಹಾಗೂ ಓಡಾಡುತ್ತಿದ್ದರು. ಸರ್ಕಾರ ಇಷ್ಟೇಲ್ಲ ಅನುಕೂಲ ಒದಗಿಸಿದರೂ ಸಾರ್ವಜನಿಕರು ಸಾಮಾಜಿಕ …

Read More »

ಕೊರೊನಾ ಜಾಗೃತಿಗಾಗಿ ಯೋಗರಾಜ್ ಭಟ್ಟರು ಹಾಡು …..ಒಂದಾದ ಯೋಗರಾಜ್ ಭಟ್, ಅರ್ಜುನ್ ಜನ್ಯ, ವಿಜಯ್ ಪ್ರಕಾಶ್

ಬೆಂಗಳೂರು: ಯೋಗರಾಜ್ ಭಟ್ಟರು ತಮ್ಮ ವಿಭಿನ್ನ ಸಾಹಿತ್ಯ, ನಿರ್ದೇಶನದ ಮೂಲಕವೇ ಪ್ರಸಿದ್ಧರು. ಅವರ ಸಾಹಿತ್ಯ ಯುವ ಸಮೂಹಕ್ಕೆ ಅಪ್ಯಾಯಮಾನ. ಹಲವು ವಿಶಿಷ್ಠ ಗೀತೆಗಳ ಮೂಲಕ ಯುವ ಸಮೂಹಕ್ಕೆ ಭಟ್ಟರು ಹುಚ್ಚು ಹಿಡಿಸುತ್ತಾರೆ. ಅದೇ ರೀತಿ ಇದೀಗ ಕೊರೊನಾ ಜಾಗೃತಿ ಗೀತೆಯನ್ನು ಕಟ್ಟಿಕೊಟ್ಟಿದ್ದಾರೆ. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕುರಿತು ಈಗಾಗಲೇ ಹಲವು ಗಾಯಕರು ಹಾಗೂ ಬರಹಗಾರರು ಹಾಡು ರಚಿಸಿದ್ದು, ಇದೀಗ ಯೋಗರಾಜ್ ಭಟ್ಟರು ಹಾಡು ರಚಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ …

Read More »

ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ

ಉಡುಪಿ: ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ. ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಾರ ಯಶವಂತ ಕಾಮತ್ ಮನೆ ತೆಂಗಿನ ತೋಟದ ಮರವೊಂದಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಹಸಿ ತೆಂಗಿನ ಮರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇನ್ನು ಮರಕ್ಕೆ ಬೆಂಕಿ ಹತ್ತಿರುವ ಫೋಟೋ ಮತ್ತು ವಿಡಿಯೋಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಉಡುಪಿಯ ಕುಂದಾಪುರ, ಕಾರ್ಕಳ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ …

Read More »

ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಲಾಕ್‍ಡೌನ್3 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ. ಪಾಸ್ ಬೇಕಾದವರು ತಮ್ಮ …

Read More »

ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ…..

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ಹೋಗಲು ರಾಜ್ಯ ಸರ್ಕಾರ ಶನಿವಾರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದೆ. ಉಡುಪಿಯನ್ನು ಹೊರತುಪಡಿಸಿ ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್‍ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ. ಹಾವೇರಿ, ಯಾದಗಿರಿ, …

Read More »

ಯಾವ ಜಿಲ್ಲೆಯಲ್ಲಿ ಎಷ್ಟು ಕಂಟೈನ್‍ಮೆಂಟ್ ಝೋನ್?

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ ಬೆಂಗಳೂರಿನಲ್ಲಿ ಇಳಿಕೆ ಕಂಡಿದೆ. ರೆಡ್ ಝೋನ್ ಮೈಸೂರು ಜಿಲ್ಲೆಯಲ್ಲಿ ಒಟ್ಟು 28 ಕಂಟೈನ್‍ಮೆಂಟ್ ವಲಯಗಳಿವೆ. ಇದರಲ್ಲಿ ಮೈಸೂರು ನಗರದ ಕೆಲವು ಪ್ರದೇಶ, ನಂಜನಗೂಡಿನ ಕೆಲವು ಬಡಾವಣೆ, ಮೈಸೂರು ತಾಲೂಕು ಕೆಲವು ಏರಿಯಾ ಹಾಗೂ ಟೀ ನರಸೀಪುರದ 1 ಗ್ರಾಮ ಸೇರಿವೆ. …

Read More »

11 ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 330 ಲೀಟರ್ ಕಳ್ಳಭಟ್ಟಿ ವಶ………

ಚಿಕ್ಕೋಡಿ/ಬೆಳಗಾವಿ: ಕೊರೊನಾದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದ ಕಾರಣ ಕಳ್ಳ ಭಟ್ಟಿ ದಂಧೆಗೆ ಕಡಿವಾಣ ಹಾಕಲು ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹುಕ್ಕೇರಿ ತಾಲೂಕಿನ ಶಹಬಂದರ ಗ್ರಾಮದಲ್ಲಿ ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 330 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ. ಶಹಬಂದರ್ ಗ್ರಾಮದ ಬಳಿ ಕಳ್ಳಭಟ್ಟಿ ಸಾಗಿಸುತ್ತಿದ್ದ ಎರಡು ದ್ವಿ-ಚಕ್ರ ವಾಹನ ಹಾಗೂ …

Read More »

ಕೋವಿಡ್-೧೯: ಐವರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಮೇ 2 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಐವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ನಾಲ್ವರು ಮಹಿಳೆಯರು ಪಿ- 282, ಪಿ-285, ಪಿ-286 ಮತ್ತು ಪಿ-288 ಹಾಗೂ ಒಬ್ಬ ಪುರುಷ ಪಿ-283 ಬಿಡುಗಡೆ ಹೊಂದಿರುತ್ತಾರೆ. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 …

Read More »

ಹೊರಗಿನಿಂದ ನಗರಕ್ಕೆ ಯಾರೆ ಬಂದರೆ ಸ್ಥಳಿಯ ಪ್ರಾಧಿಕಾರ, ಪೊಲೀಸ ಇಲಾಖೆಗೆ ಮಾಹಿತಿ ನೀಡಿ : ಪ್ರಕಾಶ ಹೋಳೆಪ್ಪಗೋಳ

ಗೋಕಾಕ:ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಂದ ಯಾರೆ ನಗರಕ್ಕೆ ಬಂದರೆ ಅಂತವರ ಬಗ್ಗೆ ತಾಲೂಕಾ ಆಡಳಿತಕ್ಕೆ ಅಥವಾ ಪೊಲೀಸ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕೆಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಕೋರಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರದ ಹಾಗೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಹಾಗೂ ವೈದ್ಯಕೀಯ ತಪಾಸಣೆಯೊಂದಿಗೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ವಲಸೆ ಕಾರ್ಮಿಕರು ಹಾಗೂ ಸಾರ್ವಜನಿಕರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಹಲವರು ಅನುಮತಿ …

Read More »

ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್‍ಗಳ ವಿತರಣೆ

ಅರಭಾವಿ ಕ್ಷೇತ್ರದ ಒಟ್ಟು 76 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. 1992 ರಿಂದ …

Read More »