Breaking News
Home / ಜಿಲ್ಲೆ (page 1101)

ಜಿಲ್ಲೆ

ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು

ರಾಯಚೂರು: ಕೊರೊನಾ ಬಂದ್ಮೇಲೆ ಶಾಸಕರು, ಸಂಸದರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೊರೊನಾ ವೈರಸ್ ಸಂಕಷ್ಟ ಬಂದಾಗಿನಿಂದ ಶಾಸಕರು, ಸಂಸದರು ಕಾಣೆಯಾಗಿದ್ದಾರೆ. ನಿಮಗೆ ಎಲ್ಲಾದರೂ ಕಾಣಿಸಿದರೆ ದಯವಿಟ್ಟು ಕ್ಷೇತ್ರಕ್ಕೆ ಕಳುಹಿಸಿ ಎನ್ನುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡುತ್ತಿವೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಫೋಟೋ ಹಾಕಿ ಹರಿಬಿಟ್ಟ ಪೋಸ್ಟ್ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರ ಕೈಗೆ ಓರ್ವ ಯುವಕ …

Read More »

ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಚಿಂತನೆ:ರಮೇಶ ಜಾರಕಿಹೊಳಿ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಕೇಂದ್ರದ ಜಲಸಂಪನ್ಮೂಲ ಸಚಿವರ ಜೊತೆಯೂ ಚರ್ಚಿಸಲಾಗಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಆಲಮಟ್ಟಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್ ಹಿನ್ನಲೆಯಲ್ಲಿ ಈ ಯೋಜನೆಗೆ ಅಲ್ಪ ಅಡೆತಡೆಯಾಗಿದೆ. ಕೃಷ್ಣಾ ನದಿ ನೀರು ಬಳಕೆಗಾಗಿ ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು. ಕೃಷ್ಣಾ …

Read More »

ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿ,,,,,,,,,,

ದಾವಣಗೆರೆ: ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿಕೊಟ್ಟಿದೆ. ಜಿಲ್ಲೆಯ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಾವು ಗ್ರೀನ್ ಝೋನ್‍ನಲ್ಲಿ ಇದ್ದೇವೆ ಎಂದು ನೆಮ್ಮದಿಯಯಲ್ಲಿದ್ದ ದಾವಣಗೆರೆ ಜಿಲ್ಲೆಯ ಜನತೆ ಭಯದ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 38 ವರ್ಷದ ಮಹಿಳೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲಾಗಿದೆ. ದಾವಣಗೆರೆ ನಗರದ ಭಾಷಾ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ …

Read More »

ಲಾಕ್‍ಡೌನ್ ಮೀರಿ ಸಾಮೂಹಿಕ ಪ್ರಾರ್ಥನೆ- 15 ಜನರ ಬಂಧನ………..

ಕಲಬುರಗಿ: ಲಾಕ್‍ಡೌನ್ ನಿಯಮ ಮೀರಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದ್ದವರಿಗೆ ಕಲಬುರಗಿಯ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಸುಮಾರು 15 ಜನರು ನಮಾಜ್ ಮಾಡುತ್ತಿದ್ದರು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾಠಿ ರುಚಿ ತೋರಿಸಿ, ಎಲ್ಲ 15 ಮಂದಿಯನ್ನೂ ಬಂಧಿಸಿದ್ದಾರೆ. ಈ ಸಂಬಂಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ …

Read More »

ಮದ್ಯ ಮಾರಾಟದ ಬಗ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ

ಚಿತ್ರದುರ್ಗ: ರಾಜ್ಯದಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟಾಗಿದ್ದರೂ ಜನರ ಜೀವ ಉಳಿಸುವ ಉದ್ದೇಶದಿಂದ ಮದ್ಯ ಮಾರಾಟ ಆರಂಭಿಸಿಲ್ಲ. ಈ ವಿಚಾರದಲ್ಲಿ ಇಲ್ಲಿ ರಾಜಕಾರಣ ಸಲ್ಲದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಗೌರಸಮುದ್ರ ಗ್ರಾಮದಲ್ಲಿ ಆಹಾರದ ಕಿಟ್ ವಿತರಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಬಂದ್ ಬಳಿಕ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದೆವು. ಆದರೆ ದೆಹಲಿ ನಿಜಾಮುದ್ದೀನ್ ಸಭೆ ಬಳಿಕ ಮತ್ತೆ ಆತಂಕ ಸೃಷ್ಠಿ ಆಯಿತು. …

Read More »

ಬಾರ್ ಶೆಟರ್ ತೆಗೆದು ಸಾವಿರಾರು ಬೆಲೆಯ ಮದ್ಯ ಕದ್ದ ಕಳ್ಳರು..! ………

ಹಾಸನ; ನಗರದ ಹೊರವಲಯದ ಕಸ್ತೂರ ಹಳ್ಳಿ ಕ್ರಾಸ್ ಬಳಿಯ ಬೂವನಹಳ್ಳಿ ರಸ್ತೆಯಲ್ಲಿರುವ ಧನಲಕ್ಷ್ಮಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಮದ್ಯದ ಬಾಟಲಿಗಳ ಕಳ್ಳತನವಾಗಿದೆ. ನಗರದ ಹೊರ ವಲಯದಲ್ಲಿ ಮದ್ಯದ ಅಂಗಡಿ ಇರುವುದರಿಂದ ಕಳ್ಳರು ಸುಲಭವಾಗಿ ಅಂಗಡಿಯ ಶೆಟರ್‌ ತೆರೆದು ದಾಸ್ತಾನು ಮಾಡಿದ್ದ ಸಾವಿರಾರು ರೂ ಮದ್ಯವನ್ನು ಕದ್ದೊಯ್ದಿದ್ದಾರೆ. ನಗರದ ಬಹುತೇಕ ಮದ್ಯದಂಗಡಿಗಳ ಕಳ್ಳತನ ಮರುಕಳಿಸುತ್ತಿದ್ದು ಮದ್ಯವ್ಯಸನಿಗಳ ಸಹನೆಯ ಕಟ್ಟೆ ಒಡೆದಿದೆ. ಲಾಕ್ ಡೌನ್‌ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸ್ಥಗಿತಗೊಂಡಿರುವ ಕಾರಣ …

Read More »

ಅರಸೀಕೆರೆ ನಗರಸಭೆ ಸಿಬ್ಬಂದಿಗಳು ಕರ್ತವ್ಯದ ಸಮಯದಲ್ಲಿ ಟಿಕ್ ಟಾಕ್ ನಲ್ಲಿ ತೊಡಗಿದ್ದು ಸರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದರೆ.

ಹಾಸನ; ಕರೋನಾ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ,ಜಿಲ್ಲಾಡಳಿತ ಕರೋನಾ ಭೀತಿ ತಪ್ಪಿಸಲು ಬಾರೀ ಹರಸಾಹಸ ಪಡುತ್ತಿದೆ ಆದರೆ….!! ಅರಸೀಕೆರೆ ನಗರಸಭೆ ಸಿಬ್ಬಂದಿಗಳು ಕರ್ತವ್ಯದ ಸಮಯದಲ್ಲಿ ಟಿಕ್ ಟಾಕ್ ನಲ್ಲಿ ತೊಡಗಿದ್ದು ಸರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದರೆ. ಹೌದು ..ಜಗತ್ತು ಕೊರೋನ ಮಹಾಮಾರಿಗೆ ತತ್ತರಿಸಿದೆ ಅಲ್ಲದೆ ಜನ ಮನೆಯಿಂದ ಹೊರಬರಬಾರದು ಎಂದು ಲಾಕ್ ಡೌನ್ ಮಾಡಲಾಗಿದೆ ಸಾಮಾಜಿಕ ಅಂತರ ಪಾಲಿಸಿ ಎಂದು ಸ್ವತಃ ನಗರಸಭೆ ಪುರಸಭೆ ಆಟೋಗಳ ಮೂಲಕ ಪ್ರಚಾರದ …

Read More »

ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.

ಬೆಳಗಾವಿ – ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿಆರ್ ಪಿಎಫ್ ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ ಮಾಸ್ಕ್ ಧರಿಸಿರಲಿಲ್ಲ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಮಾರಾಮಾರಿ ಹಂತಕ್ಕೆ ಹೋಗಿತ್ತು. ನಂತರ ಯೋಧನನ್ನು ಅಮಾನವೀಯವಾಗಿ ಠಾಣೆಗೆ ಕರೆದೊಯ್ದು ಹಿಂಸಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಯೋಧನಿಗೆ ಕೊಳ ತೊಡಿಸಿ ಕೂಡ್ರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ …

Read More »

ಕೋವಿಡ್-೧೯: ಮತ್ತೇ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಏ.೨೯(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ೨೫ ವರ್ಷದ ವ್ಯಕ್ತಿ(ಪಿ-೨೨೬)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಏ.೧೨ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೫೫ ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ …

Read More »

ಬೆಳಗಾವಿ ಯೋಧನಿಗೆ ಬಾಸುಂಡೆ ಬರೋ ಹಾಗೆ ಥಳಿತ

ಬೆಳಗಾವಿ: ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ್ ಅವರಿಗೆ ಬಾಸುಂಡೆ ಬರುವ ಹಾಗೆ ಸದಲಗಾ ಪೊಲೀಸರು ಥಳಿಸಿರುವ ಆರೋಪಗಳು ಕೇಳಿ ಬಂದಿದೆ. ಯೋಧನಿಗೆ ಬಾಸುಂಡೆ ಬಂದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಪೊಲೀಸರ ನಡೆಗೆ ಕಿಡಿಕಾರಿದ್ದಾರೆ. ಏಪ್ರಿಲ್ 23ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು ಯೋಧನ ನಡುವೆ ಗಲಾಟೆ ನಡೆದಿತ್ತು. ತದನಂತರ ಪೊಲೀಸರು ಯೋಧನನ್ನು ಠಾಣೆಗೆ ಕರೆದುಕೊಂಡು ಕೈಗೆ ಕೋಳ ಹಾಕಿದ್ದರು. …

Read More »