Home / ಜಿಲ್ಲೆ (page 1103)

ಜಿಲ್ಲೆ

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮನೆ ಮಗಳಾಗಿ ಕ್ಷೇತ್ರದ ಜನರ ಅನ್ನದ ಹಸಿವು ಇಂಗಿಸುವ ಕೆಲಸದಲ್ಲಿ ನಿರತ

ಬೆಳಗಾವಿ – ಆ ವೃದ್ದೆಯರ ಕೈ ನಡುಗುತ್ತಿತ್ತು. ಆದರೂ ಮನೆ ಮಗಳ ತಲೆಯ ಮೇಲೆ ಕೈಯಿಟ್ಟು ಹರಸುತ್ತಿದ್ದರು. ತಾಯಂದಿರ ಕಣ್ಣಂಚಿನಲ್ಲಿ ನೀರು ಜಿನುಗುತ್ತಿತ್ತು, ಮನೆಮಗಳನ್ನು ಬಿಗಿದಪ್ಪಿ ಕೃತಜ್ಞತೆ ಸಲ್ಲಿಸುತ್ತಿದ್ದರು. ಹಿರಿಯರು, ಯುವಕರ ಮುಖದಲ್ಲಿ ತಾವು ನೀಡಿದ ಒಂದೊಂದು ಓಟು ನಿಜವಾಗಿಯೂ ಸಾರ್ಥಕವಾದ ಧನ್ಯತಾಭಾವ ಕಾಣುತ್ತಿತ್ತು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ನಿಜಾರ್ಥದಲ್ಲಿ ಶಿವ-ಬಸವ ಜಯಂತಿ ಆಚರಿಸಲ್ಪಟ್ಟಿತು. ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತೊಮ್ಮೆ ಮನೆ ಮಗಳಾಗಿ ಕ್ಷೇತ್ರದ ಜನರ …

Read More »

ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ. ಮಂಗಳೂರಿನ ಟೌನ್ ಹಾಲ್ ಬಳಿಯಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ 37 ಬಸ್‍ಗಳಲ್ಲಿ 1,100 ಜನ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಕಳುಸಿಕೊಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಯಿಂದ ನೂರಾರು ಕಾರ್ಮಿಕರು ಏಕಾಏಕಿ ಮಂಗಳೂರಿಗೆ ಆಗಮಿಸಿದ್ದರು. ಟೌನ್ ಹಾಲ್‍ನಲ್ಲಿ ಜಮಾಯಿಸಿದ್ದ ಅವರನ್ನು ಅವರ …

Read More »

ಐಟಿ ವೃತ್ತಿಪರರ ವರ್ಕ್‌ ಫ್ರಮ್‌ ಹೋಮ್‌ ಜು. 31ರ ವರೆಗೆ ವಿಸ್ತರಣೆ

ಬೆಂಗಳೂರು: ಕೊವಿಡ್‌ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ …

Read More »

ತೂಕದಲ್ಲಿ ಮೋಸ ಮಾಡಿದ 146 ಪಡಿತರ ಅಂಗಡಿ ಲೈಸೆನ್ಸ್ ಅಮಾನತು : ಸಚಿವ ಗೋಪಾಲಯ್ಯ

ದಾವಣಗೆರೆ : ಚಿತ್ರದುರ್ಗದ ಬಳಿಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರು ದಾವಣಗೆರೆ ಬೇಟಿ ನೀಡದರು. ನಂತರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿ ಇಲಾಖೆಗೆ ಸಂಭಂದಪಟ್ಟ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ದೇಶದಾದ್ಯಂತ ಕೋವಿಡ್- 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಲಾಕ್ ಡೌನ್ ಮಾಡ್ತಿದೆ. ಹಾಗಾಗಿ …

Read More »

ಗ್ರೀನ್ ಮತ್ತು ಆರೆಂಜ್ ಜೋನ್‌ಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಸಲು ಅನುಮತಿ : ಡಿಸಿಎಂ ಕಾರಜೋಳ

ಬೆಂಗಳೂರು, ಏ.29-ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ಕೆಂಪು ವಲಯವನ್ನು ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಡಿಸಿಎಂ, ನೀರು ಸಂಗ್ರಹಕ್ಕೆ …

Read More »

ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ

ಕೋಲಾರ: ಜಿಲ್ಲೆಯ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದರು. ಕೆಜಿಎಫ್ ನಗರದಲ್ಲಿ ಪೌರಕಾರ್ಮಿಕರಿಗೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಹೀಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ಆಹಾರ ಪದಾರ್ಥ ಹಾಗೂ ಊಟವನ್ನ ನೀಡುತ್ತಿದ್ದ ತಾಲೂಕು ಬಿಜೆಪಿ ಮುಖಂಡರು ಮಂಗಳವಾರ ಪೌರಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ, ಆಹಾರ ಪದಾರ್ಥಗಳೊಂದಿಗೆ ಚಿಕನ್ ಬಿರಿಯಾನಿ ನೀಡಿದರು. …

Read More »

ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ.

ಕೋಲಾರ: ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ. ಸುಮಾರು 6 ಸಾವಿರ ಮಂದಿಗೆ ರ‍್ಯಾಪಿಡ್ ಟೆಸ್ಟ್ ಮಾಡುವುದಕ್ಕೆ ಕೋಲಾರ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದೆ. ಎಲ್ಲೆಡೆ ಸಂಚಲನ ಮೂಡಿಸಿರುವ ಹಾಗೂ ಸಾಕಷ್ಟು ಸಮಯ ವ್ಯರ್ಥ ಮಾಡುತ್ತಿರುವ ರಕ್ತ ಮಾದರಿ ಹಾಗೂ ಗಂಟಲು ದ್ರವ ಸಂಗ್ರಹಿಸಿ ಎರಡು ದಿನಗಳ ಕಾಲ ವರದಿಗಾಗಿ ಕಾಯುವ ಬದಲಿಗೆ ಪ್ರಾಥಮಿಕ ಹಂತದಲ್ಲೆ ಪರೀಕ್ಷೆಗೆ …

Read More »

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆ……

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದೆ. ಮಳೆಯ ಜೊತೆ ಗಾಳಿ, ಮಿಂಚು, ಗುಡುಗು ಸಹ ಬಂದಿದ್ದರಿಂದ ವಾಹನ ಸಂಚರಕ್ಕೆ ಹಲವೆಡೆ ಅಡ್ಡಿ ಆಗಿತ್ತು. ಬೆಳಗ್ಗೆ ಸುಮಾರು 5 ಗಂಟೆಯಿಂದ ಆರಂಭವಾದ ಮಳೆ ಸುಮಾರು 2 ಗಂಟೆಗಳ ಕಾಲ ಜೋರಾಗಿಯೇ ಸುರಿದಿದೆ. ಬೆಳಗ್ಗೆ 7 ಗಂಟೆಯಾದರೂ ನಿಲ್ಲುವ ಸೂಚನೆ ಕಾಣುತ್ತಿಲ್ಲ. ನಗರದ ಎಲ್ಲ ಫ್ಲೈ ಓವರ್ ಗಳನ್ನು ಮುಚ್ಚಿದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಕಾರು ಚಾಲಕರು ಮತ್ತು …

Read More »

ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಂಪೂರ್ಣ ಗುಣಮುಖವಾದ ಹಿನ್ನೆಲೆಯಲ್ಲಿ ರೋಗಿ ನಂಬರ್ 140, 195, 201, 213, 216 311, 312 ಮತ್ತು 273 ಎಂಟು ಜನರು ಇಂದು ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾದಿಂದ ಗುಣಮುಖವಾವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಸದ್ಯ 38 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ …

Read More »

ಕಲಬುರಗಿ ಜಿಲ್ಲಾಧಿಕಾರಿ ಶರತ್ ವರ್ಗಾವಣೆಗೆ ಸಿಎಂ ತಡೆ……….

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರ ವರ್ಗಾವಣೆಯ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ತಡೆ ಹಿಡಿದಿದ್ದಾರೆ. ಇಂದು ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ, ಸುರಾಲ್ಕರ್ ವಿಕಾಸ್ ಕಿಶೋರ್ ಕಲಬುರಗಿ ಡಿಸಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಡಿಸಿ ವರ್ಗಾವಣೆ ಆದೇಶದ ಬೆನ್ನಲ್ಲೇ ವ್ಯಾಪಕ ಟೀಕೆಗಳು ವ್ಯಕ್ತವಾದವು. ಕಲಬುರಗಿಯಲ್ಲಿ ಈಗಾಗಲೇ ಕೊರೊನಾದಿಂದ ಐವರು ಸಾವನ್ನಪ್ಪಿದ್ರೆ, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಕಿತ್ತಾ ಎಂದು ಸಾರ್ವಜನಿಕರು …

Read More »