ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಮೂವರು ಮಹಿಳೆಯರ ಶವ ಪತ್ತೆಯಾಗಿದ್ದು, 6 ವರ್ಷದ ಬಾಲಕಿ ರೋಜಾಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆ.17 ದಿನಸಿ ತರಲು ರಾಯಚೂರು ಜಿಲ್ಲೆಯ ಕುರ್ವಕುಲಾ ಗ್ರಾಮದಿಂದ ತೆಲಂಗಾಣದ ಪಂಚದೇವಪಾಡಕ್ಕೆ ಹೋಗಿದ್ದ ನಾಲ್ವರು ಮರಳಿ ಬರುವಾಗ ತೆಪ್ಪ ಮುಗುಚಿ ನೀರು ಪಾಲಾಗಿದ್ದರು. ನಿನ್ನೆ ಇಬ್ಬರ ಮಹಿಳೆಯರ ಶವ ಪತ್ತೆಯಾಗಿದ್ದು, ಇಂದು ಬೆಳಗ್ಗೆ ಮತ್ತೊಬ್ಬ ಮಹಿಳೆ ಮೃತದೇಹ ತೊರೆತಿದೆ. ಜುರುಲಾ ಜಲಾಶಯದ ಬಳಿ …
Read More »ಸೆ.21ರಿಂದ 30ರವರೆಗೆ ವಿಧಾನಮಂಡಲ ಅಧಿವೇಶನ..!
ಬೆಂಗಳೂರು,ಆ.20-ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ವಿಧಾನಮಂಡಲದ ಮಳೆಗಾಲದ ಅವೇಶನ ಸೆಪ್ಟೆಂಬರ್ 21ರಿಂದ ಹತ್ತು ದಿನಗಳ ಕಾಲ ಬೆಂಗಳೂರುನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸೆಪ್ಟೆಂಬರ್ 21ರಿಂದ 30ರವರೆಗೆ ಕಾಲ ಅವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಜೂನ್ ತಿಂಗಳಿನಲ್ಲಿ ಮಳೆಗಾಲದ ಅವೇಶನ ನಡೆಸಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ವಿಧಾನಸೌಧ ಹೊರತುಪಡಿಸಿ ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ಸಭೆ ನಡೆಸಲು ಸ್ಥಳ …
Read More »ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ
ದಾವಣಗೆರೆ, ಆ.20- ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ ಕೂಲಿನಾಲಿ ಮಾಡಿ ತಮ್ಮನನ್ನು ಸಾಕಿ ಸಲಹುತ್ತಿದ್ದರೂ ನೆತ್ತಿಯ ಮೇಲೊಂದು ಸೂರಿಲ್ಲದೆ ಪರಿತಪಿಸುತ್ತಿದ್ದಾರೆ. ಜಗಳೂರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗ್ರಾಮವೊಂದರ ಮಳೆ ಸೋರುವ ಹಾಳು ಮನೆಯಲ್ಲಿ ವಾಸಿಸುತ್ತಿರುವ ಮೇಘನಾ ಭವಿಷ್ಯದಲ್ಲಿ ಸಾಧನೆ ಮಾಡುವ ಹಂಬಲ ಹೊಂದಿದ್ದಾಳೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಮೇಘನಾ ಭವಿಷ್ಯದಲ್ಲಿ ಬ್ಯಾಂಕ್ ಅಕಾರಿಯಾಗುವ ಕನಸು ಕಂಡಿದ್ದಾಳೆ. ತನ್ನ ಓದಿನ ಜತೆಗೆ ಕೂಲಿನಾಲಿ ಮಾಡಿ ಜೀವನ …
Read More »ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ಬೆಳಗಾವಿ: ಕೋವಿಡ್ ನಿರ್ವಹಣೆಯಲ್ಲಿ ವಿಫಲ ಸೇರಿದಂತೆ ರೈತರಿಗೆ ಹಾಗೂ ಕೃಷಿ ಕೂಲಿಕಾರರಿಗೆ ಮಾರಕವಾಗಿರುವ ಭೂ ಸುಧಾರಣಾ, ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ …
Read More »ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿರುವ ತನಿಖಾಧಿಕಾರಿಗಳು
ಬೆಳಗಾವಿ: ಸಂಗೊಳ್ಳಿ ರಾಯಣ್ಣ ಸೊಸೈಟಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಸುಮಾರು 2,063 ಪುಟಗಳ ದೋಷಾರೋಪ ಪಟ್ಟಿಯನ್ನು ಬೆಳಗಾವಿ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಚಲನಚಿತ್ರ ನಿರ್ದೇಶಕ ಆನಂದ ಅಪ್ಪುಗೋಳ್ ನೇತೃತ್ವದ ಸಂಗೊಳ್ಳಿ ರಾಯಣ್ಣ ಸೊಸೈಟಿ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ 35 ಶಾಖೆಗಳನ್ನು ಹೊಂದಿದ್ದು, 26 ಸಾವಿರ ಗ್ರಾಹಕರಿಂದ ₹281.14 …
Read More »ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಆಗಸ್ಟ್ 23 ಹಾಗೂ 24ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ. – ಘಟಪ್ರಭಾ ಜಲಾಶಯ ಗರಿಷ್ಠ ಮಟ್ಟ- 662.94 ಮೀಟರ್ ಇಂದಿನ ಮಟ್ಟ- 662.51 ಮೀಟರ್ ಗರಿಷ್ಠ ಸಾಮರ್ಥ್ಯ- 51 ಟಿಎಂಸಿ ಇಂದಿನ ನೀರು ಸಂಗ್ರಹ- 49.53 ಟಿಎಂಸಿ ಇಂದಿನ ಒಳಹರಿವು- 34,308 ಕ್ಯೂಸೆಕ್ಸ್ ಇಂದಿನ ಹೊರ …
Read More »ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿ
ಗೋಕಾಕ: ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣದಲ್ಲಿ ಕಡಿತವಾಗಿರುವದರಿಂದ ಘಟಪ್ರಭಾ ನದಿಯ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸೋಮವಾರದಿಂದ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದೆ. ಆದ್ರೆ ನೀರಿನ ರಬಸಕ್ಕೆ ಕಸ ಕಡ್ಡಿಗಳು ಸೇತುವೆ ಮೇಲೆ ಬಂದಿವೆ. ಸೇತುವೆಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದ್ದು ಜನರು ಸಂಚರಿಸುತ್ತಿದ್ದಾರೆ. ಗೋಕಾಕ ನಗರಕ್ಕೆ ಮಹಾರಾಷ್ಟ್ರ ಮತ್ತು ವಿಜಯಪುರಕ್ಕೆ ರಸ್ತೆ ಕಲ್ಪಿಸುವ ಲೋಳಸುರ ಸೇತುವೆ ಬಂದ್ ಆಗಿದ್ದರಿಂದ ನಿತ್ಯ ಸಂಚರಿಸುವ ಜನರು ಪರದಾಡುವಂತಾಗಿತ್ತು. …
Read More »ಕೆ.ಎಲ್.ರಾಹುಲ್ ಮಾಡಿರುವ ಕಮೆಂಟ್ ಗೆ ಅಭಿಮಾನಿಗಳು ಫುಲ್ ಕನ್ಫ್ಯೂಸ್
ಬೆಂಗಳೂರು: ಗೆಳತಿ, ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಫೋಟೋಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಮಾಡಿರುವ ಕಮೆಂಟ್ ಗೆ ಅಭಿಮಾನಿಗಳು ಫುಲ್ ಕನ್ಫ್ಯೂಸ್ ಆಗಿದ್ದಾರೆ. ರಾಹುಲ್ ಕಮೆಂಟ್‍ಗೆ ಪ್ರತಿಕ್ರಿಯೆ ನೀಡಿರುವ ಫ್ಯಾನ್ಸ್, ಅಣ್ಣ ಈ ಪದದ ಅರ್ಥ ಏನು ಎಂದು ಪ್ರಶ್ನೆ ಮಾಡಿದ್ದಾರೆ.ಬುಧವಾರ ಆಥಿಯಾ ಶೆಟ್ಟಿ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮಿರರ್ ಸೆಲ್ಫಿ ಹಾಕಿಕೊಂಡಿದ್ದರು. ಇತ್ತ ನಟಿ ಫೋಟೋ ಅಪ್ಲೋಡ್ ಮಾಡುತ್ತಿದ್ದಂತೆ ಕೆ.ಎಲ್.ರಾಹುಲ್, ಜೆಫಾ ಎಂದು ಕಮೆಂಟ್ ಮಾಡಿದ್ದಾರೆ. ಬಹುತೇಕರು ಜೆಫಾ ಅರ್ಥ ಹುಡುಕಲು …
Read More »ಶ್ರೀರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್ – ಆರೋಪಿ ಬಂಧನದಿಂದ ಶಾಂತವಾದ ದೇವದುರ್ಗ
ರಾಯಚೂರು: ಶ್ರೀ ರಾಮಚಂದ್ರನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಿನ್ನೆಲೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಉಂಟಾಗಿದ್ದ ಬಿಗುವಿನ ವಾತಾವರಣ ಆರೋಪಿಯ ಬಂಧನ ಹಿನ್ನೆಲೆ ಸದ್ಯ ಶಾಂತವಾಗಿದೆ. ಜಹೀರ್ ಎಂಬ ಯುವಕ ಶ್ರೀರಾಮನ ಬಗ್ಗೆ ಅವಹೇಳನಕಾರಿ ವಾಟ್ಸಪ್ ಸ್ಟೇಟಸ್ ಹಾಕಿದ್ದ. ಇದರಿಂದ ಆಕ್ರೋಶಗೊಂಡ ನೂರಾರು ಜನ ಹಿಂದೂ ಪರ ಸಂಘಟನೆ ಕಾರ್ಯಕರ್ತರು ರಾತ್ರೋ ರಾತ್ರಿ ದೇವದುರ್ಗ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು. ಆರೋಪಿಯನ್ನ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಹೆಚ್ಚು ಜನ ಸೇರಿದ್ದರಿಂದ ಬಿಗುವಿನ …
Read More »ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ.
ತುಮಕೂರು: ಮಹಾಮಾರಿ ಕೊರೊನಾ ಮನುಷ್ಯತ್ವದ ಪರೀಕ್ಷೆ ಮಾಡ್ತಿದೆ. ಕೊರೊನಾದಿಂದ ತಮ್ಮವರೇ ತಮ್ಮ ಜೊತೆಗಿದ್ದವರೇ ತಮಗೆ ಬೇಕಾದವರೇ ಮೃತಪಟ್ಟರೂ ಅವರ ಅಂತ್ಯಸಂಸ್ಕಾರಕ್ಕೆ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ಇಂಥದ್ದೊಂದು ವಿಚಿತ್ರ ಸನ್ನಿವೇಶಕ್ಕೆ ತುಮಕೂರು ಸಾಕ್ಷಿ ಆಗಿದೆ.ಸಂಬಂಧಿಕರು ಬರದೇ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ. ಇದುವರೆಗೂ ಜಿಲ್ಲೆಯಲ್ಲಿ 3,470 ಜನರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 108 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇವುಗಳಲ್ಲಿ 40 ಶವಗಳನ್ನು ಸಂಬಂಧಿಕರು ಸ್ವೀಕರಿಸಿಯೇ ಇಲ್ಲ. ಹೀಗಾಗಿ ಸ್ವಯಂಸೇವಕರ ಸಹಕಾರದೊಂದಿಗೆ …
Read More »
Laxmi News 24×7