Breaking News
Home / ಜಿಲ್ಲೆ (page 1104)

ಜಿಲ್ಲೆ

ಗ್ರೀನ್ ಮತ್ತು ಆರೆಂಜ್ ಜೋನ್‌ಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಸಲು ಅನುಮತಿ : ಡಿಸಿಎಂ ಕಾರಜೋಳ

ಬೆಂಗಳೂರು, ಏ.29-ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ಕೆಂಪು ವಲಯವನ್ನು ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಡಿಸಿಎಂ, ನೀರು ಸಂಗ್ರಹಕ್ಕೆ …

Read More »

ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ

ಕೋಲಾರ: ಜಿಲ್ಲೆಯ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದರು. ಕೆಜಿಎಫ್ ನಗರದಲ್ಲಿ ಪೌರಕಾರ್ಮಿಕರಿಗೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಹೀಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ಆಹಾರ ಪದಾರ್ಥ ಹಾಗೂ ಊಟವನ್ನ ನೀಡುತ್ತಿದ್ದ ತಾಲೂಕು ಬಿಜೆಪಿ ಮುಖಂಡರು ಮಂಗಳವಾರ ಪೌರಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ, ಆಹಾರ ಪದಾರ್ಥಗಳೊಂದಿಗೆ ಚಿಕನ್ ಬಿರಿಯಾನಿ ನೀಡಿದರು. …

Read More »

ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ.

ಕೋಲಾರ: ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ. ಸುಮಾರು 6 ಸಾವಿರ ಮಂದಿಗೆ ರ‍್ಯಾಪಿಡ್ ಟೆಸ್ಟ್ ಮಾಡುವುದಕ್ಕೆ ಕೋಲಾರ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದೆ. ಎಲ್ಲೆಡೆ ಸಂಚಲನ ಮೂಡಿಸಿರುವ ಹಾಗೂ ಸಾಕಷ್ಟು ಸಮಯ ವ್ಯರ್ಥ ಮಾಡುತ್ತಿರುವ ರಕ್ತ ಮಾದರಿ ಹಾಗೂ ಗಂಟಲು ದ್ರವ ಸಂಗ್ರಹಿಸಿ ಎರಡು ದಿನಗಳ ಕಾಲ ವರದಿಗಾಗಿ ಕಾಯುವ ಬದಲಿಗೆ ಪ್ರಾಥಮಿಕ ಹಂತದಲ್ಲೆ ಪರೀಕ್ಷೆಗೆ …

Read More »

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆ……

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗಿದೆ. ಮಳೆಯ ಜೊತೆ ಗಾಳಿ, ಮಿಂಚು, ಗುಡುಗು ಸಹ ಬಂದಿದ್ದರಿಂದ ವಾಹನ ಸಂಚರಕ್ಕೆ ಹಲವೆಡೆ ಅಡ್ಡಿ ಆಗಿತ್ತು. ಬೆಳಗ್ಗೆ ಸುಮಾರು 5 ಗಂಟೆಯಿಂದ ಆರಂಭವಾದ ಮಳೆ ಸುಮಾರು 2 ಗಂಟೆಗಳ ಕಾಲ ಜೋರಾಗಿಯೇ ಸುರಿದಿದೆ. ಬೆಳಗ್ಗೆ 7 ಗಂಟೆಯಾದರೂ ನಿಲ್ಲುವ ಸೂಚನೆ ಕಾಣುತ್ತಿಲ್ಲ. ನಗರದ ಎಲ್ಲ ಫ್ಲೈ ಓವರ್ ಗಳನ್ನು ಮುಚ್ಚಿದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಕಾರು ಚಾಲಕರು ಮತ್ತು …

Read More »

ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಂಪೂರ್ಣ ಗುಣಮುಖವಾದ ಹಿನ್ನೆಲೆಯಲ್ಲಿ ರೋಗಿ ನಂಬರ್ 140, 195, 201, 213, 216 311, 312 ಮತ್ತು 273 ಎಂಟು ಜನರು ಇಂದು ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾದಿಂದ ಗುಣಮುಖವಾವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಸದ್ಯ 38 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ …

Read More »

ಕಲಬುರಗಿ ಜಿಲ್ಲಾಧಿಕಾರಿ ಶರತ್ ವರ್ಗಾವಣೆಗೆ ಸಿಎಂ ತಡೆ……….

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರ ವರ್ಗಾವಣೆಯ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ತಡೆ ಹಿಡಿದಿದ್ದಾರೆ. ಇಂದು ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ, ಸುರಾಲ್ಕರ್ ವಿಕಾಸ್ ಕಿಶೋರ್ ಕಲಬುರಗಿ ಡಿಸಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಡಿಸಿ ವರ್ಗಾವಣೆ ಆದೇಶದ ಬೆನ್ನಲ್ಲೇ ವ್ಯಾಪಕ ಟೀಕೆಗಳು ವ್ಯಕ್ತವಾದವು. ಕಲಬುರಗಿಯಲ್ಲಿ ಈಗಾಗಲೇ ಕೊರೊನಾದಿಂದ ಐವರು ಸಾವನ್ನಪ್ಪಿದ್ರೆ, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಕಿತ್ತಾ ಎಂದು ಸಾರ್ವಜನಿಕರು …

Read More »

ವದಂತಿ ನಂಬಿ ಮಂಗ್ಳೂರು ಟೌನ್‍ಹಾಲ್ ಎದುರು ಜಮಾಯಿಸಿದ ವಲಸೆ ಕಾರ್ಮಿಕರು

ಮಂಗಳೂರು: ಎರಡು ವಾರಗಳ ಹಿಂದೆ ವದಂತಿ ನಂಬಿ ಮುಂಬೈನಲ್ಲಿ ಸಾವಿರಾರು ವಲಸೆ ಕಾರ್ಮಿಕರು ರೈಲ್ವೇ ಸ್ಟೇಷನ್‍ಗೆ ಬಂದಿದ್ದರು. ಆ ವೇಳೆ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹೆಣಗಾಡಿದರು. ಇಂತದ್ದೆ ಸನ್ನಿವೇಶ ಇಂದು ಮಂಗಳೂರಿನಲ್ಲಿ ಕಂಡು ಬಂತು. ಜಿಲ್ಲಾಡಳಿತ ತಮ್ಮನ್ನು ಸ್ವಗ್ರಾಮಗಳಿಗೆ ಕಳಿಸಲಿದೆ ಎಂಬ ವದಂತಿ ನಂಬಿದ ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮಂಗಳೂರಿನ ಟೌನ್‍ಹಾಲ್‍ನಲ್ಲಿ ಕಾಣಿಸಿಕೊಂಡರು. ಸಾಮಾಜಿಕ ಅಂತರಪಾಲಿಸದೆ ಗುಂಪು ಸೇರಿದ್ದರು. ಇದು ವದಂತಿ ಹೋಗಿ ಎಂದರೂ ಯಾರೂ ಕೇಳಲಿಲ್ಲ. ಕಾರ್ಮಿಕರು …

Read More »

ಇಂದು 11 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 523 ಕ್ಕೆ ಏರಿಕೆಯಾಗಿದೆ. ಕಲಬುರಗಿ 6, ಗದಗ 1, ಬೆಂಗಳೂರು (ಪಾದರಾಯನಪುರ)1 ಮತ್ತು ಬಾಗಲಕೋಟೆಯ ಮೂವರಿಗೆ ಇಂದು ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಹೊಂಗಸಂದ್ರದ 145 ಮತ್ತು ಪಾದರಾಯನಪುರದ 70 ಜನರ ವರದಿ ನೆಗೆಟಿವ್ ಬಂದಿದೆ. ಸೋಂಕಿತರ ವಿವರ: 1.ರೋಗಿ-513: ಬೆಂಗಳೂರಿನ 48 ವರ್ಷ ಪುರುಷ. ಬಿಬಿಎಂಪಿ ವಾರ್ಡ್-135ರ ಕಂಟೈನ್ಮೆಂಟ್ ಝೋನ್ ಸಂಪರ್ಕ …

Read More »

ಮದುವೆಯಾಗದ ಸಿಬ್ಬಂದಿಗೆ ಬೇಗ ಮದುವೆ ಮಾಡಿಸಿ ಎಂದು ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಬೆಳಗಾವಿ: ಮದುವೆಯಾಗದ ಸಿಬ್ಬಂದಿಗೆ ಬೇಗ ಮದುವೆ ಮಾಡಿಸಿ ಎಂದು ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಕೊರೊನಾ ಡ್ಯೂಟಿಯನ್ನು ನಿರಂತರವಾಗಿ ಮಾಡುತ್ತಿರುವ ಕೆಎಸ್‍ಆರ್‍ಪಿ ಸಿಬ್ಬಂದಿಗೆ ಧೈರ್ಯ ತುಂಬುವ ಕೆಲಸವನ್ನ ಇಂದು ಕೆಎಸ್‍ಆರ್‍ಪಿ ಎಡಿಜಿಪಿ ಅಲೋಕ್ ಕುಮಾರ್ ಮಾಡಿದ್ದಾರೆ. ಬೆಳಗಾವಿ ನಗರಕ್ಕೆ ಆಗಮಿಸಿದ್ದ ಅಲೋಕ್ ಕುಮಾರ್ ಕೆಎಸ್‍ಆರ್‍ಪಿ ತುಕಡಿಗಳು ಕೆಲಸ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಅವರ ಆರೋಗ್ಯ ವಿಚಾರಣೆ ಮಾಡಿದರು. ಪ್ರತಿಯೊಬ್ಬ ಪೇದೆಗಳ …

Read More »

ಬೆಳಗಾವಿ:ಯೋಧ ಸಚಿನ್ ಸಾವಂತ್‍ಗೆ ಬೇಲ್……..

ಬೆಳಗಾವಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಸಚಿನ್ ಸಾವಂತ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆ ನ್ಯಾಯಾಲಯದ ಆದೇಶ ಪ್ರತಿ ಜೊತೆಗೆ ಸಿಆರ್‌ಪಿಎಫ್ ಅಧಿಕಾರಿಗಳು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಜೈಲು ಅಧಿಕಾರಿಗಳು ನ್ಯಾಯಾಲಯ ಆದೇಶ ಪ್ರತಿ ಪರಿಶೀಲನೆ ನಡೆಸಿ ಸಚಿನ್ ಸಾವಂತ್ ಅವರನ್ನು ಬಿಡುಗಡೆ ಮಾಡಿದ್ದಾರೆ. ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ …

Read More »