Breaking News
Home / ಜಿಲ್ಲೆ (page 1105)

ಜಿಲ್ಲೆ

2 ದಿನದ ಹಿಂದೆ ಮದ್ವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ………..

ಗದಗ: ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ಮಸಾರಿ ಭಾಗದ ನಂದೀಶ್ವರಮಠ ಬಳಿ ಇರುವ ಮನೆಯಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಧನಲಕ್ಷ್ಮೀ ನವಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಾಕ್‍ಡೌನ್ ಮುನ್ನವೇ ಧನಲಕ್ಷೀ ಮದುವೆ ನಿಶ್ಚಯವಾಗಿತ್ತು. ಆದರೆ ಕುಟುಂಬದವರು ಮದುವೆ ಮುಂದೂಡುವುದು ಬೇಡ ಎಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರಳವಾಗಿ ಮದುವೆ ಮಾಡಿದ್ದಾರೆ. ಮನೆಯಲ್ಲಿ …

Read More »

ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಮಾಡಲು ರೋಗಿಗಳೇ ಇಲ್ಲ: ವೈದ್ಯಕೀಯ ಸಚಿವ ಸುಧಾಕರ್……

ಚಿಕ್ಕಬಳ್ಳಾಪುರ: ಕೊರೊನಾದಿಂದ ಗುಣಮುಖರಾದವರು ರಕ್ತದಾನ ಮಾಡಿದ್ದು ಪ್ಲಾಸ್ಮಾ ಸಿದ್ಧವಾಗಿದೆ. ಆದ್ರೆ ಪ್ಲಾಸ್ಮಾ ಟ್ರಾನ್ಸ್ ಫ್ಲಾಂಟ್ ಮಾಡುವಂತಹ ರೋಗಿಗಳೇ ನಮ್ಮ ರಾಜ್ಯದಲ್ಲಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮೊಬೈಲ್ ಸ್ವಾಬ್ ಕಲೆಕ್ಷನ್ ಯೂನಿಟ್ ಉದ್ಗಾಟನೆ ಮಾಡಿ ಮಾತನಾಡಿದ ಸಚಿವ ಸುಧಾಕರ್, ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ರಾಜ್ಯದಲ್ಲಿನ 523 ಪ್ರಕರಣಗಳಲ್ಲಿ 198 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಉಳಿದ 325 ಮಂದಿಯಲ್ಲಿ 20 …

Read More »

ಚಾಮರಾಜನಗರದ ಸಕ್ಕರೆ ಕಾರ್ಖಾನೆಗೆ ತಮಿಳುನಾಡಿನಿಂದ ಕಾರ್ಮಿಕರು- ಅನ್ನದಾತರ ಆಕ್ರೋಶ

ಚಾಮರಾಜನಗರ: ಹಸಿರು ವಲಯದಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಪುನರಾರಂಭಗೊಂಡಿದೆ. ಆದರೆ ಕಾರ್ಖಾನೆ ಆಡಳಿತ ಮಂಡಳಿ ತಮಿಳುನಾಡಿನಿಂದ 45ಕ್ಕೂ ಹೆಚ್ಚು ಕಾರ್ಮಿಕರನ್ನು ಕರೆಸಿಕೊಂಡಿರುವುದು ಕೊರೊನಾ ಮುಕ್ತವಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಆತಂಕ ಉಂಟುಮಾಡಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲೇ 5ನೇ ಸ್ಥಾನದಲ್ಲಿರುವ ತಮಿಳುನಾಡಿನಿಂದ ಕಾರ್ಮಿಕರನ್ನು ಕರೆಸಿಕೊಳ್ಳುವ ಔಚಿತ್ಯವಾದರೂ ಏನಿತ್ತು ಎಂದು ರೈತ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಂದು ವೇಳೆ ಆ …

Read More »

ಮೇ 3ರವರೆಗೆ ಚಿಕ್ಕಬಳ್ಳಾಪುರ, ಗೌರಿಬಿದನೂರಿನಲ್ಲಿ ಸೀಲ್‍ಡೌನ್: ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಮೇ 3ರವರೆಗೂ ಚಿಕ್ಕಬಳ್ಳಾಪುರ ನಗರ ಹಾಗೂ ಗೌರಿಬಿದನೂರು ನಗರದಲ್ಲಿ ಸೀಲ್‍ಡೌನ್ ಮುಂದುವರಿಯಲಿದೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮೊಬೈಲ್ ಸ್ವಾನ್ ಕಲೆಕ್ಷನ್ ಯೂನಿಟ್ ವಾಹನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು, ಈ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಚಿಕ್ಕಬಳ್ಳಾಪುರ ಜಿಲ್ಲೆ ನೆರೆಯ ರಾಜ್ಯ ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಆಂಧ್ರದ ಹಿಂದೂಪುರ ರೆಡ್ ಝೋನ್ …

Read More »

ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರ ವರೆಗೆ ವಿಸ್ತರಣೆ…….

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್‍ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ ಡೌನ್ …

Read More »

3 ವರ್ಷದಿಂದ ಕೂಡಿಟ್ಟಿದ್ದ 25 ಸಾವಿರ ಹಣ ದೇಣಿಗೆ ನೀಡಿದ ಮಕ್ಕಳು………

ಹಾವೇರಿ: ದೇಶ ಹಾಗೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಈಗಾಗಲೇ ಅನೇಕರು ಕೊರೊನಾ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ. ಇದೀಗ ಜಿಲ್ಲೆಯ ಮೂರು ವಿದ್ಯಾರ್ಥಿಗಳು ತಾವು ಕೂಡಿಟ್ಟುಕೊಂಡಿದ್ದ ಹುಂಡಿ ಹಣವನ್ನ ಸಿಎಂ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. 7 ವರ್ಷದ ಅವನಿ, 6 ವರ್ಷದ ಸನ್ನಿಧಿ ಹಾಗೂ 7 ವರ್ಷದ ದೀಪ್ತಿ ಹುಂಡಿ ಹಣವನ್ನು ನೀಡಿದ್ದಾರೆ. ಮೂವರು ವಿದ್ಯಾರ್ಥಿಗಳು ಹಾವೇರಿ ಜಿಲ್ಲಾಧಿಕಾರಿ …

Read More »

ಕಲಬುರಗಿ ಜಿಲ್ಲಾಧಿಕಾರಿ ಎತ್ತಂಗಡಿ- ನೂತನ ಡಿಸಿಯಾಗಿ ವಿಕಾಸ್ ಕಿಶೋರ್ ನೇಮಕ……..

ಬೆಂಗಳೂರು: ಕಲಬುರಗಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೆಡ್ ಝೋನ್‍ನಲ್ಲಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಲಾಗಿದೆ. ಬಿ.ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 44 ಜನರಿಗೆ ಕೊರೊನಾ ಸೋಂಕು …

Read More »

ಗ್ರೀನ್ ಝೋನ್‍ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು…….

ರಾಯಚೂರು: ಗ್ರೀನ್ ಝೋನ್‍ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು ಆರಂಭವಾಗಲಿವೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬಹುದು ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ. ಜಿಲ್ಲೆ ಗ್ರೀನ್ ಝೋನ್ ಪಟ್ಟಿಯಲ್ಲಿ ಇರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆಯಾಗಿದ್ದು, ಬುಧವಾರದಿಂದ ಜಿಲ್ಲೆಯಾದ್ಯಂತ ವ್ಯಾಪಾರ- ವಹಿವಾಟು ಶುರುವಾಗಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕಂಪನಿ, ಕೈಗಾರಿಕೆಗಳನ್ನ ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕಂಪನಿ ಆರಂಭಿಸಲು ಸೂಚಿಸಲಾಗಿದೆ. ಜೊತೆಗೆ ಬೇರೆ …

Read More »

ಮದ್ಯದಗಂಡಿ ತೆರೆಯಲು ಪ್ರಧಾನಿ ಮೋದಿ ನಿರಾಕರಿಸಿದ್ದಾರೆ: ಎಚ್.ನಾಗೇಶ್……….

ಕೋಲಾರ: ಮೂರನೇ ತಾರೀಖಿನಿಂದ ಮದ್ಯದಂಗಡಿ ತೆರೆಯುವ ಚಿಂತನೆ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಒಪ್ಪಿಲ್ಲ. ಹೀಗಾಗಿ ಸದ್ಯಕ್ಕೆ ಮದ್ಯದಂಗಡಿ ತೆರೆಯೋದು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಂದರ್ಭದಲ್ಲಿ ಕೆಲ ರಾಜ್ಯಗಳ ಸಿಎಂಗಳು ಈ ಕುರಿತು ಕೇಳಿದ್ದಾರೆ. ಈ ವೇಳೆ ಪ್ರಧಾನಿ …

Read More »

ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು.

ಗೋಕಾಕ: ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು. ಪ್ರತಿಯೊಂದು ಮನೆಗೆ ಹೋಗಿ ಪ್ರತಿಯೊಬ್ಬರನ್ನು ಮಹಿಳೆಯರು ಮತ್ತು ಪುರುಷರು ಹಾಗೂ ವ್ಯಕ್ತಿಯನ್ನು ಹಾಗೂ ಮಕ್ಕಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿ.ಡಿ.ಓ.ಇವರ ಜಂಟಿಯಾಗಿ ಮಾಸ್ಕ ವಿತರಣೆ ಮಾಡಿದರು. ಸಾರ್ವಜನಿಕರಿಗೆ ಈ ಮುಖದ ರಕ್ಷಕಗಳು ಸಹಾಯಕವಾಗುವುದು. ಅಲ್ಲದೇ ನರ್ಸ್, …

Read More »