Breaking News

ಜಿಲ್ಲೆ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್‌ ನಿಲ್ದಾಣಗಳನ್ನು ಒದಗಿಸಲಾಗಿದೆ. ಸಂಚಾರ ಪೊಲೀಸ್ ಇಲಾಖೆ ಸಹಯೋಗದಿಂದ ಬಿಎಂಆರ್​ಸಿಎಲ್ ನಿಲ್ದಾಣಗಳ ಓಪನ್‌ಗೆ ಸ್ಥಳ ಪರಿಶೀಲನೆ ನಡೆಸಿದೆ. ನೇರಳೆ ಮಾರ್ಗದಲ್ಲಿ 2, ಹಸಿರು ಮಾರ್ಗದಲ್ಲಿ 8 ಮೆಟ್ರೋ ನಿಲ್ದಾಣಗಳ ಬಳಿ ಓಪನ್ ಆಗಲಿವೆ. ಈ ಬಗ್ಗೆ ಬಿಎಂಆರ್‌ಸಿಎಲ್‌ನಿಂದ ಮಾಧ್ಯಮ ಪ್ರಕಟಣೆ ಜಾರಿ ಮಾಡಿದೆ. ಹೊಸದಾಗಿ ಒದಗಿಸಲಾದ ಬಸ್ ನಿಲ್ದಾಣ ಯಾವ್ಯಾವು? ನೇರಳೆ ಮಾರ್ಗ * ಟ್ರಿನಿಟಿ: ಎಂ.ಜಿ.ರಸ್ತೆಯಿಂದ ಹಲಸೂರು …

Read More »

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

ಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ  ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ ದಂಡೇ ಹರಿದು ಬರಲಿದೆ. ಭಕ್ತರ ಸುರಕ್ಷತೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಜ್ಜಾಗಿದೆ. ಕಾರಣ ಮಲೆಹದೇಶ್ವರ ಬೆಟ್ಟದ ಸುತ್ತಮುತ್ತ ಚಿರತೆ ಆತಂಕ ಮನೆ ಮಾಡಿದೆ. ಚಿರತೆ ಆತಂಕ ಮಧ್ಯೆ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ. ಇಂದಿನಿಂದ 20ರವರೆಗೆ ನಡೆಯಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ …

Read More »

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ 5,000 ವರ್ಷಗಳಷ್ಟು ಹಳೆಯದಾದ ಮಾನವನ ಪಳೆಯುಳಿಕೆ  ಪತ್ತೆಯಾಗಿದೆ. ಸುಮಾರು 3,000 ವರ್ಷದಿಂದ 5,000 ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಇದಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್ ಸುಗಂಧಿ ಅವರಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ವಾರದ ಹಿಂದೆ ಉತ್ಪನನದ ವೇಳೆ ಮಾನವನ ಮೂಳೆಯೊಂದು ಸಿಕ್ಕಿತ್ತು. ಮಣ್ಣನ್ನು …

Read More »

ಬೆಕ್ಕಿನಕೆರೆಯಲ್ಲಿ 66 ವರ್ಷಗಳ ಬಳಿಕ ಇತಿಹಾಸ: ಮಹಾಲಕ್ಷ್ಮೀ ಜಾತ್ರಾ ಮಹೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ!

“ಬರೋಬ್ಬರಿ ಆರು ದಶಕಗಳ ಸುದೀರ್ಘ ಕಾಯುವಿಕೆಗೆ ಇಂದು ತೆರೆ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಬೆಕ್ಕಿನಕೆರೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿಯ ಐತಿಹಾಸಿಕ ಜಾತ್ರೆ ಭಕ್ತಿ-ಭಾವದೊಂದಿಗೆ ಜರುಗುತ್ತಿದೆ. ಅಜ್ಜಂದಿರ ಕಾಲದ ಸಂಕಲ್ಪವನ್ನು ಮೊಮ್ಮಕ್ಕಳ ಪೀಳಿಗೆ ಈಡೇರಿಸುತ್ತಿದ್ದು, ಮೂರನೇ ದಿನವಾದ ಇಂದು ದೇವಿಯ ದರ್ಶನಕ್ಕೆ ಭಕ್ತ ಸಮೂಹವೇ ಲಗ್ಗೆ ಇಟ್ಟಿದೆ.” ಬೆಳಗಾವಿ ನಗರದ ಸಮೀಪವಿರುವ ಬೆಕ್ಕಿನಕೆರೆ ಗ್ರಾಮದಲ್ಲಿ ಸದ್ಯ ಸಂಭ್ರಮ ಮುಗಿಲು ಮುಟ್ಟಿದೆ. ಬರೋಬ್ಬರಿ 66 ವರ್ಷಗಳ ಬಳಿಕ ನಡೆಯುತ್ತಿರುವ ಶ್ರೀ ಮಹಾಲಕ್ಷ್ಮೀ …

Read More »

ಭವ್ಯ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ: ರೈತ ಮುಖಂಡ ಶಶಿಕಾಂತ್ ಗುರೂಜಿ

ಕಾಗವಾಡ:”ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬಿನ ದರಕ್ಕಾಗಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ಹಳಿಂಗಳಿಯ ಜೈನಮಠದ ಪರಮಪೂಜ್ಯ ಕುಲಭೂಷಣ ಮುನಿ ಮಹಾರಾಜರ ಆಶೀರ್ವಾದವೇ ಶ್ರೀರಕ್ಷೆಯಾಯಿತು. ನಾನು ಅವರ ಆಶೀರ್ವಾದ ಪಡೆಯಲು ಹೋದಾಗ, ‘ನಿನ್ನಿಂದ ನಾಡಿನ ಸೇವೆಯಾಗಲಿದೆ’ ಎಂದು ಅವರು ಹರಸಿದ್ದರು. ಅದರ ಫಲಶೃತಿಯಾಗಿಯೇ ಇಂದು ರೈತರ ಹೋರಾಟ ಯಶಸ್ವಿಯಾಗಿದೆ,” ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ್ ಗುರೂಜಿ ಹೇಳಿದರು. ಶೇಡಬಾಳದ ಆಚಾರ್ಯ ಶಾಂತಿಸಾಗರ ಜೈನ ಆಶ್ರಮದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಶಾಂತಿಸಾಗರ ಪ್ರಾಥಮಿಕ, …

Read More »

ಬಾಗಲಕೋಟೆಯಲ್ಲಿ ಖಾಕಿ ಇಲಾಖೆಗೆ ಸರ್ಜರಿ: ಬನಹಟ್ಟಿ ಸಿಪಿಐ ಹೆಚ್.ಆರ್. ಪಾಟೀಲ್ ಅಮಾನತ್ತು

ಬಾಗಲಕೋಟೆ: ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದೆ. ಕರ್ತವ್ಯ ಲೋಪದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬನಹಟ್ಟಿ ಸಿಪಿಐ ಅವರನ್ನು ಅಮಾನತ್ತುಗೊಳಿಸಿ ಉತ್ತರ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ. ಇಲಾಖೆಯ ಒಳಗಿನ ಈ ಹಠಾತ್ ಕ್ರಮ ಈಗ ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.” ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪೊಲೀಸ್ ಠಾಣೆಯ ಸಿಪಿಐ ಹೆಚ್.ಆರ್. ಪಾಟೀಲ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಐಜಿಪಿ ಆದೇಶಿಸಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಶಿಸ್ತು ಉಲ್ಲಂಘನೆಯ …

Read More »

ಧರ್ಮವೆಂದರೆ ಮೀಸಲಾತಿ ಹೋರಾಟವಲ್ಲ : ಬಸವಲಿಂಗಮಹಾಸ್ವಾಮಿಗಳು

ಬಾಗಲಕೋಟೆ: ಧರ್ಮ ಎಂದರೆ ಮೀಸಲಾತಿ ಹೋರಾಟಗಳಲ್ಲ ಅದೊಂದು ಸಾಮಾಜಮುಖಿ ಚಿಂತನೆಯ ನಡೆಯಾಗಿದ್ದು ಇತ್ತೀಚೆಗೆ ಧರ್ಮದ ಮೂಲ ಪರಿಕಲ್ಪನೆಯ ಅರಿವು ಕಡಿಮೆಯಾಗುತ್ತಿದೆ ಎಂದು ಕೊಟ್ಟೂರೇಶ್ವರ.ಹೊಸಪೇಟೆ-ಅನ್ನದಾನೀಶ್ವರ ಸಂಸ್ಥಾನಮಠದ ಹಾಲಕೆರೆಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವ ನಿಮಿತ್ಯ ಚರಂತಿಮಠದ ಆವರಣದಲ್ಲಿ ಶನಿವಾರ ನಡೆದ ಸಮಾಜ ಚಿಂತನ ಸಮಾರಂಭದ ದಿವ್ಯ ಸಾನಿದ್ಯವನ್ನು ವಹಿಸಿ ಹಾನಗಲ್ ಶ್ರೀಕುಮಾರ ಶಿವಯೋಗಿಗಳ ಭಾವ ಚಿತ್ರಕ್ಕೆ ಪುಷ್ಪಾಂಜಲಿ ಮೂಲಕ ಗೌರವ ನಮನಗಳನ್ನು …

Read More »

ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ

ಹಾಸನ: ಮುಂಬರುವ ದಿನಮಾನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಪರಿವರ್ತನೆಗಳು ನಡೆಯಲಿದ್ದು, ಹಾಸನ  ಜಿಲ್ಲೆಯೇ ಮತ್ತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ದಿನಗಳು ದೂರವಿಲ್ಲ. ಪ್ರಧಾನಿಯಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಹಾಸನದೊಳಗಿಂದಲೇ ಹೊರಬರುವ ಸಾಧ್ಯತೆ ಇದೆ ಎಂದು ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ  ಭವಿಷ್ಯ ನುಡಿದಿದ್ದಾರೆ. ಹಾಸನ ನಗರದ ಶ್ರೀ ಹಾಸನಾಂಬ ದೇವಾಲಯದಲ್ಲಿ ನಡೆದ ಸಾಮೂಹಿಕ 108 ಶ್ರೀ …

Read More »

ಜಿಬಿಎ ಚುನಾವಣೆ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ: ವಿಜಯೇಂದ್ರ

ಬೆಂಗಳೂರು: ಜಿಬಿಎ ಚುನಾವಣೆ  ಯಾವಾಗಲೇ ನಡೆದರೂ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ  ಕಚೇರಿಯಲ್ಲಿ ಜಿಬಿಎ ಚುನಾವಣೆ ವಿಚಾರವಾಗಿ ಚುನಾವಣೆ ಉಸ್ತುವಾರಿ ರಾಮ್ ಮಾಧವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವಿಜಯೇಂದ್ರ, ಜಿಬಿಎ ಚುನಾವಣೆ ಯಾವತ್ತೇ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಚರ್ಚೆ ಮಾಡಿದ್ದೇವೆ. 5 ಮಹಾನಗರ ಪಾಲಿಕೆಗಳಲ್ಲಿ ಗೆಲ್ಲುವ ಅವಕಾಶ ಇದೆ. …

Read More »

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ  ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ  ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘ ಕೀರ್ತಿಯನ್ನ (14) ಕೊಲೆ ಮಾಡಿದ್ದ ಮಾವ …

Read More »