Breaking News

ಜಿಲ್ಲೆ

ಕರದಂಟು ನಾಡಿನ  ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಗೋಕಾಕ:  ಪಶ್ಚಿಮಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆ ಕರದಂಟು ನಾಡಿನ  ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಭಾರತ ನಯಾನಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ ಫಾಲ್ಸ್,  ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 40 ಸಾವಿರ ಸಾವಿರ ಕ್ಯೂಸೆಕ್ಸ್ ನೀರು ಹರಿ ಬಿಡಲಾಗಿದೆ. ಹೀಗಾಗಿ ಫಾಲ್ಸ್  ನೀರಿನ ಮಟ್ಟ ಹೆಚ್ಚಿದ್ದು,  ಬಂಡೆಗಳ ಮೇಲಿಂದ ನೀರು ಧುಮುಕುವ ಮನೋಹರ ದೃಶ್ಯ  ನೋಡುಗರ ಕಣ್ಮನ ಸೆಳೆಯುತ್ತಿದೆ. …

Read More »

ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆಬೆಳಗಾವಿ ಸೇರಿ 6 ಜಿಲ್ಲೆಗಳಲ್ಲಿಮುನ್ನಚ್ಚರಿಕೆ

ಬೆಂಗಳೂರು:   ಬೆಳಗಾವಿ, ಧಾರವಾಡ ಸೇರಿ ಕರಾವಳಿ ಭಾಗದಲ್ಲಿ ಆ. 21 ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯಬಹುದು. ಈ ಹಿನ್ನೆಲೆಯಲ್ಲಿ ಈ  ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ …

Read More »

ಖಾನಾಪುರ ತಾಲೂಕಿನ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತ

ಖಾನಾಪುರ: ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಸೇತುವೆಯೊಂದು ಜಲಾವೃತವಾದ ಹಿನ್ನೆಲೆಯಲ್ಲಿ  ಖಾನಾಪುರ ತಾಲೂಕಿನ  ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸಾತಾಳಿ ಗ್ರಾಮದ ತೂಗು ಸೇತುವೆ ಜಲಾವೃತವಾಗಿದೆ. ಈ ಸೇತುವೆ ಮೂಲಕ ಸಾತನಾಳಿ, ಮಾಚಾಳಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನದಿ ನೀರಿನ ಮಟ್ಟ ಹೆಚ್ಚಿ ಸೇತುವೆ ಜಲಾವೃತವಾದರಿಂದ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ

Read More »

ಪುತ್ರನ ನಿಶ್ಚಿತಾರ್ಥದಲ್ಲಿ ನಿಯಮ ಉಲ್ಲಂಘಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಶಿವಮೊಗ್ಗ: ತಮ್ಮ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೌದು. ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಸಹೋದರ ಬಿ.ಕೆ ಶಿವಕುಮಾರ್ ಪುತ್ರಿ ಹಿತಾ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಜನರು ಸೇರಬಾರದೆಂಬ ನಿಯಮವಿದ್ದರೂ, ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಜನರು ಭಾಗಿಯಾಗಿದ್ದಾರೆ. ಈ ಮೂಲಕ ಶಾಸಕಿ ಕೊರೊನಾ ನಿಯಮವನ್ನು …

Read More »

ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆ

ಮೈಸೂರು: ಆಸ್ತಿಗಾಗಿ ಸಂಬಂಧಿಕರೇ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಹತ್ಯೆಯಾದ ಮಹಿಳೆಯನ್ನು ಬೆಟ್ಟದಪುರ ಗ್ರಾಮದ ಗಂಗಮ್ಮ (45) ಎಂದು ಗುರುತಿಸಲಾಗಿದೆ. ಆರೋಪಿಗಳು ಗಂಗಮ್ಮರನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ಕಾವೇರಿ ನದಿಗೆ ಎಸೆದಿದ್ದಾರೆ. ಮೃತ ಗಂಗಮ್ಮಗೆ ಮಕ್ಕಳಿಲ್ಲ. ಗಂಡ ಸತ್ತು ಹೋಗಿದ್ದಾರೆ. ಆಗಸ್ಟ್ 7 ರಿಂದ ಗಂಗಮ್ಮ ನಾಪತ್ತೆಯಾಗಿದ್ದರು. ಕೊಲೆ ಆರೋಪಿಗಳು ಮದ್ಯದ ಅಮಲಿನಲ್ಲಿ ಹತ್ಯೆ ಬಗ್ಗೆ ಮಾತನಾಡಿದ್ದಾರೆ. ವಿಚಾರ ತಿಳಿದು …

Read More »

ಡಿಜೆ ಹಳ್ಳಿ, ಕೆಜಿಹಳ್ಳಿಗೆ ಇಂದು ಕಟೀಲ್ ನೇತೃತ್ವದ ನಿಯೋಗ ಭೇಟಿ

ಬೆಂಗಳೂರು,ಆ.17- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ರಾಜಧಾನಿ ಬೆಂಗಳೂರಿನ ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣದ ಘಟನಾ ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗ ಇಂದು ಸಂಜೆ ಭೇಟಿ ನೀಡಲಿದೆ. ಬಿಜೆಪಿ ಮುಖಂಡರ ನಿಯೋಗದ ಜೊತೆಗೆ ನಳಿನ್ ಕುಮಾರ್ ಕಟೀಲ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದು, ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ನಿವಾಸಕ್ಕೂ ಭೇಟಿ ನೀಡುವರು. ಇದಕ್ಕೂ ಮುನ್ನ ಗೃಹ ಸಚಿವರ …

Read More »

ಸತೀಶ್ ಜಾರಕಿಹೊಳಿ ಸೋಮವಾರ ಸನ್ಮಾನ ಮಾಡಿ,  ವಿದ್ಯಾರ್ಥಿಗಳಿಗೆ ತಲಾ 5  ಸಾವಿರ ಚೆಕ್ ವಿತರಿಸಿದರು.

ಬೆಳಗಾವಿ : ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ಎಸ್ಸೆಸ್ಸೆಲ್ಸಿ ಯಲ್ಲಿ ಉತ್ತಮ ಅಂಕ ಪಡೆದ ಟಾಫ್ 10 ವಿದ್ಯಾರ್ಥಿಗಳಿಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೋಮವಾರ ಸನ್ಮಾನ ಮಾಡಿ,  ವಿದ್ಯಾರ್ಥಿಗಳಿಗೆ ತಲಾ 5  ಸಾವಿರ ಚೆಕ್ ವಿತರಿಸಿದರು. ಇದೇ ವೇಳೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿಯೇ ಯಮಕನಮರಡಿ ಕ್ಷೇತ್ರದಲ್ಲಿ ಮೊಲದಲಿನಿಂದಲೂ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಮೂಲಕ ಮಕ್ಕಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ. ಅದೇ …

Read More »

ಹಂದಿ ಕಳ್ಳರಿಂದ ತ್ರಿಬಲ್ ಮರ್ಡರ್ – ಓರ್ವನ ಶಿರ ನಾಪತ್ತೆ

ಚಿತ್ರದುರ್ಗ: ಹಂದಿ ಕದಿಯಲು ಬಂದಿದ್ದ ಕಳ್ಳರು ಮೂವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಾರೇಶ್ (50), ಯಲ್ಲೇಶ್ (30) ಮತ್ತು ಸೀನಪ್ಪ (30) ಕೊಲೆಯಾದ ದುರ್ದೈವಿಗಳು. ಒಂದು ವಾರದ ಹಿಂದೆ ನಾಯಕನಹಟ್ಟಿಗೆ ಬುಲೇರೊ ವಾಹನದಲ್ಲಿ ಬಂದಿದ್ದ ಆಂಧ್ರ ಮೂಲದ ಗುಂಪೊಂದು ನಿಮಗೆ ಪಾಠ ಕಲಿಸುವುದಾಗಿ ಎಚ್ಚರಿಕೆ ಕೊಟ್ಟು ತೆರಳಿದ್ದರು. ಹಂದಿ ವ್ಯಾಪಾರದ ವಿಚಾರದಲ್ಲಿ ಪರಸ್ಪರ ದ್ವೇಷವಿರಬಹುದೆಂಬ ಶಂಕೆ ನಾಯಕನಹಟ್ಟಿಯಲ್ಲಿ ವ್ಯಕ್ತವಾಗಿತ್ತು. …

Read More »

ನವೀನ್‌ ವಿರುದ್ಧ ದೂರು ನೀಡಿದ್ಧ ವ್ಯಕ್ತಿಯಿಂದ ಈಗ ಗಲಭೆಕೋರರ ವಿರುದ್ಧ ದೂರು

ಬೆಂಗಳೂರು: ಆರೋಪಿ ನವೀನ್‌ ವಿರುದ್ಧ ದೂರು ನೀಡಿದ್ದ ವ್ಯಕ್ತಿಯೇ ಈಗ ಡಿಜೆ ಹಳ್ಳಿ ಠಾಣೆಯಲ್ಲಿ ಗಲಾಟೆ ಮಾಡಿದ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದಾರೆ.ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದಕ್ಕೆ ನವೀನ್‌ ವಿರುದ್ಧ ಫಿರ್ದೋಸ್‌ ಪಾಶಾ ನೀಡಿದ್ದರು. ಆದರೆ ಈಗ ತನ್ನ ಸ್ಕೂಟರ್‌ ಅನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿ ಡಿಜೆ ಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವತ್ತಿನ ನಾಶ ಹಾಗೂ ನಷ್ಟ ಪ್ರತಿಬಂಧಕ ಅಧಿನಿಯಮ 1981 ಮತ್ತು ಐಪಿಸಿ ಸೆಕ್ಷನ್‌ …

Read More »

ರಾಯಚೂರಿನಲ್ಲಿ ನಾಲ್ಕು ದಿನಗಳಿಂದ ಸತತ ಮಳೆ: ಮನೆ ಕುಸಿದು ಮಹಿಳೆ ಸಾವು

ರಾಯಚೂರು: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದಾಗಿ ಮನೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ.ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮದಲ್ಲಿ ಮಣ್ಣಿನ ಮನೆ ಕುಸಿದು ಬಿದ್ದಿದ್ದು, 32 ವರ್ಷದ ಮಹಿಳೆ ಶಕುಂತಲಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಮನೆಯಲ್ಲಿ ಐದು ಜನ ಮಲಗಿದ್ದರು. ಈ ವೇಳೆ ಸತತ …

Read More »