Breaking News

ಜಿಲ್ಲೆ

ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು

ಬೆಂಗಳೂರು:  ವರ್ಷ ಕೊರೋನಾ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿತ್ತು. ಪರೀಕ್ಷೆಯನ್ನು ಯಶಸ್ವಿಯಾಗಿಯೂ ನಡೆಸಿತ್ತು. ಆದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಫಲಿತಾಂಶ ಕಡಿಮೆಯಾಗಿದೆ.  ಕಳೆದ ವರ್ಷ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಶೇ.73.70ರಷ್ಟು ಫಲಿತಾಂಶ ಬಂದಿತ್ತು. ಆದರೆ, ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಹೆದರಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಿರಲಿಲ್ಲ. ಅಲ್ಲದೆ, ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಪರಿಣಾಮ …

Read More »

ಎಸ್ಎಸ್ಎಲ್ ಸಿ ಫಲಿತಾಂಶ: ಚಿಕ್ಕೋಡಿ 30, ಬೆಳಗಾವಿಗೆ 31 ನೇ ಸ್ಥಾನ

ಬೆಳಗಾವಿ:  ಬಹುನಿರೀಕ್ಷಿತ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 30 ನೇ ಸ್ಥಾನ ಲಭಿಸಿದರೆ, ಬೆಳಗಾವಿ ಜಿಲ್ಲೆಗೆ 31 ನೇ ಸ್ಥಾನ ಪಡೆದಿದೆ.  ಕೊರೊನಾ ಸೋಂಕು ಭೀತಿಯ ಮಧ್ಯೆಯೂ ವಿದ್ಯಾರ್ಥಿಗಳು  ಎಸ್ಎಸ್ ಎಲ್ ಸಿ ಪರೀಕ್ಷೆ ಎದುರಿಸಿದ್ದರು.  ಚಿಕ್ಕೋಡಿಯ ಎಂ.ಕೆ. ಕವಟಗಿಮಠ ಕನ್ನಡ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡರ,  ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಘಟಪ್ರಭಾದ ಕೆ.ಆರ್. ಹುಕ್ಕೇರಿ ಪ್ರೌಢಶಾಲೆಯ ಶ್ರುತಿ ಬಸಗೌಡ ಪಾಟೀಲ …

Read More »

ಗೋಕಾಕ್ ಫಾಲ್ಸ್ ಬಳಿ ಯುವಕರ ಸೆಲ್ಫಿ ಹುಚ್ಚಾಟ………

ಗೋಕಾಕ್: ಜಿಲ್ಲೆಯ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನೀರಿನ ಭಯವಿಲ್ಲದೆ ಯುವಕರು ತಮ್ಮ ಹುಚ್ಚಾಟ ಮೆರೆಯುತ್ತಿದ್ದಾರೆ.ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದೆ. 180 ಅಡಿಯಿಂದ ಧುಮ್ಮುಕ್ಕುತ್ತಿರುವ ಜಲಪಾತದ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಯುವಕರು ಮಜಾ ಮಾಡುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ …

Read More »

ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು.: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ನೀಡಿರುವ ಮೊಬೈಲ್ ಸಂಖ್ಯೆಗಳಿಗೆ ಫಲಿತಾಂಶ ಬರಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು (33180+40834) 74,014 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಫಲಿತಾಂಶ ಏನೇ ಬರಲಿ; ಧೃತಿಗೆಡಬೇಡಿ: ವಿದ್ಯಾರ್ಥಿಗಳು ಫಲಿತಾಂಶವನ್ನು ತಾಳ್ಮೆ ಮತ್ತು ಧೈರ್ಯದಿಂದ ಸ್ವೀಕರಿಸಬೇಕು. ಪಾಲಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನೋಬಲ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ. ಕೋವಿಡ್-19 …

Read More »

ತುಂಬಿ ಹರಿಯೋ ನದಿ ನೀರಲ್ಲಿ ಜಿಗಿದು ಈಜಾಡುವ ಮೂಲಕ ಯುವಕರು ಹುಚ್ಚಾಟ

ಹಾವೇರಿ: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಲ್ಲಿ ಮಳೆರಾಯ ಎರಡು ದಿನಗಳಿಂದ ಕೊಂಚ ವಿಶ್ರಾಂತಿ ನೀಡಿದ್ದಾನೆ. ಆದರೆ ನದಿಗೆ ಹರಿದು ಬರುತ್ತಿರುವ ನೀರು ಮಾತ್ರ ಕಡಿಮೆಯಾಗಿಲ್ಲ. ಸೇತುವೆ ಮೇಲಿಂದ ತುಂಬಿ ಹರಿಯೋ ನದಿ ನೀರಲ್ಲಿ ಜಿಗಿದು ಈಜಾಡುವ ಮೂಲಕ ಯುವಕರು ಹುಚ್ಚಾಟ ಪ್ರದರ್ಶಿಸಿದ್ದಾರೆ.ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ವರದಾ ನದಿಯಲ್ಲಿ ಘಟನೆ ನಡೆದಿದ್ದು, ಕಳೆದ ಒಂದು ವಾರದಿಂದ ವರದಾ ನದಿ ಭರಪೂರ ತುಂಬಿ ಹರಿಯುತ್ತಿದೆ. ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. …

Read More »

ಮಧ್ಯಾಹ್ನ 3 ಗಂಟೆ ನಂತರ ಎಸ್‍ಎಸ್‍ಎಲ್‍ಸಿ ಫಲಿತಾಂಶ

ಬೆಂಗಳೂರು:  ಮಧ್ಯಾಹ್ನ 3 ಗಂಟೆ ನಂತರ ಎಸ್‍ಎಸ್‍ಎಲ್‍ಸಿ ಫಲಿತಾಂಶ ಇಲಾಖೆ ವೆಬ್‍ಸೈಟ್‍ನಲ್ಲಿ ಪ್ರಕರಟವಾಗಲಿದೆ. ಕೊರೊನಾ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆಸಿ, ಸರ್ಕಾರ ಸಾಹಸ ಮಾಡಿದಂತಾಗಿತ್ತು. ಇದೀಗ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆ ನಂತರ ಇಲಾಖೆ ವೆಬ್‍ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಅಲ್ಲದೆ ವಿದ್ಯಾರ್ಥಿಗಳ ಪೋಷಕರ ಮೊಬೈಲ್‍ಗೆ ಫಲಿತಾಂಶವನ್ನು ಎಸ್‍ಎಂಎಸ್ ಮಾಡಲು …

Read More »

B.S.Y.ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ.

ಬೆಂಗಳೂರು: ನಗರದಲ್ಲಿ ಕೊರೊನಾ ರೋಗಿಗಳು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು 665 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿಯ ಪೂರ್ವ ವಲಯದಲ್ಲಿ …

Read More »

ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿ,ಸ್ಥಳೀಯ ಕಾರ್ಪೋರೇಟರ್ ಶಿವರಾಜ್ ಸಹಾಯದಿಂದ ಅಂತ್ಯಕ್ರಿಯೆ

ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಅಂತ್ಯಕ್ರಿಯೆಗೂ ಬಾರದ ಪತಿ   ಬೆಂಗಳೂರು: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಶಂಕರಮಠ ವಾರ್ಡ್ ಜೆ.ಸಿ ನಗರದಲ್ಲಿ ವಾಸಿಸುತ್ತಿದ್ದ ದಂಪತಿ 2 ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಪತಿ ಕಾರು ಚಾಲಕ, ಪತ್ನಿ ಮಾಲ್ ವೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ರು. ಕಳೆದ 4-5 ದಿನಗಳಿಂದ …

Read More »

ದೇವದುರ್ಗದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಮುಳುಗಡೆ ಭೀತಿ

ರಾಯಚೂರು: ಕಳೆದ ವರ್ಷದ ಪ್ರವಾಹಕ್ಕೆ ಮುಳುಗಡೆಯಾಗಿದ್ದ ರಾಯಚೂರಿನ ದೇವದುರ್ಗದ ಐತಿಹಾಸಿಕ ಕೊಪ್ಪರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಈ ಬಾರಿಯೂ ಮುಳುಗಡೆ ಭೀತಿ ಎದುರಿಸುತ್ತಿದೆ ಈಗಾಗಲೇ ದೇವಾಲಯದ ಆಧಾರ ಸ್ಥಂಬಗಳು ಜಲಾವೃತವಾಗಿವೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಭಕ್ತರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ ವರ್ಷ ದೇವಾಲಯ ಪಕ್ಕದಲ್ಲಿರುವ ಅರ್ಚಕರು ಹಾಗೂ ಗ್ರಾಮದ ಹಲವಾರು ಕುಟುಂಬಗಳು ಪ್ರವಾಹದ ಹೊಡೆತಕ್ಕೆ ನಲುಗಿದ್ದವು. ಈ ಬಾರಿ ನಾರಾಯಣಪುರ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ …

Read More »

ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಳೆದ ಎರಡು ದಿನಕ್ಕೆ ಹೋಲಿಸಿದ್ರೆ ಮಳೆ ಪ್ರಮಾಣ ಕಡಿಮೆ ಆಗಿದೆ. ಆದ್ರೆ ಕೃಷ್ಣೆಯಲ್ಲಿ ಅಬ್ಬರ ಮಾತ್ರ ಕಡಿಮೆ ಆಗಿಲ್ಲ. ದೂದ್‍ಗಂಗಾ ಹಾಗೂ ಹೀರಣ್ಯಕೇಶಿ ನದಿಗಳು ಮಾತ್ರ ಸ್ವಲ್ಪ ಶಾಂತಗೊಂಡಿವೆ. ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ನೀರಾವರಿ ಅಧಿಕಾರಿಗಳು ಮನವಿ ಮಾಡ್ಕೊಂಡಿದ್ದಾರೆ. https://m.facebook.com/story.php?story_fbid=187610026057095&id=105350550949710 ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಮುಳುಗಡೆಯಾಗಿವೆ ಇವೆ. ಇಲ್ಲಿ …

Read More »