ಬೆಳಗಾವಿ: ಬೆಳಗಾವಿಯಿಂದ ವಿಮಾನ ಸಂಚಾರ ಕಡಿಮೆಯಾಗಿರುವುದನ್ನು ಖಂಡಿಸಿ ವಾಣಿಜ್ಯೋದ್ಯಮ ಸಂಘ ಪ್ರತಿಭಟನೆಗೆ ಮುಂದಾಗಿದ್ದರಿಂದ ವಿವಿಧ ಖಾಸಗಿ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳು ಗುರುವಾರ ಸಂಘದ ಕಚೇರಿಗೆ ಭೇಟಿ ನೀಡಿ ಚರ್ಚಿಸಿದರು. ಸಂಚಾರ ದಟ್ಟಣೆ ಇದ್ದರೂ ಬೆಳಗಾವಿಯಿಂದ ಸಂಚರಿಸುತ್ತಿದ್ದ ಹಲವಾರು ವಿಮಾನಗಳು ಏಕಾಏಕಿ ರದ್ದಾಗುತ್ತಿರುವುದು ಉದ್ಯಮಗಳ ಕಾರ್ಯಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಜತೆಗೆ ಬೆಳಗಾವಿ ಅಭಿವೃದ್ಧಿಗೆ ಇದು ಹಿನ್ನಡೆಯುಂಟು ಮಾಡುವ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ವಾಣಿಜ್ಯೋದ್ಯಮ …
Read More »ವೀರಶೈವ ಲಿಂಗಾಯತ ಧರ್ಮ ಸಮನ್ವಯತೆಯ ಧರ್ಮ : ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು
ವೀರಶೈವ ಲಿಂಗಾಯತ ಧರ್ಮ ಸಮನ್ವಯತೆಯ ಧರ್ಮ : ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಬಾಗಲಕೋಟೆ: ಸಮಾನತೆಯನ್ನು ಭೋದಿಸುವ ಮೂಲಕ ಎಲ್ಲ ಸಮುದಾಯಗಳೊಡನೆ ಸಮನ್ವಯವನ್ನು ಸಾಧಿಸಿದ ಶಿಕ್ಷಣ, ಅನ್ನ, ಉದ್ಯೋಗ ನೀಡುವ ಮೂಲಕ ಎಲ್ಲರ ಪ್ರಗತಿಗೆ ಕಾರಣವಾಗಿರುವ ಸಮಾಜ ವೀರಶೈವ ಲಿಂಗಾಯತ ಸಮಾಜ ಎಂದು ಸವದತ್ತಿಯ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ನಗರದ ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವದ ನಿಮಿತ್ಯ ಚರಂತಿಮಠದ ಆವರಣದಲ್ಲಿ ಶುಕ್ರವಾರ ನಡೆದ ಧರ್ಮತತ್ವ ಚಿಂತನೆ …
Read More »ಡಾ.ಕೋರೆಗೆ ಗೋವಾ ಮಾಜಿ ಸಿಎಂ ಕಾಮತ ಸನ್ಮಾನ
ಬೆಳಗಾವಿ: ಗೋವಾದ ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ದಿಗಂಬರ ಕಾಮತ, ಗುರುವಾರ ನಗರದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆಯವರನ್ನು ಸನ್ಮಾಸಿದರು ಈ ವೇಳೆ ಮಾತನಾಡಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆ ಗುರುತಿಸಿ ಡಾ.ಕೋರೆಯವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿರುವುದು ಅವರ ಸಾಧನೆಗೆ ಸಲ್ಲಿಸಿದ ಗೌರವವಾಗಿದೆ ಎಂದು ಶ್ಲಾಘಿಸಿದರು. ಸೋಮಣ್ಣ ಭೇಟಿ: ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಫೆ.7ರಂದು ಡಾ.ಕೋರೆಯವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ನಗರಕ್ಕೆ …
Read More »5 ವರ್ಷವೂ ನಮ್ಮ ತಂದೆಯವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ
ಮೈಸೂರು: ಐದು ವರ್ಷವೂ ನಮ್ಮ ತಂದೆಯವರೇ ಸಿಎಂ. ಇದು ಈಗ ಸೆಟ್ಲಡ್ ವಿಚಾರ ಎಂದು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮೈಸೂರಿನಲ್ಲಿ ಸ್ಫೋಟಕ ವಿಚಾರ ಬಹಿರಂಗಪಡಿಸಿದ ಸಿಎಂ ಪುತ್ರ ಯತೀಂದ್ರ, ಹೈಕಮಾಂಡ್ ಈ ಬಗ್ಗೆ ನಮ್ಮ ತಂದೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯಾರೋ ಕೆಲವರು ನಾಯಕತ್ವ ಬದಲಾವಣೆ ಬಗ್ಗೆ ಪ್ರಯತ್ನ ಮಾಡಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಅಲ್ಲಿಗೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿ ಅಧಿಕಾರ …
Read More »ದಾವಣಗೆರೆ | ಸನ್ಯಾಸತ್ವ ಸ್ವೀಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ
ದಾವಣಗೆರೆ: ನಗರದ ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದರು. ಅಲ್ಲದೇ ಕಾಲೇಜಿನಲ್ಲಿ ಟಾಪರ್ ಆಗಿದ್ದರು. ಇಂದು (ಫೆ.6) ಸೂರತ್‌ನಲ್ಲಿ ಅವರು ಸನ್ಯಾಸ ಧೀಕ್ಷೆ ಪಡೆದಿದ್ದಾರೆ. ಯುವತಿಯ ಆಯ್ಕೆಯನ್ನು ಕುಟುಂಬಸ್ಥರು ಸಹ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಇತ್ತೀಚಿಗೆ ಆಂಚಲ್ ಕುಮಾರಿಯವರು ಆಧ್ಯಾತ್ಮದ ಕಡೆ …
Read More »ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ
ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ ಅಶ್ವಥ್ ವೈದ್ಯ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
Read More »ದುಬೈನಲ್ಲಿ ಮಿಂಚಿದ ಸದಲಗಾ ಪಟ್ಟಣದ ಡಾ.ಶಿವಶಂಕರ ಮರಜಕ್ಕೆ
ಚಿಕ್ಕೊಡಿ:ಸದಲಗಾ ಪಟ್ಟಣದವರು ಹಾಗೂ ಕೊಲ್ಲಾಪುರ ಸಿದ್ದಗಿರಿ ಕನೇರಿ ಮಠದ ಆಸ್ಪತ್ರೆಯಲ್ಲಿ 12 ವರ್ಷದಿಂದ ತಜ್ಞ ನರ ಶಸ್ತ್ರ ಚಿಕಿತ್ಸಾ ವೈದ್ಯರಾಗಿ ಸೇವೆ ಸಲ್ಲಿಸಿಸುತ್ತಿರುವ ಡಾ.ಶಿವಶಂಕರ ಮರಜಕ್ಕೆ ಅವರು ದುಬೈನಲ್ಲಿ ನಡೆದ ವಿಶ್ವ ನರ ಶಸ್ತ್ರಚಿಕಿತ್ಸಾ ಒಕ್ಕೂಟದ ಸಮ್ಮೇಳನದಲ್ಲಿ ಮೂರು ಪ್ರಬಂಧ ಮಂಡಿಸಿ ನರ ಚಿಕಿತ್ಸಕರ ಮೆಚ್ಚುಗೆಗೆ ಪಾತ್ರರಾದರು. ದುಬೈನಲ್ಲಿ ನಡೆದ ಮೂರು ದಿನ ನಡೆದ ಸಮ್ಮೇಳನದಲ್ಲಿ ವಿವಿಧ ದೇಶದ 2000ಕ್ಕೂ ಹೆಚ್ಚು ನರ ಶಿಸ್ತ್ರ ಚಿಕಿತ್ಸಕರು ಭಾಗವಹಿಸಿದ ಸಂದರ್ಭದಲ್ಲಿ ಡಾ.ಶಿವಶಂಕರ್ …
Read More »ಶ್ರೀನಗರದಲ್ಲಿ ಹಿಂದೂ ಸಮ್ಮೇಳನ
ಬೆಳಗಾವಿ: ಮಹಾಂತೇಶ ನಗರ, ಶ್ರೀನಗರ ಹಾಗೂ ಶಿವಬಸವ ನಗರ ಹಿಂದೂ ಸಮ್ಮೇಳನ ಸಮಿತಿಯಿಂದ ಫೆ.6ರಂದು ಸಂಜೆ 6ಕ್ಕೆ ಶ್ರೀನಗರ ಸಾಯಿ ಮಂದಿರ ಎದುರಿನ ಮೈದಾನದಲ್ಲಿ ವಿರಾಟ ಹಿಂದೂ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎ.ಆರ್.ಪಾಟೀಲ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಪ್ರಮುಖ ಭಾಷಣ ಮಾಡುವರು. ಸಮುತ್ಕರ್ಷದ ಜಿಲ್ಲಾ ಮುಖ್ಯಸ್ಥೆ ಪರಿಣಿತಾ ಪಾಟೀಲ ಇತರರು …
Read More »ಆಸ್ತಿ ದಾಖಲೆ ಡಿಜಿಟಲೀಕರಣಕ್ಕೆ ಮುಂದಾದ ಪಾಲಿಕೆ!
ಬೆಳಗಾವಿ: ಆಡಳಿತದಲ್ಲಿ ಪಾರದರ್ಶಕತೆ, ಖಾಸಗಿ, ಸರ್ಕಾರಿ ಆಸ್ತಿಗಳ ದಾಖಲೆ ಸಂರಕ್ಷಣೆ ಹಾಗೂ ಅಕ್ರಮ ಕಡಿವಾಣಕ್ಕೆ ಹಾಕುವ ನಿಟ್ಟಿನಲ್ಲಿ 50 ವರ್ಷದ ಹಳೆ ದಾಖಲೆ ಡಿಜಿಟಲೀಕರಣಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ! ಹೌದು. ಮಹಾನಗರ ಪಾಲಿಕೆಯ ಕಂದಾಯ ವಿಭಾಗದಲ್ಲಿ 58 ವಾರ್ಡ್ ವ್ಯಾಪ್ತಿಯ ಪ್ರದೇಶದಲ್ಲಿ ಅಂದಾಜು 1.52 ಲಕ್ಷ ವಸತಿ, ವಾಣಿಜ್ಯ ಮಳಿಗೆ, ಖಾಲಿ ನಿವೇಶನಗಳು ಹಾಗೂ ಸರ್ಕಾರಿ ಆಸ್ತಿಗಳಿವೆ. ಆದರೆ, 1980 ರಿಂದ 2020ರ ನಡುವಿನ ಅವಧಿಯಲ್ಲಿ ಆಸ್ತಿ ಮೂಲ ದಾಖಲೆಗಳು ಸಿಗುತ್ತಿಲ್ಲ. …
Read More »ಯೋಧನಿಗೆ ಅಂತಿಮ ವಿದಾಯ
ಬೆಳಗಾವಿ: ಪಂಜಾಬ ರಾಜ್ಯದ ಭಟಿಂಡಾದಲ್ಲಿ ನಡೆದ ಸೇನಾವಾಹನ ಅಪಘಾತದಲ್ಲಿ ಸೋಮವಾರ ಮೃತಪಟ್ಟಿದ್ದ ತಾಲೂಕಿನ ಕಂಗ್ರಾಳಿ ಖುರ್ದ (ಕೆಎಚ್) ಗ್ರಾಮದ ಯೋಧ ಹವಾಲ್ದಾರ್ ಜಗದೀಶ ಮನೋಹರ ಶಿಂಧೆ ಅಂತ್ಯಕ್ರಿಯೆ ಸಕಲ ಸೇನಾ ಹಾಗೂ ಸರ್ಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು. 24 ವರ್ಷಗಳಿಂದ ಸೇನೆಯಲ್ಲಿದ್ದ ಜಗದೀಶ ಇನ್ನು ನಾಲ್ಕು ತಿಂಗಳಿಗೆ ನಿವೃತ್ತರಾಗಲಿದ್ದರು. ಭಟಿಂಡಾ ಆರ್ಮಿ ಏರ್ ಡಿಫೆನ್ಸ್ ಸೇನಾ ಕೇಂದ್ರದಲ್ಲಿ ಅವರು ಸೇವೆಯಲ್ಲಿದ್ದರು. ಜಗದೀಶ ಅವರ ಪಾರ್ಥಿವ ಶರೀರ ಬುಧವಾರ ಬೆಳಗ್ಗೆ ಸಾಂಬ್ರಾ ವಿಮಾನ …
Read More »
Laxmi News 24×7