ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ. ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ …
Read More »ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು(ಆ. 04): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ 3:30ರ ಸುಮಾರಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. 15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ …
Read More »ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ. ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸದ್ಯ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ವಾಹನ ಸವಾರರ ಆತಂಕ ಕೂಡ …
Read More »ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್ –
ಬೆಂಗಳೂರು: ಕ್ವಾರಂಟೈನ್‍ನಲ್ಲಿ ಇದ್ದರು ನಿಯಮ ಉಲ್ಲಂಘನೆ ಮಾಡಿದಕ್ಕೆ ಡ್ರೋನ್ ಪ್ರತಾಪನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಅಧಿಕಾರಿಗಳು ಹೇಳಿದ್ದರು ಪ್ರತಾಪ್ ನಿಯಮ ಉಲ್ಲಂಘನೆ ಮಾಡಿದ್ದ. ಆದ್ದರಿಂದ ಆತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆದು ಬೆಂಗಳೂರಿನ ಖಾಸಗಿ ಹೋಟೆಲ್‍ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದಿಗೆ ಪ್ರತಾಪ್ ಕ್ವಾರಂಟೈನ್ ಅವಧಿ …
Read More »ಬುದ್ಧಿ ಹೇಳೋಕೆ ಬಂದಿದ್ವಿ – ಆನಂದ್ ಪ್ರಸಾದ್ ಭೇಟಿ ಮಾಡಿದ ಹ್ಯಾರಿಸ್, ನಲ್‍ಪಾಡ್
ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಅರೆಸ್ಟ್ ಆಗಿರುವ ಕೆಪಿಸಿಸಿ ಸೋಶಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್‍ನನ್ನು ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮಹಮ್ಮದ್ ನಲ್‍ಪಾಡ್ ಅವರು ಭೇಟಿಯಾಗಿದ್ದಾರೆ. ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ …
Read More »ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60
ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98. 4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594. ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ …
Read More »ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿಎರಡು ಸಾವಿರ ಕೋಟಿಗೂ ಹೆಚ್ಚು ಹಣ ಲೂಟಿ
ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಇವತ್ತು ಕರ್ನಾಟಕದ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣವನ್ನು ಲೂಟಿ ಹೊಡೆದಿದ್ದು, ಸತ್ಯಾಸತ್ಯತೆ ಪರಿಶೀಲನೆಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಖೆ ಮಾಡಿಸಬೇಕು ಹಾಗೂ ಇದರ ಬಗ್ಗೆ ಚರ್ಚಿಸಲು ಕೂಡಲೇ ವಿಧಾನಮಂಡಲದ ಅಧಿವೇಶನವನ್ನು ಕರೆಯಬೇಕು ಎನ್ನುವುದರ ಸಲುವಾಗಿ ಇವತ್ತು ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ …
Read More »ಮತ್ತೆ 4ಸಾವಿರ ಕಿಟ್‌ಗಳ ಪೂರೈಕೆ
ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ …
Read More »ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ :ರಮೇಶ ಜಾರಕಿಹೊಳಿ
ಗೋಕಾಕ: ಗೋಕಾಕ್ ನಗರದ ಸಚ್ಛಾರಿತ್ರ್ಯದ ರಾಜಕಾರಣಿಯಾಗಿದ್ದ ಗಿರೀಶ್ ಖೋತ್ ಅವರ ಅಕಾಲಿಕ ಮರಣದಿಂದ ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 3 ನೆಯ ಬಾರಿಗೆ ಗೋಕಾಕ್ ನಗರಸಭೆಗೆ ಆಯ್ಕೆಯಾಗಿದ್ದ ಖೋತ್ ಮಾದರಿ ಜನಪ್ರತಿನಿಧಿಯಾಗಿದ್ದರು. ಜನಾನುರಾಗಿ ಮತ್ತು ಸರಳ, ಸ್ನೇಹಜೀವಿಯಾಗಿದ್ದ ಇವರು ನನ್ನ ರಾಜಕಾರಣದ ಪ್ರತಿ ಹೆಜ್ಜೆಯಲ್ಲೂ ನನ್ನ ಜೊತೆಗಿದ್ದರು. ಇವರ ಹಠಾತ್ ಅಗಲಿಕೆ ನನ್ನ ಮನಸ್ಸಿಗೆ ತೀವ್ರ ನೋವನ್ನು …
Read More »ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ.
ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ. ಹಾಸನ ಹೊರ ವಲಯದಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಯುವತಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಸಚಿವ ಸಿಟಿ.ರವಿ, ರಸ್ತೆಯಲ್ಲಿ ಜನ ಗುಂಪು ಕಟ್ಟಿರುವುದನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿ ವಿಚಾರಿಸಿದ್ದಾರೆ.ಈ ವೇಳೆ ಯುವತಿ ಪ್ರಜ್ಞಾಹೀನವಾಗಿದ್ದನ್ನು ಗಮನಿಸಿದ ಸಚಿವರು ತಕ್ಷಣ ಯುವತಿಯನ್ನು ತಮ್ಮ ವಾಹನದಲ್ಲಿ ಹಾಸನದ ಹಿಮ್ಸ್ …
Read More »
Laxmi News 24×7