Breaking News

ಜಿಲ್ಲೆ

ರಾಜ್ಯದಾದ್ಯಂತ ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಇದೇ ಅಗಸ್ಟ್ 10 ರಂದು ಧರಣಿ

ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ರಾಜ್ಯದಾದ್ಯಂತ ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಇದೇ ಅಗಸ್ಟ್ 10 ರಂದು  ‘ಕಾರ್ಪೊರೇಟ್ ಕಂಪನಿಗಳೇ ಕೃಷಿ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗಿ ಬಂಡವಾಳಗಾರರಿಗೆ, ಕಾರ್ಪೊರೇಟ್ ಕಂಪನಿಗಳಿಗೆ …

Read More »

ರಾಜ್ಯದಲ್ಲಿ ಕೊರೋನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ

ಬೆಂಗಳೂರು : ಭಾನುವಾರವೂ ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು,ಇಂದು 5,532 ಜನರಿಗೆ ಕೋವಿಡ್​-19 ಸೋಂಕು ತಗುಲಿದೆ. ಇಂದು84 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತ ಪ್ರಕರಣಗಳ ಸಂಖ್ಯೆ 1,34,819 ಆಗಿದ್ದು, ಇದರಲ್ಲಿ 57,725 ಜನರು ಬಿಡುಗಡೆಯಾಗಿದ್ದರೆ, 74,590 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 2,496 ಜನರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರು ನಗರದಲ್ಲಿ ಕೋವಿಡ್‌ ಮಹಾಮಾರಿಯ ಆರ್ಭಟ ಎಂದಿನಂತೆ ಮುಂದುವರಿದಿದ್ದು, 2105 ಹೊಸ ಪ್ರಕರಣಗಳು ವರದಿಯಾಗಿವೆ. …

Read More »

ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್‌……….

ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಡಿಯೂರಪ್ಪನವರು ಪ್ರತಿ ದಿನ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರತಿ ದಿನ ಸಿಎಂ ಭೇಟಿಗೆ ಗಣ್ಯರು ಸಹ ಆಗಮಿಸುತ್ತಿದ್ದರು. ಹೀಗಾಗಿ ಪ್ರತಿ ಭಾನುವಾರ ಸಿಎಂಗೆ ಕೋವಿಡ್‌ ಪರೀಕ್ಷೆ ನಡೆಯುತ್ತಿತ್ತು. ನಿನ್ನೆ ನಡೆದ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಭಾನುವಾರ ರಾತ್ರಿ ಟ್ವೀಟ್‌ ಮಾಡಿದ್ದ ಸಿಎಂ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲವೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಕೋರಿದ್ದಾರೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆಗ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. …

Read More »

ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆ

ಗೋಕಾಕ: ಕಳೆದ ಕೆಲವು ದಿನಗಳಿಂದ ತನ್ನ ಆರ್ಭಟ ನಡೆಸಿದ್ದ ಕರೋನಾ ಮಹಾಮಾರಿಯು ಇಂದು ಸ್ವಲ್ಪ ತಗ್ಗಿದೆ. ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಕುಸಿತ ಖಂಡಿದ್ದು, ತಾಲೂಕಿನಲ್ಲಿ ೨ ಸೋಂಕು ಮಾತ್ರ ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು. {LAXMINEWS}ಯೊಂದಿಗೆ ಮಾತನಾಡಿದ ಅವರು  ತಾಲ್ಲೂಕಿನಲಿ ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರಿಗೆ ಕೋವಿಡ್ …

Read More »

ಲಾಕ್‌ಡೌನ್‌ನಲ್ಲೂ 100 ಯಶಸ್ವಿ ಡಯಾಲಿಸಿಸ್‌

ಬೆಳಗಾವಿ: ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ರೋಟರಿ-ಕೆಎಲ್‌ಇ ಡಯಾಲಿಸಿಸ್ ಕೇಂದ್ರದಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲೂ 100 ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್‌ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈಚೆಗೆ ವೈದ್ಯರ ತಂಡಕ್ಕೆ ಶುಭ ಹಾರೈಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಮೂತ್ರಪಿಂಡ ತಜ್ಞ ಡಾ.ವಿಜಯಕುಮಾರ ಪಾಟೀಲ, ‘ಮೂತ್ರಪಿಂಡ ಕಾಯಿಲೆ ಇರುವ ರೋಗಿಗಳಿಗೆ ಡಯಾಲಿಸಿಸ್‌ ಕಡ್ಡಾಯವಾಗಿ ಬೇಕಾಗಿರುವ ಚಿಕಿತ್ಸೆಯಾಗಿದೆ. ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರೋಗಿಗಳು ಹೆದರುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ಧೈರ್ಯವಾಗಿ ಆಸ್ಪತ್ರೆಗೆ …

Read More »

ಕರಾವಳಿಯಲ್ಲಿ ಉತ್ತಮ ಮಳೆ

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. …

Read More »

ಮಂತ್ರಿಗಿರಿ ಉಳಿಸಿಕೊಳ್ಳಲು ಸಚಿವೆ ಜೊಲ್ಲೆ ಯತ್ನ.? : ರಮೇಶ್ ಜಾರಕಿಹೊಳಿ ಭೇಟಿಯಾದ ಶಶಿಕಲಾ..!

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿಯ ನಡುವೆಯೇ ಹಲವು ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ರಾಜ್ಯದ ಏಕೈಕ ಮಹಿಳಾ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಕ್ ಕೊಡಲಾಗುತ್ತದೆ ಎನ್ನುವ ಮಾಹಿತಿ ಇದೆ. ಹೀಗಾಗಿ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಬಂದಿರುವ ಜೊಲ್ಲೆ ಇಂದು ಜಲಸಂಪನ್ಮೂಲ …

Read More »

ಸದ್ಯ 3456 ಸೋಂಕಿತರು…..

ಬೆಳಗಾವಿ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ಮತ್ತೆ ದ್ವಿಶತಕ ದಾಟಿದೆ. 219 ಸೋಂಕು ಪ್ರಕರಣ ದೃಢಪಟ್ಟಿವೆ. ಒಟ್ಟಾರೆ 3456 ಸೋಂಕಿತರು ಇದ್ದು, ಜತೆಗೆ ನಾಲ್ವರು ಕೋವಿಡ್ ಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿತರ ಏರಿಕೆ ಪ್ರಮಾಣ ಹೆಚ್ಚುತ್ತಲೇ ಹೊರಟಿದ್ದು, ಕಳೆದ ಒಂದು ವಾರದಿಂದ ದಿನನಿತ್ಯ 200ರ ಗಡಿ ದಾಟುತ್ತಲೇ ಸಾಗಿದೆ. ಸಾವಿನ ಸಂಖ್ಯೆಯೂ ಇಳಿಕೆ ಆಗಿಲ್ಲ. ಹೆಚ್ಚಿನ ಸೋಂಕಿತರು ಹಳ್ಳಿಗಳಲ್ಲಿ ಪತ್ತೆಯಾಗುತ್ತಿದ್ದಾರೆ. ರಾಯಬಾಗದ 60 ವರ್ಷದ ವ್ಯಕ್ತಿ, …

Read More »

ಬೆಳಗಾವಿ: ಕೆರೆಗೆ ಜಿಗಿದು ಪ್ರಾಣಬಿಟ್ಟ ಯುವತಿ

ಬೆಳಗಾವಿ:ಕೆರೆಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗಾವಿ ತಾಲೂಕಿನ ಯಳ್ಳೂರ ಹತ್ತಿರ ಅರವಳಿಯಲ್ಲಿ ನಡೆದಿದೆ. ಇಲ್ಲಿನ ಭಾಗ್ಯನಗರದ ಸೋನಾಲಿ ಸಂಜಯ ಸುರೇಕರ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಧ್ಯಾಹ್ನ ತಮ್ಮ ತಂದೆಯ ದ್ವಿಚಕ್ರ ವಾಹನ ತೆಗೆದುಕೊಂಡು ಯಳ್ಳೂರ ಹತ್ತಿರ ಇರುವ ಅರವಳಿ ಕೆರೆಗೆ ತೆರಳಿದ್ದಾಳೆ. ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದ ಮೊಬೈಲ್‌ ಅನ್ನು ದ್ವಿಚಕ್ರ ವಾಹನದಲ್ಲಿಟ್ಟು ಕೆರೆಗೆ ಹಾರಿದ್ದಾಳೆ. ಈ ಘಟನೆಯನ್ನು ಸ್ಥಳೀಯರು ಪ್ರತ್ಯಕ್ಷವಾಗಿ ನೋಡಿದ್ದರಿಂದ ತಕ್ಷಣ ಘಟನಾ …

Read More »