ಬೆಂಗಳೂರು,ಜು.28-ಮಾಸಿಕ ಗೌರವ ಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತರು ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಕಳೆದ 19 ದಿನಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. ಮಾಸಿಕ ಗೌರವಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಮಾಡುವುದು, ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಾಗ್ರಿಗಳನ್ನು …
Read More »ಎತ್ತರದ ಕಟ್ಟೆ ಇದ್ದರೂ ಬಾವಿಗೆ ಬಿದ್ದ ಎಮ್ಮೆ- ಸ್ಥಳೀಯರಲ್ಲಿ ಅಚ್ಚರಿ……….
ದಾವಣಗೆರೆ: 80 ಅಡಿ ಆಳದ ಬಾವಿಗೆ ಎಮ್ಮೆಯೊಂದು ಬಿದ್ದಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಎತ್ತರದ ಕಟ್ಟೆ ಇದ್ದರೂ ಎಮ್ಮೆ ಬಾವಿಗೆ ಬಿದ್ದಿದ್ದು ಹೇಗೆ ಎಂಬ ಅಚ್ಚರಿ ಎಲ್ಲರಲ್ಲೂ ಮೂಡಿದೆ. ಎಮ್ಮೆ, ಕೋಟ್ರೇಶ್ ನಾಯ್ಕ್‍ಗೆ ಸೇರಿದ್ದಾಗಿದ್ದು, ರಾತ್ರಿ ಸಮಯದಲ್ಲಿ ಎರಡು ಎಮ್ಮೆಗಳನ್ನು ಬಾವಿ ಪಕ್ಕದಲ್ಲಿ ಕಟ್ಟಲಾಗಿತ್ತು. ಈ ವೇಳೆ ಎರಡು ಎಮ್ಮೆಗಳು ಕಾದಾಟ ನಡೆಸಿವೆ ಎನ್ನಲಾಗಿದ್ದು, ಬಾವಿ ಕಟ್ಟೆ ಎಗರಿ, ಜಾಲರಿ ಸಮೇತ ಆಳದ ಬಾವಿಗೆ ಎಮ್ಮೆ …
Read More »ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ತೋಟದಿಂದ ಮನೆಗೆ ಹೋಗ್ತಿದ್ದ ಯುವತಿ ಸಾವು
ಚಿಕ್ಕಬಳ್ಳಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕು ಬಂಡಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಶಿವರಾಜ್ ಕುಮಾರ್ ಎಂಬವರ ಮಗಳಾದ ವರ್ಷಾ (19) ಮೃತ ಯುವತಿ. ಅಂದಹಾಗೆ ತೋಟದ ಕಡೆಯಿಂದ ಮನೆಗೆ ವಾಪಸ್ ಬರುತ್ತಿದ್ದಾಗ ವರ್ಷಾಳ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ವರ್ಷಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಟಿಪ್ಪರ್ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ …
Read More »ಸುರಕ್ಷಿತ ವಾತಾವರಣ ಇರೋ ಕಡೆ ತರಗತಿ ಪ್ರಾರಂಭಿಸಿದರೆ ತಪ್ಪೇನು ಇಲ್ಲʼ
ಬೆಂಗಳೂರು: ಸುರಕ್ಷಿತ ವಾತಾವರಣವೆಂದು ಕಂಡುಬಂದ ಕಡೆಗಳಲ್ಲಿ ಶಾಲಾ ತರಗತಿಗಳನ್ನೇ ಪ್ರಾರಂಭಿಸಿದರೆ ತಪ್ಪೇನು ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ 36ಕ್ಕೂ ಹೆಚ್ಚು ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಂವಾದ ನಡೆಸಿದರು ಅಜೀಂ ಪ್ರೇಮ್‍ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋರ್ತ್ ಫೌಂಡೇಷನ್, …
Read More »ರಾಜ್ಯದಲ್ಲಿ ಇಂದು 5,536 ಮಂದಿಗೆ ಕೊರೊನಾ – ಬೆಂಗ್ಳೂರಿನಲ್ಲಿ 1,898 ಜನರಿಗೆ ಸೋಂಕು, 102 ಬಲಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಬರುತ್ತಿದೆ. ಇಂದು ಕೂಡ ಒಟ್ಟು 5,536 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ಗಡಿ ದಾಟಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಕೋವಿಡ್ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿದೆ. ಇಂದು 102 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,055 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು …
Read More »ಲಕ್ಷ್ಮಣ ಸವದಿ ಮುಂದಿನ ಸಿಎಂ’ – ಡಿಸಿಎಂ ಬೆಂಬಲಿಗರಿಂದ ಪೋಸ್ಟ್
ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಯಾನ ನಡೆಸುತ್ತಿದ್ದಾರೆ. ಈಗ ಈ ಪೋಸ್ಟ್ ಎಲ್ಲ ಕಡೆ ವೈರಲ್ ಆಗಿದ್ದು, ಈಗ ಬಿಜೆಪಿಯಲ್ಲಿ ಒಳಾಂಗಣ ರಾಜಕೀಯ ನಡೆಯುತ್ತಿದೆಯಾ ಎಂಬ ಅನುಮಾನಗಳು ಮೂಡಿವೆ. ಲಕ್ಷ್ಮಣ ಸವದಿಯವರು ದೆಹಲಿಗೆ ಹೋಗಿ ಕೇಂದ್ರ ನಾಯಕರನ್ನು ಭೇಟಿಯಾಗಿ ಬಂದ ನಂತರ ಈ ಪೋಸ್ಟ್ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಲವಾರು ಅನುಮಾನಗಳು ಮೂಡಿವೆ. ಈಗ …
Read More »ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ: ಜಿಪಂ ಸಿಇಒಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆ
ಧಾರವಾಡ(ಜು.28): ಧಾರವಾಡ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಬೇರೆಯವರ ಹೆಸರಲ್ಲಿ ಜಮಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.ಕೇಂದ್ರ ಸಚಿವ ಪ್ರಹ್ಲಾದ್ ದೆಹಲಿಯಿಂದ ಆನ್ಲೈನ್ಲ್ಲೇ ವಿಡಿಯೋ ಸಂವಾದ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ದಿಶಾ ಸಭೆ ನಡೆಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ವಿರುದ್ಧ ಜೋಶಿ ಗರಂ ಆಗಿದ್ದರು. …
Read More »ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?
ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್ ಹಾಗೂ ಬೀದರ್ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …
Read More »ಜೈಲಿನಲ್ಲೇ ಮರ್ಡರ್ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್
ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …
Read More »ಹೋಟೆಲ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್
ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್ನಲ್ಲಿ ದಂಧೆ ನಡೆಸುತ್ತಿದ್ದರು. ಆನ್ಲೈನ್ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …
Read More »
Laxmi News 24×7