Breaking News

ಜಿಲ್ಲೆ

ಸಂಡೇ ಲಾಕ್ ಡೌನ್ ಗೆ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಬೆಂಬಲ

ಬೆಳಗಾವಿ : ಕೊರೊನಾ ವೈರಸ್ ಹರಡದಂತೆ ಸರ್ಕಾರ ಜಾರಿಗೊಳಿಸಿರುವ ಸಂಡೇ ಲಾಕ್ ಡೌನ್ ಗೆ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ಕುಂದಾನಗರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಸರ್ಕಾರಿ, ಖಾಸಗಿ ಸಾರಿಗೆ ವ್ಯವಸ್ಥೆ ಸ್ತಬ್ಧವಾಗಿದೆ. ಇನ್ನು ಅನಾವಶ್ಯಕತವಾಗಿ ತಿರುಗಾಡುವವರನ್ನು ತಡೆದು ಪೊಲೀಸರು ಬುದ್ದಿವಾತ್ತಿದ್ದಾರೆ.. ನಗರದ ರಾಣಿ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಎಪಿಎಂಸಿ ಮಾರ್ಕೇಟ್, ಖಡೇಬಜಾರ, ಬಸ್ ನಿಲ್ದಾಣಗಳಲ್ಲಿ ಸಂಪೂರ್ಣ ಸ್ಥಬ್ಧವಾಗಿವೆ. ಅಗತ್ಯ ಸೇವೆ ಹೊರತು ಪಡೆಸಿ …

Read More »

ಪ್ರತಿದಿನ ಒಂದೊಂದು ವಿವಾದದಲ್ಲಿ ಬೆಳಗಾವಿ B.I.M.S.ಆಸ್ಪತ್ರೆಉಪಯೋಗಿಸಿದ ಪಿಪಿಟಿ ಕಿಟ್ ಬೇಕಾಬಿಟ್ಟಿ ಬಿಸಾಡಿದ ದೃಶ್ಯ

ಬೆಳಗಾವಿ: ಕೊರೊನಾ ಚಿಕಿತ್ಸೆಗೆ ಉಪಯೋಗಿಸಿದ ಪಿಪಿಟಿ ಕಿಟ್ ಸೇರಿದಂತೆ ಮೆಡಿಕಲ್ ವೆಸ್ಟ್ ನ್ನು ಬೇಕಾಬಿಟ್ಟಿ ಬಿಸಾಡಿದ ದೃಶ್ಯ ಇಲ್ಲಿನ ಬಿಮ್ಸ್ ಆಸ್ಪತ್ರೆಯ ಹಿಂಬಾಗ ಕಂಡು ಬಂದಿದೆ. ಆಸ್ಪತ್ರೆಯ ಹಿಂಭಾಗದಲ್ಲಿರುವ ಕಶದ ಡಬ್ಬಿಯಲ್ಲಿ ರಾಶಿ ರಾಶಿ ಮೆಡಿ ವೆಸ್ಟ್ ವಸ್ತುಗಳನ್ನು ಬೀಸಾಡಲಾಗಿದೆ. ಕೊರೊನಾ ಮೆಡಿಕಲ್ ವೇಸ್ಟ್​ ಸಾರ್ವಜನಿಕವಾಗಿ ಬೀಸಾಕದೇ ನಾಶಪಡಿಸಬೇಕೆಂಬ‌ ನಿಯಮವಿದೆ. ಆದ್ರೆ ಅದನ್ನು ಗಾಳಿಗೆ ತೂರಿದ ಬಿಮ್ಸ್​ ಸಿಬ್ಬಂದಿ, ಪಿಪಿಇ ಕಿಟ್, ಹ್ಯಾಂಡ್ ಗ್ಲೌಸ್​​ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಬಿಸಾಕಿದ್ದಾರೆ. …

Read More »

ನಾಳೆ ನೇರಪ್ರಸಾರವಾಗಲಿದೆ ರಾಜ್ಯ ಸರ್ಕಾರದ ವರ್ಷಾಚರಣೆ ಸಮಾರಂಭ

ಬೆಂಗಳೂರು, ಜು.26- ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭವು ಜುಲೈ 27ರ ಸೋಮವಾರದಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ನೇಹಿ ಆಡಳಿತ, ಒಂದು ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ …

Read More »

ಏರುತ್ತಲೇ ಇದೆ ಡೀಸೆಲ್ ಬೆಲೆ..

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯ ಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆದರೆ, ಡೀಸೆಲ್‌ ಬೆಲೆ ಏರಿಕೆಯಾಗುತ್ತಲೇ ಇದೆ. ಹೋದ ವಾರದ ಯಾವುದೇ ದಿನಗಳಲ್ಲೂ ಪೆಟ್ರೋಲ್‌ ಬೆಲೆ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ. ಲೀಟರ್ ಡೀಸೆಲ್‌ ಬೆಲೆ ಸರಾಸರಿ 40 ಪೈಸೆ ಜಾಸ್ತಿಯಾಗಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ …

Read More »

ಸೋಂಕಿತ ಗರ್ಭಿಣಿ ಕರೆದೊಯ್ಯಲು ಬಂದ ಕೊರೊನಾ ವಾರಿಯರ್ಸ್ ಮೇಲೆ ಕುಟುಂಬಸ್ಥರಿಂದ ಹಲ್ಲೆ

ಬೆಳಗಾವಿ: ಸೋಂಕಿತೆಯನ್ನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಗರ್ಭಿಣಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಕೆಯನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಬಂದಿದ್ದ ಆಯಂಬುಲೆನ್ಸ್ ತಡೆದು ಕೊರೊನಾ ವಾರಿಯರ್ಸ್​ನ ಸೋಂಕಿತೆಯ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆ. ಬೆಳಗಾವಿಗೆ ಸೋಂಕಿತೆಯನ್ನ ಕರೆದುಕೊಂಡು ಹೋಗದಂತೆ ವಿರೋಧಿಸಿ ಆಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಅರ್ಧ ದಾರಿಗೆ ಆಯಂಬುಲೆನ್ಸ್ …

Read More »

ಅಥಣಿ: ಕೇಂದ್ರದ ಹಣ ಲೂಟಿ ಹೊಡೆಯುವ ಯತ್ನ; ಆರೋಪ

ಅಥಣಿ: ‘ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಒಂದೊಂದು ಸಲ ಒಂದೊಂದು ರೀತಿಯ ಫಲಿತಾಂಶವನ್ನು ಆರೋಗ್ಯ ಇಲಾಖೆಯವರು ನೀಡುತ್ತಿದ್ದಾರೆ. ಒಮ್ಮೆ ಪಾಸಿಟಿವ್‌ ನೀಡಿದರೆ, ಮರುದಿನವೇ ನೆಗೆಟಿವ್‌ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುತ್ತಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದಾರೆ’ ಎಂದು ಇಲ್ಲಿನ ಹಿಪ್ಪರಗಿ ಗಲ್ಲಿಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ತಿಂಗಳು 15ರಂದು ಅಥಣಿಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದೆ. ವರದಿ …

Read More »

ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ

ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್‌- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …

Read More »

ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ

ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್​ ಯಡಿಯೂರಪ್ಪ ನಮನ‌ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್​ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್​ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …

Read More »

ಜುಲೈ 16ರಂದು ಪರೀಕ್ಷೆ, ವರದಿ ಬಂದಿದ್ದು ಜುಲೈ 25- ಸೋಂಕು ದೃಢವಾದ್ರೂ ಬಾರದ ಅಂಬುಲೆನ್ಸ್

ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿವೆ. ಐವತ್ತು ವರ್ಷದ ಕೊರೊನಾ ಸೋಂಕಿತನನ್ನ ಆಸ್ಪತ್ರೆಗೆ ಶಿಫ್ಟ್ ಮಾಡದೆ ನಿರ್ಲಕ್ಷ್ಯ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮುಗದೂರು ಗ್ರಾಮದಲ್ಲಿ ನಡೆದಿದೆ. ಜುಲೈ 16 ರಂದು ಸೋಂಕಿತರ ವ್ಯಕ್ತಿ ಜಿಲ್ಲಾಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. 9 ದಿನದ ಬಳಿಕ ಜುಲೈ 25ರಂದು ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಗಂಟಲು ದ್ರವದ ಮಾದರಿ ನೀಡಿದ್ದಾಗಿನಿಂದ ಸೋಂಕಿತ ಮನೆಯಲ್ಲಿಯೇ …

Read More »

ಕೋವಿಡ್ ವಾರ್ಡ್ ನಿಂದಲೇ ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿಯಾಗೋದು ಬೇಡ’ ಎಂದು ಕೈ ಮುಗಿಯುತ್ತ ಕಾಮೇಗೌಡರು

ಮಂಡ್ಯ: ಕರೊನಾ ಸೋಂಕಿನಿಂದ ಬಳಲುತ್ತಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ತಮ್ಮ ಆರೋಗ್ಯ ಪರಿಸ್ಥಿತಿ ಕುರಿತು ಅವರೇ ಮಾತನಾಡಿದ್ದಾರೆ. ‘ಆಸ್ಪತ್ರೆಯಲ್ಲಿ ನನ್ನನ್ನು ಚೆನ್ನಾಗಿ ನೋಡ್ಕೋತ್ತಿದ್ದಾರೆ. ಟೈಂ ಟೈಂಗೆ ವೈದ್ಯರು ಬಂದು ತಪಾಸಣೆ ನಡೆಸ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಚೆನ್ನಾಗಿದೆ. ನಾನು ಶೌಚಗೃಹಕ್ಕೆ ಹೋಗಿ ಬರಲು ಒಬ್ಬರನ್ನ ನಿಯೋಜಿಸ್ತೀನಿ ಎಂದು ಹೇಳಿದ್ದಾರೆ. ನನಗೆ ಸ್ವಲ್ಪ ಕಾಲು ನೋವು ಇರೋದು ಬಿಟ್ರೆ ಬೇರೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿದ್ದು, ಯಾರೂ …

Read More »