Breaking News

ಜಿಲ್ಲೆ

ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು: ಕಾಂಗ್ರೆಸ್‌‍ ಸದಸ್ಯ ನಸೀರ್‌ ಅಹಮದ್‌ ವಿರುದ್ಧ ಆಕ್ಷೇಪಣಾ ಪದ ಬಳಸಿದ್ದ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತ ಪಕ್ಷ ಸಭಾಪತಿಗಳಿಗೆ ಒತ್ತಾಯಿಸಿದ ಪರಿಣಾಮ ವಿಧಾನಪರಿಷತ್‌ನಲ್ಲಿ ಕಾವೇರಿದ ಬಿಸಿ ಬಿಸಿ ಚರ್ಚೆ ನಡೆಯಿತು. ಒಂದು ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರವು ನಡೆಯಿತು. ಗಮನ ಸೆಳೆಯುವ ಹಾಗೂ ಲಿಖಿತ ಮೂಲಕ ಪ್ರಶ್ನೆಗಳಿಗೆ ಉತ್ತರಿಸುವುದು ಮುಗಿದ ನಂತರ ಸಭಾಪತಿ ಹೊರಟ್ಟಿಯವರಿಗೆ ಮುಖ್ಯ ಸಚೇತಕ ಸಲೀಂ …

Read More »

ಶ್ರೀದತ್ತ ಶೆಟ್ಟಿ ಕಾರ್ಯ ಶ್ಲಾಘನೀಯ

ಕಾಗವಾಡ: ಇಂಗ್ಲಿಷ್ ಮಾಧ್ಯಮ ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಂಡ ಕಾಲದಲ್ಲಿ ಶಿರಗುಪ್ಪಿಯಂತಹ ಚಿಕ್ಕ ಹಳ್ಳಿಯಲ್ಲಿ 1980ರಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಿದ ದಿ.ಶ್ರೀದತ್ತ ಶೆಟ್ಟಿ ಅವರ ಕಾರ್ಯ ಶ್ಲಾಘನೀಯ ಎಂದು ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮದಭಾಂವಿ ಹೇಳಿದರು. ತಾಲೂಕಿನ ಶಿರಗುಪ್ಪಿ ಗ್ರಾಮದ ಜ್ಞಾನಪೀಠ ಶಿಕ್ಷಣ ಸಮಿತಿಯ ಆಚಾರ್ಯ ಶ್ರೀ ವಿದ್ಯಾಸಾಗರ ಇಂಗ್ಲಿಷ್ ಮಾಧ್ಯಮ ಶಾಲೆ ಹಾಗೂ ಎಸ್‌ವಿಎಎಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜ್ಞಾನಶ್ರೀ ಉತ್ಸವದಲ್ಲಿ ಮಾತನಾಡಿ, ದಿ.ಶ್ರೀದತ್ತ ಶೆಟ್ಟಿ …

Read More »

belagavi:ಪಂಜಾಬ್ ನಲ್ಲಿ ಬೆಳಗಾವಿ ಯೋಧ ನಿಧನ

ಬೆಳಗಾವಿ: ಪಂಜಾಬ್ ರಾಜ್ಯದ ಬಟಿಂದಾ ನಗರದಲ್ಲಿ ಕರ್ತವ್ಯ ನಿಮಿತ್ತ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆಎಚ್ ಗ್ರಾಮದ ಯೋಧ ಜಗದೀಶ ಮನೋಹರ ಶಿಂಧೆ (40) ಮೃತಪಟ್ಟಿದ್ದಾರೆ. ಕಳೆದ 24 ವರ್ಷಗಳಿಂದ ಸೇನೆಯಲ್ಲಿದ್ದ ಜಗದೀಶ ನಾಲ್ಕು ತಿಂಗಳಿಗೆ ನಿವೃತ್ತರಾಗುವವರಿದ್ದರು. ಬಟಿಂದಾದ ಆರ್ಮಿ ಏರ್ ಡಿಫೆನ್ಸ್ ಸೇನಾ ಕೇಂದ್ರದ ಸೇವೆಯಲ್ಲಿದ್ದರು. ಕುಟುಂಬ ಸಮೇತ ಯೋಧನ ಪಾರ್ಥಿವ ಶರೀರ ದೆಹಲಿಯಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬುಧವಾರ ಬೆಳಗ್ಗೆ ಆಗಮಿಸಲಿದ್ದು, ಅಲ್ಲಿಂದ ಸ್ವಗ್ರಾಮಕ್ಕೆ …

Read More »

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ

ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ ಭಗವಂತ ಹುಣಶ್ಯಾಳಿ ( 23),ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.   ಬಾಲಕಿಗೆ 2024 ರಲ್ಲಿ ಅಪರಾಧಿಯು ಪ್ರೀತಿಸುವ ನಾಟಕವಾಡಿ ಮದುವೆ ಆಗುತ್ತೆನೆ ಎಂದು ಪುಸಲಾಯಿಸಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ದೌರ್ಜನ್ಯವೆಸಗಿ, ಜೀವ ಬೆದರಿಕೆಯೊಡ್ಡಿದ …

Read More »

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ …

Read More »

ಚಿಕ್ಕೋಡಿ ಕೆ ಎಲ್ ಇ ಕಾಲೇಜಿಗೆ ನಾವೀನ್ಯ ಪ್ರಯೋಗಾಲಯ ರಚನೆಗೆ 1.25 ಕೋಟಿ ರೂಪಾಯಿ ಅನುದಾನ

ಚಿಕ್ಕೋಡಿಯ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಿನೋದ ಬಿರಾದರ (ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಹಾಗೂ ಇಲೆಕ್ಟ್ರಾನಿಕ್ಸ್ ಆಯ್ಯಂಡ್ ಕಮ್ಯುನಿಕೆಶನ್ ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜಯ ಪುಜಾರಿ (ಕೊ-ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಇವರು ಪ್ರಸ್ತಾಪಿಸಿದ ಇಂಟೆಲಿಜೆನ್ಸ್ ಸಿಸ್ಟಮ್ ಆಯ್ಯಂಡ್ ಕಾಗ್ನಿಟಿವ್ ಕಂಪ್ಯೂಟಿಂಗ್ ವಿಷಯದ ನಾವೀನ್ಯ ಪ್ರಯೋಗಾಲಯ ರಚನೆಗೆ ಸಲ್ಲಿಸಿದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ-ಬಿಟಿ ವಿಭಾಗವು ಲಿಪ್ ಯೋಜನೆಯಡಿ 1.25 ಕೋಟಿ ರೂಪಾಯಿ ಅನುದಾನವನ್ನು …

Read More »

ಉದ್ಯೋಗ ಅರಿಸದೇ ಆಯ್ಕೆಯ ಸಾಮರ್ಥ್ಯ ಬೆಳಸಿಕೊಳ್ಳಿ

ಬಾಗಲಕೋಟೆ: ಕಲಾ ಅಧ್ಯಯನದಿಂದ ಹೇರಳ ಅವಕಾಶಗಳಿವೆ. ವಿಸ್ತೃತ ಅಧ್ಯಯನ ಶೈಲಿಯಿಂದ ಉದ್ಯೋಗವನ್ನು ಅರಿಸುವ ಬದಲು ಆಯ್ಕೆಮಾಡಿಕೊಳ್ಳುವ ಸಾಮರ್ಥ್ಯ ಬೆಳಸಿಕೊಳ್ಳಲು ಸಾಧ್ಯ ಎಂದು ಬಸವೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಕೆ.ಎಚ್ ಹೊಸೂರ ಹೇಳಿದರು. ನಗರದ ಬಸವೇಶ್ವರ ಪದವಿಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ , ವಾರ್ಷಿಕ ಸಂಚಿಕೆ ಬಿಡುಗಡೆ, ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಕ್ರೀಡಾ ಸಾಂಸ್ಕೃತಿಕ, ಎನ್.ಸಿ.ಸಿ, ಎನ್.ಎಸ್.ಎಸ್ ರೋವರ್ ರೇಂಜರ್ ಚಟುವಟಿಕೆಗಳ …

Read More »

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆಗೆ ಶರಣು

ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಐ. ಹುಣಸೆಕೆರೆ ಗ್ರಾಮದ ಹೆಚ್.ಎಲ್. ಇಂದ್ರ (24) ಮೃತ ಗೃಹಿಣಿ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಹೆಚ್. ಸ್ವಾಮಿ ಜೊತೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ …

Read More »

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ  ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು  ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೀದರ್  ಜಿಲ್ಲೆಯ ಔರಾದ್  ತಾಲೂಕಿನ ಜಮಲಪೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಮಕ್ಕಳಿಗೆ ಬಿಸಿಯೂಟ ಬಡಿಸಲಾಗಿತ್ತು. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡ ಮಕ್ಕಳನ್ನು ಕಂಡು ಶಿಕ್ಷಕರು ಹಾಗೂ ಪೋಷಕರು ಗಾಬರಿಗೊಂಡಿದ್ದು, ತಕ್ಷಣವೇ ಎಲ್ಲರನ್ನೂ ಔರಾದ್ ತಾಲೂಕು …

Read More »

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

ನವದೆಹಲಿ: ಚಿತ್ರದುರ್ಗ  ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ  ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು  ಬಿಡುಗಡೆ ಮಾಡಲಾಗಿದೆ. ಸಂಸದ ಗೋವಿಂದ ಕಾರಜೋಳ (ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ …

Read More »