Breaking News
Home / ಜಿಲ್ಲೆ (page 1182)

ಜಿಲ್ಲೆ

ಕೋಲಾರ ಸೇಫ್: ಸೊಂಕಿತರ ಜೊತೆ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್

ಕೋಲಾರ: ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 18 ಜನರ ವರದಿ ನೆಗೆಟಿವ್ ಬಂದಿದ್ದು, ಕೋಲಾರ ಜನತೆ ಹಾಗೂ ಜಿಲ್ಲಾಡಳಿತ ಕೋವಿಡ್ ಆತಂಕದಿಂದ ಕೊಂಚ ನಿರಾಳವಾಗಿದೆ. ಜಿಲ್ಲೆಯ ಎರಡು ಕುಟುಂಬಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲ್ ನರಸಾಪುರದ ಸೋಂಕಿತ ವ್ಯಕ್ತಿ ಸಂಪರ್ಕ ಹೊಂದಿದ್ದ ಪರಿಣಾಮ ಜಿಲ್ಲೆಯ ಸುಮಾರು 21 ಜನರನ್ನು ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಅಲ್ಲದೆ 21 ಜನರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 18 ಜನರ ವರದಿ …

Read More »

ಬೆಳಗಾವಿ:ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾ

ಹೊರಗೆ ಬಂದ್ರೆ ದ್ರೋಣ…. ರಸ್ತೆಗೆ ಬಂದ್ರೆ ಕೊರೋನಾ…. ಅದಕ್ಕೆಮನ್ಯಾಗ ಇರೋಣ…!! ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಮನೆಯಿಂದ ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾಗಳನ್ನು ಉಪಯೋಗಿಸುತ್ತಿದೆ. ಮಾಳ ಮಾರುತಿ ಠಾಣೆಯ ಪೋಲೀಸರು ದ್ರೋಣ ಕ್ಯಾಮರಾ ಗಳನ್ನು ಹಾರಿ ಬಿಟ್ಟು,ಗಾಂದೀ ನಗರ,ಉಜ್ವಲ ನಗರ,ಮಹಾಂತೇಶ ನಗರ ಸೇರಿದಂತೆ ಠಾಣಾ ವ್ಯಾಪ್ತಿಯ ಗಲ್ಲಿ,ಗಲ್ಲಿ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ‌. ದ್ರೋಣ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಕಿಡಗೇಡಿಗಳ ಬೆನ್ನಟ್ಟಿ …

Read More »

ಲಾಕ್‍ಡೌನ್ ಉಲ್ಲಂಘಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ

ತುಮಕೂರು: ಲಾಕ್‍ಡೌನ್ ಉಲ್ಲಂಘಿಸಿದ್ದಷ್ಟೇ ಅಲ್ಲದೆ ಸಾಮಾಜಿಕ ಅಂತರ ಮರೆತ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಸಾಲೆ ಜಯರಾಂ ಕೇಕ್ ಕತ್ತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು, ಮಕ್ಕಳಿಗೆ ಕೇಕ್ ತಿನ್ನಿಸಿದ್ದಾರೆ. ಈ ಮೂಲಕ ಶಾಸಕರು ಲಾಕ್‍ಡೌನ್ ಉಲ್ಲಂಘಿಸಿದರೂ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂಬ ಆರೋಪ …

Read More »

ಪಡುಕೋಣೆ ಚರ್ಚಿನಲ್ಲಿ ಪ್ರಾರ್ಥನೆ- ಧರ್ಮಗುರು ಸೇರಿ 7 ಮಂದಿ ಮೇಲೆ ಕೇಸ್

ಉಡುಪಿ: ಗುಡ್ ಫ್ರೈಡೇ ದಿನವೇ ಚರ್ಚಿನ ಧರ್ಮಗುರು ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಮೇಲೆ ಕೇಸು ದಾಖಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಪಡುಕೋಣೆಯಲ್ಲಿ ಗುಡ್ ಫ್ರೈಡೇ ಹಿನ್ನೆಲೆಯಲ್ಲಿ ಇಂದು ಸಾಮೂಹಿಕ ಪ್ರಾರ್ಥನೆ ನಡೆದಿದೆ. ಧರ್ಮಗುರು ಮತ್ತು ಆರು ಜನರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಪಡುಕೋಣೆಯ ಸಂತ ಅಂತೋನಿ ಚರ್ಚ್‍ನಲ್ಲಿ ಇಂದು ಗುಡ್ ಫ್ರೈಡೇ ಪ್ರಾರ್ಥನೆ ನಡೆದಿತ್ತು. ಬೈಂದೂರು ತಾಲೂಕು ನಾಡ ಗ್ರಾಮದಲ್ಲಿರುವ ಚರ್ಚ್ ಧರ್ಮಗುರು …

Read More »

ಪುಂಡಾಟ ಮೆರೆದ ಪಾಕ್‍ಗೆ ಭಾರತೀಯ ಸೇನೆಯಿಂದ ಪ್ರತ್ಯುತ್ತರ

ನವದೆಹಲಿ: ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಯಿಂದಾಗಿ ಪಾಕಿಸ್ತಾನ ಸೇನಾ ಪ್ರದೇಶ ಮತ್ತು ಉಗ್ರರ ನೆಲೆಯ ಮೇಲೆ ಭಾರತೀಯ ಸೇನೆಯು ಶುಕ್ರವಾರ ಕಾರ್ಯಾಚರಣೆ ನಡೆಸಿ ತಕ್ಕ ಉತ್ತ ನೀಡಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಎರಡು ಪ್ರದೇಶಗಳಲ್ಲಿ ಶತ್ರು ಕಡೆಯವರು ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ನಡೆಸಿದ್ದರು. ಹೀಗಾಗಿ ಕುಪ್ವಾರಾ ಜಿಲ್ಲೆಯ ಕೇರನ್ ವಲಯದಲ್ಲಿ ಇಂದು ಮಧ್ಯಾಹ್ನ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿದೆ …

Read More »

ಭಾರತದಲ್ಲಿ ಸಮುದಾಯ ಹಂತಕ್ಕೆ ಸೋಂಕು ಹೋಗಿಲ್ಲ: ತಪ್ಪು ಒಪ್ಪಿಕೊಂಡ ಡಬ್ಲ್ಯೂಎಚ್‍ಒ

ನವದೆಹಲಿ: ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತ ತಲುಪಿದ ದೇಶಗಳ ಪಟ್ಟಿಯಲ್ಲಿ ಭಾರತವನ್ನು ತೋರಿಸಿದ್ದ ವಿಶ್ವ ಆರೋಗ್ಯ ಸಂಸ್ಥೆ, ತನ್ನ ಯಥಾಸ್ಥಿತಿ ವರದಿಯ ದೋಷವನ್ನು ಒಪ್ಪಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆ ಯಥಾಸ್ಥಿತಿ ವರದಿಯಲ್ಲಿ, ‘ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ಹೋಗಿ’ ಎಂದು ಹೇಳಿತ್ತು. ಆದರೆ ಈಗ ತಮ್ಮ ತಪ್ಪನ್ನು ಒಪ್ಪಿಕೊಂಡು, ಭಾರತದಲ್ಲಿ ಸೋಂಕು ಹರಡುವ ಕ್ಲಸ್ಟರ್ ಕಾಣಿಸಿಕೊಂಡಿವೆ. ಆದರೆ ಸಮುದಾಯ ಪ್ರಸರಣದ ಸ್ಥಿತಿ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದೆ. …

Read More »

ಬಾಲಕಿಯ ಮನವಿಗೆ ತಕ್ಷಣವೇ ಸ್ಪಂದಿಸಿದ ಸಿಎಂ

ಬೆಳಗಾವಿ -: ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಬಾಲಕಿಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ,  ನಮ್ಮ ತಾಯಿಗೆ ಮೂತ್ರಕೋಶದ (ಕಸಿ)ಮರುಜೋಡಣೆ  ಶಸ್ತ್ರಚಿಕಿತ್ಸೆಯಾಗಿದೆ. ಅವರು ನಿತ್ಯವೂ ಸೇವಿಸಬೇಕಾದ ಮಾತ್ರೆಗಳು ಮುಗಿದು ಹೋಗಿರುವುದರಿಂದ ದಯವಿಟ್ಟು  ಮಾತ್ರೆಗಳನ್ನು ಪೂರೈಸಿರಿ ಎಂದು ಮುಖ್ಯಮಂತ್ರಿ  ಸಹಾಯವಾಣಿಗೆ ಕರೆ ಮಾಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರ(ಏ.೧೦) ಸಂಜೆ 6 ಗಂಟೆ ಸುಮಾರಿಗೆ ಸಿಎಂ ಕಚೇರಿಯ ಹಿರಿಯ ಅಧಿಕಾರಿಗಳು, ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ, ರಾಮದುರ್ಗ ತಾಲೂಕಿನ …

Read More »

ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ

ಬೆಂಗಳೂರು: ಕೊರೊನಾ ವೈರಸ್ ನಿಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್​ಡೌನ್​ನಿಂದಾಗಿ ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಗಂಗಾಧರ್ (60) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ. ತುಮಕೂರಿನ ಶಿರಾ ತಾಲ್ಲೂಕಿನ ದೇವರಹಳ್ಳಿಯಲ್ಲಿರುವ ತನ್ನ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತ ಬ್ಯಾಂಕ್​ ಮತ್ತು ಸ್ಥಳೀಯ ಸಾಲಗಾರರ ಬಳಿ ಸುಮಾರು 4.4 ಲಕ್ಷ ರೂ ಸಾಲ ಮಾಡಿದ್ದರು. ಬಿಸಿಲಿನ ಪರಿಣಾಮ …

Read More »

ಒಟ್ಟು 18 ಜಿಲ್ಲೆಗಳಲ್ಲಿ ಸೀಲ್‍ಡೌನ್ ಮಾಡಲು ಸಿದ್ಧತೆ ನಡೆಯುತ್ತಿದೆ..

ಬೆಂಗಳೂರು: ಒಂದು ಕಡೆ ಸೀಲ್‍ಡೌನ್ ಮಾದರಿ ನಿರ್ಬಂಧ ಹಾಕುತ್ತಿರುವ ಬೆಂಗಳೂರು ಪೊಲೀಸರು, ಅಡ್ಡಾದಿಡ್ಡಿ ಓಡಾಡುತ್ತಿರುವವರಿಗೆ ಮತ್ತಷ್ಟು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಬೆಂಗಳೂರು ರಸ್ತೆಗಳನ್ನು ಸೀಲ್ ಮಾಡುವುದರ ಜೊತೆಗೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಿದ್ದಾರೆ. ಈಗಾಗಲೇ ನೀಡಿರುವ ತುರ್ತು ಕೋವಿಡ್-19 ಪಾಸ್‍ಗಳನ್ನು ಶನಿವಾರದಿಂದ ರದ್ದು ಮಾಡಲು ಬಯಸಿದ್ದಾರೆ. ಬೆಂಗ್ಳೂರು ಪೊಲೀಸರ ಪ್ಲಾನ್: ನಗರದಲ್ಲಿ 70,000 ತುರ್ತು ಕೋವಿಡ್-19 ಪಾಸ್, ಆನ್‍ಲೈನ್ 1.30 ಲಕ್ಷ ಪಾಸ್ ವಿತರಣೆ ಮಾಡಲಾಗಿದೆ. ಆದರೆ ದಿನಕ್ಕೆ …

Read More »

ಕೊರೊನಾ ಲಾಕ್‍ಡೌನ್ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಸಿನಿಮಾ ಜೋಡಿಯೊಂದು ಸಪ್ತಪದಿ

ಶಿವಮೊಗ್ಗ: ಕೊರೊನಾ ಲಾಕ್‍ಡೌನ್ ಭೀತಿಯ ನಡುವೆಯೇ ಶಿವಮೊಗ್ಗದಲ್ಲಿ ಸಿನಿಮಾ ಜೋಡಿಯೊಂದು ಸಪ್ತಪದಿ ತುಳಿದಿದೆ. ಚಲನಚಿತ್ರ ನಟ ನಟಿಯರಾಗಿರುವ ಅರ್ನವ್ ವಿನ್ಯಾಸ್ ಮತ್ತು ವಿಹಾನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಮಲೆನಾಡಿನ ತವರೂರು ಎಂದೇ ಕರೆಸಿಕೊಳ್ಳುವ ಶಿವಮೊಗ್ಗದಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾರೆ. ಅಂದಹಾಗೆ ಅರ್ನವ್ ವಿನ್ಯಾಸ್ ಹೊಂಬಣ್ಣ ಎಂಬ ಚಿತ್ರದಲ್ಲಿ ಹೀರೋ ಪಾತ್ರದಲ್ಲಿ ಮಿಂಚಿದ್ದು, ಅದೇ ರೀತಿ ಹೀರೋಯಿನ್ ವಿಹಾನಾ ನೆನಪುಗಳು ಎಂಬ ಚಲನಚಿತ್ರದಲ್ಲಿ ನಟಿಸಿ, ಉತ್ತಮ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಮಂಡ್ಯ ಮೂಲದ ನಟ …

Read More »