Breaking News

ಜಿಲ್ಲೆ

ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇ……………

ಬೆಳಗಾವಿ – ಕೊರೋನಾದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ. ಇಂದು ಮೂವರು ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಇಂದು ಬೆಳಗಾವಿ ನಗರದಲ್ಲಿ ಇಬ್ಬರು ಹಾಗೂ ಅಥಣಿಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ನಗರದ ಕುಮಾರಸ್ವಾಮಿ ಬಡಾವಣೆ  ಮತ್ತು ಆನಗೋಳದಲ್ಲಿ ಒಬ್ಬೊಬ್ಬರು ಸಾವಿಗೀಡಾಗಿದ್ದಾರೆ. ನಿನ್ನೆ 64 ಜನರಿಗೆ ಸೋಂಕು ಪತ್ತಯಾಗಿರುವುದು ಸೇರಿ ಜಿಲ್ಲೆಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 561ಕ್ಕೇರಿದೆ. 366 ಜನರು ಗುಣಮುಖರಾಗಿದ್ದು, ಇನ್ನೂ 185 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

Read More »

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ:ರಮೇಶ ಜಾರಕಿಹೊಳಿ

ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಗೆ ತೆರಳಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ. ದಿ. ೧೪ ರಂದು ಸಂಜೆ೪.೪೫ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ದಿ.೧೫ರಂದು ಕೃಷ್ಣ ಜಲ ನ್ಯಾಯಾಧಿಕರಣ ಹಾಗೂ ಮೇಕೆದಾಟು ಸಮತೋಲನ ಜಲಾಶಯದ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವರು, …

Read More »

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಸಾವು

ಶಿವಮೊಗ್ಗ : ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ಶಿಕ್ಷಕ ಭದ್ರಾವತಿಯ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಕುಮಾರ್ (48) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ಕುಮಾರ್ ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಇಂದು ಮಧ್ಯಾಹ್ನದವರೆಗೂ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಮೃತ ಶಿಕ್ಷಕ ಕುಮಾರ್ ಮಧ್ಯಾಹ್ನ ಊಟಕ್ಕೆ ತೆರಳಲು ಹೊರಡುತ್ತಿದ್ದರು. ಈ ವೇಳೆ …

Read More »

ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ. ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ …

Read More »

ಯಾರಿಗೂ ಯಾವುದೇ ಪಾಸ್ ನೀಡಿಲ್ಲ’ – ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ

ಬೆಂಗಳೂರು: ಏಳು ದಿನ ಬೆಂಗಳೂರು ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ. ಕಮೀಷನರ್ ಭಾಸ್ಕರ್ ರಾವ್ ಕಂಟ್ರೋಲ್ ರೂಂ ಮೂಲಕ ಪೊಲೀಸ್ ಠಾಣೆಗಳಿಗೆ ಸೂಚನೆ ಕೊಟ್ಟಿದ್ದಾರೆ. ಇಂದಿನಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆಯವರೆಗೆ ಲಾಕ್‍ಡೌನ್ ಇರುತ್ತೆ. ಈ ವೇಳೆ ಕೆಲವು ವ್ಯಾಪಾರ ವಹಿವಾಟುಗಳು ನಡೆಯುತ್ತೆ ಅವರಿಗೆ ಅವಕಾಶ ಮಾಡಿ ಕೊಡಬೇಕು. ಅಲ್ಲದೇ ಲಾಕ್‍ಡೌನ್ ವೇಳೆ ಸಾರ್ವಜನಿಕರ ಜೊತೆ ಮೃದುವಾಗಿ …

Read More »

ಪರೀಕ್ಷೆ ನಡೆಸಲು ಮುಂದಾಗಿದ್ದ ಕ್ರೈಸ್ಟ್‌ ಸೇರಿ ಡೀಮ್ಡ್‌ ವಿವಿಗಳಿಗೆ ಸರ್ಕಾರದಿಂದ ಚಾಟಿ

ಬೆಂಗಳೂರು: ಕೋವಿಡ್‌ 19 ಸಮಯದಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲು ಮುಂದಾಗುತ್ತಿದ್ದ ಬೆಂಗಳೂರಿನ ಕ್ರೈಸ್ಟ್‌ ಸೇರಿ, ಡೀಮ್ಡ್‌ ವಿಶ್ವವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಚಾಟಿ ಬೀಸಿದೆ. ಅಂತಿಮ ವರ್ಷದ ಪರೀಕ್ಷೆ ಬಿಟ್ಟು ಇನ್ಯಾವುದೇ ತರಗತಿಗಳಿಗೆ ಪರೀಕ್ಷೆ ನಡೆಸದಂತೆ ಕ್ರೈಸ್ಟ್ ವಿಶ್ವವಿದ್ಯಾಲಯ ಸೇರಿ ಎಲ್ಲಾ ಡೀಮ್ಡ್ ವಿವಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಇಂಟರ್ನಲ್ ಅಸಸ್ಮೆಟ್ ಶೇ.50 ಹಾಗೂ ಹಿಂದಿನ ಪರೀಕ್ಷೆಗಳಿಂದ ಶೇ.50 ಅಂಕದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್‌ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ …

Read More »

ಲಾಕ್‍ಡೌನ್‍ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್

ಬೆಂಗಳೂರು: ಲಾಕ್‍ಡೌನ್‍ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‍ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಎಂಟ್ರಿ ಮತ್ತು ಎಕ್ಸಿಟ್‍ಗಳನ್ನ ಬ್ಯಾರಿಕೇಡ್‍ಗಳನ್ನ ಹಾಕಿ ಮುಚ್ಚಲಾಗಿದೆ. ಯಾವುದೇ ಬಸ್‍ಗಳ ಓಡಾಟವಿಲ್ಲ. ಇಡೀ ಮೆಜೆಸ್ಟಿಕ್ ಸುತ್ತಮುತ್ತ ಪೊಲೀಸರು ರಸ್ತೆಯನ್ನು ಬಂದ್ ಮಾಡಿದ್ದಾರೆ. ಅಲ್ಲದೇ ಮೆಜೆಸ್ಟಿಕ್ ನಿಲ್ದಾಣದ ಅಂಗಡಿ ಮುಂಗಟ್ಟು ಸಹ ಸಂಪೂರ್ಣ ಬಂದ್ ಆಗಿವೆ. ಹೋಟೆಲ್, ಟೀ ಅಂಗಡಿಗಳು ಓಪನ್ ಇಲ್ಲ. …

Read More »

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನ

ಬೆಂಗಳೂರು: ಇಂದಿನಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಆಗಿದೆ. ಹೀಗಾಗಿ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ. ಆದರೆ ರೈಲು ಸಂಚಾರ ಬಂದ್ ಮಾಡಿಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನೂರಾರು ಜನರಿದ್ದಾರೆ. ಈ ಬಾರಿಯ ಲಾಕ್‍ಡೌನ್‍ನಲ್ಲಿ ರೈಲು ಮತ್ತು ಏರ್‌ಪೋರ್ಟ್ ಬಂದ್ ಮಾಡಿಲ್ಲ. ಹೀಗಾಗಿ ಅನೇಕರು ರೈಲು ಮತ್ತು ವಿಮಾನಗಳ ಮೂಲಕ ಪ್ರಯಾಣ ಮಾಡುತ್ತಿದ್ದಾರೆ. ಸಂಗೊಳ್ಳಿ ರೈಲ್ವೆ ನಿಲ್ದಾಣದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಇದ್ದಾರೆ. …

Read More »

ಲಾಕ್‍ಡೌನ್ ಎಫೆಕ್ಟ್- ಮಳೆಯನ್ನೂ ಲೆಕ್ಕಿಸದೆ ಮದ್ಯದಂಗಡಿ ಮುಂದೆ ಕುಡುಕರ ಕ್ಯೂ

ರಾಯಚೂರು: ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆ ನಾಳೆಯಿಂದ ಜಿಲ್ಲೆಯ ರಾಯಚೂರು ಹಾಗೂ ಸಿಂಧನೂರು ನಗರಗಳಲ್ಲಿ ಒಂದು ವಾರ ಸಂಪೂರ್ಣ ಲಾಕ್‍ಡೌನ್ ಮಾಡಲಾಗುತ್ತಿದೆ. ಹೀಗಾಗಿ ಕುಡುಕರು ಮಳೆಯನ್ನೂ ಲೆಕ್ಕಿಸದೆ ಒಂದು ವಾರಕ್ಕಾಗುವಷ್ಟು ಮದ್ಯ ಖರೀದಿಸಲು ಸರತಿಯಲ್ಲಿ ನಿಂತಿದ್ದಾರೆ. ಒಂದು ವಾರ ಮದ್ಯದಂಗಡಿಗಳು ಸಹ ಬಂದ್ ಆಗುವ ಹಿನ್ನೆಲೆ ಮದ್ಯ ಪ್ರೀಯರಿಗೆ ಕಷ್ಟವಾಗಿದ್ದು, ಮಳೆಯನ್ನೂ ಲೆಕ್ಕಿಸದೆ ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಗಂಜ್ ರಸ್ತೆಯ ಎಂಎಸ್‍ಐಎಲ್ …

Read More »

ಲಾಕ್‍ಡೌನ್ ಎಫೆಕ್ಟ್ – 2 ದಿನದಲ್ಲಿ 410 ಕೋಟಿ ಮೌಲ್ಯದ ಎಣ್ಣೆ ಸೇಲ್………….

ಬೆಂಗಳೂರು: ನಾಳೆಯಿಂದ ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳು ಲಾಕ್‍ಡೌನ್ ಆಗಲಿವೆ. ಲಾಕ್‍ಡೌನ್ ಅವಧಿ ಡ್ರೈ ಡೇ ಅಗೋದ ಬೇಡ ಅಂತ ಮದ್ಯಪ್ರಿಯರು ಎಣ್ಣೆ ಖರೀದಿಗೆ ಮುಗಿಬಿದ್ದಿದ್ದರು. ಎರಡು ದಿನಗಳಲ್ಲಿ ಅಬಕಾರಿ ಇಲಾಖೆ 410 ಕೋಟಿ ರೂ. ಮೌಲ್ಯದ ಮದ್ಯವನ್ನು ಮಾರಾಟ ಮಾಡಿ ಬೊಕ್ಕಸ ತುಂಬಿಕೊಂಡಿದೆ. ಸೋಮವಾರ ಒಂದೇ ದಿನ ಬರೋಬ್ಬರಿ 230 ಕೋಟಿ ಮೌಲ್ಯದ ಮದ್ಯವನ್ನು ಕೆಎಸ್‍ಬಿಎಲ್ (ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ) ಮಾರಿದೆ. ಸೋಮವಾರ 215 ಕೋಟಿ …

Read More »