Breaking News
Home / ಜಿಲ್ಲೆ (page 1191)

ಜಿಲ್ಲೆ

ಪ್ರಾಣದ ಹಂಗು ತೊರೆದು ಪೇಂಟರ್ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ನೆಲಮಂಗಲ: ಬಣ್ಣ ಬಳಿಯಲು ಹೋಗಿ ಸುಮಾರು 12 ಅಡಿ ಆಳದ ನೀರಿನ ಸಂಪ್‍ಗೆ ಬಿದ್ದು ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಪ್ರಾಣದ ಹಂಗು ತೊರೆದು ರಕ್ಷಿಸಿ ಹೀರೋ ಆಗಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದ ವ್ಯಕ್ತಿ ಒಟ್ಟು ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ …

Read More »

ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ದಂಡ

ಬೆಂಗಳೂರು: ಲಾಕ್‍ಡೌನ್ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದ ಮನೋವೈದ್ಯರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದೆ. ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ಸಂಬಂಧ ದೇಶದಲ್ಲಿ ಲಾಕ್‍ಡೌನ್ ಜಾರಿಯಾಗಿದ್ದು ಎಲ್ಲ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿದೆ. ಕರ್ನಾಟಕದಲ್ಲೂ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ವಿನೋದ್ ಕುಲಕರ್ಣಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪಿಐಎಲ್ ಸಲ್ಲಿಸಿದ್ದರು. …

Read More »

ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ದುಬಾರೆ ಸಾಕಾನೆ ಶಿಬಿರಕ್ಕೂ ಲಾಕ್‍ಡೌನ್ ಎಫೆಕ್ಟ್

ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ದುಬಾರೆ ಸಾಕಾನೆ ಶಿಬಿರಕ್ಕೂ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಪರಿಸ್ಥಿತಿ ಸಾಕಾನೆಗಳ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತೆ ಆಗಿದೆ. ಶಿಬಿರದಲ್ಲಿರುವ ಆನೆಗಳಿಗೆ ಹೊಟ್ಟೆ ತುಂಬಾ ಆಹಾರ ಬಳಲುತ್ತಿವೆ. ಲಾಕ್‍ಡೌನ್ ಹಿನ್ನೆಲೆ ಆಹಾರ ಪೂರೈಕೆಯಾಗಿಲ್ಲ. ಆನೆಗಳಿಗೆ ಪ್ರತಿದಿನ ಆಹಾರ ನೀಡುತ್ತಿದ್ದ ಭತ್ತದ ಹುಲ್ಲು, ಬೆಲ್ಲದ ಕೊರತೆ ಉಂಟಾಗಿದೆ. ಮಾವುತರು, ಕಾವಡಿಗರಿಗೂ ಅಗತ್ಯ ವಸ್ತುಗಳ ಕೊರತೆಯಾಗಿದೆ. …

Read More »

ಬೆಳಗಾವಿ ತಬ್ಲೀಗಿ ಸದಸ್ಯರ ಕುರಿತುಶೋಭಾ ಕರಂದ್ಲಾಜೆ ಅವರು ಮಾಡಿದ ಆರೋಪ‌ ಸಂಪೂರ್ಣ ಸುಳ್ಳು

ಬೆಂಗಳೂರು: ಬೆಳಗಾವಿ‌ ಜಿಲ್ಲಾ ಆಸ್ಪತ್ರೆಯ ಕ್ವಾಂರಂಟೈನ್ ನಲ್ಲಿರುವ ತಬ್ಲೀಗಿ ಸದಸ್ಯರು ವೈದ್ಯಕೀಯ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿ ಉಳುಗಿಳಿದ್ದಾರೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಅವರು ಮಾಡಿದ ಆರೋಪ‌ ಸಂಪೂರ್ಣ ಸುಳ್ಳು ಎಂದು ಇದೀಗ ತಿಳಿದು ಬಂದಿದೆ. ಕ್ವಾಂರಂಟೈನ್ ನಲ್ಲಿರುವ ಸದಸ್ಯರು ವೈದ್ಯಕೀಯ ಸಿಬ್ಬಂದಿಗೆ ಜತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಚಿಕಿತ್ಸೆ ನೀಡುವ ವೈದ್ಯರ ಮೇಲೆ ಉಗುಳಿದ್ದಾರೆ ಅಂತಾ ಸೋಮವಾರ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದರು. ಅಲ್ಲದೇ ಮಾಧ್ಯಮಗಳೊಂದಿಗೆ ಮಾತನಾಡಿ, …

Read More »

ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ಚಿಂತನೆ

ಬೆಳಗಾವಿ:  ಭಾರತ್ ಲಾಕ್ ಡೌನ್ ಏಪ್ರೀಲ್ 14ರ ಬಳಿಕವೂ ಮುಂದುವರೆದರೆ  ಮದ್ಯ ವ್ಯಸನಿಗಳಿಗಾಗಿ ದಿನ ಪ್ರತಿ 3 ಗಂಟೆ ಮದ್ಯದಂಗಡಿಗಳನ್ನು ತೆರೆಯಲು  ರಾಜ್ಯ ಸರ್ಕಾರ ನೀಡಲು ಚಿಂತನೆ ನಡೆಸಿದೆ. ಕೊರೊನಾದಿಂದಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಅಗತ್ಯ ವಸ್ತುಗಳ ದೊರೆಯುವಂತಹ ಅಂಗಡಿಗಳನ್ನು ಹೊರತು ಪಡೆಸಿ ಉಳಿದೆಲ್ಲವನ್ನು ಬಂದ್ ಮಾಡಲಾಗಿದೆ.  ಇದರಿಂದ ರಾಜ್ಯದಲ್ಲಿ ಮದ್ಯ ಚಟಕ್ಕೆ ಒಳಗಾಗಿರುವವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಪ್ರತಿ ದಿನ ಮೂರು ಗಂಟೆ ಮಾತ್ರ …

Read More »

ಕ್ವಾರಂಟೈನ್‍ಗಳಿಂದ ಬ್ರಾಂಡೆಡ್ ಬೇಡಿಕೆ – ಉಡುಪಿಯಲ್ಲಿ ಹೊಸ ತಲೆನೋವು ಶುರು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಕ್ವಾರಂಟೈನ್‍ನಲ್ಲಿರುವ ಜನರ ಕಿರಿಕ್ ಜಾಸ್ತಿಯಾಗುತ್ತಿದೆ. ನಮಗೆ ಬ್ರಾಂಡೆಡ್ ಐಟಂ ಬೇಕು ಅಂತ ಸಿಬ್ಬಂದಿಗೆ ಒತ್ತಡ ಹಾಕುತ್ತಿದ್ದಾರೆ. ಉಡುಪಿ ಜಿಲ್ಲೆಯ ನರ್ಸ್, ಆಶಾ ಕಾರ್ಯಕರ್ತರಿಗೆ ಕ್ವಾರಂಟೈನ್‍ಗಳು ದುಂಬಾಲು ಬೀಳುತ್ತಿದ್ದಾರೆ. ವಿದೇಶದಿಂದ ಬಂದ ವ್ಯಕ್ತಿಗಳ ಕುಟುಂಬಕ್ಕೆ ಜಿಲ್ಲಾಡಳಿತ ಒಂದು ತಿಂಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಿತ್ತು. ಕುಟುಂಬದ ಯಾವ ಸದಸ್ಯರು ಹೊರಗೆ ಬಾರದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದರು. ಒಂದು ಕುಟುಂಬಕ್ಕೆ ಬೇಕಾದ …

Read More »

ಧಾರವಾಡದಲ್ಲಿ ಕೊರೋನಾ ಪ್ರಕರಣ ಜೀರೋ ಹಂತಕ್ಕೆ ಬಂದಿದೆ; ಸಚಿವ ಜಗದೀಶ್‌ ಶೆಟ್ಟರ್ ಸಂತಸ

ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯಲ್ಲಿ ಮಾತ್ರ ಕೊರೋನಾ ವೈರಸ್‌ ಪತ್ತೆಯಾಗಿತ್ತು. ಇದೀಗ ಅವರಿಗೂ ಚಿಕಿತ್ಸೆ ನೀಡಿ ಗುಣಪಡಿಸಲಾಗಿದ್ದು ಧಾರವಾಡದಲ್ಲಿ ಯಾರೂ ಕೊರೋನಾ ಸೋಂಕಿತರ ಇಲ್ಲದಿರುವುದು ಸಂತಸದ ವಿಚಾರವಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್‌ ತಿಳಿಸಿದ್ದಾರೆ. ಇಂದು ಧಾರವಾಡದಲ್ಲಿ ಕರೊನಾ ಮಾನಸಿಕ ಸಹಾಯವಾಣಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಶೆಟ್ಟರ್, “ಧಾರವಾಡದಲ್ಲಿ ಆರಂಭದಲ್ಲೇ ಒಂದು ಕೇಸ್ ಪಾಸಿಟಿವ್ ಆಗಿತ್ತು. ಆದರೆ, ಈಗ ಅವರು ಗುಣಮುಖರಾಗಿರುವುದು ಸಂತಸ ತಂದಿದೆ. ಕಿಮ್ಸ್‌ನಲ್ಲಿ ನಿರಂತರ ಚಿಕಿತ್ಸೆ ಕೊಡಿಸಿ ಗುಣಪಡಿಸಲಾಗಿದೆ. …

Read More »

ಕೊರೋನಾ ಹಿನ್ನೆಲೆಯಲ್ಲಿ ಬುಲೆಟ್ ಪ್ರಕಾಶ್ ಅಂತಿಮ ದರ್ಶನಕ್ಕೆ ಅವಕಾಶವಿಲ್ಲ: ಸಚಿವ ಆರ್​ ಅಶೋಕ್

ಬೆಂಗಳೂರು(ಏ. 06): ಕೊರೋನಾ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ​ನಟ ಬುಲೆಟ್ ಪ್ರಕಾಶ್ ಪಾರ್ಥಿವ ಶರೀರದ ಸಾರ್ವಜನಿಕರ ದರ್ಶನಕ್ಕೆ  ಅವಕಾಶ ನಿರಾಕರಿಸಲಾಗಿದೆ. ಇದೇ ರೀತಿಯಾಗಿ ಸೆಲೆಬ್ರಿಟಿಗಳು ಸಹ ಅಂತಿಮ ದರ್ಶನ ಪಡೆಯುವಂತಿಲ್ಲ. ಆದರೆ, ಸಂಬಂಧಿಕರಿಗಷ್ಟೇ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸಚಿವ ಆರ್​ ಅಶೋಕ್​​​ ತಿಳಿಸಿದ್ದಾರೆ. ಲಾಕ್ ಡೌನ್ ಮುಗಿದ ನಂತರ ಕಡಿಮೆ ಜನರು ಪೂಜೆ ಸಂಸ್ಕಾರದಲ್ಲಿ ಭಾಗಿಯಾಗಬಹುದು. ದೂರದಿಂದಲೇ ನಟ ಬುಲೆಟ್​​ ಪ್ರಕಾಶ್​ ಅವರಿಗೆ ನಮನ ಸಲ್ಲಿಸುವಂತೆ ಅಭಿಮಾನಿಗಳಲ್ಲಿ …

Read More »

ಹಾವೇರಿ: ಅನಗತ್ಯ ತಿರುಗಾಟ- ಬುದ್ಧಿ ಹೇಳಿದ್ದಕ್ಕೆ ಪೇದೆ ಮೇಲೆಯೇ ಹಲ್ಲೆ

ಹಾವೇರಿ: ಕೊರೊನಾ ವಿರುದ್ಧ ಹೋರಾಡಲು ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಅನಗತ್ಯವಾಗಿ ಮನೆಯಿಂದ ಹೊರಗೆ ಬಾರದಂತೆ ಸೂಚಿಸಲಾಗಿದೆ. ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಧಾನಿ ಮೋದಿ ಸಹ ಎಲ್ಲ ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದರೂ ಇಲ್ಲೊಬ್ಬ ಯುವಕ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದರ್ಪ ತೋರಿದ್ದಾನೆ. ಹಾವೇರಿ ತಾಲೂಕಿನ ಬಸಾಪುರ ಗ್ರಾಮದಲ್ಲಿ ಯುವಕ ಪ್ರಕಾಶ್ ಕರಿಗಾರ(35) ಪೇದೆ ಮೇಲೆ ಹಲ್ಲೆ ಮಾಡಿದ್ದು, ಬಸಾಪುರ ಗ್ರಾಮದಲ್ಲಿ ಕರ್ತವ್ಯದ ಮೇಲಿದ್ದ ಕಾನಸ್ಟೇಬಲ್ ಗುರುರಾಜ್ ಮೈಲಾರ …

Read More »

ಕರ್ನಾಟಕಕ್ಕೆ ತಲೆನೋವಾದ ಮಂಗಳೂರು ಕೊರೊನಾ ಸೋಂಕಿತ

ಮಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಪ್ರಕರಣದಂತೆ ಮಂಗಳೂರಿನ ಒಂದು ಪ್ರಕರಣ ಇದೀಗ ಕರ್ನಾಟಕಕ್ಕೆ ಕಗ್ಗಂಟಾಗಿದೆ. ಸಂಘಟನೆಯೊಂದಕ್ಕೆ ಸೇರಿರುವ ದಕ್ಷಿಣ ಕನ್ನಡ ಜಿಲ್ಲೆಯ (ರೋಗಿ ನಂ.144)ಈ ಸೋಂಕಿತ ವ್ಯಕ್ತಿ, ದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ತಂಗಿದ್ದರು. ಈ ವೇಳೆ ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿಯ ಶಾಹೀನ್‍ಭಾಗ್‍ನಲ್ಲಿ ನಡೆದ ಪ್ರತಿಭಟನೆಯಲ್ಲೂ ಭಾಗಿಯಾಗುವುದರ ಜೊತೆಗೆ ಹಲವರನ್ನು ಭೇಟಿಯಾಗಿರೋದು ತಲೆ ನೋವಾಗಿ ಪರಿಣಮಿಸಿದೆ. ಈ 52 ವರ್ಷದ ವ್ಯಕ್ತಿ ಹಲವರ ಸಂಪರ್ಕದಲ್ಲಿದ್ದು, ಅವರಿಗೂ ಸೋಂಕು ತಗಲಿರೋ …

Read More »