ಧಾರವಾಡ: ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿ, ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 3 ಬೇಂದ್ರೆ ನಗರಸಾರಿಗೆ ವಾಹನಗಳು, ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. …
Read More »ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ
ಬೆಂಗಳೂರು: ಮುತ್ತಪ್ಪ ರೈ ಸಾವಿನ ನಂತರ ಅವರ ಕುಟುಂಬದಲ್ಲಿ ಆಸ್ತಿ ವಿವಾದ ಶುರುವಾಗಿದ್ದು, ರೈ ಎರಡನೇ ಪತ್ನಿ ಆಸ್ತಿಯಲ್ಲಿ ಪಾಲು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ …
Read More »ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ
ಬೆಳಗಾವಿ, : ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು. ಆಲಮಟ್ಟಿ ಜಲಾಶಯದ ಎತ್ತರದ …
Read More »ಕಾಫಿನಾಡಲ್ಲಿ ಕೊರೊನಾ ದರ್ಬಾರ್- ……………..
ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಎಗ್ಗಿಲ್ಲದೆ ಕೊರೊನಾ ಸೋಂಕು ಹಬ್ಬುತ್ತಿದೆ. ಇಂದು ಒಂದೇ ದಿನ 23 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ ಜನ ಮತ್ತಷ್ಟು ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ಹಾಗೂ ಕಡೂರು ತಾಲೂಕಿನಲ್ಲಿ ಕೊರೊನಾ ಅಬ್ಬರ ಮುಂದುವರಿದಿದೆ. ಇಂದು ಚಿಕ್ಕಮಗಳೂರಿನಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಕಡೂರಿನಲ್ಲಿ ಎಂಟು ಪ್ರಕರಣಗಳು ಬೆಳಕಿಗೆ ಬಂದಿದೆ. ಉಳಿದಂತೆ ಜಿಲ್ಲೆಯ ಕೊಪ್ಪ, ಎನ್.ಆರ್.ಪುರ ಹಾಗೂ ಅಜ್ಜಂಪುರದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಕಡೂರು ನಗರದ …
Read More »1.20 ಲಕ್ಷ ಮಂದಿ ಕೊರೋನಾ ಸೋಂಕಿಗೆ ತುತ್ತಾಗಬಹುದು
ಬೆಂಗಳೂರು: ಮನುಕುಲಕ್ಕೆ ಬೆನ್ನಿಗಂಟಿದ ಬೇತಾಳದಂತೆ ಮಾರ್ಪಟ್ಟಿರುವ ಕೊರೋನಾ ಹೆಮ್ಮಾರಿ ಸದ್ಯಕ್ಕೆ ಬಿಟ್ಟು ಹೋಗುವ ರೀತಿ ಕಾಣುತ್ತಿಲ್ಲ. ನವೆಂಬರ್‌ವರೆಗೆ ಅಲ್ಲ, ಡಿಸೆಂಬರ್‌ವರಗೆ ಅಲ್ಲ, ಫೆಬ್ರವರಿ ಕಳೆದರೂ ಕೂಡ ಸೋಂಕು ಕಡಿಮೆ ಆಗುವ ಲಕ್ಷಣವೂ ಇಲ್ಲ. ಅಕ್ಟೋಬರ್, ನವೆಂಬರ್ ಹೊತ್ತಿಗೆ ಅಂದ್ರೆ ದೀಪಾವಳಿ ವೇಳೆಗೆ ನೀವು ಊಹಿಸಲಾಗದ ಮಟ್ಟಕ್ಕೆ ಕೊರೋನಾ ಸೋಂಕು ವ್ಯಾಪಿಸುತ್ತದೆ. ಸೋಂಕು ಪೀಕ್‍ಗೆ ಹೋಗುತ್ತೆ. ಸಾವು ನೋವುಗಳು ಹೆಚ್ಚಾಗಬಹುದು ಎನ್ನಲಾಗುತ್ತಿದೆ. ಕೊರೋನಾ ಹಾಟ್‍ಸ್ಪಾಟ್ ಸಿಟಿಯಾಗಿ ಮಾರ್ಪಟ್ಟಿರುವ ಬೆಂಗಳೂರಿನಲ್ಲಿ ಫೆಬ್ರವರಿ ಹೊತ್ತಿಗೆ …
Read More »ಮುಖ್ಯ ಶಿಕ್ಷಕನಿಂದ ಸರ್ಕಾರಿ ಶಾಲೆಯಲ್ಲಿ ನಿತ್ಯ ಗುಂಡು, ತುಂಡು ಪಾರ್ಟಿ
ಯಾದಗಿರಿ: ಶಾಲೆ ಎಂದರೆ ಜ್ಞಾನ ದೇಗುಲ ಎಂಬ ಭಾವನೆ. ಇಂತಹ ಶಾಲೆಯಲ್ಲಿ ಗುರುವಿನ ಸ್ಥಾನದಲ್ಲಿರುವ ಶಿಕ್ಷಕನೇ ಶಾಲೆಯಲ್ಲಿ ನೀತಿಗೆಟ್ಟ ಕೆಲಸ ಮಾಡಿದ್ದಾನೆ. ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರಿನ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಶಾಲೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾನೆ. ಕೊರೊನಾ ಹಿನ್ನೆಲೆ ಶಾಲೆಗೆ ಶಿಕ್ಷಕರು ಮಾತ್ರ ಬರುತ್ತಿದ್ದು, ಶಾಲೆಯಲ್ಲಿ ಮುಖ್ಯ ಶಿಕ್ಷಕ ಆಡಿದ್ದೆ ಆಟ ಎನ್ನುವಂತಾಗಿದೆ. ಕಳೆದ ಹಲವು ದಿನಗಳಿಂದ, ಶಾಲೆಯೊಳಗೆ ಮುಖ್ಯ ಶಿಕ್ಷಕನ ನೇತೃತ್ವದಲ್ಲೇ ಗುಂಡು-ತುಂಡಿನ …
Read More »ಒಂದೂರಿನ ಶವ ಮತ್ತೊಂದು ಊರಲ್ಲಿ ………
ಮಂಡ್ಯ: ಮಹಾಮಾರಿ ಕೊರೊನಾದಿಂದ ಜನರು ಈಗಾಗಲೇ ಭಯಭೀತರಾಗಿದ್ದಾರೆ. ಇದೀಗ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿದ್ದಾರೆ. ನಾಗರಾಜು (50) ಸಾವನ್ನಪ್ಪಿರುವ ವ್ಯಕ್ತಿ. ನಾಗರಾಜು ಮೂಲತಃ ಟಿ.ನರಸಿಪುರ ತಾಲೂಕಿನ ಮುಸುಕನಕೊಪ್ಪಲು ಗ್ರಾಮದವರು. ಅನೇಕ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹಚ್ಚಾಗುತ್ತಿದೆ. ಇದರಿಂದ ಗಾಬರಿಗೊಂಡು ನಾಗರಾಜು ಮಂಗಳವಾರ ಬೆಂಗಳೂರಿನಿಂದ ಹೊರಟ್ಟಿದ್ದಾರೆ. ಆದರೆ ತಮ್ಮ ಗ್ರಾಮಕ್ಕೆ ಹೋಗುವಷ್ಟಲ್ಲಿ ಕತ್ತಲಾಗುತ್ತದೆ ಎಂದು …
Read More »ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢ……….
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡಿನ ಕಾರ್ಪೊರೇಟರ್ ಸುಮಂಗಲಾ ರಾವ್ ಅವರಿಗೆ ಇಂದು ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಸುಂಮಗಲಾ ರಾವ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಾಕಿದ್ದು, ತಮ್ಮ ಪತಿಗೂ ಪಾಸಿಟಿವ್ ಆಗಿದ್ದು ಗುಣಮುಖರಾಗುತ್ತಿದ್ದೇವೆ ಎಂದಿದ್ದಾರೆ. https://youtu.be/ZwocKpMtUVY ಕಳೆದ ಕೆಲ ದಿನದ …
Read More »ಕೆಸಿಡಿ ಪ್ರಧ್ಯಾಪಕಿಗೆ ಕೊರೊನಾ- ಧಾರವಾಡ ವಿವಿಗೆ 8 ದಿನ ರಜೆ
ಧಾರವಾಡ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೂ ಈಗ ಕೊರೊನಾ ಆತಂಕ ಎದುರಾಗಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ಕೆಸಿಡಿ ಕಾಲೇಜ್‍ನ ಪ್ರಾಧ್ಯಾಪಕಿಯೊಬ್ಬರಿಗೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲೇ ಆತಂಕ ಎದುರಾಗಿದ್ದು, ಇದರ ಬೆನ್ನಲ್ಲೆ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 8 ದಿನಗಳ ರಜೆ ಘೋಷಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದ ಅಧೀನದಲ್ಲಿ ನಡೆಯುವ ಕೆಸಿಡಿ ಕಾಲೇಜಿನ ಪ್ರಾಧ್ಯಾಪಕಿಯೊಬ್ಬರಿಗೆ ಎರಡು ದಿನಗಳ ಹಿಂದೆ ಸೋಂಕು ದೃಢಪಟ್ಟಿತ್ತು. ಇವರು ಸೋಂಕು ದೃಢವಾಗುವ ಮುಂಚೆ ವಿಶ್ವವಿದ್ಯಾಲಯದ ಮೂರು ವಿಭಾಗಗಳಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ …
Read More »ಸರಕಾರದ ನಿಯಮಗಳನ್ನು ಕೋವಿಡ್ 19 ಬಗ್ಗೆ ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ : ಡಾ.ಜಗದೀಶ ಜಿಂಗಿ
ಗೋಕಾಕ :ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಸರಕಾರದ ನಿಯಮಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಶಾ ಕಾರ್ಯಕರ್ತಯರಿಗೆ ಹಾಗೂ ಪತ್ರಕರ್ತರಿಗೆ ರೋಗ ನಿರೋಧ ಶಕ್ತಿ ಹೆಚ್ಚಿಸುವ ಚವನಪ್ರಾಶ್ ವಿತರಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ಯರು , ಪೊಲೀಸರಂತೆ ಜೀವದ ಹಂಗು ತೊರೆದು ಪತ್ರಕರ್ತರು ಸಹ ಕೊರೋನಾ ವೈರಸ್ ಹರದಂತೆ ಜನರಲ್ಲಿ ಜಾಗೃತಿ ಮೂಡಿಸಲು …
Read More »
Laxmi News 24×7