Breaking News
Home / ಜಿಲ್ಲೆ (page 1209)

ಜಿಲ್ಲೆ

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. :ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …

Read More »

ಕೊರೊನಾ ಬಗ್ಗೆ ರಾಮನಗರ ಜನ ಭಯಪಡೋ ಅವಶ್ಯಕತೆಯಿಲ್ಲ: ಮಾಜಿ ಸಿಎಂ

ರಾಮನಗರ: ಕೊರೊನಾ ತಡೆಗೆ ರಾಮನಗರ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮವಾಗಿ ಜಿಲ್ಲೆಯಲ್ಲಿ ಈವರೆಗೆ 200ಕ್ಕೂ ಹೆಚ್ಚು ಜನರು ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಗಂಭೀರವಾದ ಪ್ರಕರಣವಾಗಲಿ, ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ಹೀಗಾಗಿ ಸಾರ್ವಜನಿಕರು ಭಯಭೀತರಾಗುವಂತಹ ಅವಶ್ಯಕತೆಯಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 26 ಮಂದಿ ವೈದ್ಯಾಧಿಕಾರಿಗಳು ಇದ್ದು, 4 ಜನ ವೈದ್ಯರ ಕೊರತೆ ಇದೆ. ವೈದ್ಯರ ಮೂರು ಬ್ಯಾಚ್‍ಗಳನ್ನು ಮಾಡಿ ಕೆಲಸ …

Read More »

“ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ “

ಬೆಳಗಾವಿ – ಶಾಸಕ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಂಗಳವಾರ  ವಿವಿಧೆಡೆ ಸುತ್ತಾಡಿ ಕೊರೋನಾ ಸಂಬಂಧ ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಿದರು. ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ ನೀಡಿದ್ದರು. ಸ್ಥಳೀಯ ಆಸ್ಪತ್ರೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಭೇಟಿ ನೀಡಿ, ಕೊರೋನಾ ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕೆಗಳನ್ನು ವಿಚಾರಿಸಿದರು. ವೈದ್ಯರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿ ಜೊತೆ ಚರ್ಚೆ …

Read More »

‘ನೀವು ಬೀದಿಗೆ ಬಂದರೆ ನಾನು ನಿಮ್ಮ ಜೊತೆ ಬರುತ್ತೇನೆ’ : ಕೊರೋನಾ ಜಾಗೃತಿಗೆ ಪೊಲೀಸರ ವಿಭಿನ್ನ ಪ್ರಯತ್ನ

ತುಮಕೂರು : ಭಾರತ ಲಾಕ್ಡೌನ್ ಆಗಿ ಇಂದಿಗೆ ಹೇಳು ದಿನ ಕಳೆಯುತ್ತಿದ್ದ ಆದರೆ ಜನರು ಮಾತ್ರ ಸರ್ಕಾರಗಳ ಆದೇಶವನ್ನು ಧಿಕ್ಕರಿಸಿ ಬೈಕುಗಳಲ್ಲಿ ಕಾರುಗಳಲ್ಲಿ ಮನಸೋಇಚ್ಛೆ ಓಡುತ್ತಿರುವುದು ಎಷ್ಟೇ ಮನವಿ ಮಾಡಿದರೂ ಜನರು ಮಾತ್ರ ಓಡಾಡುತ್ತಿರುವುದನ್ನು ಬಿಡುತ್ತಿಲ್ಲ ಇದರಿಂದ ಬೇಸತ್ತ ಅಧಿಕಾರಿಗಳು ಜನರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಹಾಗೂ ಸರ್ಕಲ್ಗಳಲ್ಲಿ ಕೊರೊನಾ ವೈರಸ್ ಬಗ್ಗೆ ಪೋಲಿಸ್ ಅದಿಕಾರಿಗಳು ಸಿಬ್ಬಂದಿಗಳು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಬರೆಹಗಳನ್ನು ಬರೆಸುವ ಮೂಲಕ ಜನರ …

Read More »

ಟೊಮೆಟೊವನ್ನು ರಸ್ತೆಗೆ ಸುರಿದ ರೈತರು – ಮುಗಿಬಿದ್ದ ಮಹಿಳೆಯರು,ಉಚಿತವಾಗಿ ಬಾಳೆಹಣ್ಣು ಕೊಟ್ಟ ರೈತ

ಕೋಲಾರ: ಕೊರೊನಾ ವೈರಸ್ ಜಿಲ್ಲೆಯ ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ಟೊಮೆಟೊ ಹಾಗೂ ಹೂವಿನ ಬೆಲೆ ತೀವ್ರವಾಗಿ ಕುಸಿತವಾದ ಪರಿಣಾಮ ರೈತರು ರಸ್ತೆಗೆ ಸುರಿಯುತ್ತಿದ್ದಾರೆ. ಇನ್ನೂ ರಸ್ತೆಗೆ ಸುರಿದ ಟೊಮೆಟೊಗಾಗಿ ಮಹಿಳೆಯರು ಮುಗಿಬಿದ್ದ ಸನ್ನಿವೇಶ ನಡೆದಿದೆ. ಬೆಳೆದ ಟೊಮೆಟೊಗೆ ಬೆಲೆ ಇಲ್ಲದ ಕಾರಣ ಕೋಲಾರ ನಗರದ ಬಸ್ ನಿಲ್ದಾಣ ಸಮೀಪ ರಸ್ತೆ ಮಧ್ಯೆದಲ್ಲಿ ಟೊಮೆಟೊವನ್ನು ರೈತ ಸುರಿದಿದ್ದಾನೆ. ಇನ್ನೂ ರಸ್ತೆಯಲ್ಲಿದ್ದ ಟೊಮೆಟೊವನ್ನು ಅನೇಕ ಮಹಿಳೆಯರು ಎತ್ತಿಕೊಂಡಿದ್ದಾರೆ. ಕೊರೊನಾದಿಂದ ಒಂದು ಕಡೆ …

Read More »

ಕೊರೊನಾ ಎಫೆಕ್ಟ್- ಮದ್ಯ ಸಿಗದಿದ್ದಕ್ಕೆ ನೇಣಿಗೆ ಶರಣು

ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾದ ಘಟನೆ ಮಾಗಡಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಹುಲಿಕೆರೆ ಗ್ರಾಮದ ನಿವಾಸಿ ರಮೇಶ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದ್ದು, ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ವೈನ್ ಸ್ಟೋರ್, ಬಾರ್ ಅಂಡ್ ರೆಸ್ಟೋರೆಂಟ್, ಎಂಎಸ್‍ಐಎಲ್ ಮಳಿಗೆಗಳಿಗೆ ಬೀಗ ಜಡಿಯಲಾಗಿದೆ. …

Read More »

ಬೆಂಗ್ಳೂರಿನಿಂದ ಬಂದ ವ್ಯಕ್ತಿ ಏಕಾಏಕಿ ಸಾವು- ಭಯಭೀತರಾಗಿರುವ ಗ್ರಾಮಸ್ಥರು

ರಾಯಚೂರು: ಬೆಂಗಳೂರಿನಿಂದ ಬಂದ ವ್ಯಕ್ತಿ ಏಕಾಏಕಿ ಸಾವನ್ನಪ್ಪಿದ ಹಿನ್ನೆಲೆ ಮೃತ ವ್ಯಕ್ತಿಯ ಮನೆ ಹತ್ತಿರ ಸುಳಿಯಲು ಗ್ರಾಮಸ್ಥರು ಹಾಗೂ ಸಂಬಂಧಿಕರು ಹೆದರಿಕೊಂಡಿರುವ ಘಟನೆ ಲಿಂಗಸೂಗೂರು ತಾಲೂಕಿನ ರೋಡಲಬಂಡಾ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ತಳವಾರ (54) ಇಂದು ಮಧ್ಯಾಹ್ನ ಬೆಂಗಳೂರಿನಿಂದ ದೇವದುರ್ಗದ ಸೋಮನಮರಡಿ ಗ್ರಾಮದಲ್ಲಿ ತನ್ನ ಮಗಳ ಮನೆಗೆ ಬಂದಿದ್ದರು. ಬಳಿಕ ತನ್ನ ಊರಾದ ಲಿಂಗಸುಗೂರಿನ ರೋಡಲಬಂಡಾಗೆ ಬಂದು ಎರಡು ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ಇದರಿಂದ ವ್ಯಕ್ತಿ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾನೆಂದು ಭಾವಿಸಿರುವ …

Read More »

ಯಾವೆಲ್ಲ ಸಾಲಕ್ಕೆ ಬ್ಯಾಂಕ್‍ಗಳಿಂದ ವಿನಾಯಿತಿ? ಇಎಂಐ ಮೇಲೆ ಬಡ್ಡಿ ಇರುತ್ತಾ?

ನವದೆಹಲಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೂರು ತಿಂಗಳ ಮಟ್ಟಿಗೆ ಸಾಲದ ಕಂತು ಪಾವತಿಸುವುದಿಂದ ವಿನಾಯಿತಿ ಘೋಷಿಸಿ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಅಧಿಕೃತ ಘೋಷಣೆ ಮಾಡಿವೆ. ಎಸ್‍ಬಿಐ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಯುಕೋ ಬ್ಯಾಂಕ್ ಸೇರಿ 16 ಬ್ಯಾಂಕ್‍ಗಳು ಮೇ 31ರವರೆಗೆ ಸಾಲಗಳ ಮೇಲಿನ ತಿಂಗಳ ಕಂತು ಪಾವತಿಯಿಂದ ವಿನಾಯಿತಿ ಘೋಷಿಸಿವೆ. ಈ ಮೂಲಕ ಶುಕ್ರವಾರವಷ್ಟೇ ಆರ್‌ಬಿಐ ನೀಡಿದ್ದ ಆದೇಶಗಳನ್ನು ಜಾರಿಗೊಳಿಸಿವೆ. …

Read More »

5 ಲಕ್ಷ ದೇಣಿಗೆ ನೀಡಿದ ಬಿಗ್‍ಬಾಸ್ ಸ್ಪರ್ಧಿ ದೀಪಿಕಾ ದಾಸ್

ಬೆಂಗಳೂರು: ಕೊರೊನಾ ಸೋಂಕಿತರ ನೆರವಿಗಾಗಿ ಈಗಾಗಲೇ ಕೆಲ ನಟ-ನಟಿಯರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿದ್ದಾರೆ. ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿರುವ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಮಾನವೀಯತೆಗಾಗಿ, ನಮ್ಮ ದೇಶ ಮತ್ತು ನಮ್ಮ ಸಹ ನಾಗರಿಕರಿಗಾಗಿ ಸಹಾಯ ಮಾಡುವ ಸಮಯ …

Read More »

ಮಾಸ್ಕ್ ಯಾರು ಧರಿಸಬೇಕು? ಎಲ್ಲರಿಗೂ ಕಡ್ಡಾಯವಲ್ಲ – ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು: ಕೊರೊನಾ ಭೀತಿಯಿಂದಾಗಿ ಈಗ ರಸ್ತೆಗೆ ಇಳಿಯುವ ಮುನ್ನ ಮಾಸ್ಕ್ ಧರಿಸಿರಬೇಕೆಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಕೆಲವು ಸೂಪರ್ ಮಾರ್ಕೆಟ್‍ಗಳಲ್ಲಿ, ದಿನಸಿ ಅಂಗಡಿಗಳಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಬಿಡುಗಡೆ ಮಾಡಿ ಯಾರು ಧರಿಸಬೇಕು? ಯಾರು ಮಾಸ್ಕ್ ಧರಿಸಬಾರದು ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲದೇ …

Read More »