Breaking News
Home / ಜಿಲ್ಲೆ (page 1218)

ಜಿಲ್ಲೆ

ಐಡಿ ಕಾರ್ಡ್ ತೋರಿಸಿದರು ಸಹ ಹಲ್ಲೆ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಬೇಕು:ಆರೋಗ್ಯ ಇಲಾಖೆ ಅಧಿಕಾರಿಯ

ಬೆಳಗಾವಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ವಿನಾಕಾರಣ ಆರೋಗ್ಯ ಇಲಾಖೆ ಅಧಿಕಾರಿಯ ಮೇಲೆ ಪೊಲೀಸರು ಪ್ರಜ್ಞಾಹೀನರಾಗುವವರೆಗೂ ಥಳಿಸಿದ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಮಹಾಂತೇಶ ನಗರದಿಂದ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಏಟು ತೊರಿಸಿದ್ದಾರೆ. ನಾನು ಆರೋಗ್ಯ ಇಲಾಖೆಯ ಅಧಿಕಾರಿಯಾಗಿದ್ದೆನೆ. ಕೆಲಸದಿಂದ ಮನೆಗೆ ಹೋಗುತ್ತಿದ್ದೆನೆ ಎಂದು ಐಡಿ ಕಾರ್ಡ್ ತೊರಿಸಿದರು. ಪೊಲೀಸರು ಏನು ಅಂತನು ಸಹ ವಿಚಾರಿಸಿದೆ ಹೊಡೆದಿದ್ದಾರೆ ಎಂದು ಬಸವರಾಜ ತಿಳಿಸಿದ್ದಾರೆ. ಐಡಿ …

Read More »

ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಬೆಳಗಾವಿ: ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಹುಕ್ಕೇರಿ  ತಾಲೂಕಿನ ಗುಡಸ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.  ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಒಬ್ಬ ಮಹಿಳೆ 200 ಮೀಟರ್ ಗೂ ಹೆಚ್ಚು ಕಾರು ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು  ತಿಳಿಸಿದ್ದಾರೆ. ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಸುದ್ದಿ ತಿಳಿದು  …

Read More »

ಜನರಿಗೆ ಅಗತ್ಯವಿರುವ ವಸ್ತುಗಳನ್ನು ಹೆಚ್ಚಿಗೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು

ಬೆಳಗಾವಿ: ಜನರಿಗೆ ಅಗತ್ಯವಿರುವ ವಸ್ತುಗಳನ್ನು ಹೆಚ್ಚಿಗೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮಗಳಲ್ಲಿ ಪಾಗಿಂಗ್ ಹಾಗೂ ಬ್ಲಿಚಿಂಗ್ ಪೌಡರ್ ಸಿಂಪಡಿಸಬೇಕು ಎಂದು ಶಾಸಕರಾದ ಉಮೇಶ ಕತ್ತಿ ಹಾಗೂ ಸತೀಶ ಜಾರಕಿಹೊಳಿ ಅವರ ಜಂಟಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಹುಕ್ಕೇರಿ ತಾಲ್ಲೂಕಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಕೊರೊನಾ ಕುರಿತು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಜನರ ಆರೋಗ್ಯದ ದೃಷ್ಟಿಯಿಂದ …

Read More »

ಬ್ರಿಟನ್ ಪ್ರಧಾನಿಗೂ ಕೊರೋನಾ ಸೋಂಕು ದೃಢ…………..

ಲಂಡನ್ -:  ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್‌ನ್‌ಗೂ ಕೊರೊನಾ ವೈರಸ್ ಸೋಂಕು ತಗುಲಿದೆ.  ಈ ವಿಷಯವನ್ನು ಸ್ವತಃ ಅವರೇ ದೃಢಪಡಿಸಿದ್ದಾರೆ. ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ.  ನಾನು ಸೆಲ್ಪ್ ಐಸೋಲೇಷನ್‌ ಮಾಡಿಕೊಳ್ಳಲಿದ್ದು,  ವಿಡಿಯೋ ಕಾನ್ಪರೆನ್ಸ್ ಮೂಲಕ ಸರ್ಕಾರವನ್ನು ನಿಭಾಯಿಸಲಿದ್ದೇನೆ” ಎಂದು ಅವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹಾಕಿದ್ದಾರೆ. ಬ್ರಿಟನ್‌ನಲ್ಲಿ ಸುಮಾರು 10 ಸಾವಿರ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. 528 ಜನರು ಬಲಿಯಾಗಿದ್ದಾರೆ. …

Read More »

ಕಾಬೂಲ್ ಗುರುದ್ವಾರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಕಾಸರಗೋಡಿನ ಸೂಸೈಡ್ ಬಾಂಬರ್

ನವದೆಹಲಿ: ಇತ್ತೀಚೆಗೆ ಕಾಬೂಲ್‍ನಲ್ಲಿ ನಡೆದ ಸಿಖ್‍ರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಭಯೋತ್ಪಾದಕರಲ್ಲಿ ಓರ್ವ ಕೇರಳದ ಕಾಸರಗೋಡಿನ ಯುವಕನಿದ್ದ ಎಂದು ವರದಿಯಾಗಿದೆ. ಮಾರ್ಚ್ 25ರಂದು ಕಾಬೂಲ್‍ನ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಸಿಖ್‍ರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ಮಾಡಲಾಗಿತ್ತು. ಈ ದಾಳಿಯಲ್ಲಿ ನಾಲ್ಕು ಜನ ಸೂಸೈಡ್ ಬಾಂಬರ್ ಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಈಗ ಇದರಲ್ಲಿ ಓರ್ವ ಭಾರತದ ಮೂಲದವನಾಗಿದ್ದು, ಕೇರಳದಿಂದ 4 ವರ್ಷದ ಹಿಂದೆ …

Read More »

ಆಂಧ್ರ ಗಡಿಯಲ್ಲಿ ಪರದಾಡುತ್ತಿದ್ದಾರೆ ಸಾವಿರಕ್ಕೂ ಹೆಚ್ಚು ಮೀನುಗಾರರು

ಕೋಲಾರ: ಮಂಗಳೂರು ಬಂದರಿನಿಂದ ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ಮೀನುಗಾರರನ್ನು ಕೋಲಾರದ ಗಡಿ ಭಾಗವಾದ ನಂಗಲಿ ಚೆಕ್ ಪೋಸ್ಟ್ ಬಳಿ ಆಂಧ್ರಪ್ರದೇಶ ಪೊಲೀಸರು ತಡೆ ಹಿಡಿದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗಡಿಯಲ್ಲಿ ಆಂಧ್ರ ಪೊಲೀಸರು ಮೀನುಗಾರರಿಗೆ ತಡೆ ಮಾಡಿದ್ದು, ಆಂಧ್ರ ಮೂಲದ ನೂರಾರು ಮಂದಿ ಮೀನುಗಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇತ್ತ ಮಂಗಳೂರಿನಲ್ಲಿ ಮೀನುಗಾರಿಕೆ ಮಾಡಿಕೊಂಡು ಇವರು ಜೀವನ ನಡೆಸುತ್ತಿದ್ದರು. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲೆಡೆ ಲಾಕ್‍ಡೌನ್ …

Read More »

ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ :ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೋನಾ ವೈರಸ್ ಹರಡುವುದನ್ನು ‌ತಡೆಗಟ್ಟಲು ಇಡೀ‌‌‌ ಬೆಳಗಾವಿ‌‌ ನಗರವನ್ನು ಲಾಕ್ ಡೌನ್ ಮಾಡಲಾಗಿದ್ದು ಕೆಪಿಸಿಸಿ‌‌‌ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ತಮ್ಮ ವಾಹನದಲ್ಲಿ ನಗರ‌ ಪ್ರದಕ್ಷಿಣೆ ಹಾಕಿದ‌ ಯಮಕನಮರಡಿ ಶಾಸಕರೂ ಆದ ಸತೀಶ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿದರು. ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ ಮತ್ತು ತಾವು ಸುರಕ್ಷಿತವಾಗಿ ಇರಲು ತಿಳಿಸಿದರು. ನಗರದಲ್ಲಿ‌ ಸ್ವಚ್ಚತೆ ಕಾಪಾಡಿಕೊಂಡು ಮತ್ತು …

Read More »

ಇಂದಿನಿಂದ ಲಾಠಿ ಇಲ್ಲದ ಕರ್ತವ್ಯ ನಿರ್ವಹಿಸುವಂತೆ ಪೊಲೀಸರಿಗೆ ಕಮಿಷನರ್ ಸೂಚನೆ

ಬೆಂಗಳೂರು: ಕೊರೋನಾ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್ 14ರವರೆಗೆ ದೇಶವನ್ನು ಲಾಕ್​ಡೌನ್​ ಮಾಡಲಾಗಿದೆ. ಮದ್ದಿಲ್ಲದ ಕೊರೋನಾ ಕಾಯಿಲೆಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾರಕ ಸೋಂಕನ್ನು ತಡೆಗಟ್ಟಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ, ಇಡೀ ದೇಶವನ್ನು ಲಾಕ್​ಡೌನ್​ ಮಾಡಿದ್ದರು ಜನರು ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಾರೆ. ಇಂತಹವರಿಗೆ ಪೊಲೀಸರು ಕಂಡಕಂಡಲ್ಲಿ ಲಾಠಿ ರುಚಿ ತೋರಿಸುತ್ತಿದ್ದಾರೆ. ಕೆಲವರು ಬೇಕಾಬಿಟ್ಟಿಯಾಗಿ ರಸ್ತೆಯಲ್ಲಿ ಅಡ್ಡಾಡುತ್ತಾರೆ. ಆದರೆ, ಕೆಲವಷ್ಟು ಮಂದಿ ತುರ್ತು ಕೆಲಸ ಮೇಲೆ ಹೊರಗೆ …

Read More »

ವಿದೇಶದಿಂದ ಬಂದವರು ಸುತ್ತಾಡಿದ್ರೆ ಪಾಸ್‍ಪೋರ್ಟ್ ಮುಟ್ಟುಗೋಲು

ಉಡುಪಿ: ವಿದೇಶದಿಂದ ಬಂದು 28 ದಿನ ಗೃಹ ಬಂಧನದಲ್ಲಿ ಇರದೇ ಬೇಕಾಬಿಟ್ಟಿ ಸುತ್ತಾಡಿದ್ರೆ ನಿಮ್ಮ ಪಾಸ್‍ಪೋರ್ಟ್ ಮುಟ್ಟುಗೋಲು ಹಾಕುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಗೃಹ ಬಂಧನದಲ್ಲಿರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಹರಡದಂತೆ ಕೇಂದ್ರ ಸರ್ಕಾರ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಿದೆ. ಆದರೆ ಆದೇಶ ಉಲ್ಲಂಘಿಸಿ ಶಂಕಿತರು ಸುತ್ತಾಡುವ ಮಾಹಿತಿ ಸಾರ್ವಜನಿಕರಿಂದ ಸಿಕ್ಕಿದೆ. ಒಂದೊಂದು ಮನೆಗೆ ಮೂರು ಬಾರಿ ಅಧಿಕಾರಿಗಳು, …

Read More »

ಗೌರಿಬಿದನೂರಿನಲ್ಲಿ ಮತ್ತೆ ಐವರಿಗೆ ಕೊರೊನಾ – ಇಬ್ಬರ ವರದಿಗೆ ಕಾಯುತ್ತಿರುವ ವೈದ್ಯರು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸ್ಪಷ್ಟಪಡಿಸಿದ್ದಾರೆ. ಈ ಮೊದಲು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬರೂ ಸಾವನ್ನಪ್ಪಿದ್ದರು. ಮೆಕ್ಕಾ ಪ್ರವಾಸ ಕೈಗೊಂಡು ವಾಪಸ್ ಆಗಿದ್ದ ನಂತರ ಮೊದಲು ಕೊರೊನಾ ಪತ್ತೆಯಾಗಿದ್ದ 31 ವರ್ಷದ ವ್ಯಕ್ತಿಯ ತಾಯಿ ಹಾಗೂ ಚಿಕ್ಕಮ್ಮ ಸೇರಿ ಮೂವರಿಗೆ ಸೋಂಕು ಧೃಢವಾಗಿತ್ತು. ಈ ಮೂವರು ಸಹ ಮೆಕ್ಕಾ …

Read More »