Breaking News
Home / ಜಿಲ್ಲೆ (page 1219)

ಜಿಲ್ಲೆ

ಕೆಆರ್ ಮಾರ್ಕೆಟ್ ಶಿಫ್ಟ್ ಪ್ಲಾನ್ ಠುಸ್- ಬಸವನಗುಡಿ ಮೈದಾನದಲ್ಲಿ ಸಾಮಾಜಿಕ ಅಂತರವೇ ಇಲ್

ಬೆಂಗಳೂರು: ಜನದಟ್ಟನೆ ಹಿನ್ನೆಲೆಯಲ್ಲಿ ಕೆಆರ್ ಮಾರ್ಕೆಟ್ ಅನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್ ಮಾಡಿದ್ದ ಪ್ಲಾನ್ ವಿಫಲವಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ಕೆ.ಆರ್ ಮಾರುಕಟ್ಟೆಯಂತೆ ಆಗಿದೆ. ಬಸವನಗುಡಿ ಮೈದಾನದಲ್ಲಿ ಅನೇಕ ತರಕಾರಿ ಲೋಡ್ ಲಾರಿಗಳು ನಿಂತಿವೆ. ಅಷ್ಟೇ ಅಲ್ಲದೆ ಯಾವುದೇ ಸಾಮಾಜಿಕ ಅಂತರ ಇಲ್ಲದಂತಾಗಿದೆ. ಈ ಮೂಲಕ ಜನಸಂದಣಿ ಕಡಿಮೆ ಮಾಡುವ ಬಿಬಿಎಂಪಿ ಪ್ಲಾನ್ ಠುಸ್ ಆಗಿದೆ. 20 ಅಡಿ ಅಂತರದಲ್ಲಿ ಸ್ಟಾಲ್ ನಿರ್ಮಾಣ ಮಾಡಲಾಗುವುದು ಎಂದು …

Read More »

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,‌ಮಾ.25: ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು …

Read More »

ಚಿಕ್ಕೋಡಿ :ಶಾನೂರಬಾಬಾ ದರ್ಗಾದ ಆವರಣದಲ್ಲಿ ಆಗಮಿಸಿದ ಕಟುಂಬ ತುತ್ತು ಅನ್ನಕ್ಕಾಗಿ‌ ಪರದಾಟ.. Mar, 27 2020

ಚಿಕ್ಕೋಡಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್‍ಗೆ ಇಡೀ ಭಾರತ ಲಾಕ್‍ಡೌನ್ ಆಗಿದೆ. ಆದರೆ ಅಮವಾಸ್ಯೆಗೆ ಚಿಕ್ಕೋಡಿ ತಾಲೂಕಿನ ಕರೋಶಿ ಶಾನೂರಬಾಬಾ ದರ್ಗಾಕ್ಕೆ ದೇವರಿಗೆ ಬಂದಿದ್ದ ಬಡ ಕುಟುಂಬವೊಂದು ಹತ್ತಿರ ಹಣವೂ ಇಲ್ಲದೆ ಪರದಾಡುವಂತಾಗಿದೆ.   ನೆರೆಯ ಮಹಾರಾಷ್ಟ್ರ ಸೋಲ್ಲಾಪೂರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಬೋರಗಾಂವ ಎಂಬ ದೂರದ ಊರಿಂದ ನವಾಜ ಮುಲ್ಲಾ ಎನ್ನುವ ಕುಟುಂಬ ಅಮವಾಸ್ಯೆಯೆಂದು ದರ್ಗಾಕ್ಕೆ ದೇವರ ದರ್ಶಕ್ಕೆಂದು ಆಗಮಿಸಿದ್ದರು. ಅಮವಾಸ್ಯೆ ಮತ್ತು ಅಮವಾಸ್ಯೆಯಾದ ನಂತರ ಒಂದೆರಡು …

Read More »

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ ಮಂಗಳೂರು: 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನ ರಾಜ್ಯದಲ್ಲಿ 9 ಜನರಿಗೆ ಸೋಂಕು ತಗುಲಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ 64: 21 ವರ್ಷದ ಯುವಕ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯಿದ್ದು, ದಿನಾಂಕ 22.03.2020 ರಂದು ಭಾರತಕ್ಕೆ ವಾಪಸ್ಸಾಗಿರುತ್ತಾರೆ. ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ …

Read More »

ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಪ್ರಧಾನಿ ಮೋದಿ ಅಸಮಾಧಾನ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಡೀ ದೇಶವನ್ನೇ ಪ್ರಧಾನಿ ಮೋದಿ ಅವರು ಲಾಕ್‍ಡೌನ್ ಮಾಡಿದ್ದರು. ಆದರೆ ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಇದ್ದರೂ ಜನರ ಓಡಾಟ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೋಂಕು ಕಡಿಮೆ ಆಗುತ್ತಿಲ್ಲ. ಆದ್ದರಿಂದ ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಬೇಕು. ಹೀಗಾಗಿ ಇನ್ನಷ್ಟು ಕಠಿಣ ಕ್ರಮ …

Read More »

ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ”………

ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ …

Read More »

ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ

ಗೋವಾ:  ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸಹಾಯ ಹಸ್ತಕೋರುವಂತೆ ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಹರದಗಟ್ಟಿ ಗ್ರಾಮದ 30 ಕ್ಕೂ ಹೆಚ್ಚು ಜನರು ಕೂಲಿ ಕೆಲಸಕ್ಕಾಗಿ ಗೋವಾಗೆ ತೆರಳಿದ್ದರು. ಆದ್ರೆ  ಲಾಕ್ ಡೌನ್ ಹಿನ್ನೆಲೆ ಗ್ರಾಮಕ್ಕೆ ತೆರಳಲಾಗದ ಅತ್ತೆ ಸೂಕ್ತ ವ್ಯವಸ್ಥೆ ಇಲ್ಲದೆ ಪರದಾಡುಂತಾಗಿದೆ. ಪಣಜಿಯ ಮಾಪ್ಸಾ ಬಳಿ  ಉಳಿದುಕೊಂಡಿರುವ ಕಾರ್ಮಿಕರು ತಮ್ಮ ಗ್ರಾಮಕ್ಕೆ ವಾಪಸ್ಸಾಗಲು …

Read More »

ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್: ಡಾ.ಎಸ್. ಬಿ.ಬೊಮ್ಮನಹಳ್ಳಿ

ಬೆಳಗಾವಿ: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ನಾಲ್ಕು ಮಾದರಿಗಳ ಪೈಕಿ ಮೂರು ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಲ್ಕು ಮಾದರಿಗಳ ಪೈಕಿ ಇನ್ನೊಂದು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಕಳಿಸಲಾಗಿದ್ದ ಹತ್ತು ಮಾದರಿಗಳು ಕೂಡ ನೆಗೆಟಿವ್ ಬಂದಿರುತ್ತವೆ. ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ಹದಿನೈದು ಮಾದರಿಗಳ ಪೈಕಿ …

Read More »

ಲಾಠಿ ಏಟು ತಪ್ಪಿಸಿಕೊಳ್ಳಲು ಬೆಳಗಾವಿಯ ಬೈಕ್ ಸವಾರರು ಹೊಸ ಪ್ಯಾನ್

ಬೆಳಗಾವಿ: ಪೊಲೀಸರ ಲಾಠಿ ಏಟು ತಪ್ಪಿಸಿಕೊಳ್ಳಲು ಬೆಳಗಾವಿಯ ಬೈಕ್ ಸವಾರರು ಹೊಸ ಪ್ಯಾನ್ ಮಾಡಿದ್ದಾರೆ. ನಾಯಿ ಕಚ್ಚಿದೆ ದಾರಿ ಬಿಡಿ ಎಂದು ಬೋಗಾರ್‌ವೇಸ್‌ ಬಳಿ ಬೋರ್ಡ್ ಹಿಡಿದುಕೊಂಡು ಬಂದಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪೊಲೀಸರು ಜನರು ಸಂಚರಿಸದಂತೆ ನೋಡಿಕೊಳ್ಳುತ್ತಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ಜನರಿಗೆ ಪೊಲೀಸರು ಲಾಠಿ ಬಿಸಿ ತೋರಿಸುತ್ತಿದ್ದಾರೆ. ಇದೇ ವೇಳೆ ಪೊಲೀಸರು ಹೊಡೆಯಲು ಹೊದ ಸಂದರ್ಭದಲ್ಲಿ ದ್ವಿಚಕ್ರದ ಸವಾರರಿಬ್ಬರು …

Read More »

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ”

ನಿಪ್ಪಾಣಿ “ಜನರು ಆತಂಕಪಡಬಾರದು, ಸರ್ಕಾರ ನಿಮ್ಮೊಂದಿಗಿದೆ” ನಿಪ್ಪಾಣಿ ನಗರ ಸಭೆಯಲ್ಲಿ ಕೊರೋನಾ ವೈರಸ್ ಕುರಿತು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಸಭೆ ಉದ್ದೇಶಿಸಿ ಮಾತನಾಡಿದರು. …

Read More »