ಕೊಪ್ಪಳ: ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಮಗನೇ ತಂದೆಯನ್ನೇ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತರನ್ನು ವೆಂಕೋಬಾ ಹಂಚಿನಾಳ (50) ಎಂದು ಗುರುತಿಸಲಾಗಿದೆ. ಸೋಮವಾರ (ಜ.26) ಸಂಜೆ ತಮ್ಮ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಮೃತ ವೆಂಕೋಬಾ ಮಗನ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. …
Read More »ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ – ಸರ್ಕಾರ ಸ್ಪಂದಿಸದಿದ್ರೆ ಸಾಮೂಹಿಕ ರಾಜೀನಾಮೆಗೆ ಪ್ಲಾನ್
ಬೆಂಗಳೂರು: ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಬೇಡಿಕೆಗಳ ಈಡೇರಿಕೆಗೆ ಸಾರಿಗೆ ಸಂಘಟನೆಗಳು, ನಾಳೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿವೆ. ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ರೇ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದೆ. ಕೆಎಸ್‌ಆರ್‌ಟಿಸಿ ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ …
Read More »ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಬೈರತಿ ಸುರೇಶ್
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನ ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಪ್ರಶ್ನೆ ಕೇಳಿದರು. ಪೌರಾಡಳಿತ ಇಲಾಖೆಯಲ್ಲಿ ಬ್ಯಾನರ್ ಹಾಕಲು ನಿಯಮ ಇದೆ. ಅನುಮತಿ ಪಡೆದು ಹಾಕಬಹುದು ಅಂತಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ ಅನ್ನೋರು ಮಹಿಳಾ ಅಧಿಕಾರಿಯನ್ನ ನಿಂದಿಸಿದ್ದಾರೆ. ಫೋನ್‌ನಲ್ಲಿ …
Read More »ಜಾಮೀನು ಅರ್ಜಿ ವಜಾ – ವಿನಯ್ ಕುಲಕರ್ಣಿಗೆ ಜೈಲೇ ಗತಿ
ಬೆಂಗಳೂರು: ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಯವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ಕೊನೆ ಹಂತದಲ್ಲಿದೆ ಎಂದು ಶಾಸಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದೆ. ಹೀಗಾಗಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ನ್ಯಾ.ಸುನಿಲ್ ದತ್ತ ಯಾದವ್ ಇದ್ದ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಜ.9 ರಂದು ಅರ್ಜಿ ವಿಚಾರಣೆ …
Read More »ಮನರೇಗ ಮರು ಜಾರಿಯಾಗುವವರೆಗೂ ಹೋರಾಟ ನಿಲ್ಲದು ಮಹಾತ್ಮ ಗಾಂಧಿಯವರ ಹೆಸರು ಬದಲಿಸಲು ನಾವು ಬಿಡುವುದಿಲ್ಲಾ:- ಆಹಾರ ಸಚಿವ ಕೆಹೆಚ್. ಮುನಿಯಪ್ಪ
ಬೆಂಗಳೂರು:ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು, ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ “ನರೇಗಾ ಬಚಾವ್ ಸಂಗ್ರಾಮ್ ಮತ್ತು ಲೋಕಭವನ್ ಚಲೋ” ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ. ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಅವರ ಸರ್ಕಾರ ಇವತ್ತು ಮನ್ರೇಗ ಯೋಜನೆ ತೆಗೆದು ಹಾಕುವಂತಹ ಕೆಲಸವನ್ನು ಮಾಡಿದೆ. ಅದಕ್ಕಿಂತಲೂ ಮುಖ್ಯವಾಗಿ, ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕುವಂತಹ ಕೆಲಸವನ್ನು ಮಾಡಿದೆ ಇದು …
Read More »ರಾಜ್ಯದಲ್ಲಿ ಗುಂಡಾಗಿರಿ ಸರಕಾರ ಆಡಳಿತದಲ್ಲಿದೆ: ಗೋವಿಂದ ಕಾರಜೋಳ
ಬಾಗಲಕೋಟೆ: ಕಾಂಗ್ರೆಸ್ ನಲ್ಲಿ ಅಭಿವೃದ್ಧಿ ಕ್ರಾಂತಿಯಿಲ್ಲ ಕೇವಲ ಭ್ರಷ್ಟಾಚಾರದ ಜಾತ್ರೆ, ಅಧಿಕಾರಕ್ಕಾಗಿ ಕಿತ್ತಾಟ, ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದೆ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದೆ ಎಂದು ಸರಕಾರದ ವಿರುದ್ಧ ಮಾಜಿ ಡಿಸಿಎಂ ಗೋವಿಂದ್ ಕಾರಜೋಳ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯಸರಕಾರದಲ್ಲಿ ಖುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಅಭಿವೃದ್ಧಿಯ ಚಿಂತನೆ ಇಲ್ಲದೇ ದುರಾಡಳಿತ ಮಿತಿಮೀರಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಶೋಷಣೆ, ಅತ್ಯಾಚಾರ ಮಿತಿಮೀರಿದೆ. ಸರಕಾರಿ ಮಹಿಳಾ ಅಧಿಕಾರಿಗಳ ಮೇಲೆ ನಿಂದನೆ …
Read More »ಬೆಳಗಾವಿಯ ಪ್ರಮುಖ ಹದಿನೈದಕ್ಕೂ ಹೆಚ್ಚು ಯೋಜನೆಗಳಿಗೆ ಒಂದೇ ಬಾರಿ ಚಾಲನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಹದಿನೈದಕ್ಕೂ ಹೆಚ್ಚು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಒಂದೇ ಬಾರಿಗೆ ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳು ಘೋಷಿಸಿ ಒಂದು ಕಳೆದರೂ ಚಾಲನೆ ದೊರೆಯುತ್ತಿಲ್ಲ ಎಂಬ …
Read More »ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್‌ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ
ಬೆಂಗಳೂರು: ಜಿಬಿಎ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡುತ್ತಿದೆ. 369 ವಾರ್ಡ್‌ಗಳ 1,800 ಅರ್ಜಿ ಸೇಲ್ ಆಗಿದೆ. ಕಾಂಗ್ರೆಸ್‌ನಲ್ಲಿ ಜಿಬಿಎ ಚುನಾವಣೆಗೆ ಪೈಪೋಟಿ ಹೆಚ್ಚಾಗುತ್ತಿದೆ. ಜೂನ್ 30ರ ಒಳಗಡೆ ಜಿಬಿಎ ಚುನಾವಣೆ ಮಾಡಬೇಕು ಅಂತಾ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಸಹಜವಾಗಿ ಈಗ ಆಕಾಂಕ್ಷಿಗಳಲ್ಲಿ ಆಸೆ ಚಿಗುರೊಡೆದಿದೆ. ಈಗಾಗಲೇ ಎಲ್ಲಾ ಪಕ್ಷಗಳು ಜಿಬಿಎ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಕಾಂಗ್ರೆಸ್‌ನಲ್ಲಿ ಜಿಬಿಎ ಚುನಾವಣೆಗೆ ಭರ್ಜರಿಯಾಗಿ ಸಿದ್ಧತೆ ನಡೆಯುತ್ತಿದೆ. ಹೌದು, ಈಗಾಗಲೇ ಆಕಾಂಕ್ಷಿಗಳಿಗೆ …
Read More »ಅಪರಾದ ತಗ್ಗಿಸಲು ಶ್ವಾನಗಳಿಗೆ ಹೆಚ್ಚಿನ ತರಬೇತಿ ಅವಶ್ಯ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ನಿಷ್ಕಲ್ಮಶ, ಪ್ರೀತಿ, ನಿಷ್ಠೆಗೆ ಶ್ವಾನಗಳಿಗೆ ಶ್ವಾನಗಳೇ ಸರಿಸಾಟಿ, ಶ್ವಾನವನ್ನು ಪ್ರೀತಿಯಿಂದ ಬೆಳೆಸಿದಾಗ ಮಾತ್ರ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತವೆ. ಅವುಗಳನ್ನು ಸ್ನೇಹಮಯವಾಗಿ ಬೆಳೆಸಬೇಕು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಸರ್ದಾರ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ ಬೆಳಗಾವಿ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಪ್ರಾಣಿ ಹಿಂಸೆ ವಿರುದ್ಧ …
Read More »ದೇಶದ ಅಭಿವೃದ್ಧಿ ಪ್ರಧಾನ ಮಂತ್ರವಾಗಲಿ: ಎಸ್.ಆರ್ ಮೂಗನೂರಮಠ
ಬಾಗಲಕೋಟೆ: ರಾಷ್ಟ್ರೀಯ ಹಬ್ಬಗಳು ನಮ್ಮ ಹೆಮ್ಮೆಯ ಸಂಕೇತಗಳಾಗಿದ್ದು ಗಣರಾಜ್ಯೋತ್ಸವ ಕೇವಲ ಐತಿಹಾಸಿಕ ದಿನವಾಗಿರದೆ ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ಕ್ರೂಡೀಕೃತ ಲಿಖಿತ ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪುಸಿಕೊಂಡಿರುವ ಪ್ರತೀಕವಾಗಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮೂಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೊತ್ಸವದ ನಿಮಿತ್ಯ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಸರ್ವೋತ್ತಮ ಮೌಲ್ಯಗಳನ್ನು ಅಳವಡಿಸಿ ಸಂವಿಧಾನಕ್ಕೆ ಪ್ರಜ್ವಲ ಹೊಳಪು ನೀಡಿದ ದಿನವಾದ ಇಂದು ದೇಶದ ಐಕ್ಯತೆಗಾಗಿ ಬಲಿದಾನಗೈದ ಎಲ್ಲರನ್ನು …
Read More »
Laxmi News 24×7