Breaking News
Home / ಜಿಲ್ಲೆ (page 1240)

ಜಿಲ್ಲೆ

ಹಾವೇರಿ ಜಿಲ್ಲೆಯ ಹಲಗೇರಿಯಲ್ಲಿ ಪಾಪು ಅಂತ್ಯಕ್ರಿಯೆ

ಹುಬ್ಬಳ್ಳಿ/ಧಾರವಾಡ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಾರ್ಚ್ 16 ರಾತ್ರಿ 10 ಗಂಟೆ 10 ನಿಮಿಷಕ್ಕೆ ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ. ಕಡಿಮೆ ರಕ್ತದೊತ್ತಡ , ರಕ್ತಹೀನತೆ, ಬ್ರೇನ್ ಹೆಮರೈಜ್, ಶ್ವಾಸಕೋಶದ ಸೋಂಕು ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾಟೀಲ ಪುಟ್ಟಪ್ಪ ಅವರಿಗೆ ಕಿಮ್ಸ್ ನಲ್ಲಿ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »

ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ. ಮೃತ ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೊನೊ ಸೋಂಕು ತಗುಲಿದೆ. ಮೃತ ವೃದ್ಧನಿಗೆ ವೈದ್ಯರು ಆತನ ಮನೆಯಲ್ಲಿ ಚಿಕಿತ್ಸೆ ನೀಡಿದ್ದರು ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮತ್ತೆರಡು ಕೋವಿಡ್- 19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ …

Read More »

ಕೊರೊನಾ ಭೀತಿ ನಡುವೆಯೇ ಅದ್ದೂರಿ ಮದ್ವೆಯಲ್ಲಿ ಎಚ್‍ಡಿಡಿ ಭಾಗಿ:ಸಿಎಂ ಆದೇಶಕ್ಕೆ ಕ್ಯಾರೇ ಎನ್ನದ ಜೆಡಿಎಸ್ ಜಿಲ್ಲಾಧ್ಯಕ್ಷ

ಚಿತ್ರದುರ್ಗ: ಸ್ವತಃ ತಾವೇ ಆದೇಶ ಹೊರಡಿಸಿ ಇಂದು ಬೆಳಗಾವಿಯಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಂಡರೆ, ಇತ್ತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ತಮ್ಮ ಪಕ್ಷದ ಜಿಲ್ಲಾಧ್ಯಕ್ಷನ ಮಗನ ಮದುವೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ರಾಜ್ಯಾದ್ಯಂತ ಹಬ್ಬ ಹರಿದಿನಗಳು ಹಾಗೂ ಮದುವೆ, ಸಮಾರಂಭಗಳು ಸೇರಿದಂತೆ ಜಾತ್ರೆಯನ್ನು ಸಹ ನಡೆಸದಂತೆ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಅದ್ದೂರಿಯಾಗಿ ಸಾವಿರಾರು ಜನರನ್ನು …

Read More »

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಗದಗನಲ್ಲಿ ಮಾಸ್ಕ್ ಗಳನ್ನ ವಿತರಣೆ ಮಾಡಲಾಗುತ್ತಿದೆ.

ಗದಗ: ಡೆಡ್ಲಿ ಕೊರೊನಾ ವೈರಸ್ ಎಲ್ಲಡೆ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ಜನ ಭಯಭೀತರಾಗಿದ್ದಾರೆ. ಅದರಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಗದಗನಲ್ಲಿ ಮಾಸ್ಕ್ ಗಳನ್ನ ವಿತರಣೆ ಮಾಡಲಾಗುತ್ತಿದೆ. ಕೆಲವು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಒಟ್ಟಾಗಿ ಪರೀಕ್ಷೆ ನಡೆಯುವ ಕಾಲೇಜ್‍ಗಳಿಗೆ ತೆರಳಿ ಮಾಸ್ಕ್ ಹಂಚಿದರು. ಪರೀಕ್ಷಾರ್ಥಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು ಪರೀಕ್ಷಾ ಕೊಠಡಿಗಳಿಗೆ ಹೋದರು. ನಗರದ ಸರ್ಕಾರಿ ಹಾಗೂ ಖಾಸಗಿ ಕಾಲೇಜಿನಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಹಂಚಿಕೆ …

Read More »

ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಶ್ರೀಮತಿ ಮಂಜುಳ NV:………

ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಶ್ರೀಮತಿ ಮಂಜುಳ NV ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೆಹರು ಯುವ ಕೇಂದ್ರ (ಭಾರತ ಸರ್ಕಾರ )ಮತ್ತು ಸುವರ್ಣ ಚಾರಿಟಬಲ್ ಟ್ರಸ್ಟ್ (ರಿ) ವತಿಯಿಂದ ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗಿದೆ . ಈ ಪ್ರಶಸ್ತಿ ನ ಮಾಜಿ ಕೇಂದ್ರ ಸಚಿವರಾದ ಶ್ರೀ ಕೆಎಚ್ ಮುನಿಯಪ್ಪ ಅವರು ಮತ್ತು ನೆಹರು ಯುವ ಕೇಂದ್ರದ ಅಧ್ಯಕ್ಷರು ಪ್ರಶಸ್ತಿಯನ್ನು ನೀಡಿದರು . ಶ್ರೀಮತಿ …

Read More »

ಗದಗದಲ್ಲಿ ಮೂರುವರೆ ವರ್ಷದ ಕಂದಮ್ಮನಿಗೆ ಕೊರೊನಾ ಸೋಂಕಿರುವ ಶಂಕೆ…….,

ಗದಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕಿತ ಪ್ರಕರಣ ವರಿದಿಯಾಗಿದ್ದು, ಲಂಡನ್‍ನಿಂದ ಗದಗಕ್ಕೆ ಬಂದ ಮೂರುವರೆ ವರ್ಷದ ಮಗುವಿಗೆ ಸೋಂಕು ತಟ್ಟಿರುವ ಶಂಕೆ ವ್ಯಕ್ತವಾಗಿದೆ. ಲಂಡನ್‍ನಿಂದ ಜಿಲ್ಲೆಗೆ ಬಂದಿದ್ದ ಕುಟುಂಬಕ್ಕೆ ಕೊರೊನಾ ಸೋಂಕಿರುವ ಶಂಕೆ ವ್ಯಕ್ತವಾಗಿದೆ. ಸೋಂಕು ಶಂಕಿತ ವ್ಯಕ್ತಿಗಳನ್ನ ಗದಗ ಜಿಮ್ಸ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಮೂಲದ ಕುಟುಂಬ ಲಂಡನ್‍ನಲ್ಲಿ ನೆಲೆಸಿತ್ತು. ಆದರೆ ತಂದೆ, ತಾಯಿ ಮಗುವಿನೊಂದಿಗೆ ಮಾರ್ಚ್ 9ರಂದು …

Read More »

ಕೊರೊನಾ ನಿವಾರಣೆಗೆ ಹೊಳೆನರಸೀಪುರದ ಕೋಟೆ ಮಾರಮ್ಮನ ಮೊರೆ ಹೋದ ಭಕ್ತರು

ಹಾಸನ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ದೇವರ ಮೊರೆಹೋಗಿ, ಲಲಿತ ಸಹಸ್ರನಾಮ ಹೋಮವನ್ನು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಳೆನರಸೀಪುರದ ಕೋಟೆ ಮಾರಮ್ಮ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕೋಟೆ ಮಾರಮ್ಮ ದೇವಾಲಯಕ್ಕೆ 400 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಈ ಹಿಂದೆ ದಡಾರ, ಪ್ಲೇಗ್ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡಿದಾಗ ಈ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತಂತೆ. ಈ ನಂಬಿಕೆ ನೂರಾರು ವರ್ಷಗಳಿಂದ ನಡೆದು ಬಂದಿದ್ದು, ದೇವರಿಗೆ ಪೂಜೆ ಸಲ್ಲಿಸಿದಾಗಲೆಲ್ಲಾ …

Read More »

ರಾಯರ ಸನ್ನಿಧಿ ಮಂತ್ರಾಲಯದಲ್ಲಿ ನವರಸನಾಯಕ ಜಗ್ಗೇಶ್ ಇಂದು ತಮ್ಮ 57ನೇ ಹುಟ್ಟುಹಬ್ಬ ಆಚರಿಸಿಕೊಂಡರು.

ರಾಯಚೂರು: ರಾಯರ ಸನ್ನಿಧಿ ಮಂತ್ರಾಲಯದಲ್ಲಿ ನವರಸನಾಯಕ ಜಗ್ಗೇಶ್ ಇಂದು ತಮ್ಮ 57ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಪ್ರತಿ ವರ್ಷದಂತೆ ಹುಟ್ಟುಹಬ್ಬದ ದಿನ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಜಗ್ಗೇಶ್ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಕೊರೊನಾ ಇದು ಮಾನವ ನಿರ್ಮಿತ ವೈರಾಣು. ಅಮೆರಿಕ, ರಷ್ಯಾ ಹಾಗೂ ಚೀನಾ ನಂಬರ್ ಒನ್ ಸ್ಥಾನಕ್ಕಾಗಿ ನಡೆದಿರುವ ಬಯೋಲಾಜಿಕಲ್ ವಾರ್ ಇದು. ಪ್ರಕೃತಿ ಆಗಾಗ ಇಂತಹ ರೋಗಗಳಿಂದ ಮಾನವನಿಗೆ …

Read More »

ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿ……:

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿಯಾಗಿದೆ. ಕರ್ನಾಟಕದಲ್ಲಿ ಕೊರೊನಾ ಹೈ ಅಲರ್ಟ್ ಇರುವುದರಿಂದ ಅದ್ಧೂರಿ ರಥೋತ್ಸವ ನಡೆಸದೇ ಇರಲು ದೇವಸ್ಥಾನ ತೀರ್ಮಾನಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಮೂಕಾಂಬಿಕೆಯ ಕ್ಷೇತ್ರ ದಕ್ಷಿಣ ಭಾರತದ ದೇವಿ ದೇವಸ್ಥಾನಗಳಲ್ಲಿ ಬಹಳ ಪ್ರಸಿದ್ಧಿ ಕ್ಷೇತ್ರ. ಮೂಕಾಂಬಿಕೆಯ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಮಂದಿ ಸ್ಥಳೀಯ, ರಾಜ್ಯದ ಬೇರೆ ಬೇರೆ ಭಾಗದ ಮತ್ತು ಹೊರ ರಾಜ್ಯದ ಭಕ್ತರು ಸೇರುತ್ತಾರೆ. ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ …

Read More »

ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಶಂಕೆ……………..?

ಉಡುಪಿ/ಮಂಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಶಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ. ಗರ್ಭಿಣಿಯನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಮೂರು ದಿನಗಳ ಹಿಂದೆ ದುಬೈನಿಂದ ಬಂದಿದ್ದರು. ಕೆಮ್ಮು, ನೆಗಡಿ ಮತ್ತು ಶೀತ ಇದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಶೇಷ ವಾರ್ಡ್ ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ಲ್ಯಾಬ್‍ಗೆ ಗರ್ಭಿಣಿಯ ಗಂಟಲಿನ ದ್ರವ ರವಾನೆ ಮಾಡಲಾಗಿದೆ. …

Read More »