Breaking News
Home / ಜಿಲ್ಲೆ (page 1250)

ಜಿಲ್ಲೆ

ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಗದ್ದಲ

ಬೆಂಗಳೂರು,ಮಾ.11- ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ಗದ್ದಲ ವಿಧಾನಸಭೆಯಲ್ಲಿ ಮುಂದುವರೆದಿದ್ದು, ಕೋಲಾಹಲದ ವಾತಾವರಣ ನಿರ್ಮಿಸಿತು.  ಒಂದು ಹಂತದಲ್ಲಿ ವಿರೋಧ ಪಕ್ಷದವರು ಸಮಾಧಾನಗೊಂಡು ಕಲಾಪಕ್ಕೆ ಸಹಕರಿಸಲು ಮುಂದಾದರೂ ಆಡಳಿತ ಪಕ್ಷದ ಶಾಸಕರು ರೊಚ್ಚಿಗೆದ್ದಿದ್ದರಿಂದ 15 ನಿಮಿಷ ಸದನ ಮುಂದೂಡಬೇಕಾದ ಅನಿವಾರ್ಯತೆ ಎದುರಾಯಿತು. ಇಂದು ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಕೆ.ಎಸ್.ಈಶ್ವರಪ್ಪ ಇಬ್ಬರೂ ಏಕಕಾಲಕ್ಕೆ ಎದ್ದು ನಿಂತು ನಿನ್ನೆಯ ಘಟನೆಯ …

Read More »

ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. : ಸಿ.ಟಿ.ರವಿ

ಬೆಂಗಳೂರು, ಮಾ.11- ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ವ್ಯವಸ್ಥೆಯನ್ನು ಬೆತ್ತಲು ಮಾಡಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಪರಿಷತ್‍ನಲ್ಲಿ ಹೇಳಿದರು. ಸಂವಿಧಾನದ ಚರ್ಚೆ ಕುರಿತಂತೆ ಜೆಡಿಎಸ್‍ನ ಶ್ರೀಕಂಠೇಗೌಡ ಅವರು ಮಾತನಾಡುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಉಪಚುನಾವಣೆಯಲ್ಲಿ ಹಣ, ಹೆಂಡ, ಒಂದೊಂದು ಮತಕ್ಕೆ 500, …

Read More »

ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ

ಬೆಂಗಳೂರು:  ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ.   

Read More »

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ

ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ, ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ …

Read More »

ಕಲಬುರಗಿ :ಕೊರೋನಾ ವೈರಸ್ ಗೆ ಶಂಕಿತ ವ್ಯಕ್ತಿ ಸಾವು

ಕಲಬುರಗಿ: COVID-19 ಕೊರೊನಾ ವೈರಸ್ ಗೆ ಕಲಬುರಗಿಯಲ್ಲಿ ಮಹ್ಮದ ಹುಸೇನ್ ಸಿದ್ದಿಕಿ ವಯಸ್ಸು 76 ಶoಕಿತ ಮರಣಹೊಂದಿರುವ ವ್ಯಕ್ತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕಲಬುರಗಿಯಲ್ಲಿ ಹೇಳಿದರು ಆರೋಗ್ಯ ಇಲಾಖೆಯಿಂದ ಮಾಹಿತಿ ಬಂದಿದೆ ಅಂತ್ಯಕ್ರಿಯೆ ಮುಗಿಯುವರೆಗು ಕಲಬುರಗಿ ತಾಲೂಕಾ ಆರೋಗ್ಯ ಅಧಿಕಾರಿಗಳು ಹಾಗೂ ತಂಡ ಉಸ್ತುವಾರಿ ವಹಿಸಿಕೊಂಡು ಎಲ್ಲಾ ತರಹದ ಮುಂಜಾಗ್ರತೆ ಹಾಗೂ ನಿಯಂತ್ರಣ ಕೈಗೊಳ್ಳಬೇಕು ಎಂದು ಆದೇಶಿಸಲಾಗಿದೆ

Read More »

ಸಿಟಿ ಬಸ್ ನಿಲ್ದಾಣದ ಸಮೀಪ ಸಂಚಾರಿ ಪೊಲೀಸ್ ಪೇದೆಯ ದರ್ಪ

ಮೈಸೂರು: ಸಿಟಿ ಬಸ್ ನಿಲ್ದಾಣದ ಸಮೀಪ ಸಂಚಾರಿ ಪೊಲೀಸ್ ಪೇದೆ ದರ್ಪ ತೋರಿಸಿದ ಘಟನೆ ನಡೆದಿದ್ದು, ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತು ಪೊಲೀಸರ ಎದುರೇ ಸೀಟ್ ಪಿಕಪ್ ಮಾಡೋ ಖಾಸಗಿ ಬಸ್ ಗಳಿಗೆ ತಡೆ ಹಾಕದೆ ಸಂಚಾರಿ ಪೊಲೀಸ್, ಪ್ರಶ್ನಿಸಿದ ಸ್ಥಳೀಯರ ಮೇಲೆಯೇ ಆವಾಜ್ ಹಾಕಿದ್ದಾರೆ. ಖಾಸಗಿ ಬಸ್ ಗಳಿಂದ ಹಣ ಪಡೆದು ನೋ ಪಾರ್ಕಿಂಗ್ ನಲ್ಲಿ ಸೀಟ್ ಪಿಕಪ್ …

Read More »

ಮಹಾತ್ಮಾ ಗಾಂಧಿ ಅಧಿವೇಶನ ನಡೆಸಿದ ನೆಲದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆಗೆ ಮಹೂರ್ತ ಫಿಕ್ಸ…..!!!

ಬೆಳಗಾವಿ – ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಪಕ್ಷ ನಿಷ್ಠೆ,ಕಾಳಜಿ,ಇಚ್ಛಾಶಕ್ತಿಯ ಕಾರಣದಿಂದಾಗಿ ಬೆಳಗಾವಿಯಲ್ಲಿ ಹಲವಾರು ದಶಕಗಳ ನಂತರ ಕಾಂಗ್ರೆಸ್ ಕಚೇರಿ ಕೊನೆಗೂ ನಿರ್ಮಾಣವಾಗಿದೆ. ಮಾರ್ಚ್ ಹದಿನಾಲ್ಕರಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳಗಾವಿಗೆ ಬರುತ್ತಿದ್ದು ಬೆಳಿಗ್ಗೆ 11-00 ಘಂಟೆಗೆ ಉದ್ಘಾಟನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಂಬಲರ್ಹ ಮೂಲಗಳು ತಿಳಿಸಿವೆ . ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ …

Read More »

ಟಗರು ಸಾಕಿ ಲಕ್ಷ ಲಕ್ಷ ಸಂಪಾದಿಸುವ ದಳವಾಯಿ

ಮೂಡಲಗಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅವರಾದಿ ಗ್ರಾಮದ ರೈತ ಲಕ್ಷ್ಮಣ ದಳವಾಯಿ ಅವರು ಟಗರು ಸಾಕಾಣಿಕೆಯಿಂದ ಯಶಸ್ಸು ಕಾಣುತ್ತಿದ್ದಾರೆ. ಮೂರು ಎಕರೆ ಜಮೀನು ಹೊಂದಿರುವ ಅವರು ಬಹಳಷ್ಟು ವರ್ಷಗಳಿಂದ ಕಬ್ಬು ಬೆಳೆಯುತ್ತಿದ್ದರು. ಕಬ್ಬಿಗೆ ಸರಿಯಾದ ದರ ದೊರೆಯದೆ ಕಷ್ಟಪಟ್ಟಿದ್ದರು. ಹೀಗಾಗಿ, ಕೃಷಿಯೊಂದಿಗೆ ಟಗರು ಸಾಕಾಣಿಕೆ ಕನಸು ಕಂಡು 8 ವರ್ಷಗಳ ಹಿಂದೆ ಕೇವಲ 3 ಟಗರು ತಂದು ಸಾಕಲು ಶುರು ಮಾಡಿದರು. ಕ್ರಮೇಣ ಹೆಚ್ಚಿಸುತ್ತಾ ಸದ್ಯ ಅಂದಾಜು 60ರಿಂದ 80 …

Read More »

ಜಿಲ್ಲಾಸ್ಪತ್ರೆ ಆವರಣದಲ್ಲೆ ಹೆರಿಗೆ: ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ನಿರ್ಲಕ್ಷ್ಯ ಆರೋಪ

ಚಾಮರಾಜನಗರ: ಹೆರಿಗಾಗಿ ಜಿಲ್ಲಾಸ್ಪತ್ರೆಗೆ ಆಗಮಿಸಿದ ಬಿಳಿಗಿರಿ ರಂಗನಬೆಟ್ಟದ ಸೋಲಿಗರ ಪೋಡಿನ ಮಹಿಳೆಯೊಬ್ಬರನ್ನು ಜಿಲ್ಲಾಸ್ಪತ್ರೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗದೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪ ಎದುರಾಗಿದೆ. ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದೆದುರೇ ಮಹಿಳೆಯರು ಸೀರೆಯನ್ನು ಮರೆಮಾಡಿ ಹೆರಿಗೆ ಮಾಡಿಸಿದ ಘಟನೆ ಜರುಗಿದೆ. ಹೆರಿಗಾಗಿ ಸೋಲಿಗ ಮಹಿಳೆಯನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಕರೆತಂದ ಗರ್ಭಿಣಿಯನ್ನು ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು …

Read More »

ಸಿಂಧ್ಯಾ ಬಿಜೆಪಿಗೆ ಸೇರ್ಪಡೆಯಾಗ್ತಾರೆ ಅನ್ನೋ ಮಾತುಗಳು ಜೋರಾಗಿರುವ ಹೊತ್ತಲ್ಲೇ ರಾಜೀನಾಮೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್​​ ಮುಖಂಡ, ರಾಹುಲ್ ಗಾಂಧಿ ಅತ್ಯಾಪ್ತ ಜ್ಯೋತಿರಾದಿತ್ಯ ಸಿಂಧ್ಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಬೆನ್ನಲ್ಲೇ ಸಿಂಧ್ಯಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಹಾಗೂ ದೇಶದ ಜನರ ಸೇವೆ ಮಾಡಬೇಕೆಂಬ ನನ್ನ ಧ್ಯೇಯ ಇನ್ಮುಂದೆಯೂ ಹಾಗೇ ಮುಂದುವರೆಯಲಿದೆ. ಆದ್ರೆ ಈ ಪಕ್ಷದಲ್ಲಿ ಇದ್ದುಕೊಂಡು ಅದನ್ನು ಮಾಡಲು ಸಾಧ್ಯವಿಲ್ಲ ಅಂತ ನನಗೆ ಅನ್ನಿಸುತ್ತಿದೆ. ಸದ್ಯ ನನಗೆ ಹೊಸ ಆರಂಭಕ್ಕೆ ಇದು …

Read More »