ಹಾಸನ: ಜೆಡಿಎಸ್ ಭದ್ರಕೋಟೆಯಲ್ಲಿ ಪಕ್ಷವನ್ನ ಮತ್ತಷ್ಟು ಭದ್ರಗೊಳಿಸಲು ದಳಪತಿಗಳು ಸಜ್ಜಾಗಿದ್ದಾರೆ. ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಖುದ್ದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರೇ ಅಖಾಡಕ್ಕೆ ಇಳಿದಿದ್ದು, ಇಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಜೆಡಿಎಸ್ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್ (Congress) ಹಿಡಿತ ಸಾಧಿಸುತ್ತಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಯ್ಕೆಯಾದ ನಂತರ ನಡೆದ ಕೆಲವು ಘಟನೆಗಳಿಂದ ಜೆಡಿಎಸ್ ಕೊಂಚ ಸೊರಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡು ಬೃಹತ್ ಸಮಾವೇಶಗಳನ್ನ ನಡೆಸಿದೆ. …
Read More »ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!
ಚಿಕ್ಕಮಗಳೂರು: ಪ್ರೇಮದೇಶ, ಭಾಷೆ, ಗಡಿ ಎಲ್ಲದ್ದನ್ನೂ ಮೀರಿದ್ದು.. ಅದಕ್ಕೆ ಸಾಕ್ಷಿ ಎಂಬಂತೆ ನಗರದ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಯುವಕ ರೂಪಕ್ ಚೀನಾ ಮೂಲದ ಜೇಡ್, ಕುಟುಂಬಸ್ಥರ ಸಮ್ಮುಖದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದಾರೆ. ಯುವತಿಯ ತಂದೆ – ತಾಯಿಯೇ ಚೀನಾದಿಂದ ಮಗಳನ್ನು ಕರೆತಂದು, ಯುವಕನಿಗೆ ಧಾರೆ ಎರೆದಿದ್ದಾರೆ. ಈ ವೇಳೆ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ರೀತಿ ಎಂದು …
Read More »ಗೋ ಬ್ಯಾಕ್ ಗವರ್ನರ್ ಅನ್ನೋದು ರಾಜಕೀಯ ನಾಟಕ – ಹೆಚ್‌ಡಿಕೆ ಕಿಡಿ
ಮಂಡ್ಯ: ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್, ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ರಾಜ್ಯಪಾಲರುಗಳ ವಿಷಯದಲ್ಲಿ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಒಮ್ಮೆ ನೆನಪು ಮಾಡಿಕೊಂಡರೆ ಅವರ ಬಣ್ಣ ಏನೆಂದು ಗೊತ್ತಾಗುತ್ತದೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸಮಯ …
Read More »ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳು, ರಾಷ್ಟ್ರೀಯ ಹಬ್ಬಗಳ ಆಚರಣೆ, ಶಾಲಾ-ಕಾಲೇಜುಗಳ ಇತರೇ ಸಾಂಸ್ಕೃತಿಕ, ಆಡಳಿತಾತ್ಮಕ ಕಾರ್ಯಕ್ರಮ ಆಯೋಜನೆ ವೇಳೆ ವಿದ್ಯಾರ್ಥಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕಾ ಶಿಕ್ಷಣ ಇಲಾಖೆ 13 ಅಂಶಗಳ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಈ ಮಾರ್ಗಸೂಚಿಯನ್ನು ಎಲ್ಲಾ ಶಾಲಾ-ಕಾಲೇಜುಗಳು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಮಾರ್ಗಸೂಚಿಯಲ್ಲಿ ಏನಿದೆ? 1. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಧ್ವಜಾರೋಹಣ ಕಂಬದ ಬಳಿ ವಿದ್ಯುತ್ ತಂತಿಗಳು ಹಾದುಹೋಗದಂತೆ ಮತ್ತು ಕಂಬವು ವಿದ್ಯುತ್ ತಂತಿಗಳನ್ನು ಸಂಪರ್ಕಿಸದಂತೆ …
Read More »ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR
ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ …
Read More »ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ್ ಖಂಡ್ರೆ ಸೂಚನೆ
ಬೆಂಗಳೂರು: ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡಿನ ಬೆಂಕಿಗೆ ಅರಣ್ಯ ಸಂಪತ್ತು ನಾಶವಾಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ಡ್ರೋನ್ ಸೌಲಭ್ಯ ಇರುವ ಕಡೆ ಕ್ಯಾಮೆರಾ …
Read More »KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ
ಬೆಳಗಾವಿ: ಸುದೀರ್ಘ 40 ವರ್ಷಗಳ ಕಾರ್ಯಾಧ್ಯಕ್ಷರಾಗಿ ಕರ್ನಾಟಕ ಲಿಂಗಾಯತ ಎಜುಕೇಶನ್ ಸಂಸ್ಥೆಯ ನೊಗ ಹೊತ್ತಿದ್ದ ಡಾ. ಪ್ರಭಾಕರ ಕೋರೆ ಈಗ ಆ ಸ್ಥಾನದಿಂದ ಮುಕ್ತರಾಗಿದ್ದಾರೆ. ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಗೆ ಸಲ್ಲಿಸಿದ್ದ ನಾಮಪತ್ರವನ್ನು ದಿಢೀರ್ ಹಿಂದಕ್ಕೆ ಪಡೆದು ಅಚ್ಚರಿ ಮೂಡಿಸಿದ್ದಾರೆ. ನಿರ್ದೇಶಕ (Director) ಹುದ್ದೆಗೆ ಮೊದಲು ನಾಮಪತ್ರವನ್ನು ಪ್ರಭಾಕರ ಕೋರೆ ಸಲ್ಲಿಸಿದ್ದರು. ಆದರೆ ಅವರು ನಾಮಪತ್ರ ವಾಪಸ್ ಪಡೆಯುವ ಮೂಲಕ ಅಚ್ಚರಿಯ ನಿರ್ಧಾರವನ್ನು ಕೈಗೊಂಡಿದ್ದಾರೆ. 1984 ರಲ್ಲಿ ಕೆಎಲ್ಇ ಸಂಸ್ಥೆಯ …
Read More »ʻಅಪ್ಪ ನನಗೆ ಜೀವನ ಸಾಕಾಗಿದೆ, ಹುಡುಕ್ಬೇಡಿʼ- ಝಾಕಿಯಾಳನ್ನು ಕೊಂದು ಅವರಪ್ಪನಿಗೆ ಮೆಸೇಜ್ ಕಳ್ಸಿದ್ದ ಹಂತಕ!
ಧಾರವಾಡ: ಧಾರವಾಡ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣದಲ್ಲಿ ಬಗೆದಷ್ಟು ಹೊಸಹೊಸ ವಿಚಾರಗಳು ಬಯಲಾಗುತ್ತಿವೆ. ಈ ಕೊಲೆ ಮಾಡಿದ್ದ ಸಾಬೀರ್ ಆಕೆಯ ಮೊಬೈಲ್‌ನಿಂದ ಆಕೆಯ ತಂದೆಗೆ, ʻನನಗೆ ಜೀವನ ಸಾಕಾಗಿದೆ. ನಾನು ಮನೆಗೆ ಬರೋದಿಲ್ಲ. ನನ್ನನ್ನು ಹುಡುಕಬೇಡಿʼ ಎಂದು ಮೆಸೇಜ್ ಮಾಡಿದ್ದ ಎಂಬ ವಿಚಾರ ತಿಳಿದುಬಂದಿದೆ. ಝಾಕಿಯಾ ಹಾಗೂ ಸಾಬೀರ್ ಇಬ್ಬರೂ ಕಳೆದ ಮೂರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಷಯ ಇಬ್ಬರ ಮನೆಯಲ್ಲೂ ಗೊತ್ತಾಗಿ, …
Read More »ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ
ಕಾರವಾರ: ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧ ವಿತರಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದ ಪಿಕ್ಳೆ ನರ್ಸಿಂಗ್ ಹೋಂನ ಔಷಧಿ ವಿತರಕ ರಾಜು ಪಿಕ್ಳೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ಇರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹದಿನೈದು ದಿನದ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಆರೋಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ರಾಜು ಅವರು ಮಾನಸಿಕ ಖಿನ್ನತೆಗೆ …
Read More »ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ …
Read More »
Laxmi News 24×7