Breaking News
Home / ಜಿಲ್ಲೆ (page 1260)

ಜಿಲ್ಲೆ

ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ:ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಫೆ.22- ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ ಎಂದು ಕೇಂದ್ರ ರಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದ ಎಫ್‍ಕೆಸಿಸಿಐನಲ್ಲಿ ಭಾರತ ವೆಚ್ಚ ಲೆಕ್ಕಿಗರ ಸಂಸ್ಥೆಯ ವಾರ್ಷಿಕೋತ್ಸವ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐದು ಟ್ರಿಲಿಯನ್ ಆರ್ಥಿಕತೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕತೆಯ ಶಿಸ್ತು ತಹಬದಿಗೆ ಬರುತ್ತಿದೆ ಎಂದರು. 130 ಕೋಟಿ ಜನಸಂಖ್ಯೆ …

Read More »

ನಮ್ಮ ಪಾಲಿನ 14.3 ಟಿಎಂಸಿ ಮಹದಾಯಿ ನೀರು ಬಳಕೆಗೆ ಕ್ರಮ : ಸಿ.ಸಿ.ಪಾಟೀಲ್

ಗದಗ, ಫೆ.22- ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಅಮಿತ್ ಷಾ ಸಫಲರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.  ಮಹದಾಯಿಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸುಪ್ರೀಂಕೊರ್ಟ್ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಸರ್ಕಾರ ಸಹ ಈ ವಿಚಾರವನ್ನು ಕೇಂದ್ರದ ನಾಯಕರಿಗೆ ಮನವಿ ಮಾಡಿಕೊಟ್ಟಿತ್ತು. ಈಗ ಗೋವಾ ಮತ್ತು …

Read More »

ಒಂದೇ ಹುದ್ದೆಗೆ ಸವದಿ-ಕತ್ತಿ-ಜಾರಕಿಹೊಳಿ ಪೈಪೊಟಿ………………..

ಬೆಳಗಾವಿ, ಫೆ.22-ಪ್ರತಿಷ್ಠೆಯ ಕಣವಾಗಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್‍ಗೆ ನಡೆದ ಚುನಾವಣೆ ನಂತರ ಘಟನೆಗಳು ಮಾಸುವ ಮುನ್ನವೇ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಗೆ ಎದುರಾಗಿರುವ ಚುನಾವಣೆ ಆಡಳಿತಾರೂಢ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಒಂದೇ ಪಕ್ಷದಲ್ಲಿ ನಾಯಕರ ತೀವ್ರ ಪೈಪೋಟಿ ಹೆಚ್ಚಾಗಿದೆ. ಮಾರ್ಚ್‍ನಲ್ಲಿ …

Read More »

ಕುಮಟಳ್ಳಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ರಮೇಶ್ ಜಾರಕಿ ಹೊಳಿ

ಬೆಳಗಾವಿ, ಫೆ.22-ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಇದೇ 26ರಂದು ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಕಣಕುಂಬಿಗೂ ಭೇಟಿ ನೀಡಲಿದ್ದೇನೆ. ಗೋವಾ ಮುಖ್ಯಮಂತ್ರಿ ಬೇಕಾದರೆ ನ್ಯಾಯಾಲಯದ ಮೊರೆ ಹೋಗಲಿ. ಮಹದಾಯಿ ವಿಚಾರದಲ್ಲಿ ನಮ್ಮ ಪರ ನ್ಯಾಯ ಸಿಗುವ ವಿಶ್ವಾಸವಿದೆ. ನೀರಾವರಿ ಯೋಜನೆಯಲ್ಲಿ ಯಾವುದೇ ತಾರತಮ್ಯ ಒದಗಿಸುವುದಿಲ್ಲ. …

Read More »

ಕೂಡ್ಲಿಗಿ,ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ: ಸಾಮೂಹಿಕ ಶಿವಭಜನೆ, ಸೌಹಾಧ೯ತಾ ಜಾಗರಣೋತ್ಸವ

ಕೂಡ್ಲಿಗಿ,ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ: ಸಾಮೂಹಿಕ ಶಿವಭಜನೆ, ಸೌಹಾಧ೯ತಾ ಜಾಗರಣೋತ್ಸವಶಿವ ಭಕ್ತರು ಶಿವರಾತ್ರಿ ಜಾಗರಣೆ ಪ್ರಯುಕ್ತ ಬಹುತೇಕರು ಮನೆಯಲ್ಲಿಯೇ ಆರಾಧನೆ ಮತ್ತು ಜಾಗರಣೆ ಮಾಡಿದರೆ ಕೆಲವರು ದೇವಸ್ಥಾನಗಳಲ್ಲಿ ಸಾಮೂಹಿಕ ಶಿವಭಜನೆ ಮಾಡುವುದರೊಂದಿಗೆ ಜಾಗರಣೆ ಆರಾಧನೆ ಮಾಡಿದ್ದಾರೆ<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ದೇವಸ್ಥಾನಗಳಲ್ಲಿ ಶಿವನ ಆರಾಧನೆ ಮತ್ತು ಸಾಮೂಹಿಕ ಭಜನೆ ಮಾಡುವುದರ ಮೂಲಕ ಜಾಗರಣೆ ಆಚರಿಸಿದರು.ಪಟ್ಟಣದ ಬಾಪೂಜಿನಗರದ ಶ್ರೀ ಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕೂಡ್ಲಿಗಿ ಹಿರೇ ಮಠ ಚಿದಾನಂದ ಸ್ವಾಮಿಗಳು ಮತ್ತು …

Read More »

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ

ರಾಯಚೂರು: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಗಮನ ಸೆಳೆದಿರುವ ಆಂದೋಲ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಈಗ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್​ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್​ಗೆ ಆದ ಗತಿಯೇ ಆಗುತ್ತದೆ ಎಂದು ಸ್ವಾಮೀಜಿ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ ಇನ್ನೂ 14-15 ವರ್ಷ ದಾಟದವರು ಕೂಡ ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶ್​ಗೆ ಆದ …

Read More »

ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆ

ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆಸ್ವತಂತ್ರ ಉದ್ಯಾನವನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಎಂಬ ಯುವತಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಎಬಿವಿಪಿ ಸಂಘಟನಾಕಾರರು ಪ್ರತಿಭಟಿಸಿದರು ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ದೇಶ ವಿರೋಧಿ ಚಟುವಟಿಕೆ ನಡೆದ ಘಟನೆ ಮಾಸುವ ಮುನ್ನವೇ ಮತ್ತೊಂದು ದೇಶದ್ರೋಹ ಚಟುವಟಿಕೆ ನಡೆಸಿರುವುದು ಖಂಡನೀಯ ದೇಶದ ಅನ್ನ ನೀರು …

Read More »

ಹೊತ್ತಿ ಉರಿಯಿತು ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿ

ವಿಜಯಪುರ, ಫೆ.22- ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಬೆಳ್ಳಂ ಬೆಳಗ್ಗೆ ನಡೆದಿದೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿಪೊಟ್ಟಣಗಳನ್ನು ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕ ಹಾಗೂ ಕ್ಲೀನರ್ ಎಚ್ಚೆತ್ತುಕೊಂಡು ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಪೊಟ್ಟಣದ ಬಾಕ್ಸ್‍ಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆಗೆ ನೋಡು ನೋಡುತ್ತಿದ್ದಂತೆಯೇ ಲಾರಿ ಸಂಪೂರ್ಣವಾಗಿ …

Read More »

ಬೆಳಗಾವಿಯಲ್ಲಿ 23.88 ಲಕ್ಷ ರೂ. ನಕಲಿ ನೋಟು ವಶ,

    ಬೆಳಗಾವಿ, ಫೆ.22- ನಕಲಿ ನೋಟು ಸರಬರಾಜು ಮಾಡುತ್ತಿದ್ದ ಐವರು ಅಂತಾರಾಜ್ಯ ಕಳ್ಳರನ್ನು ಬೆಳಗಾವಿ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್ ಬಳಿ ಎರಡು ಪ್ರತ್ಯೇಕ ವಾಹನಗಳಲ್ಲಿ 23.88 ಲಕ್ಷ ರೂ. ನಕಲಿ ಮತ್ತು 12 ಸಾವಿರ ರೂ. ಮೌಲ್ಯದ ಅಸಲಿ ನೋಟು ಸಾಗಿಸುವ ಸಂದರ್ಭದಲ್ಲಿ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಂಕೇಶ್ವರ ಠಾಣೆಯ ಪೊಲೀಸರು ಐವರು ಅಂತಾರಾಜ್ಯ ಕಳ್ಳರನ್ನು …

Read More »

ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು:ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ

ರಾಮನಗರ: ಪಾಕ್ ಪರ ಘೋಷಣೆ ಕೂಗುತ್ತಿರುವುದನ್ನು ನೋಡಿ ನಿಜವಾಗಿಯೂ ನನಗೆ ಆಶ್ಚರ್ಯವಾಗುತ್ತಿದೆ. ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು ಅಂತ ಹೇಳಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮುಂದೆ ಇನ್ಯಾರು ಆ ರೀತಿ ಮಾಡಬಾರದು, ಆ ರೀತಿ ಕ್ರಮ ಕೈಗೊಂಡರೆ ಬೇರೆಯವರಿಗೂ …

Read More »