ಬೆಂಗಳೂರು, ಜೂ.4- ನಿವೃತ್ತ ಡಿಜಿಪಿ ಶಂಕರ ಬಿದರಿ ಅವರನ್ನು ರಾಜ್ಯಸಭೆ ಹಾಗೂ ವಿಧಾನ ಪರಿಷತ್‍ಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವಂತೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ದಾರೆ. ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಶಂಕರ ಬಿದರಿಯವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸುಮಾರು …
Read More »ರಾಜ್ಯಸಭೆಗೆ ಚುನಾವಣೆ : ಈವರೆಗೂ ಸಲ್ಲಿಕೆಯಾಗಿಲ್ಲ ಯಾವುದೇ ನಾಮಪತ್ರ …………
ಬೆಂಗಳೂರು,ಜೂ.4-ರಾಜ್ಯ ವಿಧಾನಸಬೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಈವರೆಗೂ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. 10 ಜನ ಶಾಸಕರ ಸಹಿಯೊಂದಿಗೆ ಮೀಸಲಾತಿ ವ್ಯಾಪ್ತಿಯಡಿ ಬರುವ ಅಭ್ಯರ್ಥಿಗಳು 5 ಸಾವಿರ, ಸಾಮಾನ್ಯ ವರ್ಗದ ಅಭ್ಯರ್ಥಿಗಳು 10 ಸಾವಿರ ರೂ. ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸಬಹುದು. ಆದರೆ ಈವರೆಗೂ ಯಾವ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ. ಪ್ರತಿಯೊಬ್ಬ ಅಭ್ಯರ್ಥಿಯೂ ನಾಲ್ಕು 4 ನಾಮಪತ್ರಗಳನ್ನು …
Read More »ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲಸಿದ್ದರಾಮಯ್ಯ
ಬೆಂಗಳೂರು,ಜೂ.4- ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಶಾಲೆಗಳನ್ನು ಜುಲೈ ತಿಂಗಳಿನಲ್ಲಿ ಪುನರಾರಂಭಿಸುವ ಪ್ರಸ್ತಾಪವನ್ನು ಮುಂದಿಟ್ಟಿದೆ. ಇದರಿಂದ ಪೋಷಕರು ಆತಂಕಕ್ಕೀಡಾಗಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಸರ್ಕಾರ ಗಮನಿಸಬೇಕು ಎಂದು ಹೇಳಿದ್ದಾರೆಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ …
Read More »ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ : ಸುರೇಶ್ ಕುಮಾರ್
ಬೆಂಗಳೂರು: ಸದ್ಯಕ್ಕೆ ನಾವು ಶಾಲೆ ಆರಂಭಿಸುವುದಿಲ್ಲ. ಪೋಷಕರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್‍ಬುಕ್‍ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ನಾವು ರಾಜ್ಯದಲ್ಲಿರುವ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು ಇದೇ ಜೂನ್ …
Read More »ರೈತರ ಹಣ ಏರ್‍ಟೆಲ್ ಅಕೌಂಟ್‌ಗೆ..! ಸರ್ಕಾರದ ಮಹಾ ಎಡವಟ್ಟು
ಬೆಂಗಳೂರು,ಜೂ.4- ಕೃಷಿ ಇಲಾಖೆಯ ಎಡವಟ್ಟಿನಿಂದಾಗಿ ರೈತರ ಖಾತೆಗೆ ಹೋಗಬೇಕಾಗಿದ್ದ ಹಣ ಏರ್‍ಟೆಲ್ ಪೇಮೆಂಟ್ ಬ್ಯಾಂಕ್‍ಗೆ ವರ್ಗಾವಣೆಯಾಗಿರುವ ಪ್ರಸಂಗ ನಡೆದಿದೆ. ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೇ ಖುದ್ದು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಜೊತೆಗೆ ಏರ್‍ಟೆಲ್ ಕಂಪನಿ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಆಧುನಿಕ ತಂತ್ರಜ್ಞನದಲ್ಲಿ ಸ್ವಲ್ಪ ಯಾಮಾರಿದರೂ ಏನೆಲ್ಲ ಎಡವಟ್ಟುಗಳಾಗುತ್ತವೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ಏರ್‍ಟೆಲ್ ಕಂಪನಿ ಸಿಮ್ ಮಾರಾಟ ಮಾಡಬೇಕಾದರೆ ಆಧಾರ್ ಸಂಖ್ಯೆ ಪಡೆದುಕೊಳ್ಳುತ್ತದೆ. …
Read More »ಛತ್ರಪತಿ ಶಿವಾಜಿ ಸ್ಟೈಲಲ್ಲಿ ಮೀಸೆ-ಗಡ್ಡ ಬೆಳೆಸಿ ಮೋದಿ ಮಿಂಚಿಂಗ್..!
ನವದೆಹಲಿ, ಜೂ.4-ಅತ್ಯಂತ ಸಂಕಷ್ಟ ಸಂದರ್ಭಗಳಲ್ಲಿ ಅತ್ಯಂತ ಜಣ್ಮೆ ಮತ್ತು ದೂರದೃಷ್ಟಿಯಿಂದ ಬಗೆಹರಿಸುವ ಮಹಾ ಚತುರ ಪ್ರಧಾನಿ ಮೋದಿ ಈಗ ಲೋಕಪ್ರಿಯ ನಾಯಕ. ವಿಶ್ವದ ನಂಬರ್ 1 ಖ್ಯಾತಿಯ ಅಗ್ರಮಾನ್ಯ ಧುರೀಣರಾಗಿದ್ದಾರೆ. ಪಾಕಿಸ್ತಾನ ಮತ್ತು ಚೀನಾದಂಥ ಕುತಂತ್ರಿ ದೇಶಗಳು ಬಾಲ ಮುದುರಿಕೊಳ್ಳುವಂತೆ ಮಾಡಿರುವ ನಮೋ ಈಗ ವಿಶ್ವದ ಅತ್ಯಂತ ಪ್ರಬಲ ದೇಶಗಳ ಪರಮಾಪ್ತ ಮಿತ್ರ ಜಗತಿಕ ವೇದಿಕೆಗಳಲ್ಲಿ ಮೋದಿ ಇರಲೇಬೇಕೆಂಬಷ್ಟು ಮಟ್ಟಿಗೆ ಅವರ ಲೋಕವಿಖ್ಯಾತಿ ಉತ್ತುಂಗಕ್ಕೇರಿದೆ. ಇದು ನರೇಂದ್ರ ಮೋದಿ ಅವರ …
Read More »ರಾಜ್ಯಸಭೆ, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಜೆಡಿಎಸ್ ಶಾಸಕಾಂಗ ಸಭೆ
ಬೆಂಗಳೂರು, ಜೂ.4-ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಸಭೆ ನಡೆಯಲಿದೆ. ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದು, ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ …
Read More »ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ…ಒತ್ತಾಯ
ಬೆಳಗಾವಿ- ಒಂದು ವಾರದ ಹಿಂದೆ ನೂರಾರು ಜನ ನೇಕಾರ ಕೂಲಿ ಕಾರ್ಮಿಕರು,ಏಕಾ ಏಕಿ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಆಹಾರ ಸಾಮುಗ್ರಿಗಳ ಕಿಟ್ ಕೊಡುವಂತೆ ಒತ್ತಾಯಿಸಿದ್ದರು. ಸುರೇಶ್ ಅಂಗಡಿ ಅವರು ಆಹಾರ ಸಾಮುಗ್ರಿಗಳ ಕಿಟ್ ಕೊಡುತ್ತಿದ್ದಾರೆ ಎಂಬ ಸುಳ್ಳು ವದಂತಿ ಹರಡಿಸಿದ ಹಿನ್ನಲೆಯಲ್ಲಿ ನೂರಾರು ಜನ ಕಾರ್ಮಿಕರು,ಕಾಡಾ ಕಚೇರಿಯಲ್ಲಿನ ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ …
Read More »ದೇಶದಲ್ಲಿ ಒಂದೇ ದಿನ ಗರಿಷ್ಠ 9,304 ಮಂದಿಗೆ ಕೊರೊನಾ- 260 ಜನ ಸಾವು
ನವದೆಹಲಿ: ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಗರಿಷ್ಠ 9,304 ಮಂದಿಗೆ ಸೋಂಕು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ 9,304 ಮಂದಿಗೆ ಸೋಂಕು ಪತ್ತೆಯಾದರೆ, 260 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,16,919ಕ್ಕೆ ಏರಿಕೆಯಾದರೆ, ಕೊರೊನಾಗೆ 6,075 ಮಂದಿ ಬಲಿಯಾಗಿದ್ದಾರೆ. …
Read More »ಶುಕ್ರವಾರ ಸಂಭವಿಸಲಿದೆ ಚಂದ್ರ ಗ್ರಹಣ – ವರ್ಷದ 2ನೇ ಚಂದ್ರಗ್ರಹಣ ಹೇಗಿರಲಿದೆ?
ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ …
Read More »
Laxmi News 24×7