ಬೆಳಗಾವಿ, ಮೇ 30(ಕರ್ನಾಟಕ ವಾರ್ತೆ): ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇದು ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪ್ರಕರ ಎಲ್ಲರನ್ನೂ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ …
Read More »ಸ್ಯಾಂಡಲ್ ವುಡ್ ನ ಕನಸುಗಾರ , ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು 59ನೆ ಹುಟ್ಟುಹಬ್ಬ…..
ಬೆಂಗಳೂರು, ಮೇ 30- ಸ್ಯಾಂಡಲ್ ವುಡ್ ನ ಕನಸುಗಾರ , ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು 59ನೆ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ನನ್ನ ಅಭಿಮಾನಿಗಳು ಮನೆಯ ಬಳಿ ಬರುವುದು ಬೇಡ, ಎಲ್ಲರೂ ಮನೆಯಲ್ಲೇ ಇರಿ… ಸೇಫ್ ಆಗಿ ಇರಿ… ನಿಮ್ಮ ಆರೋಗ್ಯವೂ ಮುಖ್ಯ ನಿಮ್ಮ ಪ್ರೀತಿ, ವಿಶ್ವಾಸ , ಅಭಿಮಾನ ಸದಾ ನನ್ನ ಮೇಲೆ ಹೀಗೆ ಇರಲಿ ಮುಂದಿನ ವರ್ಷ 60ನೆ ವಸಂತಕ್ಕೆ ಕಾಲಿಡುತ್ತಿದ್ದೇನೆ ಅದ್ಧೂರಿಯಾಗಿ ಆಚರಿಸೋಣ ಎಂದು …
Read More »BREAKING : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಮೇ 30- ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ ಜಗಿಯುವ ತಂಬಾಕು ಪಾನ್ ಮಸಾಲ ಉತ್ಪನ್ನಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಇಂದು ವಿಶ್ವ ತಂಬಾಕು ದಿನವಾಗಿದ್ದು, ಇದರ ಅಂಗವಾಗಿ ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ತಂಬಾಕು ಜಗಿದು ಉಗಿಯುವುದರಿಂದ ಸೋಂಕು ಹರಡುವ ಸಂಭವ ಹೆಚ್ಚಿದೆ. ಹೀಗಾಗಿ ತಂಬಾಕಿನ ಸಂಬಂಧಪಟ್ಟಂತೆ ಎಲ್ಲಾ ಉತ್ಪನ್ನಗಳನ್ನು ನಿಷೇಸಲಾಗಿದೆ ಎಂದರು. …
Read More »“ಯಡಿಯೂರಪ್ಪ ಒಪ್ಪಿದರೆ ವಿಪಕ್ಷಗಳ 22 ಶಾಸಕರ ರಾಜೀನಾಮೆ ಕೊಡಿಸುತ್ತೇನೆ”
ಬೆಂಗಳೂರು, ಮೇ 30- ಸದ್ಯಕ್ಕೆ ನಮಗೆ ಬಹುಮತವಿದೆ. ನಾವು ವಿಪಕ್ಷಗಳ ಶಾಸಕರ ರಾಜೀನಾಮೆ ಕೆಲಸಕ್ಕೆ ಕೈ ಹಾಕುವುದಿಲ್ಲ. ನಮ್ಮ ಜತೆ ಬರಲು ಸಾಕಷ್ಟು ಶಾಸಕರು ತಯಾರಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದರೆ 20 ರಿಂದ 22 ಜನ ಶಾಸಕರನ್ನು ರಾಜೀನಾಮೆ ಕೊಡಿಸುತ್ತೇನೆ. ಸದ್ಯಕ್ಕೆ ಬಹುಮತವಿರುವುದರಿಂದ ಆ ಕೆಲಸಕ್ಕೆ ಕೈ ಹಾಕುವುದಿಲ್ಲ ಬೆಳಗಾವಿ 3, ಬಿಜಾಪುರ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್……
ಬೆಳಗಾವಿ- ಉತ್ತರ ಕರ್ನಾಟಕದ ಪ್ರವಾಸದ ಬಳಿಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್. ಹಾಕಿದ್ದಾರೆ. ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಹಿರಿಯ ಶಾಸಕ ಉಮೇಶ ಕತ್ತಿ ಔತಣಕೂಟ ವಿಚಾರ. ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರವಾಗಿದೆ. ವಲಸಿಗರಿಂದ ಮೂಲ ಬಿಜೆಪಿ ಅವ್ಯಾಯವಾಗಿದೆ,ಎಂದು ಸತೀಶ್ ಜಾರಕಿಹೊಳಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ,ಮಾಡುತ್ತದೆ. ಉತ್ತರ ಕರ್ನಾಟಕ ಭಾಗದ ಶಾಸಕರಿಂದ …
Read More »ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಹಿಂಪಡೆದಿದೆ:B.S.Y.
ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಭಾನುವಾರ (ಮೇ 31 2020) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ …
Read More »ಕೊರೊನಾ ಇದ್ರೂ ಮನೆಯಿಂದ ಹೊರ ಬಾರದ ಪಾಷಾ-
ಬೆಂಗಳೂರು: ವಾರ್ಡ್ ನಂಬರ್ 135 ಪಾದರಾಯನಪುರದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬರುತ್ತಿಲ್ಲ. ಇಮ್ರಾನ್ ಪಾಷಾಗೆ 158 ಜನ ಕಾಂಟ್ಯಾಕ್ಟ್ ಇದ್ದು, ಅದರಲ್ಲೂ 75 ಜನ ಪ್ರೈಮರಿ ಕಾಂಟ್ಯಾಕ್ಟ್ ಇದ್ದಾರೆ. ಉಳಿದವರೆಲ್ಲ ಸೆಕೆಂಡರಿ ಕಾಂಟ್ಯಾಕ್ಟ್ ಎಂದು ತಿಳಿದುಬಂದಿದೆ. ಹೀಗಾಗಿ ಶಾಸಕರು, ಅಧಿಕಾರಿಗಳು ಆಪ್ತರೆಲ್ಲ ಕ್ವಾರಂಟೈನ್ ಆಗುವ ಸಾಧ್ಯತೆ ಇದೆ. ಇಮ್ರಾನ್ ಪಾಷಾ ಕೊರೊನಾ ಪಾಸಿಟಿವ್ ಬಂದರೂ ಇನ್ನೂ ವಿಕ್ಟೋರಿಯಾ …
Read More »ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶಭಾನುವಾರ ಕರ್ಫ್ಯೂ ತೆಗೆಯಲಾಗಿದೆ
ಬೆಂಗಳೂರು: ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶ ಇರುವುದು. ಹೀಗಾಗಿ ಖರೀದಿಗೆ ಹಾಗೂ ಸ್ನೇಹಿತರನ್ನ ಭೇಟಿಯಾಗಲು ಅವಕಾಶ ಬೇಕಿತ್ತು. ಅದಕ್ಕೆ ಭಾನುವಾರ ಕರ್ಫ್ಯೂ ತೆಗೆಯಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾನುವಾರ ಲಾಕ್ ಡೌನ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸಿಎಂ ನಿರ್ಧಾರ ಸ್ವಾಗತಾರ್ಹ ಎಂದರು. ದುಡಿಯುವ ವರ್ಗಕ್ಕೆ ರಿಲ್ಯಾಕ್ಸ್ ಮಾಡಿಕೊಡಲು ಅನುಕೂಲವಾಗಿದೆ. ವಾರವೆಲ್ಲ ನೌಕರರು, ಉದ್ದಿಮೆದಾರರು ಕೆಲಸ ಮಾಡಿರುತ್ತಾರೆ. …
Read More »ಮಳೆಯ ಅವಾಂತರ – ಮನೆಗಳಿಗೆ ನುಗ್ಗಿದ ನೀರು, ಹತ್ತಾರು ಎಕರೆ ಬಾಳೆ ನಾಶ
ರಾಯಚೂರು/ಕೋಲಾರ: ಅನೇಕ ದಿನಗಳಿಂದ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಇದರಿಂದ ಜನರ ಜೀವನ ಅಸ್ತವ್ಯಸ್ತವಾಗುತ್ತಿದೆ. ರಾಯಚೂರಿನಲ್ಲಿ ಇಡೀ ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಮಳೆಗೆ ಚರಂಡಿ ನೀರು ಮನೆಯೊಳಗೆ ನುಗ್ಗಿದೆ. ನಗರದ ಮಡ್ಡಿಪೇಟೆ, ಬಂದರಗಲ್ಲಿ ಸೇರಿ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಮನೆಗಳಿಗೆ ಮಳೆಯ ನೀರಿನೊಂದಿಗೆ ಕೊಳಚೆ ನೀರು ನುಗ್ಗಿದೆ. ಇದರಿಂದ ಜನರು ರಾತ್ರಿಯೆಲ್ಲಾ ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಿದ್ದಾರೆ. …
Read More »ಪ್ರತಿಪಕ್ಷಗಳು ಹಗಲುಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ
ರಾಮನಗರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಮೂಡಿದೆ ಎಂಬ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ಬತ್ಥನಾರಾಯಣ (Dr CN Ashwathnarayan) ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಸರ್ಕಾರ ಉರುಳುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಮೊದಲು ಬಿಡಲಿ. 2023ರವರೆಗೆ ಮಾತ್ರವಲ್ಲ, 2023ರ ನಂತರವೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಮನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ …
Read More »
Laxmi News 24×7