ಬೆಂಗಳೂರು, ಮೇ 18- ರಾಜ್ಯದ ಲಾಕ್‍ಡೌನ್ ಜಾರಿಯಿಂದಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ಸರ್ಕಾರಿ ಹಾಗೂ ಖಾಸಗಿ ಬಸ್ ಸೇರಿದಂತೆ ವೋಲ್ವಾ, ಊಬರ್, ಆಟೋ ರಿಕ್ಷಾ ಸಂಚಾರ ನಾಳೆಯಿಂದ ಕಾರ್ಯಾರಂಭ ಮಾಡಲಿವೆ. ನಾಳೆ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಎನ್‍ಡಬ್ಲು ಕೆಎಸ್‍ಆರ್‍ಸಿ, ಎನ್‍ಇ ಕೆಆರ್‍ಟಿಸಿ, ಟ್ಯಾಕ್ಸಿ, ವೋಲಾ, ಊಬರ್ ವಾಹನಗಳು ಕೂಡ ಕಾರ್ಯಾಚರಣೆ ಪ್ರಾರಂಭಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಆದರೆ ಕಡ್ಡಾಯವಾಗಿ ಬಸ್ ಹಾಗೂ …
Read More »ಜಿಲ್ಲೆಗಳ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ: KSRTC ಎಂಡಿ
ಬೆಂಗಳೂರು: ಯಾವ್ಯಾವ ಜಿಲ್ಲೆಗಳಿಗೆ ಬೇಡಿಕೆ ಇದೆಯೋ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ ಮಾಡುತ್ತೇವೆ ಎಂದು ಕೆ.ಎಸ್.ಆರ್.ಟಿ.ಸಿ ಎಂಡಿ ಶಿವಯೋಗಿ ಕಳಸದ್ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ ಇಂದು ಸಭೆ ನಡೆಸಿ ನಾಲ್ಕನೇ ಹಂತದ ಲಾಕ್‍ಡೌನ್ ಮಾರ್ಗಸೂಚಿಯನ್ನು ಇಂದು ಮಧ್ಯಾಹ್ನ ಮಾಡಿದ ಬಿಎಸ್ ಯಡಿಯೂರಪ್ಪನವರು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಖಾಸಗಿ ಬಸ್‍ಗಳು, ಆಟೋ ಮತ್ತು ಟ್ಯಾಕ್ಸಿಗಳು ಓಡಾಡಲು ಅನುಮತಿ ನೀಡಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಈಗ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆ
ಬೆಳಗಾವಿ -ಸೋಮವಾರದ ಹೆಲ್ತ್ ಬುಲಿಟೀನ್ ಬೆಳಗಾವಿಗೆ ಮತ್ತೆ ಶಾಕ್ ನೀಡಿದೆ ,ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಜಿಲ್ಲಾಡಳಿತದ ವರದಿಯ ಪ್ರಕಾರ 118ಕ್ಕೆ ತಲುಪಿದೆ. ಇಂದು ಸೊಂಕು ಪತ್ತೆಯಾದ ಇಬ್ಬರು ಮುಂಬೈಯಿಂದ ಬೆಳಗಾವಿಗೆ ಬಂದಿದ್ದರು ನಿಪ್ಪಾಣಿ ಬಳಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಓರ್ವ ಮಹಿಳೆಗೆ ಮಹಾರಾಷ್ಟ್ರದ ನಂಟಿನಿಂದ ಸೊಂಕು ತಗಲಿದ್ದು ,ಇನ್ನೋರ್ವರಿಗೆ ತಬ್ಲಿಗ್ ನಂಟಿನಿಂದ ಸೊಂಕು ತಗಲಿದೆ.
Read More »ಕಳಸಾ, ಬಂಡೂರಿ ಹಾಗೂ ಮಹಾದಾಯಿ ಕಾಮಗಾರಿ ಆರಂಭ:ಸಚಿವ ರಮೇಶ ಜಾರಕಿಹೊಳಿ…..
ಬೆಳಗಾವಿ- ಕಳಸಾ, ಬಂಡೂರಿ ಹಾಗೂ ಮಹಾದಾಯಿ ಕಾಮಗಾರಿ ಆರಂಭ ವಿಚಾರ ಕುರಿತು ದೆಹಲಿಗೆ ಹೋಗಲು ವಿಮಾನ ಸೌಲಭ್ಯ ಇಲ್ಲ, ಹೀಗಾಗಿ ಹೋಗಲಾಗಿಲ್ಲ ಶೀಘ್ರದಲ್ಲೇ ರಸ್ತೆಯ ಮೂಲಕವೇ ಅಧಿಕಾರಿಗಳ ಜೊತೆಗೆ ದೆಹಲಿಗೆ ಹೋಗಿ ಕೇಂದ್ರ ಜತೆ ಚರ್ಚೆ ಮಾಡುವದಾಗಿ ಜಲಸಂಪನ್ನೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಜಲಸಂಪನ್ಮೂಲ ಇಲಾಖೆತ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಜಲಸಂಪನ್ಮೂಲ ಸಚಿವನಾದ ಬಳಿಕ ರಾಜ್ಯದ ಎಲ್ಲಾ ಜಲಾಶಯಕ್ಕೆ ಭೇಟಿ ನೀಡಿದ್ದೇನೆ. …
Read More »ರೆಡ್‍ಝೋನ್ ಬಿಟ್ಟು ಬೇರೆ ಪ್ರದೇಶದಲ್ಲಿ ನಾಳೆಯಿಂದ ಬಸ್ ಸಂಚಾರ ಆರಂಭ: ಸವದಿ
ಬೆಂಗಳೂರು: ರೆಡ್ ಝೋನ್ ಮತ್ತು ಕಂಟೈನ್ಮೆಂಟ್ ಪ್ರದೇಶಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಬಸ್ ಸಂಚಾರ ಆರಂಭ ಮಾಡುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು ಬಸ್ ಸಂಚಾರದ ಬಗ್ಗೆಜೊತೆ ಮಾತನಾಡಿದ ಅವರು, ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಇದೆ. ಸಭೆಯಲ್ಲಿ ಬಸ್ ಸಂಚಾರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಬಹುತೇಕ ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಬಸ್ ಸಂಚಾರದ ವಿಚಾರದಲ್ಲಿ …
Read More »Lockdown 4.0: ದೇಶಾದ್ಯಂತ ಲಾಕ್‍ಡೌನ್ ವಿಸ್ತರಣೆ; ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ
ಬೆಂಗಳೂರು (ಮೇ 17): ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್‍ಡೌನ್ ವಿಸ್ತರಿಸಲಾಗಿದೆ. 4ನೇ ಹಂತದ ಲಾಕ್‍ಡೌನ್ ಮಾರ್ಗಸೂಚಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆಯಾ ರಾಜ್ಯಗಳಲ್ಲಿ ಲಾಕ್‍ಡೌನ್ ಸಡಿಲಗೊಳಿಸುವ ಸ್ವಾತಂತ್ರ್ಯವನ್ನು ಮುಖ್ಯಮಂತ್ರಿಗಳಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ಕುರಿತು ಕೇಂದ್ರ ಸರ್ಕಾರ …
Read More »ಸಂಚಾರಕ್ಕೆ ಸಜ್ಜಾಗಿವೆ ಬಸ್ಸುಗಳು; ಶೇ. 30ರಷ್ಟು ಪ್ರಯಾಣ ದರ ಏರಿಕೆಗೆ ಸರ್ಕಾರ ಚಿಂತನೆ
ಬೆಂಗಳೂರು(ಮೇ 18): ಲಾಕ್ ಡೌನ್ ಘೋಷಣೆಯಾದಾಗಿನಿಂದಲೂ ಸಾರ್ವಜನಿಕ ಬಸ್ ಸೇವೆ ಸ್ಥಗಿತಗೊಂಡಿದೆ. ಸರ್ಕಾರ ಯಾವಾಗ ಬೇಕಾದರೂ ಬಸ್ ಸೇವೆ ಪುನಾರಂಭಿಸುವ ಸಾಧ್ಯತೆ ಇದೆ. ರಾಜ್ಯದ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಸೇವೆಗೆ ಸಜ್ಜಾಗಿವೆ. ಸಂಚಾರ ವೇಳೆ, ಕೊರೋನಾ ವೈರಸ್ ಸೋಂಕು ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಕೈಗೊಂಡಿವೆ. ರಾಜ್ಯದ ಅನುಮತಿಗಷ್ಟೇ ಸಾರಿಗೆ ಸಂಸ್ಥೆಗಳು ಕಾಯುತ್ತಿವೆ. ಇದೇ ವೇಳೆ, ವಿವಿಧ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು …
Read More »ಟೆಸ್ಟ್ ಮಾಡಿಸದೇ ಮನೆಗೆ ಬರ್ಬೇಡ’- ಮಗನನ್ನೇ ಹೊರಗಿಟ್ಟ ಪೋಷಕರು
ಮಂಗಳೂರು: ಹೊಸದಾಗಿ ಮಂಗಳೂರಿನಲ್ಲಿ ದೃಢಪಟ್ಟಿರುವ ರೋಗಿ-1094ನ ಕೊರೊನಾ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ ಹಾಗೂ ಈತನ ಟ್ರಾವಲ್ ಹಿಸ್ಟರಿ ಭಯಾನಕವಾಗಿದೆ. ಮಂಗಳೂರಿನ ಹೊರವಲಯದ ಜೆಪ್ಪುಪಟ್ನದ 31 ವರ್ಷದ ಸೋಂಕಿತ ಕಳೆದು 10 ದಿನಗಳ ಹಿಂದೆ ದೆಹಲಿಯಿಂದ ಮಂಗಳೂರಿಗೆ ಬಂದಿದ್ದಾನೆ. ಲಾಕ್‍ಡೌನ್ ಇದ್ದರೂ ಕಾಲ್ನಡಿಗೆಯಲ್ಲಿ ದೆಹಲಿಯಿಂದ ಹೊರಟು, ಅಲ್ಲಲ್ಲಿ ಸಿಕ್ಕ-ಸಿಕ್ಕ ವಾಹನಗಳಿಂದ ಡ್ರಾಪ್ ಪಡೆದು, ಚೆಕ್‍ಪೋಸ್ಟ್ ಗಳಲ್ಲಿ ವಂಚಿಸಿ ಮನೆ ತಲುಪಿದ್ದಾನೆ. ದೆಹಲಿಯಿಂದ ಮನೆಗೆ ಬಂದ ಮಗನನ್ನು ತಂದೆ-ತಾಯಿ ಮನೆಗೆ ಸೇರಿಸಿಲ್ಲ. ಮೊದಲು ಹೋಗಿ …
Read More »ಹಿರಿಯ ರಾಜಕೀಯ ಮುತ್ಸದ್ಧಿ ದೇವೇಗೌಡರ ಹುಟ್ಟುಹಬ್ಬಕ್ಕೆ ಗಣ್ಯರಿಂದ ಶುಭಾಶಯ
ಬೆಂಗಳೂರು: ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು “ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯಸ್ಸು ಮತ್ತು ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ …
Read More »ಹೆರಿಗೆಗೆ 3 ದಿನ ಟೈಮ್ ಕೊಟ್ಟಿದ್ದಾರೆ ಸರ್, ನಾನು ಊರಿಗೆ ಹೋಗ್ಲೇಬೇಕು- ಮೆಜೆಸ್ಟಿಕ್‍ನಲ್ಲಿ ಪ್ರಯಾಣಿಕರ ದಂಡು
ಬೆಂಗಳೂರು: ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಎರಡು ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ಸೇವೆ ಪುನಾರಂಭ ಮುಂದೂಡಿಕೆಯಾಗಿದೆ. ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಸರ್.. ನಮ್ಮೂರಿಗೆ ಬಸ್ ಎಲ್ಲಿ ಬರುತ್ತೆ, ನಮ್ ಏರಿಯಾಗೆ ಯಾವ ಫ್ಲಾಟ್ ಫಾರಂಗೆ ಬಸ್ ಬರುತ್ತೆ …
Read More »
Laxmi News 24×7