ಯಾದಗಿರಿ: ವಲಸೆ ಕಾರ್ಮಿಕರನ್ನು ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ವಿರೋಧಿಸಿ ದಿಢೀರ್ ಪ್ರತಿಭಟನೆ ನಡೆಸಿದ ಸ್ಥಳೀಯರನ್ನು ಪೊಲೀಸರು ಬಲವಂತವಾಗಿ ಚದುರಿಸಿದ ಘಟನೆ ತಡರಾತ್ರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ತಡರಾತ್ರಿ ಮಹಿಳೆಯರು ಮತ್ತು ಸ್ಥಳೀಯರಿಂದ ಈ ಪ್ರತಿಭಟನೆ ನಡೆದಿದೆ. ಪಟ್ಟಣದ ಪೋಸ್ಟ್ ಆಫೀಸ್ ಪಕ್ಕ ಸ.ಹಿ.ಪ್ರಾ ಶಾಲೆಯಲ್ಲಿ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧಾರಿಸಿದೆ. ಆದರೆ ಶಾಲೆಯ ಅಕ್ಕಪಕ್ಕದಲ್ಲಿ ಹೆಚ್ಚು ಜನವಸತಿ ಇರುವ ಹಿನ್ನೆಲೆ ಮತ್ತು ಕೆಲವೊಂದು ಮನೆಗಳು ಶಾಲೆಯ …
Read More »ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ
ರಾಯಚೂರು: ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರೋರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 31ರವರೆಗೆ ನಿಷೇಧಾಜ್ಞೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಜನರು ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಂಮಹಾರಾಷ್ಟ್ರದ ಮುಂಬೈ ನಂಟಿನಿಂದ ರಾಯಚೂರಿನಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಬೈನಿಂದ ಬಂದ 6 ಮಂದಿಯಲ್ಲಿ ಕೊರೊನಾ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಧ್ಯಾಹ್ನ …
Read More »ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರಭಾರತ ಯೋಜನೆಯಡಿಯಲ್ಲಿ ಘೋಷಿಸಿರುವ ಕೊರೊನಾ ವಿಶೇಷ ಪ್ಯಾಕೇಜ್ ಕನ್ನಡಿಯೊಳಗಿನ ಗಂಟು ಆಗಿದ್ದು, ಹಳೆ ಸರಕಿಗೆ ಹೊಸ ಹೊದಿಕೆ ಹೊದಿಸಿದಂತಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದು ಕಂತುಗಳಾಗಿ ಹಂಚಿದರು. ಈ ಕುರಿತು ಸಹ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ತಮ್ಮದೇ ಲೆಕ್ಕಾಚಾರವನ್ನು ಜನರ ಮುಂದಿಟ್ಟಿದ್ದಾರೆ. 20 …
Read More »ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ ಯುವಕ ಸಾವು……….
ಉಡುಪಿ: ಭಾನುವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲೂ ಭಾರೀ ಗುಡುಗು ಸಹಿತ ಮಳೆಯಾಗಿದ್ದು, ಪರಿಣಾಮ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಾಪು ತಾಲೂಕಿನ ಕಟಪಾಡಿ ಏಣಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಕಟಪಾಡಿ ಏಣಗುಡ್ಡೆ ನಿವಾಸಿ ಭರತ್ (22) ಮೃತ ಯುವಕ. ಮೃತ ಭರತ್ ಸಿಡಿಲು ಸಹಿತ ಮಳೆ ಬರುವಾಗ ಮನೆಯಲ್ಲಿ ಕುಳಿತಿದ್ದನು. ಆದರೂ ಸಿಡಿಲು ಬಡಿದು ಯುವಕ …
Read More »6609 ಜನರ ವರದಿ ಕೊರೊನಾ ನೆಗೆಟಿವ್ ನಾಳೆ146 ಜನರ ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತ
ಬೆಳಗಾವಿ- ನಾಳೆ 146 ಕೊರೊನಾ ಶಂಕಿತರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ 50 ಆಕ್ಟಿವ್ ಕೊರೊನಾ ಪಾಸಿಟಿವ್ ಕೇಸ್ ಗಳಿವೆ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 8281 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಒಟ್ಟು 78 ಜನರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಒಟ್ಟು 50 ಜನರಿಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. …
Read More »ರಾಜ್ಯದಲ್ಲಿ ಇನ್ನೆರಡು ದಿನ ಲಾಕ್‍ಡೌನ್ 3.0 ಮುಂದುವರಿಕೆ
ಬೆಂಗಳೂರು : ಸೋಮವಾರದಿಂದ ಜನಜೀವನ ಸಹಜ ಸ್ಥಿತಿಗೆ ಬರಬಹುದೆಂಬ ನಿರೀಕ್ಷೆ ಮತ್ತೆ ಹುಸಿಯಾಗಿದ್ದು, ರಾಜ್ಯದಲ್ಲಿ ಎರಡು ದಿನ ಲಾಕ್‍ಡೌನ್ ಮುಂದುವರಿಸಿ ಸರ್ಕಾರ ಆದೇಶ ನೀಡಿದೆ. ಈ ಹಿಂದಿನ ಮಾರ್ಗಸೂಚಿಗಳಂತೆ ಮೇ 19ರವರೆಗೆ ಬಸ್, ಆಟೋ, ಟ್ಯಾಕ್ಸಿ ಸಂಚಾರವಿರಲ್ಲ ಮತ್ತು ಮಾಲ್, ಥಿಯೇಟರ್, ಶಾಲಾ, ಕಾಲೇಜ್, ದೇವಸ್ಥಾನ, ಮಸೀದಿ, ಚರ್ಚ್ ಈ ಹಿಂದಿನಂತೆ ಬಂದ್ ಆಗಲಿವೆ. ಮುಂದಿನ ಆದೇಶ ಬರುವ ತನಕ ಅಥವಾ ಮೇ 19ರ ರಾತ್ರಿ 12 ಗಂಟೆಯ ತನಕ …
Read More »ಎಪಿಎಂಸಿ ಕಾಯ್ದೆ ವಿರೋಧಿಸುವವರು ಚರ್ಚೆಗೆ ಬರಲಿ: ಸಚಿವ ಸಿ.ಟಿ.ರವಿ
ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ …
Read More »ಒಂದೇ ವಿಡಿಯೋ – 20 ಕ್ಯಾಮೆರಾಮ್ಯಾನ್‍ಗಳಿಗೆ ಕೆಲಸ ಕೊಟ್ಟ ಸೃಜನ್….
ಬೆಂಗಳೂರು: ಲಾಕ್‍ಡೌನ್‍ನಿಂದ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿವೆ. ಇದರಿಂದ ಕಲಾವಿದರು, ಕ್ಯಾಮೆರಾಮ್ಯಾನ್‍ಗಳು ಸೇರಿದಂತೆ ಅನೇಕರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಆತ್ಮನಿರ್ಭರ್ ಭಾರತಕ್ಕೆ ಕೈ ಜೋಡಿಸುವ ಮೂಲಕ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ನಟ ಸೃಜನ್ ಲೋಕೇಶ್ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ರಿಯೇಟಿವ್ ವಿಡಿಯೋ ತಯಾರಿಸಿದ್ದಾರೆ. 20 ಕ್ಯಾಮೆರಾಮ್ಯಾನ್‍ಗಳನ್ನು ಬಳಸಿ ಈ ವಿಡಿಯೋ ತಯಾರಿಸಿದ್ದು, ಕ್ಯಾಮೆರಾ ವಿಭಾಗದವರಿಗೆ ಕೆಲಸ ಸೃಷ್ಟಿಸಬೇಕೆಂಬ ಉದ್ದೇಶದಿಂದ ಈ ರೀತಿ …
Read More »ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ
ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ …
Read More »ದಲಿತ ಯುವಕನ ಕೊಲೆ ಖಂಡಿಸಿ ಸಚಿವ ರಮೇಶ ಜಾರಕಿಹೊಳಿಯವರಿಗೆ ಮನವಿ
ಗೋಕಾಕ : ಗೋಕಾಕ ನಗರದಲ್ಲಿ 06/05/2020 ರಂದು ದಲಿತ ಯುವಕ ಸಿದ್ದು ಕನಮಡ್ಡಿ ಯವರನ್ನು ಮಾರಕಾಸ್ತ್ರ ದಿಂದ ಕೊಲೆ ಮಾಡಿ ಕೊಲೆಗಾರರು ಪರಾರಿಯಾಗಿದ್ದರು. ಕೊಲೆಯಾದ ವ್ಯಕ್ತಿಯು ಸಾಯುವಾಗ ಅವನಿಗೆ ಜೀವ ಬೆದರಿಕೆ ಹಾಕಿರೋ ವ್ಯಕ್ತಿಗಳ ಹೆಸರು ಹೇಳಿ ಸಾವನ್ನಪಿದನ್ನು ಅದರಿಂದ ಕೊಲೆಗಾರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು ಮತ್ತು ಹಲವು ಬೇಡಿಕೆಗಳನ್ನು ರಾಜ್ಯ …
Read More »
Laxmi News 24×7