Breaking News
Home / ಜಿಲ್ಲೆ (page 13)

ಜಿಲ್ಲೆ

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಅಂಗೀಕಾರ-ಕನಿಷ್ಠ 500 ಕೋಟಿ ರೂ

ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …

Read More »

ಮಹಿಳೆ ಮೇಲಿನ ಹಲ್ಲೆ ಅಮಾನವೀಯ ಹೇಯಕೃತ್ಯ: ಹೆಬ್ಬಾಳ್ಕರ್

ಬೆಳಗಾವಿ : ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.   ಸಂತ್ರಸ್ತ ಮಹಿಳೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ಹೇಳಿದರು. …

Read More »

ಮುಂದಿನ ವರ್ಷದಿಂದ ಉಚಿತ ಸೈಕಲ್​ ನೀಡಲಾಗುವುದು : ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದ ಪ್ರಾಥಮಿಕ ಹಾಗು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ಯೋಜನೆಯಡಿ ಮುಂದಿನ ವರ್ಷದಿಂದ ಸೈಕಲ್ ವಿತರಣೆ ಆರಂಭಿಸಲಾಗುತ್ತದೆ. ಆದರೆ, ಈ ಬಾರಿ ಸೈಕಲ್ ವಿತರಣೆ ಅಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಸೈಕಲ್ ಕೊಡಬಾರದಂತಲ್ಲ, ಇದಕ್ಕೆ ನಮಗೆ ಹಣಕಾಸು ಸಮಸ್ಯೆಯೂ ಆಗುವುದಿಲ್ಲ. ಆದರೆ, ಒಂದೇ ಬಾರಿ ಅಷ್ಟು …

Read More »

ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ.: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ( ಹಕ್ಕ- ಬುಕ್ಕ ವೇದಿಕೆ ಸುಣಧೋಳಿ) – ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ. ಸಮಾಜಗಳ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಎಲ್ಲ ಸಮುದಾಯಗಳಿಗೆ ಬೆನ್ನಲಬು ಆಗಿ ಕೆಲಸ ಮಾಡುತ್ತೇನೆ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರದಂದು ಜರುಗಿದ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮುದಾಯಗಳ ಆಶೀರ್ವಾದದಿಂದ …

Read More »

ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಆಗಮಿಸುತ್ತಾರೋ, ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದರು. ಜ.2ರಂದು ನಡೆಯುವ ಕಾರ್ಯಕ್ರಮದಲ್ಲಿ …

Read More »

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕೋಡಿ (ಬೆಳಗಾವಿ) : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ. ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು …

Read More »

ಬೆಳಗಾವಿ ಅಧಿವೇಶನದಲ್ಲಿ ಕಬ್ಬು ಕಟಾವು ಕಾರ್ಮಿಕರ ಸಮಸ್ಯೆಗಳ ಚರ್ಚೆಗೆ ಒತ್ತಾಯ

ಚಿಕ್ಕೋಡಿ: ರಾಜ್ಯದಲ್ಲೇ ಅತಿ ಹೆಚ್ಚು ಕಬ್ಬು ಬೆಳೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಬ್ಬು ಕಟಾವು ಮಾಡಿ ಸಾಗಿಸುವ ಕಾರ್ಮಿಕರಿಗೆ ನ್ಯಾಯಯುತ ಸಂಬಳ ಸಿಗದೆ ಇರೋದ್ರಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಸಮಸ್ಯೆಗಳ ಕುರಿತಾಗಿ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಚಿಕ್ಕೋಡಿ ಭಾಗದ ಕಬ್ಬು ಕಟಾವು ಕಾರ್ಮಿಕರು ಒತ್ತಾಯಿಸಿದ್ದಾರೆ. ಮೂರು ವರ್ಷಗಳಿಂದ ಕಾರ್ಮಿಕರಿಗೆ ಪ್ರತಿ ಟನ್ 324 ರೂ ನೀಡುತ್ತಿದ್ದು, ಈ ಕೂಲಿ ದರವನ್ನು ಸಕ್ಕರೆ ಕಾರ್ಖಾನೆಗಳು …

Read More »

ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ನಕಲಿ ವಾಟ್ಸ್​ಆಯಪ್ ಖಾತೆ ಸೃಷ್ಟಿ: ಪ್ರಕರಣ ದಾಖಲು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಸಿನಿಮಾ ತಾರೆಯರು ಹಾಗೂ ಪೊಲೀಸ್​ ಅಧಿಕಾರಿಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾಧಿಕಾರಿಗಳ ಹೆಸರು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಬಳಸಿಕೊಡು ಅವರ ಹೆಸರಿನಲ್ಲಿ ವಾಟ್ಸ್​ಆಯಪ್ ಖಾತೆ ತೆರೆದಿರುವ ಆರೋಪಿ ಇಲಾಖೆಯ ಹಲವು ಅಧಿಕಾರಿಗಳಿಗೆ ಹಣ ನೀಡುವಂತೆ ಸಂದೇಶ ಕಳುಹಿಸಿದ್ದಾನೆ. ತುರ್ತು …

Read More »

ಆರ್ಥಿಕ‌ ಹೊರೆ ಹಿನ್ನೆಲೆ: ಕೃಷಿ ಪಂಪ್​ ಸೆಟ್‌ಗಳ ಮೂಲಸೌಕರ್ಯ ವೆಚ್ಚ ಭರಿಸುವ ಪ್ರಸ್ತಾವನೆ ಮುಂದೂಡಿದ ಸಂಪುಟ ಸಭೆ

ಬೆಳಗಾವಿ: ಕೃಷಿ ಪಂಪ್​ ಸೆಟ್‌ಗಳಿಗೆ ಮೂಲಸೌಕರ್ಯ ಒದಗಿಸುವ ವೆಚ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಪರಿಷ್ಕರಿಸುವ ಪ್ರಸ್ತಾವನೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಈ ಪ್ರಸ್ತಾವನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿಂದೆ ಕೃಷಿ ಪಂಪ್‌ ಸೆಟ್‌ಗಳಿಗೆ ಮೂಲಸೌಕರ್ಯ ಕಲ್ಪಿಸಲು, ವೆಚ್ಚವನ್ನು ರೈತರೇ ಭರಿಸಬೇಕು …

Read More »

ಸುವರ್ಣಸೌಧದಿಂದ ಸಾವರ್ಕರ್ ಫೋಟೋ ತೆಗೆದರೆ ಸೂಕ್ತ, ನನಗೆ ಬಿಟ್ಟರೆ ಇವತ್ತೇ ತೆರವು ಮಾಡುವೆ: ಪ್ರಿಯಾಂಕ್ ಖರ್ಗೆ

ಬೆಳಗಾವಿ : ಸುವರ್ಣಸೌಧ ವಿಧಾನಸಭೆಯಿಂದ ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ತೆಗೆದರೆ ಸೂಕ್ತ. ನನಗೆ ಬಿಟ್ಟರೆ ಇವತ್ತೇ ತೆರವು ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು,‌ ಸಾವರ್ಕರ್ ಫೋಟೋ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ತತ್ವ ಸಿದ್ದಾಂತದಲ್ಲಿ ಸಮಾನತೆ‌ ಇಲ್ಲವೋ, ಸ್ವಾಭಿಮಾನದ ಬದುಕಿಲ್ಲವೋ‌ ಅದನ್ನು ನಾನು ಒಪ್ಪಲ್ಲ.‌ ಗಾಂಧಿ ಹತ್ಯೆಗೆ ಪ್ರೇರಣೆಯಾದ ತತ್ವವನ್ನು ಒಪ್ಪಲ್ಲ. ಹೀಗಾಗಿ ವಿಧಾನಸಭೆಯಿಂದ …

Read More »