Breaking News

ಜಿಲ್ಲೆ

ಕಾಲ್ನಡಿಗೆಯಲ್ಲೇ ರಾಯಚೂರಿನಿಂದ ಮಧ್ಯ ಪ್ರದೇಶಕ್ಕೆ ಹೊರಟ ಕಾರ್ಮಿಕರು

ರಾಯಚೂರು: ನಗರದ ಹತ್ತಿ ಮಿಲ್‍ಗಳಲ್ಲಿ ಕೆಲಸ ಮಾಡುತ್ತಿದ್ದ ಮಧ್ಯ ಪ್ರದೇಶದ ಕಾರ್ಮಿಕರು ಲಾಕ್‍ಡೌನ್ ಹಿನ್ನೆಲೆ ನಡೆದುಕೊಂಡೇ ತಮ್ಮ ಊರುಗಳಿಗೆ ಹೊರಟಿದ್ದಾರೆ. ಲಾಕ್‍ಡೌನ್ ನಿಂದ ಕಂಗಾಲಾದ ಸುಮಾರು 70 ಜನ ಕಾರ್ಮಿಕರು ಕೆಲಸವಿಲ್ಲದೆ ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾರೆ. ಕುಟುಂಬ ಸಮೇತ ಗಂಟುಮೂಟೆ ಕಟ್ಟಿಕೊಂಡು ರಾಯಚೂರಿನಿಂದ ಮಧ್ಯಪ್ರದೇಶಕ್ಕೆ ಕಾಲ್ನಡಿಗೆ ಮೂಲಕ ಹೊರಟಿದ್ದಾರೆ. ಮಕ್ಕಳು, ಮಹಿಳೆಯರು, ವಸ್ತುಗಳನ್ನು ಹೊತ್ತು ನಡೆದುಕೊಂಡೇ ಹೊರಟಿದ್ದಾರೆ. ಸರ್ಕಾರ ಸೇವಾಸಿಂಧು ವೈಬ್‍ಸೈಟ್ ಆರಂಭಿಸಿದ್ದರೂ ಇವರಿಗೆ ಅನುಕೂಲವಾಗಿಲ್ಲ. ಸಮಪರ್ಕ ಮಾಹಿತಿ ಇಲ್ಲದೆ ಕಂಗಾಲಾಗಿ …

Read More »

ಪಾದರಾಯನಪುರದಲ್ಲಿ ಇಂದು ಮತ್ತೆ ಐದು ಕೊರೊನಾ ಪ್ರಕರಣ ಪತ್ತೆ……….

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಮತ್ತೆ ಐದು ಪ್ರಕರಣಗಳು ಪತ್ತೆಯಾಗಿವೆ. ಕ್ವಾರಂಟೈನ್ ಮಾಡಿದ್ದವರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತ ವ್ಯಕ್ತಿಯೊಂದಿಗೆ ದ್ವಿತೀಯ ಸಂಪರ್ಕ ಹೊಂದಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 22 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಐವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ  ಮೂಲಕ ಪಾದರಾಯನಪುರ ಒಂದರಲ್ಲೇ ಈ ವರೆಗೆ 55 ಪ್ರಕರಣಗಳು ಪತ್ತೆಯಾದಂತಾಗಿವೆ ಎಂದು ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಚಿದಾನಂದ್ ಪಬ್ಲಿಕ್ ಟಿವಿಗೆ ಮಾಹಿತಿ …

Read More »

ಮೈಸೂರಿನ 90 ಕೊರೊನಾ ಸೋಂಕಿತರಲ್ಲಿ 88 ಮಂದಿ ಗುಣಮುಖರಾಗಿ ಡಿಸ್ಚಾರ್ಜ್…….

ಮೈಸೂರು: ಇಂದು ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾಗಿ ಇಬ್ಬರು ಡಿಸ್ಚಾರ್ಜ್ ಆಗಿದ್ದು, ಮೈಸೂರು ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಒಟ್ಟು 90 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ 86 ಜನರು ಗುಣಮುಖರಾಗಿ ಮನೆ ತಲುಪಿದ್ದಾರೆ. ಇಂದು ಸಂಜೆ ರೋಗಿ 395 ಮತ್ತು 204 ಸಂಪೂರ್ಣ ಗುಣಮುಖವಾದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ …

Read More »

ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ರಾಜಕೀಯ ವಲಯದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, …

Read More »

ಮೈಸೂರಿನಲ್ಲಿ ವ್ಯಾಪಾರ ವಹಿವಾಟಿಗೆ ಮುಕ್ತ ಅವಕಾಶ- ಷರತ್ತುಗಳು ಅನ್ವಯ………..

ಮೈಸೂರು: ನಗರದಲ್ಲಿ (ಗುರುವಾರ) ಎಲ್ಲ ರೀತಿಯ ವ್ಯಾಪಾರ ವಹಿವಾಟಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಿದೆ. 14 ದಿನದಿಂದ ಕೊರೊನಾ ಪ್ರಕರಣಗಳು ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕೊರೊನಾ ಭೀತಿ ಕಡಿಮೆಯಾದ ಹಿನ್ನೆಲೆಯಲ್ಲಿ ಪಾಲಿಕೆ ಗುರುತಿಸಿದ್ದ 91 ರಸ್ತೆಗಳ ಮೇಲಿನ ನಿರ್ಬಂಧ ತೆರವು ಮಾಡಲಾಗಿದೆ. ನಗರದ 91 ರಸ್ತೆಗಳಲ್ಲಿ ಅಗತ್ಯ ವಸ್ತುಗಳ ಮಾರಾಟ ಮಾತ್ರ ಅವಕಾಶ ನೀಡಲಾಗಿತ್ತು. ಗುರುವಾರದಿಂದ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದ್ದು, ವ್ಯಾಪಾರಕ್ಕೆ ಮುಕ್ತ ಅವಕಾಶ …

Read More »

ಸುಂಟಿಕೊಪ್ಪ ಸುಲಿಗೆ ಪ್ರಕರಣದಲ್ಲಿ 3 ಆರೋಪಿಗಳು ಅಂದರ್- 5.2 ಲಕ್ಷ ಹಣ, ಕಾರು, ಬೈಕ್ ವಶ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಹರದೂರು ಗ್ರಾಮದ ಗುಂಡುಕುಟ್ಟಿ ಎಸ್ಟೇಟ್ ಸಮೀಪ ನಡೆಸಿದ್ದ ಸುಲಿಗೆ ಪ್ರಕರಣ ಮೂವರು ಆರೋಪಗಳನ್ನು ಬಂಧಿಸಿವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ತಿಳಿಸಿದರು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಣಗಾಲ್ ನಿವಾಸಿ ಟಿ.ವಿ.ಹರೀಶ್ (57), ಸುಂಟಿಕೊಪ್ಪದ ವಿಜಯನಗರ ನಿವಾಸಿ ಕುಮರೇಶ್ (42) ಹಾಗೆಯೇ ಸುಲಿಗೆಯ ಮಾಸ್ಟರ್ ಮೈಂಡ್ ಇದಕ್ಕೂ ಮೊದಲು ಎಸ್ಟೇಟ್‍ನಲ್ಲಿ ರೈಟರ್ ಕೆಲಸ ಮಾಡಿಕೊಂಡಿದ್ದ …

Read More »

ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಹಾವೇರಿ: ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಒತ್ತಾಯಿಸುತ್ತಿದ್ದು, ಹಾನಗಲ್ ಪೊಲೀಸ್ ಠಾಣೆಯ ಬಳಿ ಗ್ರಾಮಸ್ಥರು ಪೊಲೀಸರನ್ನು ಆಗ್ರಹಿಸಿದ್ದಾರೆ. ಮೇ 6ರಂದು ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ ವೇಳೆ ಕಾಮುಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು, ಬಾಲಕಿಯ …

Read More »

ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶ……….

ಬೆಂಗಳೂರು: ವಿಭಿನ್ನ ಶೈಲಿಯ ಹೇರ್ ಸ್ಟೈಲ್ ಹಾಗೂ ಮ್ಯಾನರಿಸಂ ನಿಂದಲೇ ಗುರುತಿಸಿಕೊಂಡಿದ್ದ ಕನ್ನಡದ ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶರಾಗಿದ್ದಾರೆ. ಇಂದು ಸಂಜೆ 6.30ರ ಸಮಯದಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೈಕಲ್ ಮಧು ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಮಂಡ್ಯದಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಮೈಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಲಿಗೆ ತೀವ್ರ ಪೆಟ್ಟು ಬಿದ್ದ ಕಾರಣದಿಂದ ನೋವಿನಲ್ಲಿ ನರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಉಶ್, ಭಜರಂಗಿ, AK 47, …

Read More »

ಬಸ್ ಬಂದರೂ ಜನ ಬರುತ್ತಿಲ್ಲ……….

ಉಡುಪಿ: ಜಿಲ್ಲೆಯೊಳಗೆ ಇಂದಿನಿಂದ ಖಾಸಗಿ ಸರ್ಕಾರಿ ಬಸ್‍ಗಳು ಓಡಾಡುತ್ತಿವೆ. ಕುಂದಾಪುರ ರೂಟ್‍ನಲ್ಲಿ ಪ್ರತಿ ಅರ್ಧಗಂಟೆಗೊಂದು ಬಸ್, ಉಡುಪಿ-ಮಣಿಪಾಲ ನಗರದಲ್ಲಿ ನರ್ಮ್ ಬಸ್ ಸಂಚಾರ ಆರಂಭವಾಗಿದೆ. ಉಡುಪಿ ಜಿಲ್ಲೆಯನ್ನು ಕೇಂದ್ರ ಸರ್ಕಾರ ಗ್ರೀನ್ ಝೋನ್ ಎಂದು ಘೋಷಿಸಿದೆ. ನಿರ್ಬಂಧಿತ ವಿನಾಯಿತಿಗಳು ಜಿಲ್ಲೆಗೆ ಸಿಕ್ಕಿದೆ. ಹೀಗಾಗಿ ಜಿಲ್ಲೆಯ ಒಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳ ಓಡಾಟ ಆರಂಭಿಸಬಹುದು ಎಂದು ಜಿಲ್ಲಾಡಳಿತ ಹೇಳಿತ್ತು. ಬೆರಳೆಣಿಕೆಯ ಬಸ್‍ಗಳು ಮಾತ್ರ ಇಂದು ರಸ್ತೆಗೆ ಇಳಿದಿವೆ. ಆದರೆ ಜನ …

Read More »

ಹೊರರಾಜ್ಯದಿಂದ ಧಾರವಾಡಕ್ಕೆ ಆಗಮಿಸಿದ 665 ಮಂದಿಗೆ ಕ್ವಾರಂಟೈನ್- 103 ಮಂದಿಗೆ ಗಂಟಲು ದ್ರವ ಪರೀಕ್ಷೆ

ಧಾರವಾಡ: ಕಳೆದ 6 ದಿನಗಳಿಂದ ಜಿಲ್ಲೆಗೆ ಹೊರ ರಾಜ್ಯದಿಂದ ಒಟ್ಟು 665 ಜನ ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯಿಂದ ಹೋಗಿದ್ದ ಯಾತ್ರಿಕರು ಆಗಮಿಸಿದ್ದಾರೆ. ಅವರೆಲ್ಲರನ್ನು ಧಾರವಾಡ ನಗರದಿಂದ ಹೊರಗೆ ಇರುವ ಕೃಷಿ ವಿವಿ ಆವರಣದಲ್ಲಿ ತಡೆದು ತಪಾಸಣೆ ಮಾಡಿ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ನಿನ್ನೆಯಷ್ಟೇ ಗುಜರಾತಿನ ಅಹ್ಮದಾಬಾದ್‍ನಿಂದ ಆಗಮಿಸಿದ್ದ 9 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆ ಹೊರ ರಾಜ್ಯದಿಂದ ಬರುವವರ ಮೇಲೆ ಕಟ್ಟೆಚ್ಚರ ವಹಿಲಾಗಿದೆ. ಸದ್ಯ ಆಂಧ್ರಪ್ರದೇಶ್‍ನಿಂದ 38, …

Read More »