ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ. ಬೆಂಗಳೂರು(ಮೇ.08): ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಆದೇಶ ಮೇರೆಗೆ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,08,300 ಕಾರ್ಮಿಕರನ್ನು ಕೆಎಸ್ಆರ್ಟಿ ಬಸ್ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್ಗಳಲ್ಲಿ ವಲಸೆ ಕಾರ್ಮಿಕರು …
Read More »ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢ
ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಗುರುವಾರ ಒಂದೇ ದಿನ ಏಳು ಮಂದಿಗೆ ಕಿಲ್ಲರ್ ಕೊರೊನಾ ದೃಢವಾಗಿದೆ. ಶಿವಾಜಿನಗರದಲ್ಲಿ ನಾಲ್ವರಿಗೆ, ಪಾದರಾಯನಪುರದಲ್ಲಿ ಇಬ್ಬರಿಗೆ ಮತ್ತು ಯಶವಂತಪುರದಲ್ಲೂ ಓರ್ವರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಪಾದರಾಯನಪುರದಲ್ಲಿ ಮತ್ತೆ ಕೊರೊನಾ ರಣಕೇಕೆ ಹಾಕುತ್ತಿದೆ. ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢವಾಗಿದೆ. ಬೇರೆ ಬೇರೆ ಮನೆಗಳಲ್ಲಿ ಇದ್ದ …
Read More »ಹೊರ ರಾಜ್ಯದಿಂದ ಬೆಂಗ್ಳೂರಿಗೆ ಬರುವವರಿಗೆ 14 ದಿನ ಹೋಂ ಕ್ವಾರಂಟೈನ್ ಫಿಕ್ಸ್
ಬೆಂಗಳೂರು: ಹೊರರಾಜ್ಯಗಳಿಂದ ಬೆಂಗಳೂರಿಗೆ ಸಾಕಷ್ಟು ಮಂದಿ ಬರುತ್ತಿರುವ ಹಿನ್ನೆಲೆ ಅವರಿಂದ ನಗರದಲ್ಲಿ ಕೊರೊನಾ ಸೋಂಕು ಹರಡಬಾರದು ಎಂದು ಬೆಂಗಳೂರು ಜಿಲ್ಲಾಡಳಿತ ಹೊಸ ಪ್ಲಾನ್ ಮಾಡಿದೆ. ಹೊರ ರಾಜ್ಯದಿಂದ ಸಿಲಿಕಾನ್ ಸಿಟಿಗೆ ಬರುವವರಿಗೆ ಕಡ್ಡಾಯವಾಗಿ ಕೈಗೆ ಸ್ಟಾಂಪಿಂಗ್ ಮಾಡಲಾಗುತ್ತದೆ. ಅವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಇರಲೇಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ಹೊರ ರಾಜ್ಯದವರಿಂದ ನಗರದಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು …
Read More »ಕುಂಬಾರರಿಗೂ ವಿಶೇಷ ಪರಿಹಾರ ನೆರವು ನೀಡಲು ಸಿಎಂಗೆ ಮನವಿ…………
ಮಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೊಳಗಾದ ಕುಂಬಾರಿಕೆ ವೃತ್ತಿ ಮಾಡುವವರಿಗೂ ಐದು ಸಾವಿರ ರೂಪಾಯಿಗಳ ವಿಶೇಷ ಪರಿಹಾರ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಕುಲಾಲ್ ಕುಂಬಾರ ಯುವವೇದಿಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿ ಇರುವವರ ನೆರವಿಗೆ 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಪರಿಹಾರ ಘೋಷಿಸುವ ಮೂಲಕ ಹೆಚ್ಚಿನ ನೆರವು ನೀಡಿರುವ ತಮ್ಮ ನಡೆ ಸ್ವಾಗತಾರ್ಹ. ಆದರೆ ರಾಜ್ಯಾದ್ಯಂತ ಸಂಕಷ್ಟಕ್ಕೆ ಸಿಲುಕಿರುವ ಇನ್ನೂ …
Read More »ಚಾಮರಾಜನಗರಕ್ಕೆ ಬಿಗ್ ರಿಲೀಫ್: ಆತಂಕ ಹುಟ್ಟಿಸಿದ್ದ ಪೇದೆ ಕೊರೊನಾ ನೆಗೆಟಿವ್
ಚಾಮರಾಜನಗರ: ಬೆಂಗಳೂರಿನಿಂದ ಜಿಲ್ಲೆಯ ಹನೂರು ತಾಲೂಕಿನ ಬೆಳ್ತೂರು ಗ್ರಾಮಕ್ಕೆ ಬಂದು ಹೋಗಿದ್ದ ಪೇದೆಯ ಕೋವಿಡ್-19 ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಹೀಗಾಗಿ ಚಾಮರಾಜನಗರ ಜಿಲ್ಲೆಯ ಜನರ ಆತಂಕ ದೂರವಾಗಿದೆ. ಬೇಗೂರು ಠಾಣೆಯ ಮುಖ್ಯಪೇದೆ ಕುಟುಂಬ ಸಮೇತ ಬೆಳ್ತೂರಿಗೆ ಬಂದಿದ್ದ ವೇಳೆ ಕೊರೊನಾ ಪಾಸಿಟಿವ್ ಸಂಬಂಧ ಹಲವಾರು ಗೊಂದಲಗಳು ಉಂಟಾಗಿದ್ದವು. ಆದರೆ ಈಗ ಅವರ ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 16 ಜನರನ್ನು ಹಾಗೂ …
Read More »ಜಾರ್ಖಂಡ್‍ಗೆ ನಡೆದುಕೊಂಡೇ ಹೋಗುತ್ತಿದ್ದ ಕಾರ್ಮಿಕ ಚಿಕ್ಕೋಡಿಯಲ್ಲಿ ಸಾವು
ಚಿಕ್ಕೋಡಿ (ಬೆಳಗಾವಿ): ನಡೆದುಕೊಂಡೇ ಜಾರ್ಖಂಡ್‍ನ ತನ್ನ ಗ್ರಾಮಕ್ಕೆ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಬಾಬಾಲಾಲ್ ಸಿಂಗ್(45) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ತಂಡವು ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿತ್ತು. ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 13 ಜನರ ಕಾರ್ಮಿಕರು ವಾಹನ ಹಾಗೂ ರೈಲ್ವೆ ವ್ಯವಸ್ಥೆ ಇಲ್ಲದ ಕಾರಣ ಮೇ 5ರಂದು ನಡೆದುಕೊಂಡು ಜಾರ್ಖಂಡ್‍ಗೆ …
Read More »ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ರೋಗಿಗಳ ನೆರವಿಗಾಗಿ ಜೀವ ರಕ್ಷಕ ಸಾಧನವೊಂದನ್ನು ಮಂಗಳೂರಿನ ವೈದ್ಯರ ತಂಡ ಅವಿಷ್ಕಾರಿಸಿದೆ.
ಮಂಗಳೂರು: ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ರೋಗಿಗಳ ನೆರವಿಗಾಗಿ ಜೀವ ರಕ್ಷಕ ಸಾಧನವೊಂದನ್ನು ಮಂಗಳೂರಿನ ವೈದ್ಯರ ತಂಡ ಅವಿಷ್ಕಾರಿಸಿದೆ. ನಗರದ ಮಂಗಳಾ ಹಾಸ್ಪಿಟಲ್‍ನ ಮೆಡಿಕಲ್ ಡೈರೆಕ್ಟರ್ ಡಾ.ಗಣಪತಿ ಅವರ ತಂಡ ಆಕ್ಸಿಜನ್ ಬಬ್ಬಲ್ ಹೆಲ್ಮೆಟ್‍ನ್ನು ರೆಡಿ ಮಾಡಿದೆ. ವೆಂಟಿಲೇಟರ್ ಅಳವಡಿಸಿ ಕೃತಕ ಉಸಿರಾಟ ನೀಡಬೇಕಾದ ರೋಗಿಗಳಿಗೆ ಈ ಸಾಧನ ಬಹಳಷ್ಟು ಉಪಯೋಗಕಾರಿಯಾಗಲಿದೆ. ಕೊರೊನಾ ಸೋಂಕಿನಿಂದ ರೋಗಿಯ ಆರೋಗ್ಯ ಸ್ಥಿತಿ ಗಂಭೀರ ಆಗಿ ಉಸಿರಾಟ ಸಮಸ್ಯೆ ಎದುರಾದಾಗ ಕೃತಕ ಉಸಿರಾಟದ ವ್ಯವಸ್ಧೆ …
Read More »ಮೆಣಸಿನಕಾಯಿ ವ್ಯಾಪಾರಿಗೆ ಕೊರೊನಾ – ಕಂಟೈನ್ಮೆಂಟ್ ಮುಕ್ತವಾಗಿದ್ದ ಪ್ರದೇಶದಲ್ಲಿ ಮತ್ತೆ ಆತಂಕ
ಧಾರವಾಡ: ಜಿಲ್ಲೆಯ ಹೊಸಯಲ್ಲಾಪುರ ಪ್ರದೇಶ ಅದೇನು ಪಾಪಾ ಮಾಡಿದೇಯೋ ಗೊತ್ತಿಲ್ಲ. ಧಾರವಾಡ ಜಿಲ್ಲೆಯ ಮೊದಲ ಪಾಸಿಟಿವ್ ಪ್ರಕರಣ ಇದೇ ಏರಿಯಾದಲ್ಲಿ ಪತ್ತೆಯಾಗಿತ್ತು. ಈ ಕಾರಣಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಿ ಹೋಗಿದ್ದ ಈ ಪ್ರದೇಶವನ್ನು ವಾರದ ಹಿಂದಷ್ಟೇ ಕಂಟೋನ್ಮೆಂಟ್ ಝೋನಿನಿಂದ ಮುಕ್ತಗೊಳಿಸಿ, ಸಾಮಾನ್ಯ ವಲಯವನ್ನಾಗಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಗುರುವಾರ ಇದೇ ಏರಿಯಾದ ಕೋಳಿಕೆರೆಯ 35 ವರ್ಷದ ಮೆಣಸಿನಕಾಯಿ ವ್ಯಾಪಾರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ …
Read More »ಅಬಕಾರಿ ಸುಂಕ ಏರಿಕೆ – ಮದ್ಯ ಮಾರಾಟ ಇಳಿಕೆ……
ಬೆಂಗಳೂರು: ಸಿಎಂ ಯಡಿಯೂರಪ್ಪ ಮದ್ಯದ ಮೇಲೆ ಶೇ.17 ಅಬಕಾರಿ ಸುಂಕ ವಿಧಿಸಿದ ಬೆನ್ನಲ್ಲೇ ಬುಧವಾರಕ್ಕೆ ಹೋಲಿಸಿದ್ದಲ್ಲಿ ಮದ್ಯ ಮಾರಾಟ ಇಳಿಕೆಯಾಗಿದೆ. ಬುಧವಾರ ಒಟ್ಟು 230 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದ್ದರೆ ಗುರುವಾರ ಒಟ್ಟು 165 ಕೋಟಿ ರೂ. ಮದ್ಯ ಮಾರಾಟವಾಗಿದೆ ಎಂದು ಕೆಎಸ್‍ಬಿಸಿಎಲ್ (ಕರ್ನಾಟಕ ಪಾನೀಯ ನಿಯಮ) ತಿಳಿಸಿದೆ. ಇಂದು 152 ಕೋಟಿ ರೂ. ಮೌಲ್ಯದ 27.56 ಲಕ್ಷ ಲೀಟರ್ ಇಂಡಿಯನ್ ಮೇಡ್ ಲಿಕ್ಕರ್(ಐಎಂಎಲ್), 13 ಕೋಟಿ ಮೌಲ್ಯದ …
Read More »ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ.
ಚಿಕ್ಕಮಗಳೂರು: ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ. ಹೊಟ್ಟೆ ತುಂಬಾ ಕುಡಿದು ಎಲ್ಲೆಂದರಲ್ಲಿ ಬಿದ್ದರೂ ಕುಡುಕರಿಗೆ ಇನ್ನೂ ಸಮಾಧಾನ ಆಗಿಲ್ಲ ಅನಿಸುತ್ತಿದೆ. ಯಾಕಂದ್ರೆ ಮದ್ಯ ಪ್ರಿಯರು ಫುಲ್ ಟೈಟಾಗಿ ಮೈಮೇಲೆ ಜ್ಞಾನ ಇಲ್ಲದಂತೆ ಎದ್ದು-ಬಿದ್ದೋ ತೇಲ್ತಿರೋ ಘಟನೆ ಜಿಲ್ಲೆಯ ವಿವಿಧ ಭಾಗದಲ್ಲಿ ಇನ್ನೂ ನಿಂತಿಲ್ಲ. ಫುಲ್ ಟೈಟಾಗಿ ರಸ್ತೆ ಮಧ್ಯೆ ಪ್ರಜ್ಞೆ ತಪ್ಪಿ ಮಲಗುತ್ತಿರುವ ಸನ್ನಿವೇಶಗಳು ಕಡಿಮೆಯಾಗಿಲ್ಲ. ಕೊರೊನಾ …
Read More »
Laxmi News 24×7