Breaking News
Home / ಜಿಲ್ಲೆ (page 14)

ಜಿಲ್ಲೆ

ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ

ಬೆಳಗಾವಿ: ಕಾರು ಅಪಘಾತ ಪ್ರಕರಣವನ್ನು ಹಲ್ಲೆ ಎಂದು ಬಿಂಬಿಸಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದ ಮಣಿಕಠ ರಾಠೋಡ್ ಹಾಗೂ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಎಚ್ಚರಿಕೆ ನೀಡಿದ್ದಾರೆ.   ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಕಂಠ ರಾಠೋಡ್‌ ಮೇಲಿನ ಹಲ್ಲೆ ಪ್ರಕರಣದ ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅಪಘಾತವನ್ನು ಹಲ್ಲೆ ಎಂದು ಕಥೆ ಕಟ್ಟಿ, ನನ್ನ ವಿರುದ್ಧ ಆರೋಪ …

Read More »

ಗೂಳಿಹಟ್ಟಿಗೆ ಆರ್​ಎಸ್‌ಎಸ್ ಕಚೇರಿ ಪ್ರವೇಶ ನಿರಾಕರಣೆ?ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಳಗಾವಿ: ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರ ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು, ತಿಳಿದುಕೊಂಡು ಮಾತಾಡ್ತೀನಿ ಎಂದರು. ಈ ಮೂಲಕ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್​ಗೆ ಆರ್‌ಎಸ್‌ಎಸ್‌ ವಸ್ತು ಸಂಗ್ರಹಾಲಯದಲ್ಲಿ ಪ್ರವೇಶ ನಿರಾಕರಣೆ ವಿಚಾರವಾಗಿ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಸತ್ಯಕ್ಕೆ ದೂರವಾದ ಆರೋಪ : ಇದೇ ವೇಳೆ ಮಾತನಾಡಿದ ಬಿಜೆಪಿ ಪರಿಷತ್ ಸದಸ್ಯ ಎನ್.ರವಿಕುಮಾರ್, ಆರ್​ಎಸ್​ಎಸ್ ನಾಯಕರು ಆ ರೀತಿ ಹೇಳಲು ಸಾಧ್ಯವಿಲ್ಲ. …

Read More »

ಮುಂದಿನ ವಾರದೊಳಗೆ ರೈತರಿಗೆ ಮೊದಲ ಹಂತದ ಬೆಳೆ ನಷ್ಟ ಪರಿಹಾರ:C.M.

ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂಪಾಯಿವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ …

Read More »

ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿಪರಾಜಿತ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಘಟನೆ ಸಂಬಂಧ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.   ಸುವರ್ಣಸೌಧದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಚಿತ್ತಾಪುರ ಪರಾಜಿತ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಹಲ್ಲೆ ಮಾಡಿರುವುದಾಗಿ ಸುಳ್ಳು ದೂರು ದಾಖಲಿಸಿದ್ದಾರೆ. ಪೊಲೀಸ್ ತನಿಖೆಯಿಂದ, ಫೊರೆನ್ಸಿಕ್ ವರದಿಯಲ್ಲಿ ಇದು …

Read More »

ಶಬರಿ ಗಿರಿ ಸ್ವಾಮಿಗೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ನಲ್ಲಿ ಪೂಜೆ

ಗೋಕಾಕ: ಇದು ಕಾರ್ತಿಕ ಮಾಸ ಈ ಮಾಸ ಪ್ರಾರಂಭ ಆಗುತ್ತಿದ್ದ ಹಾಗೆ ನಾವು ಎಲ್ಲ ಕಡೆ ಅಯ್ಯಪ್ಪ ನ ಮಾಲಾ ದಾ ರಿ ಗಳು ಸುಮಾರು ಕಡೆ ನಮಗೆ ಕಾಣಿಸುತ್ತಾರೆ   ಇಂದು ಸಂತೋಷ್ ಜಾರಕಿಹೊಳಿ ಅವರ ಒಡೆತನದ ಕಾರ್ಖಾನೆಯಲಿ ಅಯ್ಯಪ್ಪನ ಪೂಜೆ ಮಾಡಿ ಭಕ್ತಿಭಯನ್ನಾ ಮೇರೆದಿದ್ದಾರೆ, ಪೂಜೆ, ಭಜನೆ,ಮಂಗಳರಾತಿ, ಹಾಗೂ ಪ್ರಸಾದ ವಿತರಣೆ ಕೂಡ ನಡೆಯಿತು, ಸುಮಾರು ಜನಾ ಆಯ್ಯಪನ ಭಕ್ತರು ಈ ಸಾಮಾ ರಂಭದಲ್ಲಿ ಭಾಗ ವಹಿಸಿ …

Read More »

ಸೀಲಿಂಗ್ ತುಂಡಾಗಿ ಕಾರ್ಮಿಕ ಸಾವು

ಚಿಕ್ಕೋಡಿ: ಕ್ರೇನ್ ಸೀಲಿಂಗ್​ ತುಂಡಾಗಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಇಂದು ನಡೆದಿದೆ. ಮಧ್ಯಪ್ರದೇಶದ ಸಂತೋಷ ಮುಣ್ಣಾ ವಿಶ್ವಕರ್ಮ (28) ಮೃತಪಟ್ಟಿದ್ದಾರೆ. ಜಂಬಗಿ ಗ್ರಾಮದ ಶಾವಂತ ಪಾಟೀಲ್ ಎಂಬ ರೈತನ ಜಮೀನಿನಲ್ಲಿ ಮಧ್ಯಪ್ರದೇಶದ ಐವರು ಕಾರ್ಮಿಕರು ಬಾವಿ ಕೊರೆಯುವ ಕೆಲಸ ಮಾಡುತ್ತಿದ್ದರು. ಇಬ್ಬರು ಬಾವಿಗಿಳಿಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಸೀಲಿಂಗ್ ತುಂಡಾಗಿದೆ. ಅಂದಾಜು ನೂರು ಅಡಿ ಆಳದ ಬಾವಿಗೆ …

Read More »

ಕನಿಷ್ಠ ವೇತನಕ್ಕೆ ಆಗ್ರಹಿಸಿ ಜಾಡಮಾಲಿ‌ ನೌಕರರು ಪ್ರತಿಭಟನೆ

ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 977 ಜಾಡಮಾಲಿ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​​ನಲ್ಲಿ ಇಂದು ನೌಕರರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. 2017ಕ್ಕಿಂತ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಾಡಮಾಲಿಗಳನ್ನು ಮರುನೇಮಕಗೊಳಿಸಿ ಕನಿಷ್ಠ ವೇತನ ನೀಡಬೇಕು. ಸರ್ಕಾರ ನೇರವಾಗಿ ವೇತನ ಪಾವತಿಸಬೇಕು. ನಮ್ಮನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಲು ಇರುವ ಕಾನೂನು ನ್ಯೂನತೆ …

Read More »

ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ.:ಬಸವಜಯ ಮೃತ್ಯುಂಜಯ ಶ್ರೀ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ. ಎಲ್ಲಾ ಪಕ್ಷಗಳಿಗೂ ಪಂಚಮಸಾಲಿ ಮತಗಳು ಬೇಕು. ಹೀಗಾಗಿ ಲೋಕಸಭೆ ಚುನಾವಣೆಯೊಳಗೆ ಮೀಸಲಾತಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇಂದು ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಸರ್ವಪಕ್ಷಗಳ ಪಂಚಮಸಾಲಿ ಸಮಾಜದ ಹಾಲಿ ಹಾಗೂ ಮಾಜಿ ಶಾಸಕರ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಸರಿಯಾದ ನ್ಯಾಯ …

Read More »

ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ: ಜೊಲ್ಲೆ

ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ ಪ್ರಸ್ತಾವಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಯನ್ನು ನಗರದ ಮುಂದಿನ 50 ವರ್ಷಗಳ ಕಾಲಾವಧಿಯ ಜನಸಂಖ್ಯೆಯ ಆಧಾರದ ಮೇಲೆ ಲೆಕ್ಕಾಚಾರ ಮಾಡಿ ರೂಪುರೇಷೆ ಸಿದ್ಧಪಡಿಸಿ ಕಾಮಗಾರಿಯ ವಿಸ್ತೃತ ಯೋಜನಾ ವರದಿಯನ್ನು …

Read More »

ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ …

Read More »