Breaking News

ಜಿಲ್ಲೆ

ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಈ ವರ್ತನೆಗೆ ಭಕ್ತರು ಗರಂ

ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ದೇವಿಯ ದರ್ಶನ ಮುಗಿಸಿಕೊಂಡು ದೇವಸ್ಥಾನದಿಂದ ಹೊರಬರುತ್ತಿದ್ದ ಭಕ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದೆ. ಶುಕ್ರವಾರ ಇರುವದ್ದರಿಂದ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಧಾರವಾಡದ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ದಂಪತಿಗಳು ಆಗಮಿಸಿದ್ದರು. ದೇವಿಯ ದರ್ಶನ ಪಡೆದುಕೊಂಡು ಹೊರ ಬರುವ ಗೇಟ ಮಾರ್ಗದಲ್ಲಿ ಮಗು ಅಳ್ಳುತ್ತಿದೆ ಮಗುವಿಗೆ ಅಳು ನಿಲ್ಲಿಸುವ ಉದ್ದೇಶದಿಂದ ಬ್ಯಾಗನಲ್ಲಿದ್ದ …

Read More »

ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ

ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಸೀಜ್ ಆಗಿದ್ದ ವಾಹನದಲ್ಲೇ ಮತ್ತೆ ಸಾಗಾಟ ಮಾಡುತ್ತಿರುವುದರ ಬಗ್ಗೆ ಹೇಳಿಕೆ ಪಡೆಯಲು ಹೊದ ವರಿದಿಗಾರರ ಮೇಲೆ ಆಹಾರ ಇಲಾಖೆಯ ಅಧಿಕಾರಿ ದರ್ಪತೋರಿದ ಘಟನೆ ಜರುಗಿದೆ. ಬಾಗಲಕೋಟೆ ಜಿಲ್ಲಾ ಆಡಳಿತ ಭವನದಲ್ಲಿ ಡಿಸಿ, ಸಿಇಒ ಸ್ಥಾನ ಪಲ್ಲಟವಾದ್ರೂ ಆಹಾರ ಇಲಾಖೆಯ ಡಿಡಿ ಹುದ್ದೆ ಮಾತ್ರ ಅಭಾದಿತವಾಗಿದೆ. ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಕಳೆದ ಹತ್ತು …

Read More »

ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗುರುರಾಜ್ ಬಿರಾದಾರ ಹಾಗೂ ಮಧ್ಯವರ್ತಿ ಚನ್ನಬಸವಯ್ಯ ಕುಲಕರ್ಣಿ ಬಂಧಿತ ಆರೋಪಿಗಳು. ಹಾವೇರಿ ನಗರದ ಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವಂದನಾ ತುಪ್ಪದ ಎಂಬ ಬಾಲಕಿ ಚಿಕಿತ್ಸೆ ಸಮಯದಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಹಾವೇರಿ ನಗರ ಠಾಣೆಯಲ್ಲಿ ದೂರು …

Read More »

ಕಾಲೇಜು ಪ್ರಾಂಶುಪಾಲ ಹೃದಯಾಘಾತದಿಂದ ಸಾವು

ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ಉಪ ಪ್ರಾಂಶುಪಾಲ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗುರುಬಸವಯ್ಯ ಸಾಲಿಮಠ (೫೧) ಹೃದಯಾಘಾತಕ್ಕೆ ಬಲಿಯಾದವರು. ಕಲಬುರಗಿಯ ಕೊಹಿನೂರ್ ಕಾಲೇಜಿನ ಉಪ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದವರು ಸ್ವಲ್ಪ ನೀರು ಕುಡಿದಿದ್ದಾರೆ. ನೀರು ಕುಡಿಯುತ್ತಿದ್ದಂತೆಯೇ ವಾಂತಿಯಾಗಿದೆ. ಹಠಾತ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Read More »

ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ

ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ ಸಂಗೋಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಖಾನಾಪೂರ ತಾಲೂಕಿನ ನಂದಗಡ ಮತ್ತು ಬೈಲಹೊಂಗಲ ತಾಲೂಕಿನ ಸಂಗೋಳಿ ಗಳಲ್ಲಿ ಉಳಿದಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸೌಂದರ್ಯೀಕರಣ ಕಾರ್ಯಗಳಿಗಾಗಿ ಸರ್ಕಾರ 28 ಕೋಟಿ ರೂ. ನಿಧಿಯನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ್ ಸೌಧದಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಂಗೋಳಿ ರಾಯಣ್ಣ …

Read More »

ಬೀದರ್ ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ 132 ಮಂದಿ ರೈತರ ಆತ್ಮಹತ್ಯೆ

ಬೀದರ್​, ಜುಲೈ 09: ಬೀದರ್ (Farmers) ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೀದರ್‌ (Bidar) ಕೃಷಿ ಪ್ರಧಾನ ಜಿಲ್ಲೆಯಾಗಿದೆ. ಕಬ್ಬು, ಉದ್ದು, ಹಸಿರು ಕಾಳು, ಸೋಯಾಬಿನ್‌, ಶುಂಠಿ ಹೀಗೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಜಿಲ್ಲೆಯ ಒಂದಷ್ಟು ಕಡೆ ನೀರಾವರಿಯ ಸೌಲಭ್ಯವೂ ಇದೆ. ಆದರೆ, ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಸಂಖ್ಯೆ ಮಾತ್ರ ಏರುತ್ತಲೇ ಇದೆ. ಎರಡೂವರೆ ವರ್ಷದಲ್ಲಿ ಬೀದರ್‌ ಜಿಲ್ಲೆಯೊಂದರಲ್ಲೇ ಬರೋಬ್ಬರಿ 132 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹುತೇಕ ರೈತರ ಆತ್ಮಹತ್ಯೆಗೆ …

Read More »

ಸಿಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್​​ಸಿ ರವಿಕುಮಾರ್​​​ಗೆ ಜಾಮೀನು

ಬೆಂಗಳೂರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್​​ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್​​ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ (BJP MLC N Ravikumar) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. …

Read More »

ಶಾಪಿಂಗ್​ಗೆ ಹೋಗಿ ಬಂದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಪತ್ನಿ ಶಾಪಿಂಗ್​ಗೆ ಹೋಗಿ‌ ಬಂದಿದ್ದಕ್ಕೆ ತಗಾದೆ ತೆಗೆದು ಕತ್ತು ಹಿಸುಕಿ ಹತ್ಯೆಗೈದಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್​ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು. ಜುಲೈ 6ರಂದು ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮರುದಿನ ಆಸ್ಪತ್ರೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು‌. ಪದ್ಮಜಾ ಅವರು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ಸ್ ವಿಭಾಗದಲ್ಲಿ ಬಿಇ …

Read More »

ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಹಣ ಸುಲಿಗೆ ಆರೋಪ: ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿ ಬಳಿಕ ಹಣ ಸುಲಿಗೆ ಮಾಡಿದ್ದಲ್ಲದೆ ಮನೆಯಲ್ಲಿದ್ದ ಪಿಠೋಪಕರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ಧಾರೆ. 35 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೆಬ್ಬಗೋಡಿ ಸುತ್ತಮುತ್ತಲಿನ …

Read More »

ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿ: ಹೈಕೋರ್ಟ್

ಬೆಂಗಳೂರು: ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿತು. ಸುಪ್ರೀಂ ಕೋರ್ಟ್ ಆದೇಶಗಳ ಪ್ರಕಾರ ಮೊದಲಿಗೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಬೇಕು. ಈ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ಮುಂದಿನ 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ಅತ್ಯಾಚಾರ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಎರಡನೇ ಬಾರಿಗೆ ಜಾಮೀನು …

Read More »